SBI Results : ಎಸ್‌ಬಿಐಗೆ ಇತಿಹಾಸದಲ್ಲೇ ಅತ್ಯಧಿಕ ದಾಖಲೆಯ, 14,205 ಕೋಟಿ ರೂ. ತ್ರೈಮಾಸಿಕ ನಿವ್ವಳ ಲಾಭ - Vistara News

ಪ್ರಮುಖ ಸುದ್ದಿ

SBI Results : ಎಸ್‌ಬಿಐಗೆ ಇತಿಹಾಸದಲ್ಲೇ ಅತ್ಯಧಿಕ ದಾಖಲೆಯ, 14,205 ಕೋಟಿ ರೂ. ತ್ರೈಮಾಸಿಕ ನಿವ್ವಳ ಲಾಭ

ಎಸ್‌ಬಿಐ ತನ್ನ ಇತಿಹಾಸದಲ್ಲೇ ಗರಿಷ್ಠ ತ್ರೈಮಾಸಿಕ ನಿವ್ವಳ ಲಾಭವನ್ನು ಕಳೆದ ಅಕ್ಟೋಬರ್-ಡಿಸೆಂಬರ್‌ನಲ್ಲಿ ಗಳಿಸಿರುವುದು ಗಮನಾರ್ಹ. (SBI Results) ವಿವರ ಇಲ್ಲಿದೆ.

VISTARANEWS.COM


on

SBI Results: Highest ever record for SBI, Rs 14,205 crore. Quarterly Net Profit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವ ದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಹೆಗ್ಗಳಿಕೆಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI Results) 2022 ರ ಅಕ್ಟೋಬರ್-ಡಿಸೆಂಬರ್‌ ಅವಧಿಯಲ್ಲಿ 14,205 ಕೋಟಿ ರೂ. ನಿವ್ವಳ ಲಾಭ (Net profit) ಗಳಿಸಿದೆ. ಇದು ಎಸ್‌ಬಿಐನ ಇತಿಹಾಸದಲ್ಲಿಯೇ ಗರಿಷ್ಠ ತ್ರೈಮಾಸಿಕ ನಿವ್ವಳ ಲಾಭವಾಗಿದೆ. ಮಾರುಕಟ್ಟೆಯ ನಿರೀಕ್ಷೆಯನ್ನೂ ಮೀರಿ ಎಸ್‌ಬಿಐ 64% ಏರಿಕೆಯ ಲಾಭ ದಾಖಲಿಸಿರುವುದು ವಿಶೇಷ.

ಎಸ್‌ಬಿಐನ ನಿವ್ವಳ ಬಡ್ಡಿ ಆದಾಯ 24% ಏರಿದ್ದು, 38,068 ಕೋಟಿ ರೂ.ಗೆ ಜಿಗಿದಿದೆ. ಇದು ನಿರೀಕ್ಷೆಯ ರೀತಿಯಲ್ಲಿಯೇ ಲಭಿಸಿದೆ. ಬ್ಯಾಂಕ್‌ ವಸೂಲಾಗದ ಸಾಲಗಳ ನಿರ್ವಹಣೆಗೆ 5,761 ಕೋಟಿ ರೂ.ಗಳನ್ನು ಪ್ರತ್ಯೇಕವಾಗಿ ತೆಗೆದಿಟ್ಟಿತ್ತು. (provision)

ಅಕ್ಟೋಬರ್-ಡಿಸೆಂಬರ್‌ ತ್ರೈಮಾಸಿಕದಲ್ಲಿ ಎಸ್‌ಬಿಐನ ವಸೂಲಾಗದ ಸಾಲದ ಪ್ರಮಾಣ 3.14%ಕ್ಕೆ ಇಳಿಕೆಯಾಗಿತ್ತು. ಇದಕ್ಕೂ ಹಿಂದಿನ ವರ್ಷ 4.50% ಇತ್ತು. ಸಾಲ ವಿತರಣೆ 17.60% ಪ್ರಗತಿ ದಾಖಲಿಸಿತ್ತು. ಸಣ್ಣ ಉದ್ದಿಮೆ ಮತ್ತು ಕೃಷಿಗೆ ಸಾಲ ವಿತರಣೆಯ ಪ್ರಮಾಣ 14% ಏರಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

read your daily horoscope predictions for march 3rd 2024
Koo

ಚಂದ್ರನು ಭಾನುವಾರವೂ ಧನಸ್ಸು ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ರಾಶಿಯವರು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಕುಟುಂಬ ಸದಸ್ಯರ ಆರೋಗ್ಯದ ಕುರಿತು ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಪ್ರೀತಿ-ಪಾತ್ರರೊಡನೆ ಪ್ರಯಾಣ ಬೆಳೆಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ತಕ್ಕ ಮಟ್ಟಿಗಿನ ಲಾಭ ಸಿಗಲಿದೆ. ಆದರೆ ಇಂದು ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (03-03-2024)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ
ತಿಥಿ: ಸಪ್ತಮಿ 08:44 ವಾರ: ಭಾನುವಾರ
ನಕ್ಷತ್ರ: ಅನುರಾಧ 15:54 ಯೋಗ: ಹರ್ಷಣ 17:23
ಕರಣ: ಭವ 08:44 ಅಮೃತ ಕಾಲ: ಭಾನುವಾರ ಬೆಳಗಿನ ಜಾವ 04:59ರಿಂದ 06:40ರವರೆಗೆ
ದಿನದ ವಿಶೇಷ: ಶ್ರೀ ಸಿದ್ಧಗಂಗಾ ಜಾತ್ರೆ

ಸೂರ್ಯೋದಯ : 6:34   ಸೂರ್ಯಾಸ್ತ : 06:29

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಕುಟುಂಬ ಸದಸ್ಯರ ಆರೋಗ್ಯದ ಕುರಿತು ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಸ್ವಲ್ಪ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಿರಿಯರು ಆರೋಗ್ಯದ ಕುರಿತು ಕಾಳಜಿ ವಹಿಸಲೇಬೇಕು. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯುವಿರಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕಾರ್ಯನಿಮಿತ್ತ ಪ್ರಯಾಣವು ಫಲಪ್ರದವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಸಂತಸದ ಸುದ್ದಿಯು ನಿಮ್ಮ ಮನಸ್ಸಿಗೆ ಇನ್ನಷ್ಟು ಮುದ ನೀಡಲಿದೆ. ಮನೆಯ ಅಗತ್ಯ ವಸ್ತುಗಳ ಖರೀದಿಯಿಂದಾಗಿ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಉಡುಗೊರೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲಿದೆ. ಕುಟುಂಬ ಸದಸ್ಯರ ಒಳ್ಳೆಯ ಸಲಹೆ ನಿಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಹೂಡಿಕೆ ವ್ಯವಹಾರ ತಕ್ಕ ಮಟ್ಟಿಗಿನ ಲಾಭ ತರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿವೆ. ಆರೋಗ್ಯ ಮಧ್ಯಮವಾಗಿರಲಿದೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿ ಇರುವಿರಿ. ಹಿಂದೆ ಹೂಡಿಕೆ ಮಾಡಿದ ವ್ಯವಹಾರಗಳು ಈಗ ಲಾಭ ತಂದು ಕೊಡಲಿದೆ. ಉದ್ಯೋಗದ ಭರವಸೆಯಲ್ಲಿ ಇರುವವರಿಗೆ ಶುಭ ಸುದ್ದಿ ಸಿಗಲಿದೆ. ಕಲಾ ಪ್ರತಿಭೆಗಳಿಗೆ ಅವಕಾಶದ ಜತೆಗೆ ಪ್ರೋತ್ಸಾಹ ಸಿಗಲಿದೆ. ಸಾಮಾಜಿಕವಾಗಿ ನಿಮಗೆ ಗೌರವ ಪುರಸ್ಕಾರಗಳು ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕಳೆದು ಹೋದ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ಹತಾಶೆ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು. ಸಾಧ್ಯವಾದಷ್ಟೂ ವಿಶ್ರಾಂತಿ ತಗೆದುಕೊಳ್ಳಲು ಪ್ರಯತ್ನಿಸಿ. ದಿನದ ಮಟ್ಟಿಗೆ ಯಾವುದೇ ಹೊಸ ವ್ಯವಹಾರಗಳಲ್ಲಿ ಕೈ ಹಾಕದಿರಿ. ಸಹದ್ಯೋಗಿಗಳ ಸಹಕಾರ ಸಿಗಲಿದೆ. ಕೆಲಸದ ಸಂಬಂಧ ಮಾಡುವ ಪ್ರಯಾಣ ಲಾಭ ತರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಪ್ರೀತಿ-ಪಾತ್ರರೊಡನೆ ಪ್ರಯಾಣ ಬೆಳೆಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ತಕ್ಕ ಮಟ್ಟಿಗಿನ ಲಾಭ ಸಿಗಲಿದೆ. ಆದರೆ ಇಂದು ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನಿಮ್ಮ ಸಂಬಂಧಿಗಳ ಆರೋಗ್ಯದ ಕುರಿತು ವಿಚಾರ ಮಾಡುವಿರಿ. ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಜವಾಬ್ದಾರಿಗಳು ಹೆಚ್ಚಾಗಲಿವೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ, ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ ಜೀವನದ ರಕ್ಷಣೆ ನಿಮ್ಮ ನಿಜವಾದ ಹೊಣೆಗಾರಿಕೆಯೆಂದು ಅರ್ಥ ಮಾಡಿಕೊಳ್ಳಿ. ಬಂಧು ಮಿತ್ರರೊಡನೆ ಪ್ರೀತಿಯಿಂದ ವರ್ತಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ಉತ್ಸಾಹ ಕಳೆಯಬಹುದು, ಆದಷ್ಟು ಕುಲದೇವರ ದರ್ಶನ ಹಾಗೂ ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ಕುಟುಂಬದ ಸದಸ್ಯರ ವಿರೋಧದಿಂದಾಗಿ ಕಾರ್ಯದಲ್ಲಿ ಅಡೆತಡೆ ಇರಲಿದೆ. ವ್ಯಾಪಾರ ವ್ಯವಹಾರ ನಡೆಸುವವರಿಗೆ ಉತ್ತಮ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಒತ್ತಡದ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ನಿಮ್ಮ ಸಂತೋಷ ಕ್ಷೀಣಿಸುವುದು. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

ಬಿಜೆಪಿ ಪಟ್ಟಿ ಪ್ರಕಟ: ತಿರುವನಂತಪುರಂನಲ್ಲಿ ರಾಜೀವ್‌ ಚಂದ್ರಶೇಖರ್‌ Vs ಶಶಿ ತರೂರ್?‌

ತಿರುವನಂತಪುರಂ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರದ ಸಂಸದ ಶಶಿ ತರೂರ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಜಿದ್ದಾಜಿದ್ದಿನ ಕದನ ಏರ್ಪಡಲಿದೆ.

VISTARANEWS.COM


on

Shashi Tharoor And Rajeev Chandrasekhar
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2023) ಹಿನ್ನೆಲೆಯಲ್ಲಿ ಬಿಜೆಪಿಯು ಅಭ್ಯರ್ಥಿಗಳ ಪಟ್ಟಿ (BJP Candidates List) ಬಿಡುಗಡೆ ಮಾಡಿದೆ. 195 ಅಭ್ಯರ್ಥಿಗಳಲ್ಲಿ ಹೊಸ ಮುಖಗಳಿಗೆ, ಯುವಕರಿಗೆ, ಮಹಿಳೆಯರಿಗೆ ಆದ್ಯತೆ ನೀಡಿದೆ. ಅದರಲ್ಲೂ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrashekhar) ಅವರನ್ನು ತಿರುವನಂತಪುರಂನಿಂದ ಬಿಜೆಪಿ ಕಣಕ್ಕಿಳಿಸಿದ್ದು, ಈ ಕ್ಷೇತ್ರದ ಸಂಸದರಾಗಿರುವ ಶಶಿ ತರೂರ್‌ (Shashi Tharoor) ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಭಾರಿ ಕದನ ನಡೆಯಲಿದೆ.

ತಿರುವನಂತಪುರಂ ಕ್ಷೇತ್ರದ ಹಾಲಿ ಸಂಸದರಾಗಿರುವ ಶಶಿ ತರೂರ್‌ ಅವರು ಕ್ಷೇತ್ರದಲ್ಲಿ 2009ರಿಂದಲೂ ಸಂಸದರಾಗಿದ್ದಾರೆ. ಇವರು ಸತತವಾಗಿ ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ಹಾಗಾಗಿ, ಈ ಬಾರಿಯೂ ಕಾಂಗ್ರೆಸ್‌ ಶಶಿ ತರೂರ್‌ ಅವರಿಗೇ ಟಿಕೆಟ್‌ ನೀಡುವ ಸಾಧ್ಯತೆ ಇದೆ. ಹಾಗೊಂದು ವೇಳೆ, ಶಶಿ ತರೂರ್‌ ಅವರಿಗೆ ಟಿಕೆಟ್‌ ನೀಡಿದರೆ, ಕ್ಷೇತ್ರದಲ್ಲಿ ರಾಜೀವ್‌ ಚಂದ್ರಶೇಖರ್‌ ಅವರು ಶಶಿ ತರೂರ್‌ ಅವರಿಗೆ ಸವಾಲೊಡ್ಡಲಿದ್ದಾರೆ. ಇಬ್ಬರೂ ಕೇರಳ ಮೂಲದವರಾಗಿದ್ದು, ಜಿದ್ದಾಜಿದ್ದಿನ ಕದನ ಏರ್ಪಡಲಿದೆ.

ಕಣಕ್ಕಿಳಿದಿರುವ ಗಣ್ಯರು

ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಲಖನೌ, ಸ್ಮೃತಿ ಇರಾನಿ ಅವರು ಅಮೇಥಿಯಿಂದ, ಕಿರಣ್‌ ರಿಜಿಜು ಅರುಣಾಚಲ ಪಶ್ಚಿಮ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ, ಕೇರಳದ ಪಥಣಂತಿಟ್ಟದಿಂದ ಎ.ಕೆ. ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ.

ಉತ್ತರ ಪ್ರದೇಶದ ಮಥುರಾದಿಂದ ಹೇಮಾಮಾಲಿನಿ, ಉನ್ನಾವೋದಿಂದ ಸಾಕ್ಷಿ ಮಹಾರಾಜ್‌, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜೀವ್‌ ಕುಮಾರ್‌, ಸಿಕಂದರಾಬಾದ್‌ ಜಿ. ಕಿಶನ್‌ ರೆಡ್ಡಿ ಅವರಿಗೂ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ವಿದಿಶಾದಿಂದ ಟಿಕೆಟ್‌ ನೀಡಲಾಗಿದೆ. ಇನ್ನುಳಿದಂತೆ ದೆಹಲಿ ಉತ್ತರ ಮನೋಜ್‌ ತಿವಾರಿ ಅವರು ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ್‌ ನಾಯಕ್‌ ಅವರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್‌

ಬಿಜೆಪಿಯು ಈ ಬಾರಿ ಹಲವು ಬದಲಾವಣೆ ಮಾಡಿದೆ. ಅದರಲ್ಲೂ, ನವದೆಹಲಿ ಕ್ಷೇತ್ರದ ಸಂಸದೆ, ಸಚಿವೆಯೂ ಆಗಿರುವ ಮೀನಾಕ್ಷಿ ಲೇಖಿ ಅವರನ್ನು ಕೈಬಿಡಲಾಗಿದೆ. ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವೆ ಸುಷ್ಮಾ ಸ್ವರಾಜ್‌ ಪುತ್ರಿ ಬನ್ಸೂರಿ ಸ್ವರಾಜ್‌ ಅವರಿಗೆ ಸ್ಪರ್ಧಿಸಲಿದ್ದಾರೆ. ಇನ್ನು ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರನ್ನು ಕೈಬಿಡಲಾಗಿದ್ದು, ಅಲೋಕ್‌ ಶರ್ಮಾ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: BJP Candidates List: ಲೋಕಸಭೆಗೆ ಬಿಜೆಪಿಯ 195 ಅಭ್ಯರ್ಥಿಗಳ ಪಟ್ಟಿ ರಿಲೀಸ್; ಇವರೇ ಕ್ಯಾಂಡಿಡೇಟ್ಸ್

Continue Reading

ದೇಶ

Narendra Modi: ಬಿಜೆಪಿ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆಗೆ ಮೋದಿ ಸಂದೇಶ; ಏನದು?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಯುವಕರು, ಮಹಿಳೆಯರಿಗೆ ಪಟ್ಟಿಯಲ್ಲಿ ಆದ್ಯತೆ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ಬಳಿಕ ನರೇಂದ್ರ ಮೋದಿ ಅವರು ಸಂದೇಶ ರವಾನಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (BJP Candidates List) ಬಿಡುಗಡೆ ಮಾಡುವ ಮೂಲಕ ಲೋಕಸಭೆ ಚುನಾವಣೆಗೆ (Lok Sabha Election 2024) ಅಧಿಕೃತವಾಗಿ ರಣಕಹಳೆ ಊದಿದೆ. ಜಾತಿ, ಪ್ರಭಾವ, ಯುವಕರು, ಮಹಿಳೆಯರು ಸೇರಿ ಹಲವು ಲೆಕ್ಕಾಚಾರಗಳ ಬಳಿಕ ಬಿಜೆಪಿಯು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜನರಿಗೆ, ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. ಹಾಗೆಯೇ, ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯು ಕೆಲ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಎಲ್ಲರಿಗೂ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ, ಬಡವರಿಗೆ ಸಕಲ ಸೌಲಭ್ಯಗಳನ್ನು ನೀಡುವುದು ಸೇರಿ ಹಲವು ದಿಸೆಯಲ್ಲಿ ನೀವು ಈಗಿನಿಂದಲೇ ಸಜ್ಜಾಗಬೇಕು. ದೇಶದ 140 ಕೋಟಿ ಜನರ ಆಶೀರ್ವಾದವು ನಿಮ್ಮ ಮೇಲೆ ಇರುತ್ತದೆ ಎಂಬ ವಿಶ್ವಾಸವಿದೆ. ವಿಕಸಿತ ಭಾರತ ನಿರ್ಮಾಣಕ್ಕಾಗಿ ನೀವು ಈಗಿನಿಂದಲೇ ಕೆಲಸ ಆರಂಭಿಸಿ” ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಹಾಗೆಯೇ, ವಾರಾಣಸಿಯಿಂದಲೇ ಮೂರನೇ ಬಾರಿ ಸ್ಪರ್ಧಿಸುತ್ತಿರುವ ಕುರಿತು ಕೂಡ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕೇಂದ್ರೀಯ ಚುನಾವಣೆ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಪ್ರಕಟಿಸಲಾದ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬಿಸಿಯ 57 ಅಭ್ಯರ್ಥಿಗಳಿಗೆ, ಎಸ್‌ಸಿ 27, ಎಸ್‌ಟಿಯ 18 ಅಭ್ಯರ್ಥಿಗಳಿಗೆ ಬಿಜೆಪಿಯು ಟಿಕೆಟ್‌ ನೀಡಿದೆ. ಇನ್ನು 195 ಅಭ್ಯರ್ಥಿಗಳಲ್ಲಿ 28 ಮಹಿಳೆಯರು ಹಾಗೂ 47 ಯುವಕರಿಗೆ ಬಿಜೆಪಿಯು ಮಣೆ ಹಾಕಿದೆ. 34 ಕೇಂದ್ರ ಸಚಿವರಿಗೂ ಪಕ್ಷದ ಹೈಕಮಾಂಡ್‌ ಟಿಕೆಟ್‌ ನೀಡಿದೆ. ರಾಜ್ಯಸಭೆಯಿಂದ ಆಯ್ಕೆಯಾಗಿ, ಮಂತ್ರಿಯಾಗಿದ್ದ ರಾಜೀವ್‌ ಚಂದ್ರಶೇಖರ್‌ ಅವರಿಗೆ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

ಇದನ್ನೂ ಓದಿ: BJP Candidates List: ಸುಷ್ಮಾ ಸ್ವರಾಜ್‌ ಪುತ್ರಿಗೆ ಟಿಕೆಟ್; ಯಾರು ಇನ್?‌ ಯಾರು ಔಟ್?‌

16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್‌ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್‌ ನಿಕೋಬಾರ್‌ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

WPL Points Table: ಹೀನಾಯ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಕುಸಿತ ಕಂಡ ಆರ್​ಸಿಬಿ

ನಾಲ್ಕನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್​​(Mumbai Indians) ತಂಡ ಆರ್​ಸಿಬಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ(WPL Points Table) ಅಗ್ರಸ್ಥಾನಕ್ಕೇರಿದೆ.

VISTARANEWS.COM


on

Sophie Devine and Smriti Mandhana warm up ahead of their fourth game
Koo

ಬೆಂಗಳೂರು: ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​​(Mumbai Indians) ಎದುರಿದ ಪಂದ್ಯದಲ್ಲಿ ಹೀನಾಯ 7 ವಿಕೆಟ್​ಗಳ ಸೋಲು ಕಂಡ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bangalore) ತಂಡ ಅಂಕಪಟ್ಟಿಯಲ್ಲಿ(WPL Points Table) ಭಾರೀ ಕುಸಿತ ಕಂಡಿದೆ. ನಾಲ್ಕನೇ ಸ್ಥಾನದಲ್ಲಿದ್ದ ಮುಂಬೈ ಈ ಗೆಲುವಿನಿಂದ 6 ಅಂಕ ಸಂಪಾದಿಸಿ ಅಗ್ರಸ್ಥಾನಕ್ಕೇರಿದೆ. ಆರ್​ಸಿಬಿ ನಾಲ್ಕನೇ ಸ್ಥಾನಕ್ಕೆ ಜಾರಿದೆ.

ಈ ಪಂದ್ಯದಕ್ಕೂ ಮುನ್ನ ಮೆಗ್​ ಲ್ಯಾನಿಂಗ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಅಗ್ರಸ್ಥಾನದಲ್ಲಿತ್ತು. ಆರ್​ಸಿಬಿ 4 ಅಂಕದೊಂದಿಗೆ ದ್ವಿತೀಯ ಸ್ಥಾನಿಯಾಗಿತ್ತು. ಆದರೆ ಮುಂಬೈ ತಂಡದ ಗೆಲುವಿನಿಂದಾಗಿ ಇದೀಗ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ ಸಂಭವಿಸಿದೆ. ನೂತನ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 2ನೇ ಸ್ಥಾನಕ್ಕೆ ಜಾರಿದರೆ, ಆರ್​ಸಿಬಿ 2 ಸ್ಥಾನ ಕುಸಿತ ಕಂಡು ನಾಲ್ಕನೇ ಸ್ಥಾನದಲ್ಕಿ ಕಾಣಿಸಿಕೊಂಡಿದೆ. ಯುಪಿ ತಂಡ ಈ ಹಿಂದೆ ಇದ್ದ ಮೂರನೇ ಸ್ಥಾನದಲ್ಲಿಯೇ ಮುಂದುವರಿದಿದೆ.

ಇದನ್ನೂ ಓದಿ WPL 2024: ಸತತ 2ನೇ ಸೋಲಿಗೆ ತುತ್ತಾದ ಆರ್​ಸಿಬಿ; ಮುಂಬೈಗೆ 7 ವಿಕೆಟ್​ ಗೆಲುವು

ನೂತನ ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಮುಂಬೈ ಇಂಡಿಯನ್ಸ್​4316 (+0.402)
ಡೆಲ್ಲಿ ಕ್ಯಾಪಿಟಲ್ಸ್​3214 (+1.271)
ಯುಪಿ ವಾರಿಯರ್ಸ್​​3214 (+0.211)
ಆರ್​ಸಿಬಿ​​4224 (-0.015)
ಗುಜರಾತ್​ ಜೈಂಟ್ಸ್​3030 (-1.995)


ಸತತ 2ನೇ ಸೋಲು ಕಂಡ ಆರ್​ಸಿಬಿ


ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಡಬ್ಲ್ಯುಪಿಎಲ್​ 2ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ತಂಡ ಆರ್​ಸಿಬಿಯನ್ನು ​ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ನಿಗದಿತ 20 ಓವರ್​ ಬ್ಯಾಟಿಂಗ್​ ಮಾಡಿದ ಆರ್​ಸಿಬಿ 6 ವಿಕೆಟ್​ಗೆ 131 ರನ್​ ಮಾತ್ರ ಕಲೆ ಹಾಕಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಮುಂಬೈ 15.1 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಆರ್​ಸಿಬಿಗೆ ತವರಿನಲ್ಲಿ ಎದುರಾದ ಸತತ 2ನೇ ಸೋಲು ಇದಾಗಿದೆ. ಇದಕ್ಕೂ ಮುನ್ನ ಡೆಲ್ಲಿ ವಿರುದ್ಧ ಸೋಲು ಕಂಡಿತ್ತು.

Continue Reading
Advertisement
read your daily horoscope predictions for march 3rd 2024
ಭವಿಷ್ಯ37 mins ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Yuva Movie song
ಕರ್ನಾಟಕ5 hours ago

Yuva Rajkumar: ಅಭಿಮಾನಿಗಳಿಂದ ʼಯುವʼ ಚಿತ್ರದ ಮೊದಲ ಸಾಂಗ್‌ ರಿಲೀಸ್‌; ಮಾಸ್ ಲುಕ್‌ನಲ್ಲಿ ಯುವ ರಾಜಕುಮಾರ್

Shashi Tharoor And Rajeev Chandrasekhar
ದೇಶ5 hours ago

ಬಿಜೆಪಿ ಪಟ್ಟಿ ಪ್ರಕಟ: ತಿರುವನಂತಪುರಂನಲ್ಲಿ ರಾಜೀವ್‌ ಚಂದ್ರಶೇಖರ್‌ Vs ಶಶಿ ತರೂರ್?‌

HIGH dose injection
ಕರ್ನಾಟಕ6 hours ago

ಕೃತಕ ಗರ್ಭಧಾರಣೆಗೆ ಹೈ ಡೋಸ್ ಇಂಜೆಕ್ಷನ್‌; ಖಾಸಗಿ ಆಸ್ಪತ್ರೆ ಎಡವಟ್ಟಿಗೆ ಕಣ್ಣು‌ ಕಳೆದುಕೊಂಡ ಮಹಿಳೆ!

Narendra Modi
ದೇಶ6 hours ago

Narendra Modi: ಬಿಜೆಪಿ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆಗೆ ಮೋದಿ ಸಂದೇಶ; ಏನದು?

Sophie Devine and Smriti Mandhana warm up ahead of their fourth game
ಕ್ರಿಕೆಟ್6 hours ago

WPL Points Table: ಹೀನಾಯ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಕುಸಿತ ಕಂಡ ಆರ್​ಸಿಬಿ

Pralhad Joshi
ಕರ್ನಾಟಕ7 hours ago

ಕುರುಬರಿಗೆ ಎಸ್‌ಟಿ ಮೀಸಲಾತಿ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಪ್ರಲ್ಹಾದ್‌ ಜೋಶಿ ಭರವಸೆ

Nat Sciver-Brunt celebrates the dismissal of S Meghana
ಕ್ರೀಡೆ7 hours ago

WPL 2024: ಸತತ 2ನೇ ಸೋಲಿಗೆ ತುತ್ತಾದ ಆರ್​ಸಿಬಿ; ಮುಂಬೈಗೆ 7 ವಿಕೆಟ್​ ಗೆಲುವು

Banavasi Kadambotsava Minister Mankala Vaidya inspected the preparations
ಉತ್ತರ ಕನ್ನಡ7 hours ago

Uttara Kannada News: ಬನವಾಸಿ ಕದಂಬೋತ್ಸವ; ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವ ಮಂಕಾಳ ವೈದ್ಯ

police 1
ಕರ್ನಾಟಕ8 hours ago

ಐಪಿಎಸ್ ಅಧಿಕಾರಿಯಾದ ಕ್ಯಾನ್ಸರ್‌ ಪೀಡಿತ ಬಾಲಕ; ಕನಸು ಈಡೇರಿಸಿ ಮಾನವೀಯತೆ ಮೆರೆದ ಪೊಲೀಸರು

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for march 3rd 2024
ಭವಿಷ್ಯ37 mins ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು12 hours ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು16 hours ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು1 day ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು2 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ2 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ3 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

ಟ್ರೆಂಡಿಂಗ್‌