ರೂಪಾಯಿ ಕುಸಿದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಮರ್ಥನೆ - Vistara News

ಪ್ರಮುಖ ಸುದ್ದಿ

ರೂಪಾಯಿ ಕುಸಿದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಮರ್ಥನೆ

ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತಕ್ಕೀಡಾಗಿಲ್ಲ, ವಾಸ್ತವವಾಗಿ ಇತರ ಹಲವಾರು ಕರೆನ್ಸಿಗಳಿಗಿಂತ ರೂಪಾಯಿ ಸುಸ್ಥಿತಿಯಲ್ಲಿ ಇದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

VISTARANEWS.COM


on

Central Government has totally 155 lakh crore debt Says Nirmala Sitharaman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂಬ ಕಳವಳದ ನಡುವೆಯೇ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ರೂಪಾಯಿ ಮೌಲ್ಯ ಕುಸಿತಕ್ಕೀಡಾಗಿಲ್ಲ, ವಾಸ್ತವವಾಗಿ ಕರೆನ್ಸಿ ತನ್ನ ಸಹಜ ಲಯವನ್ನು ಕಂಡುಕೊಳ್ಳುತ್ತಿದೆ ಎಂದು ರಾಜ್ಯಸಭೆಯಲ್ಲಿ ಹೇಳಿದ್ದಾರೆ.

” ರಿಸರ್ವ್‌ ಬ್ಯಾಂಕ್‌ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿಯ ಚಲನವಲನದ ಮೇಲೆ ಸತತ ನಿಗಾ ವಹಿಸುತ್ತಿದೆ. ಆದರೆ ಅಗತ್ಯ ಇದ್ದರೆ ಮಾತ್ರ ಮಧ್ಯಪ್ರವೇಶಿಸುತ್ತಿದೆ. ರೂಪಾಯಿಯ ಮೌಲ್ಯವನ್ನು ನಿಯಂತ್ರಿಸುವುದಕ್ಕೆ ಸಂಬಂಧಿಸಿ ಆರ್‌ಬಿಐ ಮೇಲೆ ಯಾವುದೇ ಒತ್ತಡ ಇರುವುದಿಲ್ಲ. ಅದು ತನ್ನ ನಿರ್ಧಾರವನ್ನು ತೆಗೆದುಕೊಳ್ಳಲು ಸ್ವತಂತ್ರವಾಗಿದೆʼʼ ಎಂದು ಸಚಿವರು ರಾಜ್ಯಸಭೆಗೆ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

ಡಾಲರ್‌ ಎದುರು ರೂಪಾಯಿಯ ಮೌಲ್ಯ ಕುಸಿತವನ್ನು ನಿಯಂತ್ರಿಸಲು ಮಾತ್ರ ಆರ್‌ಬಿಐ ಮಧ್ಯಪ್ರವೇಶಿಸುತ್ತಿರುವುದು ಹೌದು. ಆದರೆ ಉಳಿದಂತೆ ಹಸ್ತಕ್ಷೇಪ ಮಾಡುತ್ತಿಲ್ಲ. ಹೀಗಾಗಿ ರೂಪಾಯಿಗೆ ತನ್ನ ಸಹಜ ಸ್ಥಿತಿಗೆ ಬರಲು ಸಾಧ್ಯವಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಭಾರತವು ಇತರ ಹಲವು ರಾಷ್ಟ್ರಗಳಂತೆ ರೂಪಾಯಿಯನ್ನು ನಿರ್ದಿಷ್ಟ ಮೌಲ್ಯದಲ್ಲಿ ಹಿಡಿದಿಟ್ಟುಕೊಳ್ಳಲು ಯತ್ನಿಸುವುದಿಲ್ಲ. ರೂಪಾಯಿ ತಾನಾಗಿಯೇ ಬಲ ವೃದ್ಧಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ. ಇತರ ಡಾಲರ್‌ ಎದುರು ಹಲವು ಕರೆನ್ಸಿಗಳಿಗಿಂತ ರೂಪಾಯಿಯೇ ಉತ್ತಮ ಸ್ಥಿತಿಯಲ್ಲಿ ಇದೆ ಎಂದು ನಿರ್ಮಲಾ ಸೀತಾರಾಮನ್‌ ಅವರು ತಿಳಿಸಿದರು.

ವಿದೇಶಿ ವಿನಿಮಯ ಸಂಗ್ರಹದಲ್ಲಿ ಇಳಿಕೆಯಾಗಿರುವುದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ” ಈಗಲೂ ನಾವು ೫೦೦ ಶತಕೋಟಿ ಡಾಲರ್‌ ಆಸುಪಾಸಿನಲ್ಲಿ (ಅಂದಾಜು ೪೦ ಲಕ್ಷ ಕೋಟಿ ರೂ.) ವಿದೇಶಿ ವಿನಿಮಯ ಸಂಗ್ರಹವನ್ನು ಹೊಂದಿದ್ದೇವೆ. ಜುಲೈ ೨೨ರ ವೇಳೆಗೆ ೫೭೧.೫೬ ಶತಕೋಟಿ ಡಾಲರ್‌ನಷ್ಟು ವಿದೇಶಿ ವಿನಿಮಯ ಸಂಗ್ರಹ ಇತ್ತು. ಇದೇನು ಸಣ್ಣ ಮೊತ್ತವಲ್ಲ, ಭಾರತ ಸುಸ್ಥಿತಿಯಲ್ಲಿದೆʼʼ ಎಂದರು. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಮಂಗಳವಾರ ರೂಪಾಯಿ ಮೌಲ್ಯ ೭೮.೫೭ ರೂ.ನಷ್ಟಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

T20 World Cup 2024 : ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಜೇತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ. ಭಾರತದ ಅತ್ಯುತ್ತಮ ಸಾಧನೆಗೆ ನೀಡಿದ ಕೊಡುಗೆಗಾಗಿ ಆಟಗಾರರು ಮತ್ತು ಎಲ್ಲಾ ಕೋಚಿಂಗ್ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಐಸಿಸಿ ಪುರುಷರ ಟಿ20 ವಿಶ್ವಕಪ್ 2024ರಲ್ಲಿ (T20 World Cup 2024 ) ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ನ ಫೈನಲ್​ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಕ್ರಿಕೆಟ್ ತಂಡವು ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು. ಅಲ್ಲದೇ ಎರಡನೇ ಬಾರಿ ಟಿ20 ವಿಶ್ವ ಕಪ್​ ಗೆದ್ದುಕೊಂಡಿತು. 2007ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ತಂಡ ಉದ್ಘಾಟನಾ ಆವೃತ್ತಿಯ ವಿಶ್ವ ಕಪ್​ ಗೆದ್ದುಕೊಂಡಿತ್ತು.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಜೇತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ. ಭಾರತದ ಅತ್ಯುತ್ತಮ ಸಾಧನೆಗೆ ನೀಡಿದ ಕೊಡುಗೆಗಾಗಿ ಆಟಗಾರರು ಮತ್ತು ಎಲ್ಲಾ ಕೋಚಿಂಗ್ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.

“ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ.ಗಳ ಬಹುಮಾನದ ಮೊತ್ತವನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಜಯ್ ಶಾ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ. “ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅಸಾಧಾರಣ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಅವರು ಬರೆದುಕೊಂಡಿದ್ದಾರೆ.

ಇದು ಭಾರತ ತಂಡಕ್ಕೆ 13 ವರ್ಷಗಳ ಬಳಿಕ ಸಿಕ್ಕ ವಿಶ್ವ ಕಪ್​ ಹಾಗೂ 17 ವರ್ಷಗಳ ಬಳಿಕ ದೊರೆತ ಟಿ20 ವಿಶ್ವ ಕಪ್​. ಭಾರತ ತಂಡ 2007ರ ಉದ್ಘಾಟನಾ ಆವೃತ್ತಿಯ ಟಿ20 ವಿಶ್ವ ಕಪ್​ ಗೆದ್ದಿದ್ದರೆ 2011ರ ಏಕ ದಿನ ವಿಶ್ವ ಕಪ್ ಗೆದ್ದುಕೊಂಡಿತು.

ಇದನ್ನೂ ಓದಿ: Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ವಿವರ ಇಲ್ಲಿದೆ

ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 169 ರನ್ ಬಾರಿಸಿ ಸೋಲೊಪ್ಪಿಕೊಂಡಿತ್ತು.

ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ. ಗುಂಪು ಹಂತದಲ್ಲಿ ಭಾರತ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿತ್ತು. ಒಂದು ಪಂದ್ಯ ಮಳೆಯಿಂದಾಗಿ ಕೊಚ್ಚಿಹೋಗಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​​ನಲ್ಲಿ ಗೆಲ್ಲುವ ಮೊದಲು ಭಾರತವು ಸೂಪರ್ ಎಂಟರ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದಿತ್ತು. ಸೆಮಿಯಲ್ಲಿ ಇಂಗ್ಲೆಂಡ್ ಅನ್ನು 68 ರನ್​ಗಳಿಂದ ಸೋಲಿಸಿತ್ತು.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಆಡಿದ ತಂಡವು ರನ್​ ಗುರಿಯನ್ನು ಗುರಿಯನ್ನು ರಕ್ಷಿಸಿ ಗೆದ್ದಿರುವುದು ಇದು ಮೂರನೇ ಬಾರಿ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಈ ಸಾಧನೆ ಮಾಡಿದ್ದರೆ, 2012ರಲ್ಲಿ ವೆಸ್ಟ್ ಇಂಡೀಸ್ ಈ ಸಾಧನೆ ಮಾಡಿತ್ತು.

Continue Reading

ಪ್ರಮುಖ ಸುದ್ದಿ

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

Virat kohli: ಈ ಇಬ್ಬರು ಶ್ರೇಷ್ಠ ಕ್ರಿಕೆಟ್​ ಆಟಗಾರರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರು ಟಿ20 ಕ್ರಿಕೆಟ್​ನಲ್ಲಿ ಮಾಡಿರುವ ಸಾಧನೆಗಳ ಕುರಿತ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ. ಅವರಿಬ್ಬರು ಚುಟುಕು ಮಾದರಿಯಲ್ಲಿ ಮಾಡಿರುವ ರನ್​ಗಳು, ರೆಕಾರ್ಡ್​ಗಳು ಹಾಗೂ ಸೃಷ್ಟಿಸಿರುವ ಹೊಸ ಮಾದರಿಗಳ ಬಗ್ಗೆ ಗಮನ ಹರಿಸೋಣ.

VISTARANEWS.COM


on

Virat kohli
Koo

ಬೆಂಗಳೂರು: ವೆಸ್ಟ್​​ ಇಂಡೀಸ್​​​ನ ಬಾರ್ಬಡೋಸ್​​ನಲ್ಲಿರುವ ಕೆನ್ಸಿಂಗ್ಟನ್ ಓವಲ್​​ನಲ್ಲಿ ಜೂನ್ 29 ರಂದು ನಡೆದ ಟಿ 20 ವಿಶ್ವಕಪ್ 2024 ರ ಫೈನಲ್​​ನಲ್ಲಿ(T20 World Cup Final ) ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸಿ ವಿಶ್ವ ಕಪ್​ ಗೆದ್ದಿತು. ಈ ಸಂಭ್ರಮದ ನಡುವೆ ವಿರಾಟ್ ಕೊಹ್ಲಿ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಪಡೆದರು. ಸ್ವಲ್ಪ ಹೊತ್ತಿನಲ್ಲಿ ನಾಯಕ ರೋಹಿತ್ ಶರ್ಮಾ ಕೂಡ ಈ ಮಾದರಿಯಲ್ಲಿ ತಮಗಿದು ಕೊನೇ ಪಂದ್ಯ ಎಂದು ಘೋಷಿಸಿದರು. ವಿರಾಟ್​ ಕೊಹ್ಲಿ (Virat Kohli) ಟೂರ್ನಿಯಲ್ಲಿ ಪ್ರದರ್ಶನ ನೀಡಿದ್ದರು. ಆದರೆ, ನಿರ್ಣಾಯಕ ಫೈನಲ್​ನಲ್ಲಿ ಅರ್ಧಶತಕ ಬಾರಿಸಿ ಗೆಲುವಿಗೆ ಕೊಡುಗೆ ಕೊಟ್ಟರು. ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿ ಭಾರತ ಒಟ್ಟು 176 ರನ್ ಗಳಿಸಲು ನೆರವಾದರು. ಇದೇ ವೇಳೆ ರೋಹಿತ್ ಶರ್ಮಾ ಸೂಪರ್​ 8 ಹಾಗೂ ಸೆಮಿ ಫೈನಲ್ ಪಂದ್ಯದಲ್ಲಿ ಮಿಂಚಿದ್ದರು. ಈ ಇಬ್ಬರು ದಿಗ್ಗಜರ ನಿವೃತ್ತಿ ಭಾರತ ತಂಡದ ಬಲ ಕುಗ್ಗಿಸಲಿದೆ. ಆದಾಗ್ಯೂ ಹೊಸ ಪೀಳಿಗೆಗೆ ಅವಕಾಶ ಕೊಡುವುದು ಅನಿವಾರ್ಯ.

ಈ ಇಬ್ಬರು ಶ್ರೇಷ್ಠ ಕ್ರಿಕೆಟ್​ ಆಟಗಾರರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರು ಟಿ20 ಕ್ರಿಕೆಟ್​ನಲ್ಲಿ ಮಾಡಿರುವ ಸಾಧನೆಗಳ ಕುರಿತ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ. ಅವರಿಬ್ಬರು ಚುಟುಕು ಮಾದರಿಯಲ್ಲಿ ಮಾಡಿರುವ ರನ್​ಗಳು, ರೆಕಾರ್ಡ್​ಗಳು ಹಾಗೂ ಸೃಷ್ಟಿಸಿರುವ ಹೊಸ ಮಾದರಿಗಳ ಬಗ್ಗೆ ಗಮನ ಹರಿಸೋಣ.

ವಿರಾಟ್ ಕೊಹ್ಲಿ

4188 ರನ್: ಕೊಹ್ಲಿ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 4188 ರನ್ ಗಳಿಸಿದ್ದಾರೆ. ಇದು ರೋಹಿತ್ ಶರ್ಮಾ ಅವರ 4231 ರನ್​ಗಳ ನಂತರ ಎರಡನೇ ಅತಿ ಹೆಚ್ಚು ಸ್ಕೋರ್​. ವಿಶೇಷವೆಂದರೆ, ಕೊಹ್ಲಿ ರೋಹಿತ್​ಗಿಂತ 34 ಕಡಿಮೆ ಇನ್ನಿಂಗ್ಸ್​​ಗಳಲ್ಲಿ ಇಷ್ಟು ಸ್ಕೋರ್ ಮಾಡಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಎಲ್ಲಾ ಮೂರು ಅಂತರರಾಷ್ಟ್ರೀಯ ಕ್ರಿಕೆಟ್​ ಸ್ವರೂಪಗಳಲ್ಲಿ 4000ಕ್ಕಿಂತ ಹೆಚ್ಚು ರನ್ ಗಳಿಸಿದ ಆಟಗಾರ.

48.69 ಸರಾಸರಿ: ಟಿ20ಐನಲ್ಲಿ ಕೊಹ್ಲಿಯ ಸರಾಸರಿ 48.69 ಆಗಿದ್ದು, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ (48.72ಸರಾಸರಿ) ಅವರ ನಂತರದ ಸ್ಥಾನದಲ್ಲಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿ: ಕೊಹ್ಲಿ ಟಿ20ಐ ಮಾದರಿಯಲ್ಲಿ 16 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದು ಸೂರ್ಯಕುಮಾರ್ ಯಾದವ್ ಅವರಿಗಿಂತ ಒಂದು ಪ್ರಶಸ್ತಿ ಮುಂದಿದೆ. 2014, 2016ರ ಟಿ20 ವಿಶ್ವಕಪ್ ಸೇರಿದಂತೆ ಆರು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

ವಿಶ್ವ ಕಪ್​ ರನ್​ಗಳು: ಟಿ 20 ವಿಶ್ವಕಪ್ ಇತಿಹಾಸದಲ್ಲಿ ಕೊಹ್ಲಿ 1292 ರನ್ ಗಳಿಸಿದ್ದಾರೆ. ಇದು ಗರಿಷ್ಠ ರನ್. 2014ರ ಆವೃತ್ತಿಯಲ್ಲಿ 319 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. 2022ರ ಆವೃತ್ತಿಯಲ್ಲಿ ಅವರು 296 ರನ್​ಗಳ ಸಮೇತ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು.

ಗರಿಷ್ಠ ಸರಾಸರಿ: ಟಿ 20 ವಿಶ್ವಕಪ್​​ನಲ್ಲಿ ಕೊಹ್ಲಿಯ ಸರಾಸರಿ 58.72. ಪಂದ್ಯಾವಳಿಯಲ್ಲಿ 500ಕ್ಕಿಂತಲೂ ಹೆಚ್ಚು ರನ್ ಗಳಿಸಿದ 34 ಆಟಗಾರರಲ್ಲಿ ಇವರು ಅಗ್ರರು. ಅವರು 33 ಇನ್ನಿಂಗ್ಸ್​​ಗಳಲ್ಲಿ 15 ಬಾರಿ 50+ ರನ್ ಬಾರಿಸಿದ್ದಾರೆ. ರೋಹಿತ್​ 13 ಬಾರಿ 50ಕ್ಕಿಂತ ಹೆಚ್ಚು ಸ್ಕೋರ್​ ಮಾಡಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿಗಳು: ಟಿ 20 ವಿಶ್ವಕಪ್ ಇತಿಹಾಸದಲ್ಲಿ ಕೊಹ್ಲಿ 8 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ ಕೊಹ್ಲಿ. ಮಹೇಲಾ ಜಯವರ್ಧನೆ, ಕ್ರಿಸ್ ಗೇಲ್, ಶೇನ್ ವ್ಯಾಟ್ಸನ್ ಮತ್ತು ಆಡಮ್ ಜಂಪಾ ಈ ಪಟ್ಟಿಯಲ್ಲಿ ಐದು ಪ್ರಶಸ್ತಿ ಗೆದ್ದಿದ್ದಾರೆ.

ಎರಡು ವಿಶ್ವ ಕಪ್​ನ ಉತ್ತಮ ಆಟಗಾರ : ಕೊಹ್ಲಿ ಟಿ20 ವಿಶ್ವ ಕಪ್​ನಲ್ಲಿ ಎರಡು ಬಾರಿ ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಈ ಸಾಧನೆ ಮಾಡಿದ ಏಕೈಕ ಆಟಗಾರ.

67.10 ಸರಾಸರಿ: ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯದ ರನ್ ಚೇಸಿಂಗ್​​ನಲ್ಲಿ 67.10 ಸರಾಸರಿ ಹೊಂದಿದ್ದಾರೆ. ಟಿ 20 ಮಾದರಿಯಲ್ಲಿ ಚೇಸಿಂಗ್ ಮಾಡುವಾಗ ಕನಿಷ್ಠ 500 ರನ್ ಗಳಿಸಿದ ಆಟಗಾರರಲ್ಲಿ ಇದು ಗರಿಷ್ಠ. ಸೂರ್ಯಕುಮಾರ್ ಯಾದವ್ ಮಾತ್ರ ರನ್ ಚೇಸಿಂಗ್​​ನಲ್ಲಿ 50+ ಸರಾಸರಿ ಹೊಂದಿದ್ದಾರೆ.

42 ಗೆಲುವು: ಕೊಹ್ಲಿ ಆಡಿದ 52 ಟಿ 20 ಪಂದ್ಯಗಳಲ್ಲಿ ಭಾರತವು 42 ಬಾರಿ ಯಶಸ್ವಿಯಾಗಿ ರನ್​ ಚೇಸ್ ಮಾಡಿದೆ. ಕೊಹ್ಲಿ 18 ಬಾರಿ ರನ್ ಚೇಸಿಂಗ್​ನಲ್ಲಿ ಅಜೇಯರಾಗಿ ಉಳಿದಿದ್ದಾರೆ. ಭಾರತವು ಆ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಅವರು 48 ಇನ್ನಿಂಗ್ಸ್​ಗಳಲ್ಲಿ 20 ಬಾರಿ ರನ್ ಚೇಸಿಂಗ್​​ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ನಾಯಕತ್ವದ ಸಾಧನೆ: ತಂಡದ ನಾಯಕನಾಗಿ ಬ್ಯಾಟಿಂಗ್​ನಲ್ಲಿ 47.57 ಸರಾಸರಿ ಹೊಂದಿದ್ದ ಕೊಹ್ಲಿ ಸರಾಸರಿ ಕನಿಷ್ಠ 1000 ರನ್ ಗಳಿಸಿದ ಯಾವುದೇ ನಾಯಕನಿಗಿಂತ ಗರಿಷ್ಠ ಸಾಧನೆಯಾಗಿದೆ.

ಅಂಡರ್-19 ವಿಶ್ವಕಪ್ (2008), ಏಕದಿನ ವಿಶ್ವಕಪ್ (2011), ಚಾಂಪಿಯನ್ಸ್ ಟ್ರೋಫಿ (2013) ಮತ್ತು ಟಿ 20 ವಿಶ್ವಕಪ್ (2024) ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಐಸಿಸಿ ವೈಟ್ ಬಾಲ್ ಕ್ರಿಕೆಟ್​​ನ ಎಲ್ಲ ಮಾದರಿಯ ಫೈನಲ್​ ಆಡಿದ ಏಕೈಕ ಆಟಗಾರ.

ರೋಹಿತ್ ಶರ್ಮಾ

ಅತಿ ಹೆಚ್ಚು ಪಂದ್ಯಗಳು: ರೋಹಿತ್ ಶರ್ಮಾ 159 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು ಪಟ್ಟಿಯ ಅಗ್ರಸ್ಥಾನಿ. ಐರ್ಲೆಂಡ್​ನ ಪಾಲ್ ಸ್ಟಿರ್ಲಿಂಗ್ (145) ಮತ್ತು ಜಾರ್ಜ್ ಡಾಕ್ರೆಲ್ (139) ನಂತರದಲ್ಲಿದ್ದಾರೆ. ಭಾರತದ ಮಹಿಳಾ ಟಿ20 ತಂಡದ ನಾಯಕಿ ಹರ್ಮನ್​ಪ್ರೀತ್​ ಕೌರ್ (166) ರೋಹಿತ್​ಗಿಂತ ಮುಂದಿದ್ದಾರೆ.

ಟಿ20ಐನಲ್ಲಿ 111 ಗೆಲುವುಗಳು: ರೋಹಿತ್ ಶರ್ಮಾ ಟಿ20ಐನಲ್ಲಿ 111 ಗೆಲುವುಗಳೊಂದಿಗೆ ಅತಿ ಹೆಚ್ಚು ಗೆಲುವು ಸಾಧಿಸಿದ ದಾಖಲೆ ಹೊಂದಿದ್ದಾರೆ. ಶೋಯೆಬ್ ಮಲಿಕ್ 87 ನಂತರದ ಸ್ಥಾನ ಹೊಂದಿದ್ದಾರೆ.

4231 ರನ್: ರೋಹಿತ್​ ಟಿ20 ಅಂತಾರಾಷ್ಟ್ರೀಯ ಮಾದರಿಯಲ್ಲಿ 4231 ರನ್ ಬಾರಿಸಿದ್ದಾರೆ. ಅವರು ವಿರಾಟ್ ಕೊಹ್ಲಿ (4188) ಅವರಿಗಿಂತ ಸ್ವಲ್ಪ ಮುಂದಿದ್ದಾರೆ.

ಅತಿ ಹೆಚ್ಚು ಶತಕಗಳು: ಟಿ20ಐನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಗ್ಲೆನ್ ಮ್ಯಾಕ್ಸ್ವೆಲ್ (5) ಅವರೊಂದಿಗೆ ಸ್ಥಾನ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ (4) ನಂತರದ ಸ್ಥಾನದಲ್ಲಿದ್ದಾರೆ. ಕೊಹ್ಲಿ ಮತ್ತು ಬಾಬರ್ ಅಜಮ್ (ತಲಾ 39) ನಂತರ ರೋಹಿತ್​​ 37 ಅರ್ಧಶತಕಗಳನ್ನು ಗಳಿಸಿದ್ದಾರೆ.

ಅತಿ ಹೆಚ್ಚು ಸಿಕ್ಸರ್: ರೋಹಿತ್ ಶರ್ಮಾ ಟಿ20ಐನಲ್ಲಿ 205 ಸಿಕ್ಸರ್​ಗಳನ್ನು ಬಾರಿಸಿದ್ದು, ಮಾರ್ಟಿನ್ ಗಪ್ಟಿಲ್ (173) ಅವರಿಗಿಂತ ಮುಂದಿದ್ದಾರೆ.

ದಾಖಲೆಯ ಜೊತೆಯಾಟ: 2024 ರ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಭಾರತ ಮತ್ತು ಅಫಘಾನಿಸ್ಥಾನ ನಡುವಿನ 3ನೇ ಟಿ 20 ಪಂದ್ಯದಲ್ಲಿ ರೋಹಿತ್ ಮತ್ತು ರಿಂಕು ಸಿಂಗ್ ಐದನೇ ವಿಕೆಟ್​ಗೆ 190 ರನ್​ಗಳ ಜೊತೆಯಾಟ ಆಡಿದ್ದರು.

ನಾಯಕನಾಗಿ 50 ಗೆಲುವುಗಳು: ಟಿ 20 ಪಂದ್ಯಗಳಲ್ಲಿ 50 ಗೆಲುವುಗಳನ್ನು ಸಾಧಿಸಿದ ಮೊದಲ ನಾಯಕ ರೋಹಿತ್, (50 ಗೆಲುವು ಮತ್ತು 12 ಸೋಲು) ಪ್ರಭಾವಶಾಲಿ ಗೆಲುವು-ಸೋಲಿನ ಅನುಪಾತ ಹೊಂದಿದ್ದಾರೆ ಅವರು.

ಅತಿ ಹೆಚ್ಚು ಪಂದ್ಯಗಳು: ಟಿ 20 ವಿಶ್ವಕಪ್​​ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು (47) ಆಡಿದ ದಾಖಲೆಯನ್ನು ರೋಹಿತ್ ಹೊಂದಿದ್ದಾರೆ. ಶಕೀಬ್ ಅಲ್ ಹಸನ್ (43) ಅವರನ್ನು ಹಿಂದಿಕ್ಕಿದ್ದಾರೆ.

ಹಿರಿಯ ನಾಯಕ: ಹಾಲಿ ವಿಶ್ವ ಕಪ್​ನ ಕೊನೇ ಪಂದ್ಯಕ್ಕೆ 37 ವರ್ಷ 60 ದಿನಗಳಾಗಿದ್ದ ರೋಹಿತ್​, ​, ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ ಅವರನ್ನು ಹಿಂದಿಕ್ಕಿ ವಿಶ್ವ ಕಪ್​ನಲ್ಲಿ ತಂಡವನ್ನು ಮುನ್ನಡೆಸಿದ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಏಕೈಕ ಭಾರತೀಯ: ರೋಹಿತ್ ಶರ್ಮಾ ಎರಡು ಬಾರಿ ಟಿ 20 ವಿಶ್ವಕಪ್ ಗೆದ್ದ ಏಕೈಕ ಭಾರತೀಯ ಆಟಗಾರ. 2007ರಲ್ಲೂ ಅವರು ಭಾರತ ತಂಡದಲ್ಲಿ ಆಡಿದ್ದರು.

Continue Reading

ಕರ್ನಾಟಕ

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Road Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ಭೀಕರ ಅಪಘಾತ ನಡೆದಿದೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ಹಾಸನ: ಕೆ‌ಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ (Road Accident) ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ನಡೆದಿದೆ. ಮಡಬ ಗ್ರಾಮದ ಮಂಜುನಾಥ್ (26) ಮೃತ ದುರ್ದೈವಿ, ಮತ್ತೋಬ್ಬರ ಗುರುತು ಪತ್ತೆಯಾಗಿಲ್ಲ.

ಚನ್ನರಾಯಪಟ್ಟಣದ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್‌ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಕಾರು ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರ ಮೃತದೇಹಗಳು ನಜ್ಜುಗುಜ್ಜಾಗಿವೆ.

ಈಜಲು ತೆರಳಿದ್ದ ಯುವಕ ನೀರು ಪಾಲು

ಕೊಡಗು: ಕೊಡಗಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದ್ದು, ನೀರಿನಲ್ಲಿ ಈಜಲು ಹೋಗಿ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದು, ಯುವಕನಿಗಾಗಿ ಮುಂದುವರೆದ ಶೋಧಕಾರ್ಯ ನಡೆಯುತ್ತಿದೆ.

ಮೈಸೂರು ಮೂಲದ ಶಶಿ (30) ನೀರುಪಾಲಾದ ಯುವಕ. ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಯುವಕ-ಯುವತಿಯರ ತಂಡ ಬಂದಿತ್ತು. ಕುಶಾಲನಗರ ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾಗಿದ್ದಾನೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು, ಸ್ಥಳೀಯರು ಹಾಗೂ ಅಗ್ನಿಶಾಮ‌ಕ ಸಿಬ್ಬಂದಿಯಿಂದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Road Accident

ಬೆಳಗಾವಿ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ (Road Accident) ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಏಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ. ತಾಯಿ ಮಗ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

Continue Reading

ಪ್ರಮುಖ ಸುದ್ದಿ

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Jasprit Bumrah : ಭಾರತವು ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ಬುಮ್ರಾ ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಮಾತನಾಡಿದರು. ಈ ಪಂದ್ಯಾವಳಿಯಲ್ಲಿ ಐಸಿಸಿ ಪರವಾಗಿ ಕೆಲಸ ಮಾಡುತ್ತಿರುವ ಗಣೇಶನ್ ಅವರು ವಿಶ್ವಕಪ್ ಗೆದ್ದ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಬುಮ್ರಾ ಅವರನ್ನು ಕೇಳಿದರು.

VISTARANEWS.COM


on

Jasprit Bumrah
Koo

ಬೆಂಗಳೂರು: ಭಾರತ ತಂಡದ ವೇಗದ ಬೌಲರ್​ ಜಸ್​ಪ್ರಿತ್​ ಬುಮ್ರಾ (Jasprit Bumrah) ಟಿ20 ವಿಶ್ವಕಪ್​ನಲ್ಲಿ 15 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಅವರು ಭಾರತ ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಫೈನಲ್​ನಲ್ಲಿ ಅವರು ರೀಜಾ ಹೆಂಡ್ರಿಕ್ಸ್ ಮತ್ತು ಮಾರ್ಕೊ ಜೆನ್ಸರ್​ ವಿಕೆಟ್​ಗಳನ್ನು ಉರುಳಿಸಿದ್ದಾರೆ. ಭಾರತದ ಪಾಲಿಗೆ ಎರಡೂ ಪ್ರಮುಖ ವಿಕೆಟ್​ಗಳಾಗಿವೆ. ಬುಮ್ರಾ ವಿಶ್ವಕಪ್​ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಟೂರ್ನಿಯುದ್ದಕ್ಕೂ ರೋಹಿತ್ ಶರ್ಮಾ ಅವರ ಪ್ರಮುಖ ಬೌಲರ್​ ಆಗಿದ್ದರು.

ಫೈನಲ್​​ನಲ್ಲಿ ವಿರಾಟ್ ಕೊಹ್ಲಿ 76 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮತ್ತೊಂದೆಡೆ, ವಿಶ್ವಕಪ್​ನಾದ್ಯಂತ ಬೌಲಿಂಗ್​ ಸ್ಥಿರತೆಗಾಗಿ ಬುಮ್ರಾ ಅವರನ್ನು ಪಂದ್ಯಾವಳಿಯ ಉತ್ತಮ ಆಟಗಾರ ಎಂದು ಹೆಸರಿಸಲಾಯಿತು. ಭಾರತವು ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ಬುಮ್ರಾ ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಮಾತನಾಡಿದರು. ಈ ಪಂದ್ಯಾವಳಿಯಲ್ಲಿ ಐಸಿಸಿ ಪರವಾಗಿ ಕೆಲಸ ಮಾಡುತ್ತಿರುವ ಗಣೇಶನ್ ಅವರು ವಿಶ್ವಕಪ್ ಗೆದ್ದ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಬುಮ್ರಾ ಅವರನ್ನು ಕೇಳಿದರು.

“ಇದು ನಿಜವಾಗಿಯೂ ಖುಷಿಯ ವಿಚಾರ. ಇನ್ನಿಂಗ್ಸ್ ನ ಮಧ್ಯದಲ್ಲಿ ನಮಗೆ ಆತ್ಮವಿಶ್ವಾಸವಿತ್ತು. ಆದರೆ ಅದು ಹೇಗೆ ಸಾಗುತ್ತೇವೆ ಎಂದು ನಾವು ಹೆದರಿದ್ದೆವು. ಆದರೆ ಈ ರೀತಿಯ ಗೆಲುವನ್ನು ಪಡೆಯಲು ನಿಜವಾಗಿಯೂ ಸಂತೋಷವಾಗಿದೆ.. ಇದು ಉತ್ತಮ ಟೂರ್ನಿ ಎಂದು ಬುಮ್ರಾ ಹೇಳಿದ್ದಾರೆ. ಪುತ್ರ ಅಂಗದ್​ ಕೂಡ ಜತೆಯಲ್ಲಿರುವ ಕಾರಣ ಆತನೊಂದಿಗೆ ವಿಶ್ವ ಕಪ್​ ಗೆಲುವು ಸಂಭ್ರಮಿಸುವುದು ಖುಷಿಯ ವಿಚಾರ ಎಂದು ಅವರು ಹೇಳಿದ್ದಾರೆ.

“ನಮ್ಮ ಪುತ್ರ ಅಂಗದ್ ಕೂಡ ಇಲ್ಲಿದ್ದಾನೆ. ಆತ ನಾವು ವಿಶ್ವಕಪ್ ಗೆದ್ದಿರುವುದನ್ನು ನೋಡಿದ್ದಾನೆ ಇದಕ್ಕಿಂತ ಉತ್ತಮ ಭಾವನೆ ಇಲ್ಲ. ಈ ರೀತಿಯ ಪಂದ್ಯಾವಳಿಯಲ್ಲಿ ಭಾರತಕ್ಕೆ ಕೊಡುಗೆ ನೀಡಿದ್ದಕ್ಕೆ ಸಂತೋಷವಿದೆ” ಎಂದು ವೇಗಿ ಹೇಳಿದ್ದಾರೆ.

ಈ ಟಿ 20 ವಿಶ್ವಕಪ್​​ನಲ್ಲಿ ಭಾರತದ ಅಜೇಯ ಓಟದ ಬಗ್ಗೆ ಪ್ರತಿಕ್ರಿಯಿಸಿದ ಬುಮ್ರಾ, “ಎಲ್ಲಾ ಪ್ರಶಂಸೆಗಳು ಕಡಿಮೆ. ನಾವು ನಿರೀಕ್ಷೆಗಳೊಂದಿಗೆ ಬಂದಿದ್ದೆವು. ನಾವು ನಮ್ಮ ಆಟಕ್ಕೆ ಅಂಟಿಕೊಂಡಿದ್ದೆವು. ಕೊನೆಯ ಹಂತಗಳಲ್ಲಿಯೂ, ನಾವು ಭಯಭೀತರಾಗಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

ಭಾರತೀಯ ವೇಗಿ ಇಡೀ ಭಾರತೀಯ ಬೌಲಿಂಗ್ ವಿಭಾಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ನಿಜವಾಗಿಯೂ ಖುಷಿಯ ವಿಚಾರ. ಎಲ್ಲ ಬೌಲರ್​ಗಳು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ, ನಾನು ನನ್ನ ಭಾವನೆಗಳನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತೇನೆ. ಆದರೆ ಈ ಬಾರಿ, ಇದು ಅವಾಸ್ತವಿಕ ಭಾವನೆಯಾಗಿದೆ” ಎಂದು ಬುಮ್ರಾ ಸಂತೋಷ ವ್ಯಕ್ತಪಡಿಸಿದ್ದಾರೆ. ನಾನು ಚಂದ್ರನ ಮೇಲೆ ಇದ್ದೇನೆ, ವಿಶೇಷವಾಗಿ ನನ್ನ ಕುಟುಂಬದೊಂದಿಗೆ ಇಲ್ಲಿದ್ದೇನೆ ಎಂದು ಭಾವಿಸುವೆ ಎಂದು ಭಾರತೀಯ ವೇಗಿ ಹೇಳಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಲು ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ತಂತ್ರಗಾರಿಕೆಯ ನಿರ್ಧಾರವು ಫಲ ನೀಡಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ಚೇಸಿಂಗ್​​ನಲ್ಲಿ ಒತ್ತಡಕ್ಕೆ ಸಿಲುಕಿತು. ಅಂತಿಮ ಐದು ಓವರ್ಗಳಲ್ಲಿ 30 ರನ್​ಗಳ ಅಗತ್ಯವಿದ್ದ ದಕ್ಷಿಣ ಆಫ್ರಿಕಾ ವಿಫಲಗೊಂಡಿತು.

Continue Reading
Advertisement
Goldman of Bihar
ವೈರಲ್ ನ್ಯೂಸ್5 mins ago

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Lacchi Poojarthi
ಕರ್ನಾಟಕ18 mins ago

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

T20 World Cup 2024
ಪ್ರಮುಖ ಸುದ್ದಿ22 mins ago

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Virat kohli
ಪ್ರಮುಖ ಸುದ್ದಿ41 mins ago

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

Drown In Water
ದೇಶ44 mins ago

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Road Accident
ಕರ್ನಾಟಕ55 mins ago

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Hosur International Airport
ಬೆಂಗಳೂರು1 hour ago

Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Karnataka Politics
ಕರ್ನಾಟಕ1 hour ago

Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

Google Map
ಕ್ರೈಂ2 hours ago

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

Viral Video
ವೈರಲ್ ನ್ಯೂಸ್2 hours ago

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು8 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌