ವಾಷಿಂಗ್ಟನ್: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಇತರ ಕರೆನ್ಸಿಗಳಿಗೆ ಹೋಲಿಸಿದರೆ ಡಾಲರ್ (Rupee) ಎದುರು ರೂಪಾಯಿ, ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ರೂಪಾಯಿ ದುರ್ಬಲವಾಗುತ್ತಿಲ್ಲ, ಡಾಲರ್ ನಿರಂತರವಾಗಿ ಬಲವಾಗುತ್ತಿದೆ. ಇತರ ಎಲ್ಲ ಕರೆನ್ಸಿಗಳಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಹಣದುಬ್ಬರದ ಪರಿಸ್ಥಿತಿಯನ್ನು ಕೂಡ ಎದುರಿಸಲು ಭಾರತ ಸಶಕ್ತವಾಗಿದೆ. ಅದನ್ನು ನಿಯಂತ್ರಿಸಲು ಪ್ರಯತ್ನ ಮುಂದುವರಿದಿದೆ. ವ್ಯಾಪಾರ ಕೊರತೆ ಹೆಚ್ಚುತ್ತಿದ್ದರೂ, ಯಾವುದೇ ಒಂದು ದೇಶದ ಎದುರು ಅತಾರ್ಕಿಕ ಮಟ್ಟದಲ್ಲಿ ಏರಿಕೆ ಆಗಿದೆಯೇ ಎಂಬುದರ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಕ್ರಿಪ್ಟೊ ಕರೆನ್ಸಿಗೆ ಸಂಬಂಧಿಸಿದ ವಿಷಯಗಳನ್ನು ಜಿ20 ರಾಷ್ಟ್ರಗಳ ಒಕ್ಕೂಟದಲ್ಲಿ ಪ್ರಸ್ತಾಪಿಸಲಾಗುವುದು. ಇದಕ್ಕೆ ತಂತ್ರಜ್ಞಾನ ಆಧರಿತ ನಿಯಂತ್ರಕ ವ್ಯವಸ್ಥೆಯ ಅಗತ್ಯ ಇದೆ ಎಂದು ಹಣಕಾಸು ಸಚಿವರು ತಿಳಿಸಿದರು.