SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್ - Vistara News

ವಾಣಿಜ್ಯ

SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

SEBI: ಅಮೆರಿಕ ಮೂಲದ ಹಿಂಡನ್‌ಬರ್ಗ್‌ ರಿಸರ್ಚ್ ಸಂಸ್ಥೆಯ ಅದಾನಿ ವರದಿಗೆ ಸಂಬಂಧಿಸಿದಂತೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಶೋಕಾಸ್ ನೋಟಿಸ್ ನೀಡಿದೆ. 46 ಪುಟಗಳ ಶೋಕಾಸ್ ನೋಟಿಸ್ ಅನ್ನು ಜೂನ್ 27ರಂದು ನೀಡಲಾಗಿದೆ ಎಂದು ಹಿಂಡನ್‌ಬರ್ಗ್‌ನ ಮೂಲಗಳು ತಿಳಿಸಿವೆ.

VISTARANEWS.COM


on

SEBI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಅಮೆರಿಕ ಮೂಲದ ಹಿಂಡನ್‌ಬರ್ಗ್‌ ರಿಸರ್ಚ್ (Hindenburg research) ಸಂಸ್ಥೆಯ ಅದಾನಿ ವರದಿಗೆ ಸಂಬಂಧಿಸಿದಂತೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ(SEBI) ಶೋಕಾಸ್ ನೋಟಿಸ್ ನೀಡಿದೆ. 46 ಪುಟಗಳ ಶೋಕಾಸ್ ನೋಟಿಸ್ ಅನ್ನು ಜೂನ್ 27ರಂದು ನೀಡಲಾಗಿದೆ ಎಂದು ಹಿಂಡನ್‌ಬರ್ಗ್‌ನ ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಕ್ರಿಯಿಸಿದ ಹಿಂಡನ್‌ಬರ್ಗ್‌, “ಪೂರ್ವ ನಿರ್ದೇಶಿತ ಉದ್ದೇಶವನ್ನು ಪೂರೈಸಲು ರೂಪಿಸಿರುವ ಈ ಶೋಕಾಸ್‌ ನೋಟಿಸ್‌ ಅನ್ನು ನಾವು ಅಸಂಬದ್ಧ ಎಂದು ಭಾವಿಸುತ್ತೇವೆ. ಭ್ರಷ್ಟಾಚಾರವನ್ನು ಬಯಲಿಗೆಳೆಯುವವರನ್ನು ಬೆದರಿಸಿ ಮೌನಗೊಳಿಸುವ ಪ್ರಯತ್ನ ಇದಾಗಿದೆ. ಭಾರತದ ಅತ್ಯಂತ ಪ್ರಬಲ ಸಂಸ್ಥೆಯೊಂದು ವಂಚನೆ ಎಸಗಿದೆ” ಎಂದು ಎಂದು ಆರೋಪಿಸಿದೆ.

ʼʼಭಾರತದಲ್ಲಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸುವ ಭ್ರಷ್ಟಾಚಾರ ಮತ್ತು ವಂಚನೆಯನ್ನು ಬಹಿರಂಗಪಡಿಸುವವರ ಬಾಯಿ ಮುಚ್ಚಿಸುವ ಪ್ರಯತ್ನ ಇದಾಗಿದೆ. ಸೆಬಿ ಕಳುಹಿಸಿದ ನೋಟಿಸ್‌ನಲ್ಲಿ ಕೆ-ಇಂಡಿಯಾ ಆಪೋರ್ಚೂನಿಟೀಸ್ ಫಂಡ್ ಹೆಸರನ್ನು ಪ್ರಸ್ತಾಪಿಸಿದೆ. ಆದರೆ ಅದು ಕೋಟಕ್ ಮಹೀಂದ್ರ ಬ್ಯಾಂಕ್ ಎಂದು ಸ್ಪಷ್ಟವಾಗಿ ಹೇಳಿಲ್ಲ ಯಾಕೆ? ಮತ್ತೊಬ್ಬ ಪ್ರಭಾವಶಾಲಿ ವ್ಯಕ್ತಿಯನ್ನು ರಕ್ಷಿಸುವ ಕೆಲಸ ಇದುʼʼ ಎಂದು ಹಿಂಡನ್‌ಬರ್ಗ್‌ ರಿಸರ್ಚ್ ಸಂಸ್ಥೆ ಖಾರವಾಗಿ ಪ್ರತಿಕ್ರಿಯಿಸಿದೆ.

ಕೆ ಇಂಡಿಯಾ ಆಪೋರ್ಚುನಿಟೀಸ್ ಫಂಡ್ ಅನ್ನು ಕೋಟಕ್ ಮಹೀಂದ್ರ ಇನ್ವೆಸ್ಟ್​ಮೆಂಟ್ ಲಿ ಸಂಸ್ಥೆ ನಿರ್ವಹಿಸುತ್ತದೆ. ಇದು ಉದಯ್ ಕೋಟಕ್ ಅವರ ಕೋಟಕ್ ಮಹೀಂದ್ರ ಬ್ಯಾಂಕ್ ಅಧೀನದಲ್ಲಿರುವ ಸಂಸ್ಥೆಯಾಗಿದೆ. ಕುತೂಹಲ ಎಂದರೆ ಉದಯ್ ಕೋಟಕ್ ಅವರು 2017ರಲ್ಲಿ ಸೆಬಿಯ ಕಾರ್ಪೊರೇಟ್ ಗವರ್ನೆನ್ಸ್ ಕಮಿಟಿಯ ನೇತೃತ್ವ ವಹಿಸಿದ್ದರು. ಇನ್ನು ತನ್ನ ವಿವಿಧ ನೆಟ್‌ವರ್ಕ್‌ಗಳನ್ನು ಬಳಸಿ ಅದಾನಿ ಸ್ಟಾಕ್​ಗಳನ್ನು ಶಾರ್ಟ್ ಮಾಡಿದ್ದೇವೆ ಎಂದು ಸೆಬಿ ಮಾಡಿರುವ ಆರೋಪವನ್ನು ಹಿಂಡನ್‌ಬರ್ಗ್‌ ನಿರಾಕರಿಸಿದೆ.

ಏನಿದು ಹಿಂಡನ್‌ಬರ್ಗ್‌ ವರದಿ ಕೇಸ್?‌

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ಸಂಚಲನ ಮೂಡಿಸಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ, ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಹಿಂಡನ್‌ಬರ್ಗ್‌ ಕೇಸ್; ಅದಾನಿಗೆ ಬಿಗ್‌ ರಿಲೀಫ್, ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದ ಸುಪ್ರೀಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Job Alert: ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು (Bank of Baroda Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು (Job Alert).

ಹುದ್ದೆಗಳ ವಿವರ

627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ
ಆರ್ಕಿಟೆಕ್ಟ್: 8 ಹುದ್ದೆ
ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ
ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ
ಸೀನಿಯರ್ ಮ್ಯಾನೇಜರ್: 22 ಹುದ್ದೆ
ಮ್ಯಾನೇಜರ್: 11 ಹುದ್ದೆ
ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ
ಗ್ರೂಪ್ ಹೆಡ್: 4 ಹುದ್ದೆ
ಟೆರಿಟರಿ ಹೆಡ್: 8 ಹುದ್ದೆ
ಸೀನಿಯರ್ ರಿಲೇಶನ್‌ಶಿಪ್‌ ಮ್ಯಾನೇಜರ್: 234 ಹುದ್ದೆ
ಇ-ವೆಲ್ತ್ ರಿಲೇಶನ್‌ಶಿಪ್‌ ಮ್ಯಾನೇಜರ್: 26 ಹುದ್ದೆ
ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ
ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್‌ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ
ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ
ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 19 ಹುದ್ದೆ
ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 15 ಹುದ್ದೆ
ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ
ರಿಲೇಶನ್‌ಶಿಪ್‌ ಮ್ಯಾನೇಜರ್: 66 ಹುದ್ದೆ
ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ
ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್‌ – 3 ಹುದ್ದೆಗಳಿವೆ.

ವಿದ್ಯಾರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಎಸ್ ವರ್ಗಗಳಿಗೆ ಸೇರಿದ ಅರ್ಜಿದಾರರು 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ವರ್ಗಗಳಿಗೆ ಸೇರಿದ ಅರ್ಜಿದಾರರು 199 ರೂ. ಪಾವತಿಸಬೇಕಾಗುತ್ತದೆ. ಇದಕ್ಕೆ ತೆರಿಗೆ ಪ್ರತ್ಯೇಕ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24 ವರ್ಷಗಳಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ನಿಯಮಿತ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗುತ್ತಿಗೆ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗಮನಿಸಿ ಅರ್ಜಿ ಸಲ್ಲಿಕೆ ದಿನಾಂಕ ಬದಲಾಗಿದ್ದು, ಉಳಿದೆಲ್ಲ ವಿವರಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.bankofbaroda.in/career/current-opportunities)
  • ನೀವು ಅರ್ಜಿ ಸಲ್ಲಿಸಬೇಕಿರುವ ಹುದ್ದೆಯ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Continue Reading

ಚಿನ್ನದ ದರ

Gold Rate Today: ಕೈ ಸುಡುತಿದೆ ಚಿನ್ನದ ದರ; ಆಭರಣ ಖರೀದಿಸುವ ಮುನ್ನ ಬೆಲೆ ಚೆಕ್‌ ಮಾಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜುಲೈ 4) ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮಂಗಳವಾರ ಹೆಚ್ಚಾಗಿದ್ದ ದರ ಇಂದು ಮತ್ತೊಮ್ಮೆ ಏರಿಕೆಯಾಗಿ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 65 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 71 ಹೆಚ್ಚಾಗಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,700 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,309ಕ್ಕೆ ತಲುಪಿದೆ. ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜುಲೈ 4) ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. (Gold Rate Today). ಮಂಗಳವಾರ ಹೆಚ್ಚಾಗಿದ್ದ ದರ ಇಂದು ಮತ್ತೊಮ್ಮೆ ಏರಿಕೆಯಾಗಿ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 65 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 71 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,700 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,309ಕ್ಕೆ ತಲುಪಿದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,600. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,000 ಮತ್ತು ₹ 6,70,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,472 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,090 ಮತ್ತು ₹ 7,30,900 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,715 ₹ 7,324
ಮುಂಬೈ₹ 6,700 ₹ 7,309
ಬೆಂಗಳೂರು₹ 6,700 ₹ 7,309
ಚೆನ್ನೈ₹ 6,760 ₹ 7,375

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.60 ಹಾಗೂ 8 ಗ್ರಾಂಗೆ ₹ 724.80 ಇದೆ. 10 ಗ್ರಾಂಗೆ ₹ 906 ಹಾಗೂ 1 ಕಿಲೋಗ್ರಾಂಗೆ ₹ 90,600 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

    Continue Reading

    ವಾಣಿಜ್ಯ

    Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

    Stock Market: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ ಕೂಡ ಸೆನ್ಸೆಕ್ಸ್  ಮತ್ತು ನಿಫ್ಟಿ ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ. ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು.

    VISTARANEWS.COM


    on

    Stock Market
    Koo

    ಮುಂಬೈ: ಭಾರತೀಯ ಷೇರು ಮಾರುಕಟ್ಟೆ (Stock Market)ಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ (ಜುಲೈ 3) ಕೂಡ ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ (Nifty) ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ.

    ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು. ಜತೆಗೆ ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿತ್ತು. ಜಾಗತಿಕವಾಗಿ ಪೂರಕ ವಾತಾವರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈ ಸಂಚಲನ ಮೂಡಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೂನ್ 10ರ ನಂತರ ಇಲ್ಲಿಯವರೆಗೆ ಸೆನ್ಸೆಕ್ಸ್‌ನಲ್ಲಿ 3,000ಕ್ಕೂ ಹೆಚ್ಚು ಪಾಯಿಂಟ್‌ಗಳು ಏರಿವೆ. ವಿಶೇಷ ಎಂದರೆ 1980ರ ದಶಕದಲ್ಲಿ ಪ್ರಾರಂಭವಾದ ನಂತರ ಸೆಕ್ಸೆಕ್ಸ್‌ ಮೊದಲ ಬಾರಿಗೆ 80,400ರ ಗಡಿಯನ್ನು ಸಮೀಪಿಸಿದೆ. ಭಾರತದಲ್ಲಿ ಮಾನ್ಸೂನ್ ಪ್ರಗತಿಯೂ ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

    ಎಚ್‌ಸಿಎಲ್‌ ಟೆಕ್, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್, ಎಂ & ಎಂ, ಟಿಸಿಎಸ್, ಬಜಾಜ್ ಫೈನಾನ್ಸ್, ಟಾಟಾ ಸ್ಟೀಲ್ ಮತ್ತು ಟೆಕ್ ಎಂ ಮುಂತಾದ ಪ್ರಮುಖ ಲಾರ್ಜ್ ಕ್ಯಾಪ್ ಷೇರುಗಳಲ್ಲಿ ಶೇ. 1.35ರಷ್ಟು ಏರಿಕೆಯಾಗಿದೆ. ಜತೆಗೆ ಬಿಎಸ್ಇ ಮಿಡ್‌ಕ್ಯಾಪ್‌ ಮತ್ತು ಸ್ಮಾಲ್‌ಕ್ಯಾಪ್‌ ಸೆನ್ಸೆಕ್ಸ್ ಕ್ರಮವಾಗಿ ಶೇ. 0.36 ಮತ್ತು ಶೇ. 0.57ರಷ್ಟು ಏರಿಕೆ ದಾಖಲಿಸಿವೆ. ಇನ್ನು ಎಚ್‌ಡಿಎಫ್‌ಸಿ ಬ್ಯಾಂಕ್, ಸಿಪ್ಲಾ, ಡಾ.ರೆಡ್ಡೀಸ್, ಶ್ರೀರಾಮ್ ಫೈನಾನ್ಸ್ ಮತ್ತು ಅದಾನಿ ಎಂಟರ್‌ಟೈನ್‌ಮೆಂಟ್‌ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ.

    ದೇಶೀಯ ಮಾರುಕಟ್ಟೆಯ ಜತೆಗೆ ಜಾಗತಿಕ ಮಾರುಕಟ್ಟೆಗಳೂ ಸಕಾರಾತ್ಮಕವಾಗಿ ಸ್ಪಂದಿಸಿವೆ. ಟೆಕ್ ಷೇರುಗಳ ಲಾಭದಿಂದ ವಾಲ್ ಸ್ಟ್ರೀಟ್ ದಾಖಲೆಯ ಗರಿಷ್ಠ ಮಟ್ಟದಲ್ಲಿ ಕೊನೆಗೊಂಡಿದೆ. ಎಸ್ & ಪಿ 500 ಶೇ. 0.51ರಷ್ಟು ಮತ್ತು ನಾಸ್ಡಾಕ್ ಕಾಂಪೊಸಿಟ್ ಶೇ. 0.88ರಷ್ಟು ಏರಿಕೆಯಾಗಿದೆ. ಇನ್ನು ಜಪಾನ್‌ನ ನಿಕೈ 225 ಶೇ. 0.27, ಕೊರಿಯಾದ ಕೋಸ್ಪಿ ಶೇ. 0.87 ಮತ್ತು ಏಷ್ಯಾ ಡೌ ಶೇ. 1ರಷ್ಟು ಏರಿಕೆ ದಾಖಲಿಸಿವೆ. ಹಾಂಗ್‌ಕಾಂಗ್‌ನ ಹಾಂಗ್ ಸೆಂಗ್ ಕೂಡಾ ಶೇ. 0.56ರಷ್ಟು ಹೆಚ್ಚಾಗಿದೆ.

    ಇದನ್ನೂ ಓದಿ: Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

    ಯುಎಸ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಪ್ರಗತಿ ಸಾಧಿಸುದ್ದೇವೆ ಎಂದು ಹೇಳಿಕ ನೀಡಿದ ನಂತರ ಮಾರುಕಟ್ಟೆಗಳು ಧನಾತ್ಮಕ ಪ್ರದರ್ಶನ ತೋರುತ್ತಿವೆ. ಮಂಗಳವಾರ ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿತ್ತು. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿತ್ತು. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿತ್ತು. 

    Continue Reading

    ವಾಣಿಜ್ಯ

    Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

    Price Hike: ರಿಲಯನ್ಸ್‌ ಜಿಯೋ, ಏರ್‌ಟೆಲ್‌, ವೋಡಾಫೋನ್‌ ಐಡಿಯಾ ಮುಂತಾದ ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿವೆ. ಇದೀಗ ಮೊಬೈಲ್‌ ಕಂಪನಿಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಸರ್ಕಾರ ಮತ್ತು ಟೆಲಿಕಾಂ ನಿಯಂತ್ರಕ ಸಂಸ್ಥೆ ಟೆಲಿಕಾಂ ಕಂಪನಿಗಳ ಬೆಲೆ ಹೆಚ್ಚಳವನ್ನು ತಡೆಯುವುದಿಲ್ಲ ಮತ್ತು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

    VISTARANEWS.COM


    on

    Price Hike
    Koo

    ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕೆಲ ದಿನಗಳ ಹಿಂದೆ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸಿವೆ (Price Hike). ರಿಲಯನ್ಸ್‌ ಜಿಯೋ (Reliance Jio), ಏರ್‌ಟೆಲ್‌ (Airtel), ವೋಡಾಫೋನ್‌ ಐಡಿಯಾ (Vodafone Idea) ಮುಂತಾದ ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿವೆ. ಇದೀಗ ಮೊಬೈಲ್‌ ಕಂಪನಿಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದು ಸಾಧ್ಯವೆ? ಈ ಕುರಿತಾದ ನಿಯಮ ಏನು ಹೇಳುತ್ತದೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

    ಸರ್ಕಾರ ಮತ್ತು ಟೆಲಿಕಾಂ ನಿಯಂತ್ರಕ ಸಂಸ್ಥೆ ಟೆಲಿಕಾಂ ಕಂಪನಿಗಳ ಬೆಲೆ ಹೆಚ್ಚಳವನ್ನು ತಡೆಯುವುದಿಲ್ಲ ಮತ್ತು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ʼʼಹಾಗೆ ನೋಡಿದರೆ ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿನ ದರ ಇನ್ನೂ ಅಗ್ಗವಾಗಿದೆ. ಕಂಪನಿಗಳು ಸೇವೆಗಳ ಗುಣಮಟ್ಟದ ಸೇವೆ ನೀಡಲು ತಮ್ಮ ಗಮನವನ್ನು ಹರಿಸಬೇಕುʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    “ಟೆಲಿಕಾಂ ಕ್ಷೇತ್ರದಲ್ಲಿ ಸಾಕಷ್ಟು ಸ್ಪರ್ಧೆ ಇದೆ. ಇದೀಗ ಸರ್ಕಾರ ಮಧ್ಯಪ್ರವೇಶಿಸುವಷ್ಟು ಪರಿಸ್ಥಿತಿ ಗಂಭೀರವಾಗಿಲ್ಲ. ಸುಮಾರು ಮೂರು ವರ್ಷಗಳ ನಂತರ ಸ್ವಲ್ಪ ಮಟ್ಟಿನ ಬೆಲೆ ಏರಿಕೆಯಾಗಿದೆಯಷ್ಟೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಬೆಲೆ ಏರಿಕೆಯ ಬಿಸಿ

    ಈ ವಾರ ಭಾರತದ ಮೂರು ಪ್ರಮುಖ ಖಾಸಗಿ ಟೆಲಿಕಾಂ ಕಂಪನಿಗಳಾದ ರಿಲಯನ್ಸ್‌ ಜಿಯೋ, ಏರ್‌ಟೆಲ್‌ ಮತ್ತು ವೋಡಾಫೋನ್‌ ಐಡಿಯಾ ಮೊಬೈಲ್ ರೀಚಾರ್ಜ್‌ ದರವನ್ನು ಶೇ. 11-25ರಷ್ಟು ಹೆಚ್ಚಿಸಿವೆ. ʼʼಮೊಬೈಲ್‌ ರೀಚಾರ್ಜ್‌ ದರದಲ್ಲಿನ ಶೇ. 13 ಹೆಚ್ಚಳವು ತೀರಾ ಹೊರೆ ಎನಿಸಿಕೊಂಡಿಲ್ಲ. ದರ ಹೆಚ್ಚಳ ಮಧ್ಯಮವಾಗಿದೆ. ಇದು ಮನೆಯ ವೆಚ್ಚದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿಲ್ಲʼʼ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (Trai) ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿ, “ಟೆಲಿಕಾಂ ಕಂಪನಿಗಳು ದರ ನಿರ್ಧರಿಸುವ ವಿಚಾರದಲ್ಲಿ ಸ್ವತಂತ್ರರಾಗಿದ್ದಾರೆ. ಅವರ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಸಿಸುವುದಿಲ್ಲ. ಆದರೆ ಅವರು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಬೇಕು. ಗುಣಮಟ್ಟದಲ್ಲಿ ರಾಜಿಯಾದರೆ ನಾವು ಮಧ್ಯಪ್ರವೇಶಿಸುತ್ತೇವೆʼʼ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

    ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

    ಬೆಂಗಳೂರು: ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯಲ್ಲಿ (ಟಾರೀಫ್‌ ದರಪಟ್ಟಿಯನ್ನು) ಹೆಚ್ಚಳ ಮಾಡಿವೆ. ಮೂರು ಟೆಲಿಕಾಂಗಳ ಬೆಲೆ ಏರಿಕೆ ಕಂಡ ಯೋಜನೆಗಳ ಹೊಸ ದರಗಳನ್ನು ಹೋಲಿಸಿ ನೋಡಿದರೆ ನಮ್ಮ ಕಂಪನಿಯ ದರವೇ ಕಡಿಮೆ ಎಂದು ರಿಲಯನ್ಸ್‌ ಜಿಯೋ ಟೆಲಿಕಾಂ ಹೇಳಿಕೊಂಡಿದೆ.

    ಜಿಯೋ ಸೇರಿದಂತೆ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಸಹ ತಮ್ಮ ಯೋಜನೆಗಳ ಬೆಲೆ ಏರಿಕೆ ಮಾಡಿವೆ. ಅದಾಗ್ಯೂ ಜಿಯೋದ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಪ್ರತಿಸ್ಪರ್ಧಿಗಳಿಗಿಂತ ಶೇ. 20ರಷ್ಟು ಕಡಿಮೆ ಬೆಲೆಯಲ್ಲಿ ಲಭ್ಯ. ಹಾಗೆಯೇ ಜಿಯೋ ಸಂಸ್ಥೆಯ ಅತ್ಯಂತ ಕಡಿಮೆ ಪೋಸ್ಟ್‌ಪೇಯ್ಡ್ ಯೋಜನೆಯು ಹತ್ತಿರದ ಪ್ರತಿಸ್ಪರ್ಧಿಯ ಪೋಸ್ಟ್ ಪೇಯ್ಡ್ ಪ್ಲಾನ್‌ಗಿಂತ ಶೇ. 29ರಷ್ಟು ಕಡಿಮೆಯಾಗಿದೆ ಎಂದು ಈ ಕಂಪನಿ ಹೇಳಿದೆ.

    Continue Reading
    Advertisement
    Muda site allocation Politically motivated allegation says CM Siddaramaiah
    ಕರ್ನಾಟಕ2 mins ago

    CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

    Narendra modi
    ಪ್ರಮುಖ ಸುದ್ದಿ4 mins ago

    Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

    LK Advani
    ದೇಶ20 mins ago

    LK Advani: ಎಲ್‌.ಕೆ. ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

    Kannada New Movie Kadalura Kanmani will release soon
    ಕರ್ನಾಟಕ29 mins ago

    Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

    Zircon Jewellery Fashion
    ಫ್ಯಾಷನ್38 mins ago

    Zircon Jewellery Fashion: ಹೈ ಫ್ಯಾಷನ್‌ ಜ್ಯುವೆಲರಿ ಲಿಸ್ಟ್‌ಗೆ ಸೇರಿದ ವೈವಿಧ್ಯಯಮಯ ಜಿರ್ಕೊನ್‌ ಆಭರಣಗಳ ಹಂಗಾಮಾ!

    ZIM vs IND
    ಪ್ರಮುಖ ಸುದ್ದಿ43 mins ago

    ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

    Cabinet Meeting
    ಕರ್ನಾಟಕ48 mins ago

    Cabinet Meeting: ವಿಮಾದಾರರು, ಆರೋಗ್ಯ ಕ್ಷೇಮ ಕೇಂದ್ರಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್;‌ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಇಲ್ಲಿವೆ

    Hair Oil Tips
    ಆರೋಗ್ಯ1 hour ago

    Hair Oil Tips: ರಾತ್ರಿ ಕೂದಲಿಗೆ ಎಣ್ಣೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಿದರೆ ಲಾಭವೋ ನಷ್ಟವೋ?

    karnataka Weather Forecast
    ಮಳೆ2 hours ago

    Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

    Anganwadi workers should not be worried says Minister Lakshmi Hebbalkar
    ಬೆಂಗಳೂರು2 hours ago

    Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka Weather Forecast
    ಮಳೆ2 hours ago

    Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

    karnataka Rain
    ಮಳೆ3 hours ago

    Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

    wild animal attack
    ಬೆಂಗಳೂರು ಗ್ರಾಮಾಂತರ4 hours ago

    Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

    Chikkaballapura News
    ಚಿಕ್ಕಬಳ್ಳಾಪುರ6 hours ago

    Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

    karnataka Rain
    ಮಳೆ6 hours ago

    Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

    Karnataka Rain
    ಮಳೆ8 hours ago

    Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

    Tornado Effect in Udupi
    ಉಡುಪಿ9 hours ago

    Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

    karnataka weather Forecast
    ಮಳೆ2 days ago

    Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

    karnataka Weather Forecast
    ಮಳೆ3 days ago

    Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    karnataka Weather Forecast
    ಮಳೆ4 days ago

    Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

    ಟ್ರೆಂಡಿಂಗ್‌