Palm Oil | ತಾಳೆ ಎಣ್ಣೆ ದರ 1 ವರ್ಷದಲ್ಲೇ ಕನಿಷ್ಠ; ಆದರೂ ಸೋಪ್‌, ಕಾಸ್ಮೆಟಿಕ್ಸ್‌ ದರ ಇಳಿಸದ ಕಂಪನಿಗಳು - Vistara News

ಪ್ರಮುಖ ಸುದ್ದಿ

Palm Oil | ತಾಳೆ ಎಣ್ಣೆ ದರ 1 ವರ್ಷದಲ್ಲೇ ಕನಿಷ್ಠ; ಆದರೂ ಸೋಪ್‌, ಕಾಸ್ಮೆಟಿಕ್ಸ್‌ ದರ ಇಳಿಸದ ಕಂಪನಿಗಳು

ತಾಳೆ ಎಣ್ಣೆ ದರ ಒಂದು ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಹೀಗಿದ್ದರೂ, ಸೋಪ್‌, ಕಾಸ್ಮೆಟಿಕ್ಸ್‌ ಉತ್ಪಾದಕರು (Palm Oil) ಇತರ ಕಚ್ಚಾ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಗ್ರಾಹಕರಿಗೆ ದರ ಇಳಿಕೆಯ ಲಾಭವನ್ನು ವರ್ಗಾಯಿಸುತ್ತಿಲ್ಲ.

VISTARANEWS.COM


on

palm oil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ತಾಳೆ ಎಣ್ಣೆಯ ದರ ಕಳೆದ ಒಂದು ವರ್ಷದಲ್ಲಿಯೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಹೀಗಿದ್ದರೂ, ಸಂಸ್ಕರಿತ ಪದಾರ್ಥಗಳು, ಕಾಸ್ಮೆಟಿಕ್ಸ್‌, ಸೋಪ್‌ ಮತ್ತಿತರ ಉತ್ಪನ್ನಗಳ ದರವನ್ನು ಇಳಿಸಿ (Palm Oil) ಗ್ರಾಹಕರಿಗೆ ಲಾಭ ವರ್ಗಾಯಿಸಲು ಕಂಪನಿಗಳು ನಿರಾಕರಿಸಿವೆ. ಇದಕ್ಕೆ ಕಾರಣ ಇತರ ಕಚ್ಚಾ ವಸ್ತುಗಳ ದರ ಏರಿಕೆಯಾಗಿರುವುದು.

ಹೀಗಿದ್ದರೂ, ಖಾದ್ಯ ತೈಲ ಉತ್ಪಾದಕರು ಅಂತಾರಾಷ್ಟ್ರೀಯ ದರ ಇಳಿದ ಬೆನ್ನಲ್ಲೇ ಗ್ರಾಹಕರಿಗೆ ಅಡುಗೆ ಎಣ್ಣೆಯ ದರ ಇಳಿಸಿವೆ. ಹಿಂದುಸ್ತಾನ್‌ ಯುನಿಲಿವರ್‌, ನೆಸ್ಲೆ ಸೇರಿದಂತೆ ಹಲವು ಕಂಪನಿಗಳು ತಾಳೆ ಎಣ್ಣೆಯನ್ನು ಕಾಸ್ಮೆಟಿಕ್ಸ್‌, ಸೋಪ್‌ ತಯಾರಿಕೆಯಲ್ಲಿ ಬಳಸುತ್ತವೆ. ಇವೆಲ್ಲವೂ ಸಂಸ್ಕರಿತ ಪದಾರ್ಥಗಳ ವಲಯಕ್ಕೆ ಬರುತ್ತವೆ. ಆದರೆ ಇತರ ಕಚ್ಚಾ ವಸ್ತುಗಳ ಬೆಲೆ ಹೆಚ್ಚಳದ ಪರಿಣಾಮ ಗ್ರಾಹಕರಿಗೆ ದರ ಇಳಿಕೆ ಮಾಡಲು ಕಂಪನಿಗಳು ನಕಾರ ವ್ಯಕ್ತಪಡಿಸಿವೆ.

ಮಲೇಷ್ಯಾ ತಾಳೆ ಎಣ್ಣೆ ದರ ಇಳಿಕೆ: ಮಲೇಷ್ಯಾ ಮೂಲದ ತಾಳೆ ಎಣ್ಣೆ ದರದಲ್ಲಿ 8% ಇಳಿಕೆಯಾಗಿದೆ. ಇದು ಭಾರತಕ್ಕೆ ಅನುಕೂಲಕರವಾಗಿದೆ. ಭಾರತ ಪ್ರತಿ ವರ್ಷ 1.35 ಕೋಟಿ ಟನ್‌ ಖಾದ್ಯ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಅದರಲ್ಲಿ 63% ಖಾದ್ಯ ತೈಲವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Congress Protest: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಚಿಕ್ಕಬಳ್ಳಾಪುರ, ದೇವನಹಳ್ಳಿಯಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ (Congress Protest) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸುಧಾಕರ್, ಮಾಜಿ ಸಚಿವ, ಎಂಎಲ್‌ಸಿ ಡಾ. ಎಂ.ಆರ್. ಸೀತಾರಾಂ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹಾಗೂ ಮತ್ತಿತರೆ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

VISTARANEWS.COM


on

Congress Protest
Koo

ಚಿಕ್ಕಬಳ್ಳಾಪುರ/ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಬೃಹತ್ ಪ್ರತಿಭಟನೆ (Congress Protest) ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ. ಸುಧಾಕರ್, ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಡಾ. ಎಂ.ಆರ್. ಸೀತಾರಾಂ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹಾಗೂ ಮತ್ತಿತರೆ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯಪಾಲರ ಭಾವಚಿತ್ರ ಹಿಡಿದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರ ಮುಖವಾಡ ಧರಿಸಿದ ಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆ ಮೆರವಣಿಗೆ ನಡೆಸಿದರು.

ಇದನ್ನೂ ಓದಿ: Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ‌ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಾಜ್ಯಪಾಲರ ವಿರುದ್ಧದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ‌ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ರಾಜ್ಯಪಾಲರ ಕ್ರಮ ಅಸಂವಿಧಾನಿಕ ಹಾಗೂ ರಾಜಕೀಯ ಪ್ರೇರಿತ, ದುರುದ್ದೇಶಪೂರಿತ ಕ್ರಮ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದಲ್ಲಿ ಬಹುಮತದೊಂದಿಗೆ ಆಯ್ಕೆಯಾದ ಸರ್ಕಾರವೊಂದನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಷಡ್ಯಂತ್ರದ ಮೂಲಕ ಅಸ್ಥಿರಗೊಳಿಸಲು ಮುಂದಾಗಿದ್ದು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಶುದ್ಧ, ಕಳಂಕರಹಿತ ರಾಜಕಾರಣ ಮಾಡಿಕೊಂಡು ಶೋಷಿತರು, ಹಿಂದುಳಿದವರ ಪರ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯಲು ಎರಡೂ ಪಕ್ಷಗಳು ಹೊರಟಿವೆ. ಇದಕ್ಕೆ ಬೆನ್ನೆಲುಬಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಹೊರಟಿರುವುದು ‌ಖಂಡನೀಯ ಎಂದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ‌ ಸಚಿವ ಕೆ.ಎಂ. ಮುನಿಯಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

ದೇವನಹಳ್ಳಿಯಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

Continue Reading

ಪ್ರಮುಖ ಸುದ್ದಿ

Hoax Bomb Threat: ವೈಟ್ ಫೀಲ್ಡ್‌ನ ಮಾಲ್ ಸೇರಿ‌ ಬೆಂಗಳೂರಿನ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ!

Hoax Bomb Threat: ಬೆಂಗಳೂರಿನ ಮಾಲ್‌ಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಬಂದಿದ್ದು, ನೀವು ಯಾರೂ ಬದುಕಲು ಅರ್ಹರಲ್ಲ. ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತೆ ಎಂದು ಸಂದೇಶ ಕಳುಹಿಸಲಾಗಿದೆ.

VISTARANEWS.COM


on

Hoax bomb threat
Koo

ಬೆಂಗಳೂರು: ಮುಂಬೈ, ನೋಯ್ಡಾ, ಗುರುಗ್ರಾಮ, ಚೆನ್ನೈ ಸೇರಿ ದೇಶದ ವಿವಿಧ ನಗರಗಳ ಮಾಲ್‌, ಆಸ್ಪತ್ರಗಳಿಗೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ನಗರದ ವೈಟ್‌ಫೀಲ್ಡ್‌ನ ಮಾಲ್ ಸೇರಿ ಹಲವು ಮಾಲ್‌ಗಳಿಗೆ ಸೋಮವಾರ ಬಾಂಬ್ ಬೆದರಿಕೆ (Hoax Bomb Threat) ಸಂದೇಶ ಬಂದಿದೆ. ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಬಂದಿದ್ದು, ನೀವು ಯಾರೂ ಬದುಕಲು ಅರ್ಹರಲ್ಲ. ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟದ ಬೆನ್ನಲ್ಲೇ ಮಾಲ್‌ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿರುವುದರಿಂದ ಆತಂಕ ಮೂಡಿಸಿದೆ. “ಕಟ್ಟಡದ ಒಳಗೆ ಬಾಂಬ್ ಇದೆ. ಈ ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತದೆ. ನಾನು ಮಾನವೀಯತೆಯನ್ನು ದ್ವೇಷಿಸುವೆ, ನೀವು ಯಾರೂ ಬದುಕಲು ಅರ್ಹರಲ್ಲ. ನಿಮ್ಮನ್ನೆಲ್ಲಾ ಕೊಲ್ಲುತ್ತೇನೆ, ನಾವು ಭಯೋತ್ಪಾದನೆಯನ್ನು ನಿಲ್ಲಿಸುವುದಿಲ್ಲ. ಈ ಸಂದೇಶ ಕಳುಹಿಸಿರುವುದು KNR ಎಂದು ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ಪರಿಶೀಲಿಸಿದಾಗ, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುವುದು ತಿಳಿದುಬಂದಿದೆ. ಹೀಗಾಗಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Viral Video

ಬೆಂಗಳೂರಿನ ಅನೇಕ ಮಾಲ್​​ಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಸುಮಾರು 20ಕ್ಕೂ ಹೆಚ್ಚು ಮಾಲ್​​​ಗಳಿಗೆ ಇಮೇಲ್​​ ಬೆದರಿಕೆ ಬಂದಿದೆ ಎನ್ನಲಾಗಿದೆ.

ತ್ರಿವರ್ಣ ಧ್ವಜ ಹರಿದು, ಗೋ ಬ್ಯಾಕ್‌ ಇಂಡಿಯಾ ಘೋಷಣೆ- ಖಲಿಸ್ತಾನಿಗಳ ಅಟ್ಟಹಾಸ; ವಿಡಿಯೋ ವೈರಲ್‌

Viral Video
Viral Video

ಟೊರೊಂಟೋ: ಸ್ವಾತಂತ್ರ್ಯ ದಿನಾಚರಣೆ(Independence Day 2024) ಅಂಗವಾಗಿ ಆಯೋಜಿಸಲಾಗಿದ್ದ ಇಂಡಿಯಾ ಡೇ ಪರೇಡ್‌(India Day Parade) ಕಾರ್ಯಕ್ರಮದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು(Khalistan) ಭಾರತದ ತ್ರಿವರ್ಣ ಧ್ವಜವನ್ನು ಹರಿದಿರುವ ಘಟನೆ ಟೊರೊಂಟೋದಲ್ಲಿ ನಡೆದಿದೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌(Viral Video) ಆಗುತ್ತಿದೆ.

ಟೊರೊಂಟೋ ಸಿಟಿ ಹಾಲ್‌(Toronto City Hall)ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ನಡುವೆ ಘೋಷಣೆ ಕೂಗುತ್ತಾ ಎಂಟ್ರಿಯಾದ ಖಲಿಸ್ತಾನಿಗಳು ಚಾಕುವಿನಿಂದ ಭಾರತದ ಧ್ವಜವನ್ನು ಹರಿದುಹಾಕಿದ್ದಾರೆ. ಅಲ್ಲದೇ ಗೋ ಬ್ಯಾಕ್‌ ಇಂಡಿಯಾ ಎಂದು ಘೋಷಣೆ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಕೆನಡಾದಲ್ಲಿ ಸ್ವಾತಂತ್ರ್ಯದ ಅತಿದೊಡ್ಡ ಆಚರಣೆಯಾದ ಇಂಡಿಯಾ ಡೇ ಪರೇಡ್ ಟೊರೊಂಟೊದಲ್ಲಿ ನಡೆಯಿತು. ಖಲಿಸ್ತಾನ್ ಪರ ಗುಂಪುಗಳ ಯೋಜಿತ ಪ್ರತಿ-ರ್ಯಾಲಿಯಿಂದಾಗಿ ಈ ಕಾರ್ಯಕ್ರಮಕ್ಕೆ ಸಕಲ ಭದ್ರತೆ ಒದಗಿಸಲಾಗಿತ್ತು. ಇಂಡಿಯಾ ಡೇ ಪರೇಡ್ ಅನ್ನು ಆಗಸ್ಟ್ 15 ರ ನಂತರದ ಮೊದಲ ಭಾನುವಾರದಂದು ನಡೆಸಲಾಯಿತು. ಈ ಕಾರ್ಯಕ್ರಮವನ್ನು ಪನೋರಮಾ ಇಂಡಿಯಾ ಆಯೋಜಿಸಿದ್ದು, ಇದು ಇಂಡೋ-ಕೆನಡಿಯನ್ ಸಾಂಸ್ಕೃತಿಕ ಸಮಾಗಮವಾಗಿದೆ.

ಪನೋರಮಾ ಇಂಡಿಯಾದ ಪರೇಡ್‌ನ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಕಾರಣ ಈ ವರ್ಷ ಈ ಕಾರ್ಯಕ್ರಮ ಬಹಳ ಮಹತ್ವ ಪಡೆದುಕೊಂಡಿತ್ತು. ಟೊರೊಂಟೊ ಡೌನ್‌ಟೌನ್‌ನಲ್ಲಿರುವ ನಾಥನ್ ಫಿಲಿಪ್ಸ್ ಸ್ಕ್ವೇರ್‌ನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವೈವಿಧ್ಯಮಯ ಭಾರತೀಯ ತಿನಿಸುಗಳು ಕಾರ್ಯಕ್ರಮವನ್ನು ಹೆಚ್ಚಿಸಿದವು. ‘ಖಾಲಿಸ್ತಾನ್ ಸಿಖ್ಖರು’ ಮತ್ತು ‘ಕೆನಡಾದ ಹಿಂದೂಗಳ ನಡುವೆ ಮುಖಾಮುಖಿ’ಗಾಗಿ ಕರೆ ನೀಡುವ ಉದ್ದೇಶದಿಂದಲೇ ಸಮೀಪದಲ್ಲಿ ಖಲಿಸ್ತಾನಿಗಳು ಕಾರ್ಯಕ್ರಮ ಆಯೋಜಿಸಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಭಯೋತ್ಪಾದಕ ಚಟುವಟಿಕೆಗಳಿಗೆ ಮಾರಾಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಬಂಧಿಸಿದೆ. ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಭಯೋತ್ಪಾದನಾ ಜಾಲವನ್ನು ಭೇದಿಸಿದ ಎನ್‌ಐಎ, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ.

ಇದನ್ನೂ ಓದಿ: Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Continue Reading

ಪ್ರಮುಖ ಸುದ್ದಿ

Triple Talaq : ತ್ರಿವಳಿ ತಲಾಖ್​​ಗೆ ಶಿಕ್ಷೆ ಆಗಲೇಬೇಕು; ಸುಪ್ರೀಂ ಕೋರ್ಟ್​ಗೆ ಹೊಸ ಅಫಿಡವಿಟ್​ ಸಲ್ಲಿಸಿ ಕಾನೂನನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

Triple Talaq: ತ್ರಿವಳಿ ತಲಾಖ್ ಪದ್ಧತಿಯು ವಿವಾಹ ವ್ಯವಸ್ಥೆಯ ಸಾಮಾಜಿಕ ಸಂಸ್ಥೆಗೆ ಮಾರಕವಾಗಿದೆ. ಮುಸ್ಲಿಂ ಮಹಿಳೆಯರ ಸ್ಥಿತಿಯನ್ನು ಕರುಣಾಜನಕ ಮಾಡುತ್ತದೆ ಎಂದು ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್​​ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಲಾಗಿದೆ. 2017ರಲ್ಲಿ ಕೆಲವು ಸುಪ್ರೀಂ ಕೋರ್ಟ್​ ಈ ಪದ್ಧತಿಯನ್ನು ಅಸಂವಿಧಾನಿಕ ಎಂದು ಹೇಳಿರುವ ಹೊರತಾಗಿಯೂ ಮುಸ್ಲಿಂ ಸಮುದಾಯಗಳಲ್ಲಿ ಬೇರೂರಿದ್ದ ಈ ಅಭ್ಯಾಸ ನಿವಾರಣೆಯಾಗಿಲ್ಲ ಎಂದು ಅಪಿಡವಿಟ್​ನಲ್ಲಿ ಹೇಳಲಾಘಿದೆ.

VISTARANEWS.COM


on

triple talaq
Koo

ನವದೆಹಲಿ: ತ್ವರಿತ ತ್ರಿವಳಿ ತಲಾಖ್ (Triple Talaq) ಅನ್ನು ಅಪರಾಧವೆಂದು ಪರಿಗಣಿಸುವುದಾಗಿ 2019ರಲ್ಲಿ ಹೊರಡಿಸಿದ್ದ ಕಾನೂನನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್​​ಗೆ ಹೊಸ ಅಫಿಡವಿಟ್ ಸಲ್ಲಿಸಿದೆ. 2019ರಕಾಯ್ದೆಯು ವಿವಾಹಿತ ಮುಸ್ಲಿಂ ಮಹಿಳೆಯರ ಲಿಂಗ ಸಮಾನತೆಯ ಸಾಂವಿಧಾನಿಕ ಹಕ್ಕುಗಳನ್ನು ಕಾಪಾಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ತ್ರಿವಳಿ ತಲಾಖ್ ಪದ್ಧತಿಯನ್ನು ಸುಪ್ರೀಂ ಕೋರ್ಟ್ ಅಸಿಂಧುಗೊಳಿಸಿರುವುದರಿಂದ ಅದನ್ನು ಅಪರಾಧವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಸುಪ್ರಿಂ ಕೋರ್ಟ್​​ಗೆ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ತ್ರಿವಳಿ ತಲಾಖ್ ಪದ್ಧತಿಯು ವಿವಾಹ ವ್ಯವಸ್ಥೆಯ ಸಾಮಾಜಿಕ ಸಂಸ್ಥೆಗೆ ಮಾರಕವಾಗಿದೆ. ಮುಸ್ಲಿಂ ಮಹಿಳೆಯರ ಸ್ಥಿತಿಯನ್ನು ಕರುಣಾಜನಕ ಮಾಡುತ್ತದೆ ಎಂದು ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್​​ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಲಾಗಿದೆ. 2017ರಲ್ಲಿ ಕೆಲವು ಸುಪ್ರೀಂ ಕೋರ್ಟ್​ ಈ ಪದ್ಧತಿಯನ್ನು ಅಸಂವಿಧಾನಿಕ ಎಂದು ಹೇಳಿರುವ ಹೊರತಾಗಿಯೂ ಮುಸ್ಲಿಂ ಸಮುದಾಯಗಳಲ್ಲಿ ಬೇರೂರಿದ್ದ ಈ ಅಭ್ಯಾಸ ನಿವಾರಣೆಯಾಗಿಲ್ಲ ಎಂದು ಅಪಿಡವಿಟ್​ನಲ್ಲಿ ಹೇಳಲಾಘಿದೆ.

ತ್ರಿವಳಿ ತಲಾಖ್ ಸಂತ್ರಸ್ತರಿಗೆ ಪೊಲೀಸರನ್ನು ಸಂಪರ್ಕಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಕಾನೂನಿನಲ್ಲಿ ದಂಡನಾತ್ಮಕ ಸೆಕ್ಷನ್​ಗಳು ಇಲ್ಲದ ಕಾರಣ ತಪ್ಪೆಸಗುವರರ ವಿರುದ್ಧ ಪೊಲೀಸರಿಗೆ ಏನೂ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಪರಿಹಾರವಾಗಿ ಕಾನೂನು ರಚನೆಯ ತುರ್ತು ಅಗತ್ಯವಿತ್ತು” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: Congress Protest: 10 ಜನ್ಮ ಎತ್ತಿ ಬಂದ್ರೂ ನಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದ ಡಿಕೆಶಿ

ಸಮಸ್ತ ಕೇರಳ ಜಮಿಯತುಲ್ ಉಲೇಮಾ ಈ ತಿಂಗಳ ಆರಂಭದಲ್ಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಅದು ತನ್ನನ್ನು “ಪ್ರಸಿದ್ಧ ಸುನ್ನಿ ವಿದ್ವಾಂಸರ ಸಂಘ” ಎಂದು ಹೇಳಿಕೊಂಡಿದೆ. ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ ಅಸಂವಿಧಾನಿಕ ಎಂದು ಅರ್ಜಿದಾರರು ಹೇಳಿದ್ದಾರೆ. ಈ ಕಾಯ್ದೆಯು ಭಾರತೀಯ ನಾಗರಿಕರಿಗೆ ಕಾನೂನಿನ ಸಮಾನತೆಯನ್ನು ಕಡಿಮೆ ಮಾಡುತ್ತದೆ. ಧರ್ಮದ ಆಧಾರದ ಮೇಲೆ ತಾರತಮ್ಯ ನಿಷೇಧಿಸುವುದು ಸೇರಿದಂತೆ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಅರ್ಜಿದಾರರ ಹೇಳಿಕೆಗೆ ಉತ್ತರ

ತ್ರಿವಳಿ ತಲಾಖ್ ಪದ್ಧತಿಯು ಸಂವಿಧಾನದ ಅಡಿಯಲ್ಲಿ ಮಹಿಳೆಯರಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳು ಮತ್ತು ಸಮಾನತೆಯ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸುವ ಮೂಲಕ ಸರ್ಕಾರವು ಅರ್ಜಿದಾರರ ಹೇಳಿಕೆಗಳನ್ನು ದೃಢವಾಗಿ ತಳ್ಳಿಹಾಕಿದೆ. ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ಪಡೆಯುವ ವಿವಾಹಿತ ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು ಸಂಸತ್ತು ತನ್ನ ಈ ಕಾಯ್ದೆಯನ್ನು ಜಾರಿಗೆ ತಂದಿದೆ. ಲಿಂಗ ನ್ಯಾಯ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರ ಸಮಾನತೆಯ ಸಾಂವಿಧಾನಿಕ ಗುರಿಗಳನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಅಫಿಡವಿಟ್​​ನಲ್ಲಿ ತಿಳಿಸಲಾಗಿದೆ.

ಸಂಸತ್ತು ಅಂಗೀಕರಿಸಿದ ಕಾನೂನುಗಳ ಶ್ರೇಷ್ಠತೆ ಅಥವಾ ಕಾನೂನು ಏನಾಗಿರಬೇಕು ಎಂಬುದನ್ನು ಚರ್ಚೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಅಭಿಪ್ರಾಯಪಟ್ಟಿತ್ತು ಎಂದು ಸರ್ಕಾರ ಅಪಿಡವಿಟ್​ನಲ್ಲಿ ಗಮನಸೆಳೆದಿದೆ.”ಒಂದು ನಿರ್ದಿಷ್ಟ ರೀತಿಯ ನಡವಳಿಕೆಯನ್ನು ಅಪರಾಧವೇ ಅಥವಾ ಅಲ್ಲವೇ? ಅಂತಹ ನಡವಳಿಕೆಗೆ ಯಾವ ಶಿಕ್ಷೆ ವಿಧಿಸಬೇಕು ಎಂಬುದನ್ನು ಚಾಲ್ತಿಯಲ್ಲಿರುವ ಸಾಮಾಜಿಕ ಪರಿಸ್ಥಿತಿಗಳ ಅಡಿಯಲ್ಲಿ ಶಾಸಕಾಂಗ ನಿರ್ಧರಿಸಿದೆ ಎಂದು ಅಫಿಡವಿಟ್​​ ಹೇಳಿದೆ.

Continue Reading

ಕರ್ನಾಟಕ

Congress Protest: 10 ಜನ್ಮ ಎತ್ತಿ ಬಂದ್ರೂ ನಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದ ಡಿಕೆಶಿ

Congress Protest: ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿ.ಕೆ.ಶಿವಕುಮಾರ್ ನಿಂತಿಲ್ಲ, ಕಟ್ಟಕಡೆಯ ಕಾರ್ಯಕರ್ತರ ರಕ್ಷೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಈ ಸರ್ಕಾರ ಇನ್ನೂ 10 ವರ್ಷ ಬಲಿಷ್ಠವಾಗಿರುತ್ತದೆ. ನಮ್ಮ ಸರ್ಕಾರವನ್ನು 10 ಜನ್ಮ ಎತ್ತಿ ಬಂದರೂ ಬೀಳಿಸಲು ಸಾಧ್ಯವಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಲ್ಲ. ಹೊಟ್ಟೆ ಉರಿ ಬಂದರೆ ಔಷದ ಕಳುಹಿಸುತ್ತೇವೆ, ಡಾಕ್ಟರ್ ಇದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ. ಈ ಸರ್ಕಾರವನ್ನು (Congress Protest) ಉಳಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ರಾಜ್ಯಪಾಲರ ನಡೆ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ ಅವರು, ಜನರಿಂದ ಜನರಿಗೋಸ್ಕರ ಬಂದ ಸರ್ಕಾರ ಇದು. ಈ ಸರ್ಕಾರಕ್ಕೆ ಪ್ರಮಾಣವಚನ ಬೋಧನೆ ಮಾಡಿದ್ದು ಇದೇ ಗವರ್ನರ್. ಈಗ ಯಾಕೆ ಒಳಸಂಚು ನಡೆಸುತ್ತಿದ್ದೀರಿ? ಸಂವಿಧಾನ ಕಾಪಾಡಬೇಕೇ ಹೊರತು ದುರುಪಯೋಗ ಮಾಡಿಕೊಳ್ಳಬಾರದು. ನಿಮ್ಮ ಖುರ್ಚಿಗೆ ಕಳಂಕ ತರಬಾರದು. ನಿಮಗೆ ಯಾರಾದರೂ ತನಿಖೆ ಮಾಡಿ ಎಂದು ವರದಿ ಕೊಟ್ಟಿದ್ದಾರಾ? ಯಾವುದಾದರೂ ಅಧಿಕಾರಿ ತನಿಖಾ ರಿಪೋರ್ಟ್ ಕೊಟ್ಟಿದ್ದಾರಾ ಎಂದು ರಾಜ್ಯಪಾಲರಿಗೆ ಪ್ರಶ್ನಿಸಿದರು.

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನತಾ ದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೇ ಬಿಟ್ಟುಕೊಂಡು ಇರುತ್ತಾರೆ. ಲೋಕಾಯುಕ್ತ ವರದಿ ಇದ್ದರೂ ನವರಂಗಿ ನಕಲಿ ಸ್ವಾಮಿ ವಿರುದ್ಧ ಯಾಕೆ ಪ್ರಾಸಿಕ್ಯೂಷನ್‌ಗೆ ಕೊಡಲಿಲ್ಲ? ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿ.ಕೆ.ಶಿವಕುಮಾರ್ ನಿಂತಿಲ್ಲ, ಕಟ್ಟಕಡೆಯ ಕಾರ್ಯಕರ್ತರ ರಕ್ಷೆ ಇದೆ ಎಂದು ಹೇಳಿದರು.

ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಪ್ರಾಸಿಕ್ಯೂಷನ್ ಧಿಕ್ಕರಿಸಿ ನಮಗೆ ನ್ಯಾಯ ಸಿಗುವ ನಂಬಿಕೆ‌ ಇದೆ. ನಮ್ಮ ಹೋರಾಟ ಇಲ್ಲಿಗೇ ಮುಗಿಯುವುದಿಲ್ಲ. ಸರ್ಕಾರವನ್ನು ಯಾರೂ ಕೂಡ ಕಿತ್ತು ಹಾಕಲು ಸಾಧ್ಯವಿಲ್ಲ. ನಾವೆಲ್ಲ ಒಗ್ಗಟ್ಟಿನಿಂದ ನಿಂತು ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದೇವೆ. ಬಿಜೆಪಿ ಕೈಗೆ ಯಾಕೆ ಅಧಿಕಾರ ಬರಲಿಲ್ಲ? ಹೀಗಾಗಿ ಸರ್ಕಾರ ಬೀಳಿಸಲು ಒಂದು ಹೆಜ್ಜೆ ಟ್ರೈ ಮಾಡಿದರು, ಆ ರೀತಿ ಆಗಿಲ್ಲ, ಮುಂದೆಯೂ ಆಗುವುದಿಲ್ಲ. ಅದಕ್ಕೆ ಈ ರೀತಿ ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ | Muda Scam: ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌; ರಿಟ್‌ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿದ ಹೈಕೋರ್ಟ್‌

ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪಕ್ಷ, ವಿವಿಧ ಸಂಘಟನೆಗಳು, ಬುದ್ಧಿಜೀವಿಗಳು ಪ್ರತಿಭಟನೆ ಮಾಡುತ್ತಿದ್ದಾರೆ, ಅದು‌ ಮುಂದುವರಿಯಬೇಕು. ಸಿಎಂ ಸಿದ್ದರಾಮಯ್ಯ ಪರವಾಗಿ ನಿಲ್ಲುವ ಕರ್ತವ್ಯ ನಮಗಿದೆ. ಸಿದ್ದರಾಮಯ್ಯ ಪರವಾಗಿ ಹೈಕಮಾಂಡ್ ಸಹ ಗಟ್ಟಿಯಾಗಿ ನಿಲ್ಲಬೇಕು. ಹೈಕಮಾಂಡ್ ಕೂಡ ಗಟ್ಟಿಯಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಬೇಕು. ನಾವೆಲ್ಲ ಸಚಿವರೂ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಬೇಕು. ಇಲ್ಲದಿದ್ದರೆ ನಾಳೆ ತೆಲಂಗಾಣ ಸಿಎಂನೂ ಇಳಿಸ್ತಾರೆ, ಮತ್ತೊಂದು ರಾಜ್ಯದ ಸಿಎಂನೂ ಇಳಿಸ್ತಾರೆ. ರಾಜ್ಯದ 34 ಸಚಿವರ ವಿರುದ್ಧವೂ ಹೀಗೆಯೇ ಆರೋಪ ಮಾಡಿ ಇಳಿಸುತ್ತಾರೆ, ಇಳಿಯಬೇಕಾಗುತ್ತದೆ. ಅದಕ್ಕಾಗಿ ಸಿದ್ದರಾಮಯ್ಯ ಪರವಾಗಿ ಗಟ್ಟಿಯಾಗಿ ನಾವು ನಿಲ್ಲಬೇಕು ಎಂದರು.

Continue Reading
Advertisement
PM Narendra Modi
ದೇಶ10 mins ago

PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Congress Protest
ಚಿಕ್ಕಬಳ್ಳಾಪುರ23 mins ago

Congress Protest: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಚಿಕ್ಕಬಳ್ಳಾಪುರ, ದೇವನಹಳ್ಳಿಯಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

National Pension Scheme
ಮನಿ-ಗೈಡ್32 mins ago

National Pension Scheme: ಎನ್‌ಪಿಎಸ್‌ನಲ್ಲಿ ದಿನಕ್ಕೆ 200 ರೂ. ಹೂಡಿಕೆ ಮಾಡಿದರೆ ಸಿಗುವ ಮಾಸಿಕ ಪಿಂಚಣಿ ಎಷ್ಟು ಗೊತ್ತೇ?

Hoax bomb threat
ಪ್ರಮುಖ ಸುದ್ದಿ42 mins ago

Hoax Bomb Threat: ವೈಟ್ ಫೀಲ್ಡ್‌ನ ಮಾಲ್ ಸೇರಿ‌ ಬೆಂಗಳೂರಿನ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ!

triple talaq
ಪ್ರಮುಖ ಸುದ್ದಿ1 hour ago

Triple Talaq : ತ್ರಿವಳಿ ತಲಾಖ್​​ಗೆ ಶಿಕ್ಷೆ ಆಗಲೇಬೇಕು; ಸುಪ್ರೀಂ ಕೋರ್ಟ್​ಗೆ ಹೊಸ ಅಫಿಡವಿಟ್​ ಸಲ್ಲಿಸಿ ಕಾನೂನನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

DK Shivakumar
ಕರ್ನಾಟಕ2 hours ago

Congress Protest: 10 ಜನ್ಮ ಎತ್ತಿ ಬಂದ್ರೂ ನಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದ ಡಿಕೆಶಿ

Viral Video
Latest2 hours ago

Viral Video: ಮೆಟ್ರೊದಲ್ಲಿ ಕುಳಿತು ಜೋಡಿಯ ಖುಲ್ಲಂಖುಲ್ಲಾ ಕಿಸ್ಸಿಂಗ್‌; ಪ್ರಯಾಣಿಕರಿಗೆ ಟೆನ್ಶನ್‌!

BSNL 4G Plan
ಗ್ಯಾಜೆಟ್ಸ್2 hours ago

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

Viral Video
Latest2 hours ago

Viral Video: ಎಲ್ಲ ಬಿಟ್ಟು ಟ್ರಾನ್ಸ್‌ಫಾರ್ಮರ್‌ ಏರಿ ಸತ್ತ ಕರಡಿ; ಮೃತ ದೇಹದ ಮೇಲೆ ಕೂತ ಲೈನ್‌ಮನ್!

Karnataka Weather Forecast
ಮಳೆ3 hours ago

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌