Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು? - Vistara News

ವಾಣಿಜ್ಯ

Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು?

ಭಾರತದ ಅತ್ಯಂತ ಶ್ರೀಮಂತ ಕುಟುಂಬವಾಗಿ ಅಂಬಾನಿ, ಬಜಾಜ್, ಬಿರ್ಲಾ ಕುಟುಂಬ ಬಾರ್ಕ್ಲೇಸ್-ಹುರುನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲಿ ಗುರುತಿಸಿಕೊಂಡಿದೆ. ದೇಶದ ಪ್ರಮುಖ ಈ ಮೂರು ಕುಟುಂಬ (Richest Indian Family) ವ್ಯವಹಾರಗಳ 460 ಶತಕೋಟಿ ಡಾಲರ್ ಆಗಿದ್ದು, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ಸಮೀಕ್ಷೆ ತಿಳಿಸಿದೆ. ಅಂಬಾನಿ ಹೊರತಾಗಿ ಭಾರತದ ಇತರ ಶ್ರೀಮಂತ ಕುಟುಂಬಗಳು ಯಾವವು? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಅತ್ಯಂತ ಶ್ರೀಮಂತ ಕುಟುಂಬ (Richest Indian Family) ಎಂದೇ ಗುರುತಿಸಲ್ಪಟ್ಟಿರುವ ಅಂಬಾನಿ ಕುಟುಂಬದ (Ambani Family) ಸಂಪತ್ತು ಭಾರತದ ಜಿಡಿಪಿಯ (GDP of India) ಶೇ. 10ರಷ್ಟಿದೆ. ಅಂಬಾನಿ ಕುಟುಂಬವು ಭಾರತದ ಉದ್ಯಮಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಒಟ್ಟು 25,75,000 ಕೋಟಿ ಮೌಲ್ಯದ ಸಂಪತ್ತನ್ನು ಹೊಂದಿದೆ.

ಬಾರ್ಕ್ಲೇಸ್-ಹುರುನ್ ಇಂಡಿಯಾ ಸಮೀಕ್ಷೆಯಲ್ಲಿ (Barclays-Hurun India report) ನೀಡಿರುವ ಶ್ರೇಯಾಂಕಗಳ ಪ್ರಕಾರ ಇದು 2024ರ ಮಾರ್ಚ್ 20ರ ಕಂಪೆನಿಯ ಮೌಲ್ಯಮಾಪನಗಳನ್ನು ಆಧರಿಸಿವೆ. ಇದು ಖಾಸಗಿ ಹೂಡಿಕೆಗಳು ಮತ್ತು ಇತರ ಆಸ್ತಿಗಳನ್ನು ಹೊರತುಪಡಿಸಿದೆ.


ಅಂಬಾನಿಯ ಅನಂತರ ಬಜಾಜ್ ಕುಟುಂಬವು 7,13,000 ಕೋಟಿ ಮೌಲ್ಯದ ಸಂಪತ್ತಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ನಿರಜ್ ಬಜಾಜ್ ಅವರ ಕುಟುಂಬದ ಮುಖ್ಯಸ್ಥರಾಗಿದ್ದಾರೆ.


ಬಿರ್ಲಾ ಕುಟುಂಬ 5.39 ಲಕ್ಷ ಕೋಟಿ ಸಂಪತ್ತು ಹೊಂದಿದ್ದು, ಮೂರನೇ ಸ್ಥಾನದಲ್ಲಿದೆ. ದೇಶದ ಪ್ರಮುಖ ಈ ಮೂರು ಕುಟುಂಬ ವ್ಯವಹಾರಗಳ 460 ಶತಕೋಟಿ ಡಾಲರ್ ಆಗಿದ್ದು, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ಸಮೀಕ್ಷೆ ತಿಳಿಸಿದೆ.

ಈ ಪಟ್ಟಿಯಲ್ಲಿ ಸಜ್ಜನ್ ಜಿಂದಾಲ್ ನೇತೃತ್ವದ ಕುಟುಂಬವು 4.71 ಲಕ್ಷ ಕೋಟಿ ರೂ. ಮೌಲ್ಯದ ಸಂಪತ್ತಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ನಾಡಾರ್ ಕುಟುಂಬವು 4.30 ಲಕ್ಷ ಕೋಟಿ ರೂ. ಮೌಲ್ಯದೊಂದಿಗೆ ಐದನೇ ಸ್ಥಾನದಲ್ಲಿದೆ. ನಾಡಾರ್ ಕುಟುಂಬದ ರೋಶನಿ ನಾಡರ್ ಮಲ್ಹೋತ್ರಾ ಅವರು ಟಾಪ್ 10 ಕುಟುಂಬದ ವ್ಯವಹಾರಗಳ ಪಟ್ಟಿಯಲ್ಲಿ ಏಕೈಕ ಮಹಿಳೆಯಾಗಿದ್ದಾರೆ.


ಮೊದಲ ತಲೆಮಾರಿನ ಕುಟುಂಬ

ಅದಾನಿ ಕುಟುಂಬವು 15,44,000 ಕೋಟಿ ಮೌಲ್ಯದೊಂದಿಗೆ ಅತ್ಯಂತ ಮೌಲ್ಯಯುತವಾದ ಮೊದಲ ತಲೆಮಾರಿನ ಕುಟುಂಬ ವ್ಯವಹಾರವಾಗಿ ಹೊರಹೊಮ್ಮಿದೆ. ಅನಂತರದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕರಾದ ಪೂನಾವಾಲಾ ಕುಟುಂಬವು 2,37,000 ಕೋಟಿ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದೆ. 91,200 ಕೋಟಿ ರೂ. ಮೌಲ್ಯದ ಡಿವಿ ಕುಟುಂಬ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Mukesh Ambani: ಮುಕೇಶ್ ಅಂಬಾನಿ ಮನೆಯ ವಿದ್ಯುತ್ ಬಿಲ್ ಎಷ್ಟಿರಬಹುದು ಊಹಿಸಿ!

ಹುರುನ್ ಇಂಡಿಯಾದ ಸಂಸ್ಥಾಪಕ ಮತ್ತು ಮುಖ್ಯ ಸಂಶೋಧಕ ಅನಾಸ್ ರಹಮಾನ್ ಜುನೈದ್ ಈ ಕುರಿತು ಪ್ರತಿಕ್ರಿಯಿಸಿ, ಕೈಗಾರಿಕಾ ಉತ್ಪನ್ನಗಳ ವಲಯದಲ್ಲಿ 28 ಕಂಪೆನಿಗಳು 4,58,700 ಕೋಟಿ ರೂ. ಮತ್ತು ಆಟೋಮೊಬೈಲ್ ವಲಯದ 23 ಕಂಪೆನಿಗಳು ಮತ್ತು ಫಾರ್ಮಾಸ್ಯುಟಿಕಲ್ಸ್ ವಲಯದ 22 ಕಂಪೆನಿಗಳು 1,876,200 ಕೋಟಿ ರೂ. ಮೌಲ್ಯದ್ದಾಗಿವೆ. ಈ ವ್ಯವಹಾರಗಳು ಭಾರತದ ಜಾಗತಿಕ ಸ್ಪರ್ಧಾತ್ಮಕತೆ ಮತ್ತು ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವಲ್ಲಿ ಪ್ರಮುಖವಾಗಿವೆ. ಈ ಕುಟುಂಬದ ವ್ಯವಹಾರಗಳ ಗಮನಾರ್ಹವಾದ ಉದ್ಯಮ ವೈವಿಧ್ಯತೆಯು ಭಾರತದಲ್ಲಿ ದೀರ್ಘಕಾಲೀನ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಯನ್ನು ನಿರ್ವಹಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.


ಏಷ್ಯಾ ಪೆಸಿಫಿಕ್‌ನ ಬಾರ್ಕ್ಲೇಸ್ ಖಾಸಗಿ ಬ್ಯಾಂಕ್ ಮುಖ್ಯಸ್ಥ ನಿತಿನ್ ಸಿಂಗ್ ಮಾತನಾಡಿ, ಭಾರತವು ಸಂಕೀರ್ಣ ದೇಶವಾಗಿದೆ. ಇದು ವಿವಿಧ ರಾಜ್ಯಗಳು ಮತ್ತು ವಿವಿಧ ವಸ್ತುಗಳಿಂದ ಮಾಡಲ್ಪಟ್ಟಿದೆ. ಈ ಸಂಕೀರ್ಣ ಪರಿಸರದಲ್ಲಿ ಹೇಗೆ ಕೆಲಸ ಮಾಡಬೇಕೆಂದು ತಿಳಿದಿರುವ ಜನರಿಗೆ ಇದು ಪ್ರಯೋಜನವನ್ನು ನೀಡುತ್ತದೆ. ಬಹು ಪೀಳಿಗೆಯ ವ್ಯವಹಾರಗಳು ಹಲವಾರು ವರ್ಷಗಳ ಬಳಿಕ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

Lending Rate: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ ಎಂದೇ ಹೇಳಲಾಗುತ್ತಿತ್ತು. ಆದರೆ, ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಸಾಲ ಪಡೆದವರಿಗೆ ಈಗ ಇಎಂಐ ಹೊರೆಯಾಗಲಿದೆ.

VISTARANEWS.COM


on

Lending Rate
Koo

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆಯೇ ರೆಪೋ ದರ (Repo Rate) ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee)ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನೆಲೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಾಗಾಗಿ, ಸಾಲಗಾರರಿಗೆ ಇಎಂಐ ಹೊರೆಯಾಗುವುದಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಬ್ಯಾಂಕ್‌ ಆಫ್ ಬರೋಡಾ (‌Bank Of Baroda) ಈಗ ಬಡ್ಡಿದರ (Lending Rate) ಏರಿಕೆ ಮಾಡಿದ್ದು, ಆ ಬ್ಯಾಂಕ್‌ನಲ್ಲಿ ಸಾಲ ಪಡೆದವರಿಗೆ ಇಎಂಐ ಹೊರೆಯಾಗುವುದು ನಿಶ್ಚಿತವಾಗಿದೆ.

ಹೌದು, ಬ್ಯಾಂಕ್‌ ಆಫ್‌ ಬರೋಡಾ ಈಗ ಬಡ್ಡಿದರವನ್ನು 5 ಮೂಲಾಂಕ (Basic Points) ಏರಿಕೆ ಮಾಡಿದೆ. ಆಗಸ್ಟ್‌ 12ರಿಂದಲೇ ನೂತನ ಬಡ್ಡಿದರವು ಜಾರಿಗೆ ಬರಲಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ತಿಳಿಸಿದೆ. 3 ತಿಂಗಳು, 6 ತಿಂಗಳು ಹಾಗೂ ಒಂದು ವರ್ಷದವರೆಗೆ ಸಾಲ ತೆಗೆದುಕೊಂಡವರಿಗೆ ಬಡ್ಡಿದರ ಏರಿಕೆ ಮಾಡಿರುವುದರಿಂದ ಅವರಿಗೆ ಮಾಸಿಕ ಇಎಂಐ ಜಾಸ್ತಿಯಾಗಲಿದೆ.

ಮೂರು ತಿಂಗಳ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.45ರಿಂದ ಶೇ.8.50ಗೆ ಏರಿಕೆ ಮಾಡಿದೆ. ಹಾಗೆಯೇ, 6 ತಿಂಗಳ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.70ರಿಂದ ಶೇ.8.75ಕ್ಕೆ, 1 ವರ್ಷದ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.90ರಿಂದ ಶೇ.8.95ಕ್ಕೆ ಏರಿಕೆ ಮಾಡಲಾಗಿದೆ. ಇದು ಸಹಜವಾಗಿಯೇ ಗ್ರಾಹಕರಿಗೆ ಹೊರೆಯಾಗಲಿದೆ ಎಂಬುದಾಗಿ ತಿಳಿದುಬಂದಿದೆ.

ಸಾಮಾನ್ಯವಾಗಿ, ರೆಪೋ ರೇಟ್‌ ಆಧಾರದ ಮೇಲೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿಯನ್ನು ಹೆಚ್ಚಿಸುತ್ತವೆ. ಆರ್‌ಬಿಐ ರೆಪೋ ರೇಟ್‌ ಹೆಚ್ಚಳ ಮಾಡಿದಾಗ ಮಾತ್ರ ಬ್ಯಾಂಕ್‌ಗಳು ಇಂತಹ ಕ್ರಮ ತೆಗೆದುಕೊಳ್ಳುತ್ತವೆ. ಆದರೆ, ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿದೆ. ಅಲ್ಲಿಂದ ಇಲ್ಲಿಯವರೆಗೆ ಆರ್‌ಬಿಐ ರೆಪೋ ದರವನ್ನು ಯಥಾಸ್ಥಿತಿ ಉಳಿಸಿಕೊಂಡು ಬಂದಿದೆ. ಇಷ್ಟಾದರೂ, ಬ್ಯಾಂಕ್‌ ಆಫ್‌ ಬರೋಡಾ ಏಕೆ ಬಡ್ಡಿದರ ಏರಿಕೆ ಮಾಡಿದೆ ಎಂಬುದು ಗ್ರಾಹಕರ ಪ್ರಶ್ನೆಯಾಗಿದೆ.

ಆರ್‌ಬಿಐ ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆ ಅಥವಾ ಇಳಿಕೆಯಾಗುವುದಿಲ್ಲ.

ಇದನ್ನೂ ಓದಿ: PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Continue Reading

ದೇಶ

Festive Season Hiring: 12.5 ಲಕ್ಷ ಜನಕ್ಕೆ ಜಾಬ್ ಕೊಡಲು ಮುಂದಾದ ಇ-ಕಾಮರ್ಸ್‌ ಸಂಸ್ಥೆಗಳು; ಹಬ್ಬಕ್ಕೆ ಇನ್ನೇನು ಖುಷಿ ಬೇಕು!

Festive Season Hiring: ಭಾರತದಲ್ಲಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಆರ್ಡರ್‌ ಮಾಡುತ್ತಾರೆ. ಮನೆಗೆ ಬೇಕಾಗುವ ಅಗತ್ಯ ವಸ್ತುಗಳಿಂದ ಹಿಡಿದು, ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಸೌಂದರ್ಯ ವರ್ಧಕಗಳು, ಮನೆಯ ಸಿಂಗಾರ, ಬಟ್ಟೆ ಸೇರಿ ಹತ್ತಾರು ಉಪಕರಣಗಳನ್ನು ಆನ್‌ಲೈನ್‌ ಮೂಲಕವೇ ಆರ್ಡರ್‌ ಮಾಡುತ್ತಾರೆ. ಗ್ರಾಹಕರ ಬೇಡಿಕೆಗಳನ್ನು ಪೂರೈಸಲು ಇ-ಕಾಮರ್ಸ್‌ ಸಂಸ್ತೆಗಳು ಹೆಚ್ಚಿನ ಉದ್ಯೋಗಿಗಳನ್ನು ನೇಮಿಸಲು ತೀರ್ಮಾನಿಸಿವೆ.

VISTARANEWS.COM


on

Festive Season Hiring
Koo

ನವದೆಹಲಿ: ಕರ್ನಾಟಕ ಸೇರಿ ದೇಶಾದ್ಯಂತ ನಾಗರ ಪಂಚಮಿ ಹಬ್ಬದ ಖುಷಿ ಮನೆಮಾಡಿದೆ. ರಕ್ಷಾ ಬಂಧನ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಸೇರಿ ಸಾಲು ಸಾಲು ಹಬ್ಬಗಳು (Festival Season) ಸಮೀಪಿಸುತ್ತಿವೆ. ಬಟ್ಟೆ, ಚಿನ್ನ, ಆಪ್ತರಿಗೆ ಉಡುಗೊರೆ ಸೇರಿ ಹತ್ತಾರು ವಸ್ತುಗಳನ್ನು ಖರೀದಿಸವು ಮೂಲಕ ದೇಶದ ಜನರು ಎಲ್ಲ ಹಬ್ಬಗಳನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ, ಇ-ಕಾಮರ್ಸ್‌ ಸಂಸ್ಥೆಗಳು (E Commerce Companies) ಸುಮಾರು 12.5 ಲಕ್ಷ ಜನರಿಗೆ ಉದ್ಯೋಗ (Festive Season Hiring) ನೀಡಲು ಮುಂದಾಗಿವೆ ಎಂದು ತಿಳಿದುಬಂದಿದೆ.

ಹೌದು, ಇ-ಕಾಮರ್ಸ್‌ ಸಂಸ್ಥೆಗಳ ವಹಿವಾಟು ಹಬ್ಬದ ಸೀಸನ್‌ನಲ್ಲಿ ಶೇ.35ರಷ್ಟು ಏರಿಕೆಯಾಗುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ವಹಿವಾಟು ಆಗಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿ, ಇ-ಕಾಮರ್ಸ್‌ ಸಂಸ್ಥೆಗಳು ಲಕ್ಷಾಂತರ ಜನರಿಗೆ ಉದ್ಯೋಗ ನೀಡಲು ಮುಂದಾಗಿವೆ. ಸುಮಾರು 10 ಲಕ್ಷ ಜನರಿಗೆ ತಾತ್ಕಾಲಿಕವಾಗಿ, ಇನ್ನೂ 2.5 ಲಕ್ಷ ಮಂದಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಿವೆ. ಹಬ್ಬದ ಆಚರಣೆಯ ಖುಷಿಯ ಜತೆಗೆ ಉದ್ಯೋಗದ ಖುಷಿಯನ್ನೂ ನೀಡಲು ಕಂಪನಿಗಳು ಮುಂದಾಗಿವೆ.

ಭಾರತದಲ್ಲಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಆರ್ಡರ್‌ ಮಾಡುತ್ತಾರೆ. ಮನೆಗೆ ಬೇಕಾಗುವ ಅಗತ್ಯ ವಸ್ತುಗಳಿಂದ ಹಿಡಿದು, ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಸೌಂದರ್ಯ ವರ್ಧಕಗಳು, ಮನೆಯ ಸಿಂಗಾರ, ಬಟ್ಟೆ ಸೇರಿ ಹತ್ತಾರು ಉಪಕರಣಗಳನ್ನು ಆನ್‌ಲೈನ್‌ ಮೂಲಕವೇ ಆರ್ಡರ್‌ ಮಾಡುತ್ತಾರೆ. ಇದನ್ನು ಅರಿತ ಇ-ಕಾಮರ್ಸ್‌ ಸಂಸ್ಥೆಗಳು ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಆರ್ಡರ್‌ಗಳನ್ನು ಮನೆಬಾಗಿಲಿಗೆ ತಲುಪಿಸಲು ಲಕ್ಷಾಂತರ ಜನರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಹಬ್ಬದ ಸೀಸನ್‌ನಲ್ಲಿ ಪ್ರತಿ ದಿನ ಸರಾಸರಿ 20 ಲಕ್ಷ ಆನ್‌ಲೈನ್‌ ಆರ್ಡರ್‌ಗಳು ದಾಖಲಾಗಿದ್ದವು. ಗ್ರಾಹಕರ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಇ-ಕಾಮರ್ಸ್‌ ಸಂಸ್ಥೆಗಳು ಪರದಾಡಿದವು. ಆದರೆ, ಈ ಬಾರಿ ಗ್ರಾಹಕರಿಗೆ ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಅಮೆಜಾನ್‌, ಫ್ಲಿಪ್‌ಕಾರ್ಟ್‌ ಸೇರಿ ಹತ್ತಾರು ಇ ಕಾಮರ್ಸ್‌ ಸಂಸ್ಥೆಗಳು ನೌಕರರನ್ನು ನೇಮಿಸಿಕೊಳ್ಳುತ್ತಿವೆ. ಇ-ಕಾಮರ್ಸ್‌ ಸಂಸ್ಥೆಗಳು ಮಾತ್ರವಲ್ಲ, ದೊಡ್ಡ ದೊಡ್ಡ ಶಾಪಿಂಗ್‌ ಮಾಲ್‌ಗಳು, ಚಿನ್ನಾಭರಣಗಳ ಮಳಿಗೆಗಳ್ಲಲೂ ಹೆಚ್ಚಿನ ನೇಮಕಾತಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇಮಕ

Continue Reading

ವಾಣಿಜ್ಯ

Mukesh Ambani: ಮುಕೇಶ್ ಅಂಬಾನಿ ಮನೆಯ ವಿದ್ಯುತ್ ಬಿಲ್ ಎಷ್ಟಿರಬಹುದು ಊಹಿಸಿ!

ಮುಖೇಶ್ ಅಂಬಾನಿ ವಾಸಿಸುವ ಆಂಟಿಲಿಯಾ ಹೆಸರಿನ ನಿವಾಸದಲ್ಲಿನ ಎಲ್ಲ ಸೌಲಭ್ಯಗಳ ಒಟ್ಟು ಅಂದಾಜು ಮೌಲ್ಯ ಸುಮಾರು 15,000 ಕೋಟಿ ರೂಪಾಯಿ. ಆಂಟಿಲಿಯಾ ಕಲ್ಪಿಸಬಹುದಾದ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆಂಟಿಲಿಯಾದಲ್ಲಿನ ಸಿಬ್ಬಂದಿಗೆ ಉತ್ತಮ ಸಂಭಾವನೆ ನೀಡಲಾಗುತ್ತದೆ. ತಿಂಗಳಿಗೆ ಪ್ರತಿಯೊಬ್ಬರೂ ತಲಾ 1.5 ರಿಂದ 2 ಲಕ್ಷ ರೂ.ವರೆಗೆ ಸಂಬಳ ಪಡೆಯುತ್ತಾರೆ. ಮುಕೇಶ್ ಅಂಬಾನಿ (Mukesh Ambani) ಮನೆಯಲ್ಲಿ ಮುಂಬಯಿಯ ಸುಮಾರು 7,000 ಮಧ್ಯಮ ವರ್ಗದ ಮನೆಗಳು ಬಳಸಬಹುದಾದ ವಿದ್ಯುತ್ ಶಕ್ತಿಯನ್ನು ಬಳಸಲಾಗುತ್ತದೆ!

VISTARANEWS.COM


on

By

Mukesh Ambani
Koo

ಮುಂಬಯಿನ (mumbai) ಹೃದಯಭಾಗದಲ್ಲಿರುವ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಅವರ 27 ಅಂತಸ್ತಿನ ಅತಿ ಎತ್ತರದ ಆಂಟಿಲಿಯಾ ಕಟ್ಟಡವು (Antilia building) ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಪಾರ್ಕಿಂಗ್, ಈಜುಕೊಳ, ಸ್ಪಾ, ಆರೋಗ್ಯ ಕೇಂದ್ರ, ದೇವಸ್ಥಾನ, ಟೆರೇಸ್ ಗಾರ್ಡನ್, ಅನೇಕ ದೊಡ್ಡ ಎಲಿವೇಟರ್‌ಗಳು ಮತ್ತು ಥಿಯೇಟರ್‌ಗಳನ್ನು ಒಳಗೊಂಡಿದೆ. ಇಲ್ಲಿ ಎಲ್ಲ ಕೆಲಸಗಳು ಸರಾಗವಾಗಿ ನಡೆಯಲು 600 ಮಂದಿ ಸಿಬ್ಬಂದಿಯನ್ನು ನೇಮಿಸಿಕೊಂಡಿದೆ.

ಕಟ್ಟಡದ ಬೃಹತ್ ಗಾತ್ರಕ್ಕೆ ಹೆಚ್ಚಿನ ಒತ್ತಡದ ವಿದ್ಯುತ್ ಸಂಪರ್ಕದ ಅಗತ್ಯವಿದೆ. ಆಂಟಿಲಿಯಾ ಗಮನಾರ್ಹ ಪ್ರಮಾಣದ ವಿದ್ಯುತ್ ಅನ್ನು ಬಳಸುತ್ತದೆ. ಮುಂಬಯಿನ ಸುಮಾರು 7,000 ಮಧ್ಯಮ ವರ್ಗದ ಮನೆಗಳು ಬಳಸಬಹುದಾದ ವಿದ್ಯುತ್ ಶಕ್ತಿಯನ್ನು ಆಂಟಿಲಿಯಾ ಬಳಸುತ್ತಿದೆ.


ಎಂಟು ತೀವ್ರತೆಯ ಭೂಕಂಪಗಳನ್ನು ತಡೆದುಕೊಳ್ಳಲು ಆಂಟಿಲಿಯಾವನ್ನು ವಿನ್ಯಾಸಗೊಳಿಸಲಾಗಿದೆ. ಇದರ ನಿರ್ಮಾಣವು 2006ರಲ್ಲಿ ಪ್ರಾರಂಭವಾಯಿತು ಮತ್ತು 2010 ರಲ್ಲಿ ಪೂರ್ಣಗೊಂಡಿತು.

ಆಂಟಿಲಿಯಾದಲ್ಲಿರುವ ಎಲ್ಲ ಸೌಲಭ್ಯಗಳ ಒಟ್ಟು ಅಂದಾಜು ಮೌಲ್ಯ ಸುಮಾರು 15,000 ಕೋಟಿ ರೂಪಾಯಿ. ಆಂಟಿಲಿಯಾ ಕಲ್ಪಿಸಬಹುದಾದ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆಂಟಿಲಿಯಾದಲ್ಲಿನ ಸಿಬ್ಬಂದಿಗೆ ಉತ್ತಮ ಸಂಭಾವನೆ ನೀಡಲಾಗುತ್ತದೆ. ತಿಂಗಳಿಗೆ ಪ್ರತಿಯೊಬ್ಬರೂ ತಲಾ 1.5 ರಿಂದ 2 ಲಕ್ಷ ರೂ.ವರೆಗೆ ಸಂಬಳ ಪಡೆಯುತ್ತಾರೆ.


ಇದನ್ನೂ ಓದಿ: Bank Cheque: ಬ್ಯಾಂಕ್‌ಗೆ ಚೆಕ್‌ ಹಾಕಿದ ಕೆಲವೇ ಗಂಟೆಗಳಲ್ಲಿ ಇನ್ನು ಖಾತೆಗೆ ಜಮಾ; ಆರ್‌ಬಿಐ ಮಹತ್ವದ ಘೋಷಣೆ

ಆಂಟಿಲಿಯಾ ಒಳಾಂಗಣ ವಿನ್ಯಾಸಗಳು ಕಮಲ ಮತ್ತು ಸೂರ್ಯನ ಗುಣಲಕ್ಷಣಗಳನ್ನು ಒಳಗೊಂಡಿವೆ. ಕಟ್ಟಡದ ಪ್ರತಿಯೊಂದು ಮಹಡಿಯು ವಿಶಿಷ್ಟ ವಿನ್ಯಾಸವನ್ನು ಹೊಂದಿದೆ ಮತ್ತು ವಿವಿಧ ವಸ್ತುಗಳನ್ನು ಬಳಸಲಾಗಿದೆ.

ವಿದ್ಯುತ್ ಬಿಲ್‌ಗೆ ಸಂಬಂಧಿಸಿದಂತೆ ಹೇಳುವುದಾದರೆ, ಆಂಟಿಲಿಯಾ ಕಟ್ಟಡ ಪ್ರತಿ ತಿಂಗಳು ಸುಮಾರು 6,37,240 ಯೂನಿಟ್ ವಿದ್ಯುತ್ ಅನ್ನು ಬಳಸುತ್ತದೆ. ಇದರರ್ಥ ಮಾಸಿಕ ವಿದ್ಯುತ್ ಬಿಲ್ ಸರಾಸರಿ 70 ಲಕ್ಷ ರೂಪಾಯಿಗಳು ಮತ್ತು ಇದು ಕೆಲವೊಮ್ಮೆ ಇನ್ನೂ ಹೆಚ್ಚಾಗಬಹುದು ಎನ್ನಲಾಗುತ್ತದೆ.

Continue Reading

ವಾಣಿಜ್ಯ

Gold Rate Today: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

VISTARANEWS.COM


on

gold rate today
Koo

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 9) ಚಿನ್ನದ ದರ ಕೊಂಚ ಹೆಚ್ಚಾಗಿದೆ.(Gold Rate Today). ಮಂಗಳವಾರದಿಂದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದರಿಂದ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿತ್ತು. ಆದರೆ ಇಂದು ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ 75ರೂ. ಮತ್ತು 24 ಕ್ಯಾರಟ್‌ ಚಿನ್ನಕ್ಕೆ 82ರೂ. ಹೆಚ್ಚಾಗಿದೆ

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,440₹ 7,024
ಮುಂಬೈ₹ 6,425₹ 7,009
ಬೆಂಗಳೂರು₹ 6,425₹ 7,009
ಚೆನ್ನೈ₹ 6,425₹ 7,009

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.75 ಹಾಗೂ 8 ಗ್ರಾಂಗೆ ₹ 646 ಇದೆ. 10 ಗ್ರಾಂ ₹ 807.50 ಹಾಗೂ 1 ಕಿಲೋಗ್ರಾಂ ₹ 80,750 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

Continue Reading
Advertisement
Tarsem Singh
ದೇಶ48 mins ago

Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Vinesh Phogat
ಕ್ರೀಡೆ51 mins ago

Vinesh Phogat : ವಿನೇಶ್​​ಗೆ ಬೆಳ್ಳಿ ಪದಕ ಕೊಡಲು ಸಾಧ್ಯವಿಲ್ಲ; ಒಲಿಂಪಿಕ್ಸ್​​ ಸಂಸ್ಥೆ ಮುಖ್ಯಸ್ಥ ಥಾಮಸ್ ಬಾಕ್​ ಸ್ಪಷ್ಟನೆ

ಕರ್ನಾಟಕ1 hour ago

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

Paris Olympics 2024
ಕ್ರೀಡೆ1 hour ago

Paris Olympics 2024 : ಲೈಂಗಿಕ ಕಿರುಕುಳದ ಆರೋಪದ ಮೇಲೆ ಈಜಿಪ್ಟ್​​ ಮೊಹಮ್ಮದ್ ಎಲ್ಸಯೀದ್ ಅರೆಸ್ಟ್​​

Independence day 2024
ತಂತ್ರಜ್ಞಾನ1 hour ago

Independence Day 2024: ಹೊಗೆ ಬಂಡಿಯಿಂದ ವಂದೇ ಭಾರತ್‌‌ವರೆಗೆ; ಭಾರತೀಯ ರೈಲ್ವೆಯ ಅದ್ಭುತ ಪಯಣ!

CAA Rules
ದೇಶ1 hour ago

CAA Rules: ಪಾಕ್‌, ಬಾಂಗ್ಲಾ, ಆಘ್ಘನ್‌ ನಿರಾಶ್ರಿತರಿಗೆ ಸಿಹಿ ಸುದ್ದಿ; ಸಿಎಎ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

Bengaluru News
ಬೆಂಗಳೂರು2 hours ago

Bengaluru News: ಬೃಹತ್‌ ಜನಾಂದೋಲನಕ್ಕೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬೆಂಬಲ

KCET Mock Allotment 2024
ಕರ್ನಾಟಕ2 hours ago

KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಮತ್ತೆ ಮುಂದೂಡಿಕೆ; ಯಾವಾಗ ಪ್ರಕಟ?

Neeraj Chopra
ಕ್ರೀಡೆ2 hours ago

Neeraj Chopra : ಸಮಾರೋಪ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯುವ ಅವಕಾಶ ಶ್ರೀಜೇಶ್​ಗೆ ಬಿಟ್ಟುಕೊಟ್ಟ ನೀರಜ್​ ಚೋಪ್ರಾ

Narendra Modi
ದೇಶ2 hours ago

Narendra Modi: ಮೋದಿ ಪ್ರೊಫೈಲ್‌ ಫೋಟೊ ಈಗ ತಿರಂಗಾ; ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜನರಿಗೆ ಕರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌