ವಾಣಿಜ್ಯ
RBI interest rate : ಆಗಸ್ಟ್ 8-10ಕ್ಕೆ ಆರ್‌ಬಿಐ ಸಭೆ, ಸಾಲದ ಬಡ್ಡಿ ದರ ಏನಾಗಲಿದೆ?
RBI interest rate ಆರ್‌ಬಿಐ ಆಗಸ್ಟ್ 8-10ಕ್ಕೆ ಹಣಕಾಸು ನೀತಿ ಪರಾಮರ್ಶೆ ಸಭೆ ನಡೆಸಲಿದೆ. ಬಡ್ಡಿ ದರ ಏನಾದೀತು? ತಜ್ಞರ ಅಭಿಪ್ರಾಯ ಇಲ್ಲಿದೆ.
ನವ ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ 8-10ಕ್ಕೆ ನಡೆಸಲಿರುವ ದ್ವೈಮಾಸಿಕ ಹಣಕಾಸು ಪರಾಮರ್ಶೆಯಲ್ಲಿ ಪ್ರಮುಖ ಬಡ್ಡಿ ದರಗಳನ್ನು ಯಥಾಸ್ಥಿತಿಯಲ್ಲಿ ಸತತ ಮೂರನೇ ಬಾರಿಗೆ ಮುಂದುವರಿಸುವ ನಿರೀಕ್ಷೆ ಇದೆ. (RBI interest rate) ಅಮೆರಿಕದ ಫೆಡರಲ್ ರಿಸರವ್ ಮತ್ತು ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಬಡ್ಡಿ ದರವನ್ನು ಏರಿಸಿದ್ದರೂ, ಹಣದುಬ್ಬರ ಕಂಫರ್ಟ್ ಝೋನ್‌ನಲ್ಲಿ ಇರುವುದರಿಂದ ಆರ್‌ಬಿಐ ಬಡ್ಡಿ ದರಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.
ಕಳೆದ ವರ್ಷ ಮೇನಿಂದ ಬಡ್ಡಿ ದರಗಳು ಏರುಗತಿಯನ್ನು ಪಡೆದಿತ್ತು. ಫೆಬ್ರವರಿಯಿಂದ ರೆಪೊ ದರವನ್ನು 6.5% ರ ಮಟ್ಟದಲ್ಲಿ ಇರಿಸಲಾಗಿದೆ. ಏಪ್ರಿಲ್-ಜೂನ್‌ನಲ್ಲಿ ಯಥಾಸ್ಥಿತಿ ಇತ್ತು. ಆರ್‌ಬಿಐ ಗವರ್ನರ್ ನೇತೃತ್ವದ 6 ಸದಸ್ಯರ ನೇತೃತ್ವದ ಹಣಕಾಸು ನೀತಿ ಸಮಿತಿಯು (Monetary policy committee) ಆಗಸ್ಟ್ 8-10ಕ್ಕೆ ಹಣಕಾಸು ಪರಾಮರ್ಶೆ ನಡೆಸಲಿದೆ. ಆಗಸ್ಟ್ 10ಕ್ಕೆ ಗವರ್ನರ್ ಶಕ್ತಿಕಾಂತ ದಾಸ್ ಅವರು ನೀತಿಯನ್ನು ಘೋಷಿಸಲಿದ್ದಾರೆ.
ಆರ್ ಬಿಐ ಬಡ್ಡಿ ದರವನ್ನು ಯಥಾಸ್ಥಿತಿಯಲ್ಲಿ ಇಡಬಹುದು ಎಂದು ನಾವು ಭಾವಿಸುತ್ತಿದ್ದೇವೆ. ಹಣದುಬ್ಬರ ಪ್ರಮಾಣ ಶೇ.5ಕ್ಕಿಂತ ಕೆಳಮಟ್ಟದಲ್ಲಿ ಇರುವುದರಿಂದ ಬಡ್ಡಿ ದರವನ್ನು ಯಥಾಸ್ಥಿತಿಯಲ್ಲಿ ಉಳಿಸುವ ಸಾಧ್ಯತೆ ಇದೆ ಎಂದು ಬ್ಯಾಂಕ್ ಆಫ್ ಬರೋಡಾದ ಮುಖ್ಯ ಆರ್ಥಿಕ ತಜ್ಞ ಮದನ್ ಸಬ್ನವಿಸ್ ಹೇಳಿದ್ದಾರೆ. ಮೂರನೇ ತ್ರೈಮಾಸಿಕದ್ಲಲಿ 5.4% ಹಣದುಬ್ಬರವನ್ನು ಆರ್‌ಬಿಐ ನಿರೀಕ್ಷಿಸಿದೆ.
ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಮುಖ್ಯ ಆರ್ಥಿಕ ತಜ್ಞರಾದ ಉಪಾಸನಾ ಭಾರಧ್ವಾಜ್, 2,000 ನೋಟನ್ನು ಚಲಾವಣೆಯಿಂದ ಹಿಂತೆಗೆದುಕೊಂಡ ಬಳಿಕ ಲಿಕ್ವಿಡಿಟಿ ಪರಿಸ್ಥಿತಿ ಪೂರಕವಾಗಿದೆ. ಆದ್ದರಿಂದ ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಯುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಅಮೆರಿಕದಲ್ಲಿ ಫೆಡರಲ್ ರಿಸರ್ವ್ ಕಳೆದ ವಾರ ಬಡ್ಡಿ ದರದಲ್ಲಿ 0.25% ಏರಿಕೆ ಮಾಡಿತ್ತು. 5.25-5.5% ಕ್ಕೆ ಬಡ್ಡಿ ದರ ನಿಗದಿಯಾಗಿತ್ತು. ಇದು ಅಮೆರಿಕದ ಹಲವಾರು ವರ್ಷಗಳ ಇತಿಹಾಸಲ್ಲಿಯೇ ಗರಿಷ್ಠ. ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಕೂಡ ಬಡ್ಡಿ ದರ ಏರಿಸಿದೆ. (3.75%) ಭಾರತದಲ್ಲಿ ರಿಟೇಲ್ ಹಣದುಬ್ಬರ ಜೂನ್‌ನಲ್ಲಿ 4.81% ರಷ್ಟಿತ್ತು. ಹೀಗಿದ್ದರೂ ಆರ್‌ಬಿಐನ ಕಂಫರ್ಟ್ ಝೋನ್‌ನಲ್ಲಿಯೇ ಇದೆ. ಈ ಹಿಂದೆ ಜೂನ್ 6-8ರಂದು ಎಂಪಿಸಿ ಸಭೆ ನಡೆಸಲಾಗಿತ್ತು.
ಕರ್ನಾಟಕ
Gold Rate Today: ಬೆಂಗಳೂರಿನಲ್ಲಿ ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ; ಇಂದಿನ ದರ ಇಷ್ಟಿದೆ
Gold Rate Today: ಭಾನುವಾರವೂ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಒಂದು ಗ್ರಾಂಗೆ 10 ರೂ. ಏರಿಕೆಯಾಗಿದ್ದು, ಕೊಳ್ಳುವವರ ಜೇಬಿಗೆ ತುಸು ಭಾರ ಎನಿಸಲಿದೆ.
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾನುವಾರವೂ (ಸೆಪ್ಟೆಂಬರ್ 24) ಬಂಗಾರದ ಬೆಲೆ (Gold Rate Today) ಜಾಸ್ತಿಯಾಗುತ್ತಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 5,495 ರೂ. ಆಗಿದ್ದು, ಒಂದು ಗ್ರಾಂಗೆ 10 ರೂ. ಜಾಸ್ತಿಯಾದಂತಾಗಿದೆ. ಹಾಗೆಯೇ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 5,995 ರೂ. ಆಗಿದ್ದು, ಒಂದೇ ದಿನದಲ್ಲಿ 11 ರೂ. ಏರಿಕೆಯಾಗಿದೆ.
ಶನಿವಾರವೂ (ಸೆಪ್ಟೆಂಬರ್ 23) ಬಂಗಾರದ ಬೆಲೆಯು ಇಷ್ಟೇ ಏರಿಕೆಯಾಗಿತ್ತು. ಶುಕ್ರವಾರ ಒಂದು ಗ್ರಾಂ ಚಿನ್ನದ ಬೆಲೆಯು 20 ರೂ. ಇಳಿಕೆಯಾಗಿದ್ದು ಗ್ರಾಹಕರಿಗೆ ತುಸು ನಿರಾಳ ಭಾವ ಮೂಡಿಸಿತ್ತು. ಆದರೆ, ಶನಿವಾರ ಹಾಗೂ ಭಾನುವಾರ ಸತತ ಏರಿಕೆ ಕಂಡಿದೆ. ಆದಾಗ್ಯೂ, ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 22 ಕ್ಯಾರಟ್ ಚಿನ್ನದ ಬೆಲೆಯು ಗ್ರಾಂಗೆ 5,500 ದಾಟಿತ್ತು. ಹಾಗೆಯೇ, 24 ಕ್ಯಾರಟ್ ಚಿನ್ನದ ಬೆಲೆಯು 6 ಸಾವಿರ ರೂ. ದಾಟಿತ್ತು. ಹಬ್ಬದ ಬಳಿಕ ತುಸು ಇಳಿಕೆಯಾಗಿರುವುದು ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.
ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.
ಇದನ್ನೂ ಓದಿ: Gold Fruad : Hallmark ಚಿನ್ನಾಭರಣ ನೀಡಿ ಲೋನ್ ಪಡೆಯಲು ಯತ್ನ: SBI ಮ್ಯಾನೇಜರ್ ಜಾಣ್ಮೆ ಮುಂದೆ ನಡೆಯದ ಆಟ!
ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.
ಪ್ರಮುಖ ಸುದ್ದಿ
Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!
Happiest Employees: ಇನ್‌ಡೀಡ್ ಜಾಬ್ ಸೈಟ್ ನಡೆಸಿದ ಸಮೀಕ್ಷೆಯಲ್ಲಿ ಅಮೆರಿಕ ಟಾಪ್ 20 ಸಂತೋಷದಾಯಕ ಕಂಪನಿಗಳ ಪಟ್ಟಿಯಲ್ಲಿ ಟಿಸಿಎಸ್, ವಿಪ್ರೋ ಮತ್ತು ಇನ್ಫೋಸಿಸ್ ಸ್ಥಾನಪಡೆದುಕೊಂಡಿವೆ.
ನವದೆಹಲಿ: ಉದ್ಯೋಗ ಹುಡುಕಲು ನೆರವು ನೀಡುವ ಜಾಲತಾಣ ಇನ್‌ಡೀಡ್ (Indeed Survey) ನಡೆಸಿದ ಉದ್ಯೋಗಿಗಳು ಯೋಗಕ್ಷೇಮ ಸಮೀಕ್ಷೆಯಲ್ಲಿ ಭಾರತೀಯ ಮೂಲದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ(Indian Company). ಅಮೆರಿಕದ ಉದ್ಯೋಗಿಗಳ ಯೋಗಕ್ಷೇಮ ಕೈಗೊಳ್ಳುವ ಕಂಪನಿಗಳ ಪಟ್ಟಿಯಲ್ಲಿ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಸ್ಟೋರ್ಸ್(Love’s Travel Stops & County Stores) ಮೊದಲ ಸ್ಥಾನದಲ್ಲಿದೆ. ಅತ್ಯಂತ ಸಂತೋಷದಾಯಕ ಉದ್ಯೋಗಿಗಳನ್ನು ಹೊಂದಿರುವ ಈ ಪಟ್ಟಿಯಲ್ಲಿ ಟೆಕ್ ದೈತ್ಯ ಕಂಪನಿಗಳಾದ ಟಿಸಿಎಸ್(TCS), ಇನ್ಫೋಸಿಸ್ (Infosys) ಮತ್ತು ವಿಪ್ರೋ (Wipro) ಕ್ರಮವಾಗಿ, 4, 8 ಮತ್ತು 9 ಸ್ಥಾನವನ್ನು ಪಡೆದುಕೊಂಡಿವೆ.
ಪ್ರಥಮ ಸ್ಥಾನದಲ್ಲಿರುವ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್, 100 ಅಂಕಗಳ ಪೈಕಿ 83 ಅಂಕವನ್ನು ಸಂಪಾದಿಸಿದೆ. ಸಾವಿರಾರು ಅನಾಮಧೇಯ ಉದ್ಯೋಗಿಗಳ ವಿಮರ್ಶೆ, ಸಂತೋಷ, ಒತ್ತಡದ ಹಂತಗಳು, ಉದ್ಯೋಗ ಸಂತೃಪ್ತಿ ಮತ್ತು ಉದ್ದೇಶ ಸೇರಿ ಅನೇಕ ಸಂಗತಿಗಳ ಆಧಾರದ ಮೇಲೆ ಜಪಾನ್ ಮೂಲದ ಇನ್‌ಡೀಡ್ ಜಾಬ್ ಸೈಟ್ ಸಮೀಕ್ಷೆಯನ್ನು ಪೂರ್ತಿಗೊಳಿಸಿದೆ.
ಸಾವಿರಕ್ಕಿಂತಲೂ ಹೆಚ್ಚು ಉದ್ಯೋಗಿಗಳು ಇರುವ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ. ಏರ್‌ಲೈನ್ಸ್‌ನಿಂದ ಕನ್ಸಲ್ಟನ್ಸೀಸ್, ಫಾಸ್ಟ್ ಫುಡ್ ಚೈನ್ ಕಂಪನಿಗಳವರೆಗೆ ಹಲವು ವಿಧದ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Best Company of 2023: ‘ಟೈಮ್’ 100 ಬೆಸ್ಟ್ ಕಂಪನಿಗಳ ಲಿಸ್ಟ್‌ನಲ್ಲಿ ಭಾರತದ ಏಕೈಕ ಬೆಂಗಳೂರಿನ ಕಂಪನಿ!
ಆ 20 ಕಂಪನಿಗಳು ಯಾವವು?
ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್ಸ್, ಎಚ್ ಆ್ಯಂಡ್ ಆರ್ ಬ್ಲಾಕ್, ಡೆಲ್ಟಾ ಏರ್ ಲೈನ್ಸ್, ಟಾಟಾ ಕನ್ಸಲ್ಟನ್ಸಿ ಸರ್ವೀಸಸ್, ಅಕ್ಸೆಂಚರ್, ಐಬಿಎಂ, ಎಲ್3ಹ್ಯಾರಿಸ್, ವಿಪ್ರೋ, ಇನ್ಫೋಸಿಸ್, ನೈಕ್, ವ್ಯಾನ್ಸ್, ಇನ್-ಎನ್-ಔಟ್ ಬರ್ಗರ್, ಕಾಗ್ನಿಜಂಟ್ ಟೆಕ್ನಾಲಜಿ ಸಲೂಷನ್ಸ್, ಹಾಲ್ಮಾರ್ಕ್, ಮೈಕ್ರೋಸಾಫ್ಟ್, ನಾರ್ತ್‌ರಾಪ್ ಗ್ರುಮ್ಮನ್, ಫೆಡ್‌ಎಕ್ಸ್ ಫ್ರೈಟ್, ಡಚ್ ಬ್ರದರ್ಸ್ ಕಾಫಿ, ಆ್ಯಪಲ್.
ದೇಶ
Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!
Money Guide: ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮ ಆಗಿರಬೇಕು ಎಂದಾದರೆ, ವೃತ್ತಿಯ ಆರಂಭದಿಂದಲೇ ಉಳಿತಾಯವನ್ನು ಆರಂಭಿಸಿ.
ಹಣವನ್ನು ಉಳಿತಾಯ (Money Saving) ಮಾಡುವುದೂ ಒಂದು ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಹಣವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).
ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….
1.ಉಳಿತಾಯ ಬೇಗ ಆರಂಭಿಸಿ
ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.
2.ಟಾರ್ಗೆಟ್ ಸೆಟ್ ಮಾಡಿಕೊಳ್ಳಿ
ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.
3.ರಿಟೈರ್‌ಮೆಂಟ್ ಬಜೆಟ್ ತಯಾರಿಸಿ
ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.
4.ರಿಟೈರ್‌ಮೆಂಟ್ ಅಕೌಂಟ್!
ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.
5.ಹೂಡಿಕೆ ಮಾಡಿ
ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.
6.ಅನವಶ್ಯ ವೆಚ್ಚ ಬೇಡ
ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.
7.ಪರ್ಯಾಯ ಉಳಿತಾಯ
ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.
8.ತೆರಿಗೆ ಮಾಹಿತಿ ಇರಲಿ
ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.
9.ರಿಟೈರ್ಮೆಂಟ್ ಫಂಡ್ ಮುಟ್ಟಬೇಡಿ
ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.
ಈ ಸುದ್ದಿಯನ್ನೂ ಓದಿ: Money Guide: ಪಿಪಿಎಫ್, ಎನ್‌ಎಸ್‌ಸಿ, ಎಸ್‌ಸಿಎಸ್‌ಎಸ್ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ
10.ತುರ್ತು ನಿಧಿ ಇರಲಿ
ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.
ಗ್ಯಾಜೆಟ್ಸ್
Reliance Jio: ಅಬ್ಬಬ್ಬಾ ಲಾಟರಿ..! ಐಫೋನ್ 15 ಖರೀದಿಸಿದರೆ 6 ತಿಂಗಳು ರಿಲಯನ್ಸ್ ಜಿಯೋ ಫ್ರೀ ಪ್ಲಾನ್
Reliance Jio: ಹೊಸದಾಗಿ ಲಾಂಚ್ ಆಗಿರುವ ಆ್ಯಪಲ್ ಐಫೋನ್ 15 ಖರೀದಿಯ ಮೇಲೆ ರಿಲಯನ್ಸ್ ಜಿಯೋ ಬಂಪರ್ ಆಫರ್ ಘೋಷಣೆ ಮಾಡಿದೆ.
ಮುಂಬೈ, ಮಹಾರಾಷ್ಟ್ರ: ರಿಲಯನ್ಸ್ ರಿಟೇಲ್ ಸ್ಟೋರ್‌ಗಳು (Reliance Retail), ರಿಲಯನ್ಸ್ ಡಿಜಿಟಲ್ ಆನ್‌ಲೈನ್ (Reliance Digital Online) ಅಥವಾ ಜಿಯೋಮಾರ್ಟ್‌ನಲ್ಲಿ (Jio Mart) ಜಿಯೋ ಐಫೋನ್ 15 (iPhone 15) ಖರೀದಿ ಮಾಡಿದರೆ 2,394 ರೂ. ಮೌಲ್ಯದ ಆರು ತಿಂಗಳ ಪ್ಲಾನ್ (Reliance Jio) ಅನ್ನು ಉಚಿತವಾಗಿ ಬಳಕೆದಾರರಿಗೆ ನೀಡಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಳಕೆದಾರರ ನಾಡಿ ಮಿಡಿತವನ್ನು ಅರಿತು ಕೊಂಡಿರುವ ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ 399 ರೂ. ಪ್ಲಾನ್ ಅನ್ನು ಆರು ತಿಂಗಳುಗಳ ವರೆಗೆ ಉಚಿತವಾಗಿ ನೀಡಲಿದೆ. ಇದರ ಒಟ್ಟು ಮೌಲ್ಯ 2,394 ರೂ.ಗಳಾಗಲಿದ್ದು, ಬಳಕೆದಾರರಿಗೆ ಹೆಚ್ಚಿನ ಲಾಭವನ್ನು ಮಾಡಿಕೊಡಲಿದೆ.
ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ ನೀಡುತ್ತಿರುವ ರೂ. 399 ಪ್ಲಾನ್ ನಲ್ಲಿ ಬಳಕೆದಾರರಿಗೆ ಪ್ರತಿ ನಿತ್ಯ 3 ಜಿಬಿ ಹೈ ಸ್ಪೀಡ್ ಡೇಟಾ ಬಳಕೆಗೆ ದೊರೆಯಲಿದ್ದು, ಜೊತೆಗೆ ಸಂಪೂರ್ಣ ಅನ್ ಲಿಮಿಟೆಡ್ ಕಾಲಿಂಗ್ ಸಹ ಸಿಗಲಿದೆ. ಅಲ್ಲದೇ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ಸಹ ಉಚಿತವಾಗಿ ಕಳುಹಿಸಬಹುದಾಗಿದೆ.
ಆದರೆ ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್ ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ ಮಾತ್ರವೇ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಈ ಸುದ್ದಿಯನ್ನೂ ಓದಿ: Apple iPhone : ಭಾರತದಲ್ಲಿ ಐಫೋನ್ 3ಜಿಯಿಂದ ಮೊದಲ ರಿಟೇಲ್ ಸ್ಟೋರ್ ತನಕ ಆ್ಯಪಲ್‌ನ 15 ವರ್ಷಗಳ ಯಾತ್ರೆ ಹೇಗಿತ್ತು?
ಜಿಯೋ ಬಳಕೆದಾರರಲಲ್ಲದವರಿಗೂ ಈ ಯೋಜನೆಯ ಲಾಭವು ದೊರೆಯಲಿದ್ದು, ಇದಕ್ಕಾಗಿ ಅವರು ಹೊಸ ಜಿಯೋ ಸಿಮ್ ಖರೀದಿ ಮಾಡಬೇಕು ಇಲ್ಲವೇ ಮೊಬೈಲ್ ನಂಬರ್ ಪೊರ್ಟಬಲಿಟಿ ಆಯ್ಕೆಯನ್ನು ತಮ್ಮದಾಗಿಸಿಕೊಳ್ಳಬೇಕಾಗಿದೆ.
ಈ ಪ್ಲಾನ್ ಸೆಪ್ಟೆಂಬರ್ 22ರಿಂದ ಆರಂಭವಾಗಲಿದ್ದು, ಐಫೋನ್ 15 ಖರೀದಿ ಮಾಡಿ ಜಿಯೋ ಸಿಮ್ ಅನ್ನು ಆಕ್ಟಿವ್ ಮಾಡಿದರೆ ಈ ಹೊಸ ಯೋಜನೆಯು 72 ಗಂಟೆಗಳ ಒಳಗೆ ನಿಮ್ಮ ಬಳಕೆಗೆ ಲಭ್ಯವಾಗಲಿದೆ. ಈ ಯೋಜನಯೂ ಕೇವಲ ಐಫೋನ್ 15 ನಲ್ಲಿ ಮಾತ್ರವೇ ಕಾರ್ಯನಿರ್ವಹಿಸಲಿದೆ.
ತಂತ್ರಜ್ಞಾನದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
-
ವಿದೇಶ19 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ17 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ12 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ13 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema16 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ19 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ17 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ9 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ