ಎಸ್‌ಬಿಐ ಗೃಹ ಸಾಲ ಬಡ್ಡಿ ದರ ಮತ್ತೆ ಹೆಚ್ಚಳ - Vistara News

ಪ್ರಮುಖ ಸುದ್ದಿ

ಎಸ್‌ಬಿಐ ಗೃಹ ಸಾಲ ಬಡ್ಡಿ ದರ ಮತ್ತೆ ಹೆಚ್ಚಳ

ಎಸ್‌ಬಿಐ ತನ್ನ ಎಂಸಿಎಲ್‌ ಆರ್‌ ಆಧಾರಿಯ ಬಡ್ಡಿ ದರಗಳನ್ನು ತಿಂಗಳೊಳಗೆ ಮತ್ತೊಮ್ಮೆ ಏರಿಕೆ ಮಾಡಿದೆ. ಹೀಗಾಗಿ ಗೃಹ, ವಾಹನ, ಕಾರ್ಪೊರೇಟ್‌ ಸಾಲಗಳ ಬಡ್ಡಿ ದರಗಳು ಏರಿಕೆಯಾಗುವುದು ಖಚಿತವಾಗಿದೆ.

VISTARANEWS.COM


on

sbi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ತನ್ನ ಎಂಸಿಎಲ್‌ಆರ್‌ ಆಧಾರಿತ ಸಾಲಗಳ ಬಡ್ಡಿ ದರಗಳಲ್ಲಿ ಶೇ.0.10 ರಷ್ಟು ಹೆಚ್ಚಿಸಿದೆ. ಹೀಗಾಗಿ ಗೃಹ ಸಾಲ, ವೈಯಕ್ತಿಕ ಸಾಲ ಸೇರಿದಂತೆ ಬಹುತೇಕ ಸಾಲಗಳ ಬಡ್ಡಿ ದರ ಏರಿಕೆಯಾಗಲಿದ್ದು, ಇಎಂಐ ಹೊರೆ ಹೆಚ್ಚಲಿದೆ.

ಎಸ್‌ಬಿಐ ಒಂದೇ ತಿಂಗಳಲ್ಲಿ ಎರಡನೇ ಸಲ ಸಾಲದ ಬಡ್ಡಿ ದರಗಳನ್ನು ಪರಿಷ್ಕರಿಸಿದಂತಾಗಿದೆ. ಇತರ ಬ್ಯಾಂಕ್‌ಗಳೂ ಇದನ್ನೇ ಅನುಸರಿಸುವ ನಿರೀಕ್ಷೆ ಇದೆ. ಎಸ್‌ಬಿಐ ವೆಬ್‌ಸೈಟ್‌ ಪ್ರಕಾರ, 6 ತಿಂಗಳಿನ ಅವಧಿಯ ಎಂಸಿಎಲ್‌ಆರ್‌ ದರ ಶೇ.7.15 ಆಗಿದೆ. 1 ವರ್ಷದ ಅವಧಿಗೆ ಶೇ.7.20, 2 ವರ್ಷಗಳ ಅವಧಿಗೆ ಶೇ.7.40 ಮತ್ತು 3 ವರ್ಷಗಳ ಅವಧಿಗೆ ಶೇ.7.50 ಆಗಿದೆ.

ಗ್ರಾಹಕರ ಮೇಲೆ ಪರಿಣಾಮವೇನು?
ಬ್ಯಾಂಕ್‌ಗಳು ಸಾಲದ ಬಡ್ಡಿ ದರವನ್ನು ನಿಗದಿಪಡಿಸುವಾಗ ಎರಡು ವಿಧಗಳನ್ನು ಬಳಸುತ್ತವೆ. ಎಂಸಿಎಲ್‌ಆರ್‌ ಮತ್ತು ಆರ್‌ಎಲ್‌ಎಲ್‌ಆರ್.‌ ಮಾರ್ಜಿನಲ್‌ ಕಾಸ್ಟ್‌ ಆಫ್‌ ಫಂಡ್‌ ಬೇಸ್ಡ್‌ ಲೆಂಡಿಂಗ್‌ ರೇಟ್‌ (ಎಂಸಿಎಲ್‌ಆರ್)‌ ಎಂಬುದು ಬ್ಯಾಂಕ್‌ಗೆ ಸಾಲ ನೀಡಲು ತಗಲುವ ವೆಚ್ಚವನ್ನು ಆಧರಿಸಿ ಬಡ್ಡಿ ದರ ನಿಗದಿಪಡಿಸುವ ವಿಧಾನವಾಗಿದೆ. ರೆಪೊ ಲಿಂಕ್ಡ್‌ ಲೋನ್‌ ರೇಟ್‌ (ಆರ್‌ಎಲ್‌ಎಲ್‌ಆರ್)‌ ಎಂಬುದು ಆರ್‌ಬಿಐನ ರೆಪೊ ದರವನ್ನು ಆಧರಿಸಿ ಸಾಲದ ಬಡ್ಡಿ ದರ ನಿಗದಿಪಡಿಸುವ ವಿಧಾನವಾಗಿದೆ. ಎಂಸಿಎಲ್‌ಆರ್‌ ಅಡಿಯಲ್ಲಿ ಗೃಹ ಸಾಲ ಸೇರಿದಂತೆ ಬಹುತೇಕ ಸಾಲಗಳು ಬರುವುದರಿಂದ ಅವುಗಳ ಬಡ್ಡಿ ದರ ಹೆಚ್ಚಲಿವೆ.ಗೃಹ ಸಾಲ, ವಾಹನ ಮತ್ತು ವೈಯಕ್ತಿಕ ಸಾಲಗಳ ಬಡ್ಡಿ ದರ ಹೆಚ್ಚಬಹುದು. ಕಾರ್ಪೊರೇಟ್‌ ಕಂಪನಿಗಳು ಪಡೆಯುವ ಸಾಲದ ಬಡ್ಡಿ ದರದಲ್ಲೂ ಏರಿಕೆಯಾಗಲಿದೆ.

ಬಡ್ಡಿ ದರ ಮತ್ತೆ ಹೆಚ್ಚಳ ಸಂಭವ
ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಜೂನ್‌ನಲ್ಲಿ ಮತ್ತೆ ತನ್ನ ಬಡ್ಡಿ ದರಗಳನ್ನು (ರೆಪೊ) ಏರಿಸುವ ಸಾಧ್ಯತೆ ಇದೆ. ಆದರೆ ಎಷ್ಟರಮಟ್ಟಿಗೆ ಹೆಚ್ಚಳವಾಗಲಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿಯಾಗಿದೆ. ಪ್ರಸ್ತುತ ರೆಪೊ ದರ ಶೇ. 4.40 ಆಗಿದೆ. ಮೇನಲ್ಲಿ ರೆಪೊ ದರ ಪರಿಷ್ಕರಣೆಯಾಗಿತ್ತು.

ಕಳೆದ ಏಪ್ರಿಲ್‌ನಲ್ಲಿ ಚಿಲ್ಲರೆ ಹಣದುಬ್ಬರ ಕಳೆದ 8 ವರ್ಷಗಳಲ್ಲಿಯೇ ಗರಿಷ್ಠ ಮಟ್ಟಕ್ಕೆ, ಅಂದರೆ ಶೇ.7.79ಕ್ಕೆ ಏರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹಣದುಬ್ಬರ ತಗ್ಗಿಸಲು ಆರ್‌ ಬಿಐ ರೆಪೊ ದರ ಏರಿಕೆ ನಿರೀಕ್ಷಿತವಾಗಿದ್ದು, ಇದರ ಪರಿಣಾಮ ಬ್ಯಾಂಕ್‌ಗಳು ಬಡ್ಡಿ ದರ ಏರಿಸುವುದೂ ನಿಶ್ಚಿತ. ಹೀಗಾಗಿ ಜನತೆ ಬಡ್ಡಿ ದರ ಏರಿಕೆಯ ದಿನಗಳಿಗೆ ಸಜ್ಜಾಗಬೇಕಾಗಿದೆ.

ಇದನ್ನೂ ಓದಿ: ರೆಪೊ ದರಗಳ ಹೆಚ್ಚಳ: ಏರಲಿದೆ ನಿಮ್ಮ ಬಡ್ಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Kotak Bank: ನಿಯಮಗಳ ಪಾಲನೆಯ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ ಹಲವು ನಿರ್ಬಂಧ ವಿಧಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಈಗ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಕೂಡ ಹಲವು ನಿರ್ಬಂಧ ವಿಧಿಸಿದೆ. ಅದರಲ್ಲೂ, ಹೊಸ ಗ್ರಾಹಕರಿಗೆ ನೂತನ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸುವುದು ಪ್ರಮುಖ ನಿರ್ಬಂಧವಾಗಿದೆ. ಹಾಗಾದರೆ, ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಪರಿಣಾಮ ಬೀರಲಿದೆ? ಇಲ್ಲಿದೆ ಮಾಹಿತಿ.

VISTARANEWS.COM


on

Kotak Bank
Koo

ಮುಂಬೈ: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Bank) ಆರ್‌ಬಿಐ (RBI) ಶಾಕ್‌ ನೀಡಿದೆ. ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂಬುದು ಸೇರಿ ಹಲವು ನಿರ್ಬಂಧಗಳನ್ನು ವಿಧಿಸಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ಗಳನ್ನು (Kotak Mahindra Bank Credit Cards) ಹೊಂದಿದವರ ಮೇಲೆ ಏನು ಪರಿಣಾಮ ಆಗಲಿದೆ? ಅವರಿಗೆ ಮೊಬೈಲ್‌ ಬ್ಯಾಂಕಿಂಗ್‌, ಆನ್‌ಲೈನ್‌ ಸೇವೆ ಇರಲಿದೆಯೇ? ಈ ಕುರಿತು ಆರ್‌ಬಿಐ ಹೇಳಿದ್ದೇನು? ಇಲ್ಲಿದೆ ಮಾಹಿತಿ.

ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು, ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕ್‌ ಸೌಲಭ್ಯ ಹೊಂದಿರುವವರು ಸೇವೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ, ಹಳೆಯ ಗ್ರಾಹಕರಿಗೆ ಆರ್‌ಬಿಐ ಆದೇಶದಿಂದ ಯಾವುದೇ ತೊಂದರೆ ಆಗುವುದಿಲ್ಲ.

ಹೊಸ ಗ್ರಾಹಕರಿಗೆ ಮಾತ್ರ ಆರ್‌ಬಿಐ ನಿರ್ಬಂಧಗಳು ಅನ್ವಯವಾಗುತ್ತವೆ ಎಂದು ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ತಿಳಿಸಿದೆ. “ಈಗಾಗಲೇ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೌಲಭ್ಯಗಳನ್ನು ಹೊಂದಿರುವ ಗ್ರಾಹಕರಿಗೆ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಸೇವೆಗಳನ್ನು ಮುಂದುವರಿಸಬಹುದು. ಈಗಾಗಲೇ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಹಳೆಯ ಗ್ರಾಹಕರಿಗೂ ಸೇವೆಗಳನ್ನು ಮುಂದುವರಿಸಲು ಯಾವುದೇ ನಿರ್ಬಂಧವಿಲ್ಲ” ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ. ಈ ಕುರಿತು ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಸ್ಪಷ್ಟನೆ ನೀಡಿದ್ದು, “ಹಳೆಯ ಗ್ರಾಹಕರಿಗೆ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ” ಎಂದು ತಿಳಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Continue Reading

ಪ್ರಮುಖ ಸುದ್ದಿ

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Lok Sabha Election 2024: ಏಪ್ರಿಲ್ 26 ರಂದು 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ನಿಟ್ಟಿನಲ್ಲಿ ಏ.24ರಂದು ಸಂಜೆ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.

VISTARANEWS.COM


on

Lok sabha Election
Koo

ಬೆಂಗಳೂರು: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಅಂತ್ಯಗೊಂಡಿದ್ದು, ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ ಸೇರಿ ವಿವಿಧ ಪಕ್ಷಗಳಿಂದ ಮತದಾರರನ್ನು ಸೆಳೆಯಲು ಅಂತಿಮ ಹಂತದ ಕಸರತ್ತು ನಡೆಯಿತು.

ಏಪ್ರಿಲ್ 26 ರಂದು 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಸ್ಸಾಂ 5, ಬಿಹಾರದ 4, ಛತ್ತೀಸ್‌ಗಢದ 3, ಕರ್ನಾಟಕ 14, ಕೇರಳ 20, ಮಧ್ಯಪ್ರದೇಶ 7, ಮಹಾರಾಷ್ಟ್ರ 8, ಮಣಿಪುರದ 1, ರಾಜಸ್ಥಾನದ 13 ತ್ರಿಪುರ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3, ಜಮ್ಮುಕಾಶ್ಮೀರ 1 ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಕೇರಳದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ | Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

Lok Sabha Election 2024 General holiday for first phase of polling on April 26

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ (Voting in Karnataka) ನಡೆಯಲಿದೆ. ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು (Labour Voters) ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ (General holiday for voting) ಘೋಷಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್‌ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ. ಏಪ್ರಿಲ್‌ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. ಹಾಗಾಗಿ ಅಂದು ಕಾರ್ಮಿಕರಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ | Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

ಆದೇಶದಲ್ಲೇನಿದೆ?

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

Continue Reading

ದೇಶ

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Narendra Modi: ಕರ್ನಾಟಕ ಸರ್ಕಾರವು ಮುಸ್ಲಿಮರಿಗೆ ಮೀಸಲಾತಿ ನೀಡುವ ದಿಸೆಯಲ್ಲಿ ಆ ಧರ್ಮದ ಎಲ್ಲರನ್ನೂ ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯೇ ಮಾಹಿತಿ ನೀಡಿದೆ. “ಮೀಸಲಾತಿ ನೀಡಲು ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿ ಕೆಟಗರಿಗೆ ಸೇರಿಸಿದೆ. ಇದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಒಬಿಸಿ ಮೀಸಲಾತಿ ನೀಡಬೇಕೇ ಹೊರತು, ಇಡೀ ಧರ್ಮವನ್ನೇ ಒಬಿಸಿಗೆ ಸೇರಿಸಿರುವುದು ಸರಿಯಲ್ಲ” ಎಂದು ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ. ಈಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ಭೋಪಾಲ್‌: ಎಲ್ಲ ಧರ್ಮಗಳಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ನೀಡಬೇಕಾದ ಒಬಿಸಿ ಮೀಸಲಾತಿ ಪಟ್ಟಿಗೆ (OBC Reservation) ಕರ್ನಾಟಕ ಸರ್ಕಾರವು (Karnataka Government) ಎಲ್ಲ ಮುಸ್ಲಿಮರನ್ನು ಸೇರಿಸಿದೆ. ಇದರ ವಿರುದ್ಧ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗವು (NCBC) ಅಸಮಾಧಾನ ವ್ಯಕ್ತಪಡಿಸಿದೆ. “ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧವಾದ ನಡೆ” ಎಂದಿದೆ. ಇದರ ಬೆನ್ನಲ್ಲೇ, ಒಬಿಸಿ ಪಟ್ಟಿಗೆ ಮುಸ್ಲಿಮರನ್ನು ಸೇರಿಸಿದ ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇತರೆ ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್‌ ಎಂದಿಗೂ ಶತ್ರು” ಎಂದು ಪ್ರಧಾನಿ ಟೀಕಿಸಿದ್ದಾರೆ.

ಮಧ್ಯಪ್ರದೇಶದ ಸಾಗರ್‌ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಒಬಿಸಿ ಮೀಸಲಾತಿ ಕುರಿತು ನರೇಂದ್ರ ಮೋದಿ ಮಾತನಾಡಿದರು. “ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಎಲ್ಲರನ್ನೂ ಕಾಂಗ್ರೆಸ್‌ ಸರ್ಕಾರವು ಒಬಿಸಿ ಪಟ್ಟಿಗೆ ಸೇರಿಸಿದೆ. ಆ ಮೂಲಕ ಧರ್ಮದ ಆಧಾರದ ಮೇಲೆ ಹಿಂಬಾಗಿಲಿನಿಂದ ಮೀಸಲು ನೀಡಿದೆ. ಭವಿಷ್ಯದ ಪೀಳಿಗೆಗಳನ್ನು ನಾಶಪಡಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದೆ. ಅದರಲ್ಲೂ, ಕಾಂಗ್ರೆಸ್‌ ಎಂದಿಗೂ ಒಬಿಸಿ ಸಮುದಾಯದವರ ಶತ್ರು ಎಂಬುದು ಇದರಿಂದ ಸಾಬೀತಾಗಿದೆ” ಎಂದು ಮೋದಿ ಕುಟುಕಿದ್ದಾರೆ.

“ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಮ್ಮ ಸಂವಿಧಾನವು ನಿರ್ಬಂಧಿಸುತ್ತದೆ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಇದರ ವಿರುದ್ಧ ನಿಲುವು ತಾಳಿದ್ದರು. ಆದರೆ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕೆಲ ವರ್ಷಗಳ ಹಿಂದೆಯೇ ಕಾಂಗ್ರೆಸ್‌ ನಿರ್ಣಯ ತೆಗೆದುಕೊಂಡಿತ್ತು. ಇಂತಹ ಕಳ್ಳಾಟಗಳ ಮೂಲಕ ಕಾಂಗ್ರೆಸ್‌ ಜನರನ್ನು ಮೂರ್ಖರನ್ನಾಗಿಸಲು ಯತ್ನಿಸುತ್ತಿದೆ. ಆದರೆ, ಒಬಿಸಿ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡ ಕಾಂಗ್ರೆಸ್‌ಗೆ ಜನರೇ ಸರಿಯಾದ ಪಾಠ ಕಲಿಸಬೇಕು” ಎಂದು ಮೋದಿ ಚಾಟಿ ಬೀಸಿದ್ದಾರೆ.

ದಾಖಲೆ ಕೊಟ್ಟ ಎನ್‌ಸಿಬಿಸಿ

ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯು ದಾಖಲೆಗಳನ್ನೂ ನೀಡಿದೆ. ಮಾಹಿತಿ ಪ್ರಕಾರ, “ಕರ್ನಾಟಕಲ್ಲಿ ಮುಸ್ಲಿಮರ ಸಂಖ್ಯೆ ಶೇ.12.92ರಷ್ಟಿದೆ. ಕೆಟಗರಿ II-B ಅನ್ವಯ ಕರ್ನಾಟಕದಲ್ಲಿರುವ ಎಲ್ಲ ಮುಸ್ಲಿಮರು ಒಬಿಸಿ ಕೆಟಗರಿ ವ್ಯಾಪ್ತಿಗೆ ಸೇರುತ್ತಾರೆ. ಕೆಟಗರಿ 1ರಲ್ಲಿ 17 ಮುಸ್ಲಿಂ ಸಮುದಾಯಗಳು, 2ಎ ಕೆಟಗರಿಯಲ್ಲಿ 19 ಮುಸ್ಲಿಂ ಸಮುದಾಯಗಳು ಬರುತ್ತವೆ. ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧದ ತೀರ್ಮಾನವಾಗಿದೆ” ಎಂಬುದಾಗಿ ಎನ್‌ಸಿಬಿಸಿ ತಿಳಿಸಿದೆ.

“ಹಿಂದುಗಳು, ಮುಸ್ಲಿಮರು ಸೇರಿ ಎಲ್ಲ ಧರ್ಮಗಳಲ್ಲಿಯೇ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯದವರಿಗೆ ಮಾತ್ರ ಒಬಿಸಿ ಮೀಸಲಾತಿ ನೀಡಲಾಗುತ್ತಿದೆ. ಆದರೆ, ಒಂದಿಡೀ ಧರ್ಮಕ್ಕೇ ಒಬಿಸಿ ಮೀಸಲಾತಿ ನೀಡುವುದು ಆ ಮೀಸಲಾತಿಯ ತತ್ವಕ್ಕೆ ವಿರುದ್ಧವಾಗಿದೆ. ಆದರೆ, ಎಲ್ಲ ಮುಸ್ಲಿಂ ಸಮುದಾಯದವರನ್ನು ಒಬಿಸಿಗೆ ಸೇರ್ಪಡೆ ಮಾಡುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಒಬಿಸಿ ಕೆಟಗರಿ ವ್ಯಾಪ್ತಿಯ ಹಿಂದುಳಿದ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡಿದೆ. ಹಾಗೆಯೇ, ಮೀಸಲಾತಿ ನೀಡಿರುವ ಕುರಿತು ಯಾವುದೇ ಮಾಹಿತಿಯನ್ನೂ ರಾಜ್ಯ ಸರ್ಕಾರ ಒದಗಿಸಿಲ್ಲ” ಎಂಬುದಾಗಿ ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.

ಮೀಸಲಾತಿ ಕೊಟ್ಟಿದ್ದು ನಿಜ ಎಂದ ಸಿದ್ದರಾಮಯ್ಯ

ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಕೊಟ್ಟಿದ್ದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ” ಈ ಕುರಿತು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರವ ನರೇಂದ್ರ ಮೋದಿ ಅವರ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: Muslims OBC Quota: ಎಲ್ಲ ಮುಸ್ಲಿಮರನ್ನು ಒಬಿಸಿಗೆ ಸೇರಿಸಿದ ಸಿದ್ದರಾಮಯ್ಯ ಸರ್ಕಾರ; ರಾಷ್ಟ್ರೀಯ ಆಯೋಗ ಕೆಂಡ!

Continue Reading

ದೇಶ

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

ರಾಹುಲ್‌ ಗಾಂಧಿ ಅವರು ಗಂಡಸು ಹೌದೋ, ಅಲ್ಲವೋ ಎಂಬುದನ್ನು ತಿಳಿಯಲು ಬಿಜೆಪಿ ನಾಯಕರು ತಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಬೇಕು ಎಂದು ಗುಜರಾತ್‌ ಕಾಂಗ್ರೆಸ್‌ ನಾಯಕ ಪ್ರತಾಪ್‌ ದುಧನ್‌ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇವರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pratap Dudhat
Koo

ಗಾಂಧಿನಗರ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದ ಸೃಷ್ಟಿಸುತ್ತಿವೆ. ಪ್ರತಿಪಕ್ಷ ನಾಯಕರ ವಿರುದ್ಧ ಮಾತನಾಡುವ ಭರದಲ್ಲಿ ಅವಾಚ್ಯ, ಅಶ್ಲೀಲ ಪದಗಳ ಬಳಕೆ, ಏಕವಚನದಲ್ಲಿಯೇ ದಾಳಿ ಮಾಡುವುದು ಸೇರಿ ಹಲವು ರೀತಿಯ ಹೇಳಿಕೆಗಳು ಜನರಲ್ಲಿ ಅಸಹ್ಯ ಮೂಡಿಸಿವೆ. ಇದರ ಬೆನ್ನಲ್ಲೇ, ಗುಜರಾತ್‌ ಕಾಂಗ್ರೆಸ್‌ ನಾಯಕ (Gujarat Congress Leader) ಪ್ರತಾಪ್‌ ದುಧತ್‌ (Pratap Dudhat) ಅವರು ನೀಡಿದ ಹೇಳಿಕೆಯು ಭಾರಿ ವಿವಾದ ಭುಗಿಲೆಬ್ಬಿಸಿದೆ. “ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು, ನಿಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಿ” ಎಂಬುದಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವುದು ಭಾರಿ ಸಂಚಲನ ಮೂಡಿಸಿದೆ.

ಚುನಾವಣಾ ಸಭೆಯೊಂದರಲ್ಲಿ ಮಾತನಾಡಿದ ಪ್ರತಾಪ್‌ ದುಧತ್‌, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು. “ಬಿಜೆಪಿ ನಾಯಕರು ಯಾವಾಗಲೂ ರಾಹುಲ್‌ ಗಾಂಧಿ ಅವರ ಮದುವೆ ಬಗ್ಗೆ ಮಾತನಾಡುತ್ತಾರೆ. ಅಷ್ಟಕ್ಕೂ, ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು ನಿಮ್ಮ ಪುತ್ರಿಯರು, ತಾಯಿಯನ್ನು ಅವರ ಜತೆ ಮಲಗಿಸಿ. ಆಗ ನಿಮಗೆ ರಾಹುಲ್‌ ಗಾಂಧಿ ಗಂಡಸು ಹೌದೋ, ಅಲ್ಲವೋ ಎಂಬುದು ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದ್ದು, ಕಾಂಗ್ರೆಸ್ ನಾಯಕನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಾಪ್‌ ದುಧತ್‌ ಅವರ ವಿಡಿಯೊ ವೈರಲ್‌ ಆಗುತ್ತಲೇ ಜನ ಪ್ರತಿಕ್ರಿಯಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. “ದೇಶದ ಹೆಣ್ಣುಮಕ್ಕಳಿಗೆ ಕಾಂಗ್ರೆಸ್‌ ಕೊಡುವ ಗೌರವ ಹೇಗಿದೆ ನೋಡಿ” ಎಂಬುದಾಗಿ ಒಬ್ಬರು ಟೀಕಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 25 ಕ್ಷೇತ್ರಗಳಲ್ಲೂ ಗೆಲ್ಲಬಾರದು ಎಂದು ತೀರ್ಮಾನಿಸಿದೆ. ಇದೇ ಕಾರಣಕ್ಕಾಗಿ ಆ ಪಕ್ಷದ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮತಗಳನ್ನು ಕೇಳಲು ಬಂದಾಗ ಇಂತಹ ನಾಯಕರಿಗೆ ಹೆಣ್ಣುಮಕ್ಕಳು ಸರಿಯಾಗಿ ಪಾಠ ಕಲಿಸಬೇಕು” ಎಂದು ಇನ್ನೊಬ್ಬರು ಹೇಳಿದ್ದಾರೆ. ಅಷ್ಟೇ ಅಲ್ಲ, “ಈ ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್‌ ದಾಖಲಿಸಬೇಕು”, “ಹೆಣ್ಣುಮಕ್ಕಳ ಬಗ್ಗೆ ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡಿ, ಮಾತಾಡಿಯೇ ಕಾಂಗ್ರೆಸ್‌ ಸೋಲಿಗೆ ಕಾರಣರಾಗಿದ್ದಾರೆ”, “ಕಾಂಗ್ರೆಸ್‌ನಲ್ಲಿ ಟಿಕೆಟ್‌ ಗಿಟ್ಟಿಸಿಕೊಳ್ಳಲು ಹೀಗೆ ಮಾತನಾಡುವುದೇ ಮೊದಲ ಅರ್ಹತೆ ಇರಬೇಕು” ಎಂಬುದು ಸೇರಿ ನೂರಾರು ಜನ ಕಾಂಗ್ರೆಸ್‌ ನಾಯಕನ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ನಾಯಕ ಸುರ್ಜೇವಾಲಾ ಅವರ ವಿವಾದಾತ್ಮಕ ಹೇಳಿಕೆ ಬಳಿಕ ಟಿಎಂಸಿಗೂ ಸಂಕಷ್ಟ

Continue Reading
Advertisement
Road Accident
ಕರ್ನಾಟಕ18 mins ago

Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

Madrid Open 2024
ಕ್ರೀಡೆ28 mins ago

Madrid Open 2024: ಫಿಟ್​ನೆಸ್​ ಸಲುವಾಗಿ ಮ್ಯಾಡ್ರಿಡ್ ಓಪನ್‌ನಿಂದ ಹಿಂದೆ ಸರಿದ ಹಾಲೆಪ್‌

Kotak Bank
ದೇಶ39 mins ago

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Lok sabha Election
ಪ್ರಮುಖ ಸುದ್ದಿ55 mins ago

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Narsingh Yadav
ಕ್ರೀಡೆ1 hour ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ1 hour ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Neha Murder Case
ಕರ್ನಾಟಕ2 hours ago

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

IPL 2024
ಕ್ರೀಡೆ2 hours ago

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

Pratap Dudhat
ದೇಶ2 hours ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Lok Sabha Election 2024 Munirathna stops Darshan from campaigning for DK Suresh
Lok Sabha Election 20242 hours ago

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌