Business Guide : ಎಷ್ಟೋ ಸಲ ಸಿಂಪಲ್ಲಾಗಿ ಮಾತನಾಡುವುದೇ ಅತಿ ದೊಡ್ಡ ಸಾಹಸ - Vistara News

ವಾಣಿಜ್ಯ

Business Guide : ಎಷ್ಟೋ ಸಲ ಸಿಂಪಲ್ಲಾಗಿ ಮಾತನಾಡುವುದೇ ಅತಿ ದೊಡ್ಡ ಸಾಹಸ

ಕಾರ್ಪೊರೇಟ್‌ ಸಂಸ್ಕೃತಿ, ಕಾರ್ಯತಂತ್ರ, ಸಂಘಟನೆ, ( Business Guide) ಮ್ಯಾನೇಜ್‌ಮೆಂಟ್‌ನಲ್ಲಿ ಮಾತುಗಾರಿಕೆ ಕೂಡ ನಿರ್ಣಾಯಕ ಅಂಶವಾಗಿದೆ.

VISTARANEWS.COM


on

business
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಷ್ಟೋ ಸಲ ನಾವು ಗಮನಿಸಿರುವುದಿಲ್ಲ, ಆದರೆ ಒಂದು ಮಾತಿನಿಂದಲೇ ಬದಲಾವಣೆ ಶುರುವಾಗಿ ಬಿಡುತ್ತದೆ! ಅಂದಹಾಗೆ ನಾವು ಬೇರೆಯವರೊಡನೆ (Business Guide) ಮಾತನಾಡುವ ಸಂಭಾಷಣೆಗಳು ( Personality development ) ನಾವು ಹೇಗೆ ಅವರೊಡನೆ ಹೃದಯಪೂರ್ವಕವಾಗಿ ಸ್ಪಂದಿಸುತ್ತಿದ್ದೇವೆ ಎಂಬುದನ್ನು ಆಧರಿಸಿದೆ. ನಾವು ಯಾವಾಗಲೂ ಅಂತರಂಗದ ಸಂಭಾಷಣೆ ಅಥವಾ ಬಹಿರಂಗದ ಮಾತುಕತೆಯ ಮೂಲಕ ಸಂವಹನ ನಡೆಸುತ್ತೇವೆ. ಆದರೆ ಅವುಗಳು ಎಷ್ಟು ಮೌಲ್ಯಯುತವಾಗಿರುತ್ತವೆ? ನಾವು ಅನೇಕ ಮಂದಿ ಸಕಾರಾತ್ಮಕ ನಡೆ ನುಡಿಗಳಿಂದ ತಮ್ಮ ಬದುಕಿನಲ್ಲಿ ಪರಿವರ್ತನೆಯನ್ನು ಕಂಡವರನ್ನು ಕಾಣಬಹುದು. ಬದಲಾವಣೆಯೇ ನಕಾರಾತ್ಮಕ ಎಂಬ ಸುಸ್ತು ಹೊಡೆಸುವ ಮಾತುಗಳನ್ನು , ಟೀಕೆಗಳನ್ನು ಅವರೂ ಕೇಳಿರುತ್ತಾರೆ. ಆದರೆ ಅದರಿಂದ ಅವರ ಮೇಲೇನೂ ಪ್ರಭಾವ ಬೀರುವುದಿಲ್ಲ. ಅವರು ಕ್ಷುಲ್ಲಕ ಹರಟೆಗೆ ಕಾಲ ಹರಣ ಮಾಡಿರುವುದಿಲ್ಲ. ಅವರ ಫೋಕಸ್‌ ಅವರ ಕೆಲಸದ ಮೇಲಿರುತ್ತದೆಯೇ ಹೊರತು ವಿಚಲಿತಗೊಳಿಸುವುದಿಲ್ಲ. ನಾವು ನಮ್ಮ ಸಂಭಾಷಣೆಗಳು ಸೃಷ್ಟಿಸುವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ ಎನ್ನುತ್ತಾರೆ ಡೇವಿಡ್‌ ಎಲ್‌ ಕೋರ್ಪಡಿರ್.

ನಾವು ಯಾರ ಜತೆಗೂ ಮಾತನಾಡುವಾಗ ಒಂದು ಅಂಶವನ್ನು ಮರೆಯಬಾರದು. ಮಾತುಕತೆ ಅರ್ಥಪೂರ್ಣವಾಗಿರಬೇಕು. ಉತ್ಪಾದಕವಾಗಿರಬೇಕು. ಸಂಬಂಧಗಳನ್ನು ಬಲಪಡಿಸುವಂತಿರಬೇಕು. ಭವಿಷ್ಯದಲ್ಲಿ ಎಲ್ಲರಿಗೂ ಅನುಕೂಲವಾಗುವಂತೆ ಇರಬೇಕು. ನೀವು ಮುಕ್ತ ಮನಸ್ಸಿನಿಂದ ನಿಮ್ಮ ಕ್ರಿಯೇಟಿವಿಟಿಯ ಅಚ್ಚರಿಯನ್ನು ಹಂಚಿದಾಗ, ಪ್ರತಿಯೊಂದು ಸಂಭಾಷಣೆಯೂ ಹೊಸತನದಿಂದ ಕೂಡಿರುತ್ತದೆ. ‌

ಅಮೆರಿಕ ಮೂಲದ ವೀಸಾ ಕ್ರೆಡಿಟ್‌ ಕಾರ್ಡ್‌ ಅಸೋಸಿಯೇಶನ್‌ನ ಸ್ಥಾಪಕ, ಉದ್ಯಮಿ ಡೀ ವಾರ್ಡ್‌ ಹಾಕ್‌ ಅವರು ಕಳೆದ ಅರ್ಧ ಶತಮಾನದಲ್ಲೇ ಹೊಸ ಆವಿಷ್ಕಾರದ ಮತ್ತು ಯಶಸ್ವಿ ಕಂಪನಿಯಾದ ವೀಸಾ ಕಾರ್ಡ್‌ ಕಂಪನಿಯನ್ನು ಸ್ಥಾಪಿಸಿದ್ದರು. ಈಗ 569 ಶತಕೋಟಿ ಡಾಲರ್‌ ಮಾರುಕಟ್ಟೆ ಮೌಲ್ಯವನ್ನು ಒಳಗೊಂಡಿದೆ. ಡೀ ವಾರ್ಡ್‌ ಹುಕ್‌ ಅವರು ಸಿಇಒ ಆಗಿದ್ದಾಗ ವೀಸಾ ಕಾರ್ಪೊರೇಷನ್‌ನ ಆದಾಯ 10,000 ಪರ್ಸೆಂಟ್‌ ಹೆಚ್ಚಳವಾಗಿತ್ತು. ಹಾಗಾದರೆ ಡೀ ವಾರ್ಡ್‌ ಹುಕ್‌ ಯಶಸ್ಸಿನ ಸೀಕ್ರೆಟ್ಸ್‌ ಏನಿತ್ತು?

ಇದನ್ನೂ ಓದಿ: Money plus : ಲಾರ್ಜ್‌ ಕ್ಯಾಪ್‌ ಮ್ಯೂಚುವಲ್‌ ಫಂಡ್‌ನಲ್ಲಿ ಯಾಕೆ ಹೂಡಬೇಕು?

ಆತ ಧೈರ್ಯಶಾಲಿಯಾಗಿದ್ದ. ಆತನಿಗೆ ದಣಿವು ಎಂಬುದೇ ಇರಲಿಲ್ಲ. ಆತ ಅದ್ಭುತ ರೀತಿಯಲ್ಲಿ ವಿಷಯಗಳನ್ನು ಕಲಿಯುತ್ತಿದ್ದ. ಮನೆಯಲ್ಲಿ 8,000 ಕ್ಕೂ ಹೆಚ್ಚು ಪುಸ್ತಕಗಳ ಲೈಬ್ರೆರಿಯನ್ನು ಹೊಂದಿದ್ದ. ಸ್ವಲ್ಪ ಸಮಯ ಸಿಕ್ಕಿದರೂ ಈ ಲೈಬ್ರೆರಿಯಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಸಂಕೀರ್ಣ ಕೃತಿಗಳನ್ನು ಓದುತ್ತಿದ್ದ. ಪ್ರತಿ ಪುಸ್ತಕದಲ್ಲೂ ಆತ ಓದಿದ್ದಕ್ಕೆ ಸಾಕ್ಷಿಯಾಗಿ ಅಂಡರ್‌ ಲೈನ್‌, ಟಿಪ್ಪಣಿಗಳು ಇರುತ್ತಿತ್ತು. ಕಲಿಕೆಯ ಕಡೆಗಿನ ಅತ್ಯಾಸಕ್ತಿ ಆತನ ಶಕ್ತಿಯಾಗಿತ್ತು. ಗ್ಲೋಬಲ್‌ ಫೈನಾನ್ಸ್‌, ಸಂಧಾನ, ಭವಿಷ್ಯದ ಡಿಜಿಟಲ್‌ ಟೆಕ್ನಾಲಜಿ ಬಗ್ಗೆ ಅಪಾರ ತಿಳಿದುಕೊಂಡಿದ್ದ. ಮುಖ್ಯವಾಗಿ ಸಂಭಾಷಣೆಯ ಕಲೆಯಲ್ಲಿ ನಿಷ್ಣಾತನಾಗಿದ್ದ.

ಒಂದು ಕಂಪನಿಯ ನಾಯಕತ್ವದಲ್ಲಿ ಸೋಲು-ಗೆಲುವನ್ನು ನಿರ್ಣಯಿಸುವಲ್ಲಿ ಸಂಭಾಷಣೆಯ ಕಲೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಅದು ಸ್ಪಷ್ಟ ಹಾಗೂ ಪ್ರಾಯೋಗಿಕವಾಗಿರಬೇಕು. ಕಾರ್ಪೊರೇಟ್‌ ಸಂಸ್ಕೃತಿ, ಸ್ಟ್ರಾಟಜಿ ರಚನೆ, ಸಂಘಟನೆ, ಮ್ಯಾನೇಜ್‌ಮೆಂಟ್‌ ಬದಲಾವಣೆ, ಬ್ರಾಂಡ್‌, ಜಾಂಯಿಂಟ್‌ ವೆಂಚರಿಂಗ್‌ನಲ್ಲಿ ಮಾತುಗಾರಿಕೆ ಪ್ರಮುಖವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿ ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಇದು ಆತಂಕಕಾರಿ

VISTARANEWS.COM


on

Vistara Editorial
Koo

ಭಾರತದಲ್ಲಿ ತಯಾರಾಗುವ ಒಟ್ಟು 527 ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಹೇಳಿದ್ದಾರೆ. 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿದೆಯಂತೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ. ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಅಪಾಯಕಾರಿ ಕೆಮಿಕಲ್‌ಗಳು ಕಂಡು ಬಂದಿವೆ. ಇದು ಭಾರತದ ರಫ್ತು ವಲಯದ ಮಟ್ಟಿಗೆ ಆತಂಕಕಾರಿ ಸಂಗತಿ.

ಹೀಗಾಗುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿಯನ್ನು ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಅಮೆರಿಕದಲ್ಲಿ ಭಾರತದ ಮಾವು, ಜರ್ಮನಿಯಲ್ಲಿ ಭಾರತದ ಡಾರ್ಜಲಿಂಗ್‌ ಟೀ, ಯುಎಇಯಲ್ಲಿ ನಮ್ಮ ಮಾವು ಹಾಗೂ ತರಕಾರಿ ತಿರಸ್ಕಾರಕ್ಕೊಳಗಾಗಿದ್ದವು. ಇದೀಗ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅತಿಯಾಗಿ ಕಂಡುಬಂದಿದೆ. ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಹೆಚ್ಚಿದೆ. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದ ಕೆಲವು ದೇಶಗಳಲ್ಲಿ ಸಾವಿಗೆ ಕಾರಣವಾಗಿತ್ತು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಇದಕ್ಕೆ ಕಾರಣ, ನಮ್ಮವರು ಬೆಳೆಯುವ ಬೆಳೆಗೆ ಬಳಸುವ ಕೀಟನಾಶಕ ಹಾಗೂ ರಸಗೊಬ್ಬರದ ಪ್ರಮಾಣದಲ್ಲಿ ಲಂಗುಲಗಾಮೇ ಇಲ್ಲದಿರುವುದು. ಕೀಟನಾಶಕಗಳು ಹಾಗೂ ರಸಗೊಬ್ಬರಗಳಿಗೆ ಅತಿ ಭಾರೀ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕೊಡುವ ದೇಶವೂ ನಮ್ಮದೇ. ಹೀಗಾಗಿ ಇವು ಅತ್ಯಂತ ಅಗ್ಗವಾಗಿ ಸಿಗುತ್ತವೆ. ಅಮೆರಿಕ ಬಹಳಷ್ಟು ಸಾರಿ ನಮ್ಮಲ್ಲಿ ನೀಡಲಾಗುತ್ತಿರುವ ರಸಗೊಬ್ಬರ ಸಬ್ಸಿಡಿಯ ಬಗ್ಗೆ ತಗಾದೆ ಎತ್ತಿದೆ. ಇದರಲ್ಲಿ ಅಮೆರಿಕದ ಹಿತಾಸಕ್ತಿಯೂ ಇದೆ ಎನ್ನೋಣ. ಆದರೆ ಅಮೆರಿಕದ ಆಕ್ಷೇಪದಲ್ಲಿ ಸತ್ಯವೂ ಇದೆ. ಅಮೆರಿಕ, ಮುಂದುವರಿದ ಯುರೋಪ್ ದೇಶಗಳು, ಸಿಂಗಾಪುರ ಮುಂತಾದೆಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮ ಮೀರಿದ ಉತ್ಪನ್ನಗಳನ್ನು ಅವು ಸ್ವೀಕರಿಸುವುದಿಲ್ಲ. ಹೀಗಾಗಿ ರಫ್ತಿನ ಮಟ್ಟಿಗೆ ನಾವೂ ಕಠಿಣ ನಿಯಮಗಳನ್ನು ಪಾಲಿಸಬೇಕಾದುದು ಅತ್ಯವಶ್ಯಕ.

ದೇಶದಿಂದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿನ ಪ್ರಾಮುಖ್ಯತೆ ಹಾಗೂ ಅದರ ಗುಣಮಟ್ಟ ಕಾಪಾಡಿಕೊಳ್ಳಬೇಕಾದ ಅಗತ್ಯ ಅರಿತುಕೊಂಡ ಕೇಂದ್ರ ಸರ್ಕಾರ 1986ರಲ್ಲಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವನ್ನು (APEDA) ಸ್ಥಾಪಿಸಿತು. ರಫ್ತು ಮಾಡಬೇಕಾದ ಸರಕುಗಳ ಕಡ್ಡಾಯ ಗುಣಮಟ್ಟದ ನಿಯಂತ್ರಣ ಮತ್ತು ಪೂರ್ವ-ರವಾನೆ ತಪಾಸಣೆಯ ಉದ್ದೇಶಕ್ಕಾಗಿ ರಫ್ತು (ಗುಣಮಟ್ಟ ನಿಯಂತ್ರಣ ಮತ್ತು ತಪಾಸಣೆ) ಕಾಯಿದೆ, 1963ರ ಸೆಕ್ಷನ್ 3ರ ಅಡಿಯಲ್ಲಿ ಭಾರತ ಸರ್ಕಾರದಿಂದ ರಫ್ತು ಪರಿಶೀಲನಾ ಮಂಡಳಿ (EIC) ಅನ್ನು ಸ್ಥಾಪಿಸಲಾಯಿತು. ಇದು 1000ಕ್ಕೂ ಹೆಚ್ಚು ಸರಕುಗಳನ್ನು ತಪಾಸಿಸುತ್ತದೆ. ಆಹಾರ ಮತ್ತು ಕೃಷಿ, ಮೀನುಗಾರಿಕೆ, ಖನಿಜಗಳು, ಸಾವಯವ ಮತ್ತು ಅಜೈವಿಕ ರಾಸಾಯನಿಕಗಳು, ರಬ್ಬರ್ ಉತ್ಪನ್ನಗಳು, ಸೆರಾಮಿಕ್ ಉತ್ಪನ್ನಗಳು, ಕೀಟನಾಶಕಗಳು, ಲಘು ಎಂಜಿನಿಯರಿಂಗ್, ಉಕ್ಕಿನ ಉತ್ಪನ್ನಗಳು, ಸೆಣಬು ಉತ್ಪನ್ನಗಳು, ತೆಂಗಿನಕಾಯಿ ಉತ್ಪನ್ನಗಳು, ಪಾದರಕ್ಷೆಗಳು ಇವನ್ನೆಲ್ಲ ಪರಿಶೀಲಿಸುತ್ತದೆ. ಇದಕ್ಕಾಗಿಯೇ ದೊಡ್ಡ ಸಂಖ್ಯೆಯ ಲ್ಯಾಬ್‌ಗಳಿವೆ. ಹೀಗಿದ್ದರೂ ಕಣ್ತಪ್ಪಿಸಿ ವಿಷಕಾರಕ ಅಂಶಗಳಿರುವ ಉತ್ಪನ್ನಗಳು ವಿದೇಶಕ್ಕೆ ಹೋಗುತ್ತವೆ ಎಂದರೇನರ್ಥ?

ಸದ್ಯ ಈ ತಪಾಸಣೆಯನ್ನು ಬಿಗಿ ಮಾಡಬೇಕಿದೆ. ವಿಷಕಾರಕ ಅಂಶಗಳನ್ನು ಹೊಂದಿರುವ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವ, ಪರೀಕ್ಷಿಸುವ, ದೇಶಕ್ಕೆ ಕೆಟ್ಟ ಹೆಸರು ತರುವ ಉತ್ಪನ್ನಗಳ ನಿರ್ಬಂಧಕ್ಕೆ ಕಠಿಣ ಕ್ರಮ ಆಗಬೇಕಿದೆ. ಯಾಕೆಂದರೆ ಇದು ಭಾರತದ ಘನತೆಯನ್ನು ಜಾಗತಿಕವಾಗಿ ಉಳಿಸುವ ಅಥವಾ ನಾಶಮಾಡುವ ಸಂಗತಿಯಾಗಿದೆ.

Continue Reading

ವಿದೇಶ

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಅಮೆರಿಕ ಮುಂದಾಗಿದೆ. ಉತ್ಪನ್ನಗಳನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ ನಂತರ ಈ ಬೆಳವಣಿಕೆ ಕಂಡು ಬಂದಿದೆ. ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

MDH, Everest Spices
Koo

ವಾಷಿಂಗ್ಟನ್‌: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳ ಮಾರಾಟವನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ್ದು, ಇದೀಗ ಅಮೆರಿಕವೂ ಕ್ರಮಕ್ಕೆ ಮುಂದಾಗಿದೆ. ಅಮೆರಿಕದ ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ (Food and Drug Administration) ಎಂಡಿಎಚ್ ಮತ್ತು ಎವರೆಸ್ಟ್‌ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

“ಎಫ್‌ಡಿಎ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ” ಎಂದು ವಕ್ತಾರರು ತಿಳಿಸಿದ್ದಾರೆ. ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ಇತ್ತೀಚೆಗೆ ನಿಷೇಧಿಸಿತ್ತು. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿತ ಉತ್ಪನ್ನಗಳು.

ವಿವಾದದ ಬಳಿಕ ಎವರೆಸ್ಟ್ ಸಂಸ್ಥೆ ಪ್ರತಿಕ್ರಿಯಿಸಿ, ʼʼತನ್ನ ಮಸಾಲೆಗಳು ಸೇವನೆಗೆ ಸುರಕ್ಷಿತʼʼ ಎಂದು ಹೇಳಿದೆ. ಆದರೆ ಎಂಡಿಎಚ್ ಇದುವರೆಗೆ ತನ್ನ ಉತ್ಪನ್ನಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕಂಪನಿಗಳ ಉತ್ಪನ್ನಗಳನ್ನು ಅಮೆರಿಕ, ಯುರೋಪ್‌, ಇಂಗ್ಲೆಂಡ್‌ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಗುಣಮಟ್ಟ ತಪಾಸಣೆಗೆ ಭಾರತೀಯ ಆಹಾರ ಸುರಕ್ಷತಾ ನಿಯಂತ್ರಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸೋಮವಾರ ಆದೇಶ ಹೊರಡಿಸಿದೆ.

ʼʼಹಾಂಕಾಂಗ್ ಮತ್ತು ಸಿಂಗಾಪುರದ ಅಧಿಕಾರಿಗಳಿಂದ ಎಂಡಿಎಚ್ ಮತ್ತು ಎವರೆಸ್ಟ್ ಉತ್ಪನ್ನಗಳ ರಫ್ತು ಬಗ್ಗೆ ಮಾಹಿತಿ ಕೋರಲಾಗಿದೆ. ಗುಣಮಟ್ಟದ ಸಮಸ್ಯೆಗಳ ಮೂಲ ಕಾರಣವನ್ನು ಕಂಡುಹಿಡಿಯಲು ಕಂಪನಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆʼʼ ಎಂದು ಭಾರತದ ಮಸಾಲೆ ಮಂಡಳಿ ಬುಧವಾರ ತಿಳಿಸಿದೆ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಹಿಂಪಡೆಯಲು ಸಿಂಗಾಪುರ ಆದೇಶಿಸಿತ್ತು. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಅದು ಆರೋಪಿಸಿತ್ತು. ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಕಾರಣ ತಿಳಿಸಿತ್ತು. ಅದಾದ ಬಳಿಕ ಹಾಂಕಾಂಗ್‌ನಲ್ಲೂ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ.

Continue Reading

ಮನಿ-ಗೈಡ್

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Money Guide: ದೇಶದಲ್ಲಿನ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದಿದೆ. ಅದರಂತೆ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ 16 ಕಂತುಗಳನ್ನು ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಮುಂದಿನ ತಿಂಗಳು 17ನೇ ಕಂತು ಬಿಡಿಗಡೆಯಾಗುವ ನಿರೀಕ್ಷೆ ಇದೆ. ಸದ್ಯ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Money Guide
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು. ದೇಶಾದ್ಯಂತದ 9 ಕೋಟಿಗಿಂತ ಅಧಿಕ ಫಲಾನುಭವಿಗಳ ಖಾತೆಗೆ ಅಂದು ಸುಮಾರು 21,000 ಕೋಟಿ ರೂ. ಜಮೆ ಮಾಡಲಾಗಿತ್ತು. ಸದ್ಯ 17ನೇ ಕಂತು ಬಿಡುಗಡೆಯಾಗಬೇಕಿದೆ.

17ನೇ ಕಂತು ಯಾವಾಗ?

17ನೇ ಕಂತು ಮೇಯಲ್ಲಿ ಬಿಡುಗಡೆಯಾಗಲಿದೆ. ಆದರೆ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ‘New Farmer Registration’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ.
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ನಿಮ್ಮ ಹೆಸರು ಫಲಾನುಭವಿ ಪಟ್ಟಿಯಿಂದ ರದ್ದಾಗಲು ಕಾರಣ

  • ನಕಲಿ ಫಲಾನುಭವಿ ಸಂಖ್ಯೆ.
  • ಇ-ಕೆವೈಸಿ ಪೂರ್ಣವಾಗದಿರುವುದು.
  • ಅರ್ಜಿಯಲ್ಲಿನ ತಪ್ಪಾದ ಐಎಫ್‌ಎಸ್‌ಸಿ ಕೋಡ್‌.
  • ಅಮಾನ್ಯ, ವರ್ಗಾವಣೆಗೊಂಡ, ನಿರ್ಬಂಧಿಸಿದ ಅಥವಾ ಸ್ಥಗಿತಗೊಳಿಸಿದ ಬ್ಯಾಂಕ್ ಖಾತೆ.
  • ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ನಂಬರ್‌ ಲಿಂಕ್‌ ಆಗದೇ ಇರುವುದು.
  • ಅಪೂರ್ಣ ಅಪ್ಲಿಕೇಷನ್‌ ಫಾರಂ.
  • ಅಮಾನ್ಯ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೆಸರು.
  • ಫಲಾನುಭವಿ ಖಾತೆ ಸಂಖ್ಯೆಯು ಫಲಾನುಭವಿ ಕೋಡ್ ಮತ್ತು ಯೋಜನೆಯೊಂದಿಗೆ ಹೋಲಿಕೆ ಆಗದಿರುವುದು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading
Advertisement
ವೈರಲ್ ನ್ಯೂಸ್28 mins ago

Viral Video: ಹೆಂಡತಿಯನ್ನ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Lok sabaha election
ದೇಶ38 mins ago

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

PM Narendra Modi Live in Sirsi campaign meeting here
Lok Sabha Election 202441 mins ago

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Samantha Ruth Prabhu shocking secrets
ಟಾಲಿವುಡ್45 mins ago

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

PM Narendra Modi Cm Siddaramaiah many questions to PM Modi Challenge for answer
Lok Sabha Election 20241 hour ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ1 hour ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್2 hours ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ2 hours ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 20242 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 20242 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ5 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202422 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌