ನವ ದೆಹಲಿ: ಸಾರ್ವಜನಿಕ ವಲಯದ ತೈಲ ಕಂಪನಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಿಂದ (BPCL) ಬಂಡವಾಳ ಹಿಂತೆಗೆತ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಿಪಿಸಿಎಲ್‌ನಿಂದ 52.98% ಷೇರುಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮತ್ತೊಮ್ಮೆ ಔಪಚಾರಿಕವಾಗಿ ಘೋಷಿಸುವ ಸಾಧ್ಯತೆ ಇದೆ. ಈ ಹಿಂದೆ ಮೇನಲ್ಲಿ ಸರ್ಕಾರ ಬಿಪಿಸಿಎಲ್‌ನಿಂದ ಬಂಡವಾಳ ಹಿಂತೆಗೆದುಕೊಳ್ಳುವುದಾಗಿ ತಿಳಿಸಿತ್ತು.
ಜಾಗತಿಕ ಇಂಧನ ಮಾರುಕಟ್ಟೆಯ ಬಿಕ್ಕಟ್ಟಿನ ಪರಿಣಾಮ ಸದ್ಯಕ್ಕೆ ಈ ಮೆಗಾ ಖಾಸಗೀಕರಣ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಡ್ಡರ್‌ಗಳು ಅಸಹಾಯಕತೆ ವ್ಯಕ್ತಪಡಿಸಿರುವುದು ಸರ್ಕಾರದ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.
ಕೇಂದ್ರ ಸರ್ಕಾರ ಕಳೆದ ಆಗಸ್ಟ್‌ನಲ್ಲಿ ಸಂಸತ್ತಿಗೆ ನೀಡಿದ ಹೇಳಿಕೆಯಲ್ಲಿ, ಬಿಪಿಸಿಎಲ್‌ನಿಂದ ಬಂಡವಾಳ ಹಿಂತೆಗೆತದ ಪ್ರಕ್ರಿಯೆಯನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿ, ಪ್ರಸಕ್ತ ಮಾರುಕಟ್ಟೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದಿತ್ತು. ಆದರೆ ಇದೀಗ ಬಿಡ್ಡರ್‌ಗಳ ನಿರಾಸಕ್ತಿಯಿಂದ ಸರ್ಕಾರ ಹಿಂದೆ ಸರಿದಿದೆ.