SENSEX 1,027 ಅಂಕ ಜಿಗಿತ, ಷೇರುಪೇಟೆಯಲ್ಲಿ ಗೂಳಿಯ ಅಬ್ಬರಕ್ಕೆ ಕಾರಣವೇನು? - Vistara News

ಪ್ರಮುಖ ಸುದ್ದಿ

SENSEX 1,027 ಅಂಕ ಜಿಗಿತ, ಷೇರುಪೇಟೆಯಲ್ಲಿ ಗೂಳಿಯ ಅಬ್ಬರಕ್ಕೆ ಕಾರಣವೇನು?

ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಸೋಮವಾರ ಸಾವಿರಕ್ಕೂ ಹೆಚ್ಚು ಅಂಕಗಳ ಮಹಾ ಜಿಗಿತ ಸಾಧಿಸಿದೆ. ಜಾಗತಿಕ ಮಾರುಕಟ್ಟೆಯ ಸಕಾರಾತ್ಮಕ ಪ್ರಭಾವದಿಂದ ಗೂಳಿ ಅಬ್ಬರಿಸಿತು.

VISTARANEWS.COM


on

sensex up
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಸೋಮವಾರ 1,000ಕ್ಕೂ ಹೆಚ್ಚು ಅಂಕಗಳ ಏರಿಕೆ ದಾಖಲಿಸಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಸೂಚ್ಯಂಕಗಳು ಚೇತರಿಸಿದ್ದು, ಹೂಡಿಕೆದಾರರನ್ನು ಉತ್ತೇಜಿಸಿತು. ಮಧ್ಯಾಹ್ನ 3 ಗಂಟೆಯ ವೇಳೆಗೆ ಸೆನ್ಸೆಕ್ಸ್‌ 55,935 ಹಾಗೂ ನಿಫ್ಟಿ 16,659 ಅಂಕ ದಾಖಲಿಸಿತ್ತು. ಸೆನ್ಸೆಕ್ಸ್‌ 1,026 ಹಾಗೂ ನಿಫ್ಟಿ 306 ಅಂಕ ಏರಿತ್ತು.

ಸೆನ್ಸೆಕ್ಸ್‌ ಚೇತರಿಕೆಯಿಂದ ಹೂಡಿಕೆದಾರರ ಸಂಪತ್ತಿನಲ್ಲಿ 4.4 ಲಕ್ಷ ಕೋಟಿ ರೂ.ಗಳ ಏರಿಕೆ ಉಂಟಾಯಿತು. ಬಿಎಸ್‌ಇಯಲ್ಲಿ ನೋಂದಣಿಯಾಗಿರುವ ಒಟ್ಟು ಷೇರುಗಳ ಮೌಲ್ಯವು 253 ಲಕ್ಷ ಕೋಟಿ ರೂ.ಗಳಿಂದ 257 ಲಕ್ಷ ಕೋಟಿ ರೂ.ಗೆ ಏರಿತು. ಹಾಗಾದರೆ ಸೆನ್ಸೆಕ್ಸ್‌ ಏರಿಕೆಗೆ ಕಾರಣವಾಗಿರುವ ಅಂಶಗಳು ಯಾವುದು?

ಅಮೆರಿಕದ ಷೇರು ಪೇಟೆ ಚೇತರಿಕೆ

ವಾಲ್‌ ಸ್ಟ್ರೀಟ್‌ನಲ್ಲಿ ಷೇರು ಸೂಚ್ಯಂಕಗಳ ಜಿಗಿತ ದಲಾಲ್‌ ಸ್ಟ್ರೀಟ್‌ ಮೇಲೆಯೂ ಸಕಾರಾತ್ಮಕ ಪ್ರಭಾವ ಬೀರಿತು. ಅಮೆರಿಕದಲ್ಲಿ ಕಳೆದ ಶುಕ್ರವಾರ ಷೇರು ಪೇಟೆ ಗಣನೀಯ ಚೇತರಿಸಿತ್ತು. ಅಮೆರಿಕದಲ್ಲಿ ಕಳೆದ ಏಪ್ರಿಲ್‌ನಲ್ಲಿ ಹಣದುಬ್ಬರ ಶೇ.6.3ಕ್ಕೆ ಇಳಿಕೆಯಾಗಿದ್ದು, 2020ರ ವೆಂಬರ್‌ ಬಳಿಕ ಮೊದಲ ಇಳಿಕೆಯಾಗಿದೆ. ಇದು ಹೂಡಿಕೆದಾರರಿಗೆ ಸಕಾರಾತ್ಮಕ ಎನ್ನಿಸಿತು.

ಚೀನಾದಲ್ಲಿ ಕೋವಿಡ್‌ ಕೇಸ್‌ ಇಳಿಕೆ

ಚೀನಾದ ಶಾಂಘೈನಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಆರ್ಥಿಕ ಚಟುವಟಿಕೆಗಳು ಚೇತರಿಸುತ್ತಿವೆ. ಬೀಜಿಂಗ್‌ ನಲ್ಲೂ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ವಿಶ್ವದ ಎರಡನೇ ದೊಡ್ಡ ಆರ್ಥಿಕತೆಯ ಚೇತರಿಕೆ ಷೇರುಪೇಟೆಯ ಮೇಲೆ ಸಕಾರಾತ್ಮಕ ಪ್ರಭಾವ ಬೀರಿತು.

ಷೇರುಗಳ ಖರೀದಿ ಭರಾಟೆ

ಎಚ್‌ಡಿಎಫ್‌ಸಿ, ಇನ್ಫೋಸಿಸ್‌, ಟಿಸಿಎಸ್, ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳಿಗೆ ಸೋಮವಾರ ಭಾರಿ ಬೇಡಿಕೆ ಸೃಷ್ಟಿಯಾಯಿತು. ಸೆನ್ಸೆಕ್ಸ್‌ ಜಿಗಿತಕ್ಕೆ 550 ಅಂಕಗಳ ಕೊಡುಗೆಯನ್ನು ಈ ಷೇರುಗಳು ನೀಡಿತು. ಐಟಿ ಷೇರುಗಳು ಇತ್ತೀಚೆಗೆ ಕುಸಿದಿದ್ದರೂ, ಮತ್ತೆ ಚೇತರಿಸುವ ವಿಶ್ವಾಸ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ.

ರೂಪಾಯಿ ಬಲವರ್ಧನೆ: ಡಾಲರ್ ಎದುರು ರೂಪಾಯಿ ಸೋಮವಾರ 12 ಪೈಸೆ ಚೇತರಿಸಿ 77.46 ಕ್ಕೆ ಸ್ಥಿರವಾಯಿತು.

ಇದನ್ನೂ ಓದಿ: MODI 8 Years: ಎಂಟು ವರ್ಷಗಳಲ್ಲಿ ಷೇರು ಮಾರುಕಟ್ಟೆ ಬಂಡವಾಳ ಮೌಲ್ಯ 3 ಪಟ್ಟು ಹೆಚ್ಚಳ, 1450 ಷೇರುಗಳ ಲಾಭ ಡಬಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

Tamanna Bhatia: ನಟಿ ತಮನ್ನಾ ಭಾಟಿಯಾ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಈ ಸರಣಿಯಲ್ಲಿನ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟಕ್ಕೆ ವೀಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Tamanna Bhatia
Koo


ಮುಂಬೈ: ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಪಡೆದಿರುವ ನಟಿ ತಮನ್ನಾ ಭಾಟಿಯಾ (Tamanna Bhatia )ಅವರು ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ತೆರೆಯ ಮೇಲೆ ಕಿಸ್ ಮಾಡುವುದಿಲ್ಲ ಎಂದಿದ್ದ ನಟಿ ‘ಲಸ್ಟ್ ಸ್ಟೋರೀಸ್ 2’ ವೆಬ್ ಸರಣಿಯಲ್ಲಿ ಬಿಂದಾಸ್‌ ಕಿಸ್ ಮಾಡಿ ನಿಯಮವನ್ನು ಮುರಿದು ಜನರ ಟೀಕೆಗೆ ಗುರಿಯಾಗಿದ್ದರು. ಇದೀಗ ನಟಿ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಹಿಂದೆಂದೂ ಕಾಣದಷ್ಟು ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Tamanna Bhatia

ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಆದರೆ ನಂತರ, ಸರಣಿಯಲ್ಲಿ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟವನ್ನು ಅನೇಕರು ಹೊಗಳಿದರೂ ಕೂಡ , ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಜನ್ ನಟಿಯ ಬಗ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ವೆಬ್ ಸರಣಿಯಲ್ಲಿ ನಟಿಯ ಬೋಲ್ಡ್ ಪೋಟೋಗಳನ್ನು ಹಂಚಿಕೊಂಡು ಅವರನ್ನು ದೂಷಿಸಿದ್ದಾರೆ. ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಲಿಲ್ಲವೆಂದು ನಟಿಯ ವಿರುದ್ಧ ಕಿಡಿಕಾರಿದ್ದಾರೆ.


ಜೀ ಕರ್ದಾದಲ್ಲಿ ಇಬ್ಬರು ಬಾಲ್ಯದ ಸ್ನೇಹಿತರಾದ ಲಾವಣ್ಯ (ತಮನ್ನಾ ಭಾಟಿಯಾ) ಮತ್ತು ರಿಷಬ್ (ಸುಹೇಲ್ ನಯ್ಯರ್) ಅವರ ಕಥೆಗಳನ್ನು ತೋರಿಸುತ್ತದೆ. ಆದರೆ ಕೆಲವೊಂದು ವಿಚಾರಗಳು ತಮ್ಮ ಸಂಬಂಧವನ್ನು ಹಾಳುಮಾಡಲು ಪ್ರಾರಂಭಿಸಿದಾಗ ಅವರು ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

ಈ ಸರಣಿಯಲ್ಲಿ ಹುಸೇನ್ ದಲಾಲ್, ಸಯಾನ್ ಬ್ಯಾನರ್ಜಿ ಮತ್ತು ಸಂವೇದನಾ ಸುವಾಲ್ಕಾ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ತಮನ್ನಾ ಭಾಟಿಯಾ ಕೊನೆಯ ಬಾರಿಗೆ ಭಯಾನಕ-ಹಾಸ್ಯ ಚಿತ್ರ ‘ಅರಮನೆ 4’ ನಲ್ಲಿ ರಾಶಿ ಖನ್ನಾ ಅವರೊಂದಿಗೆ ಕಾಣಿಸಿಕೊಂಡರು. ಈ ಚಿತ್ರವು 2024 ರ ಕಾಲಿವುಡ್‌ನ ಮೊದಲ ಹಿಟ್ ಚಿತ್ರ ಆಯಿತು. ಈಗ ಅವರು ವೆಬ್ ಸರಣಿಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

IPL 2025: ಎರಡಕ್ಕಿಂತ ಹೆಚ್ಚು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶವಿರಲಿಲ್ಲ. ಕಳೆದ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳನ್ನು ಸೇರಿಸಿದ್ದರಿಂದ ಬಿಸಿಸಿಐ ಉಳಿಸಿಕೊಳ್ಳುವ ಆಟಗಾರರ ಸಂಖ್ಯೆಯನ್ನು ಕಡಿಮೆ ಮಾಡಿತ್ತು.

VISTARANEWS.COM


on

IPL 2025
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಫ್ರಾಂಚೈಸಿಗಳು ಮುಂದಿನ ಮೂರು ಋತುಗಳಿಗೆ ತಂಡದಲ್ಲಿ ಆಟಗಾರರನ್ನು ಉಳಿಸಿಕೊಳ್ಳುವ ಸಂಖ್ಯೆ ಹೆಚ್ಚಿಸುವಂತೆ ಬಿಸಿಸಿಐಗೆ ವಿನಂತಿಸಿವೆ ಎಂದು ವರದಿಯಾಗಿದೆ. ಮುಂಬರುವ ಐಪಿಎಲ್​ಗೆ ಮೆಗಾ ಹರಾಜು ನಡೆಯುತ್ತೆ. ಫ್ರಾಂಚೈಸಿಗಳು ಹೆಚ್ಚಿನ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ. 2022ರ ಮೆಗಾ ಹರಾಜಿನಲ್ಲಿ ಎಂಟು ಫ್ರಾಂಚೈಸಿಗಳಿಗೆ ಗರಿಷ್ಠ ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಕ್ಯಾಪ್ಡ್ ಅಥವಾ ಅನ್​ಕ್ಯಾಪ್ಡ್​​ ಸೇರಿದಂತೆ ಗರಿಷ್ಠ ಮೂವರು ಭಾರತೀಯ ಆಟಗಾರರನ್ನು ಉಳಿಸಿಕೊಳ್ಳಲು ತಂಡಗಳಿಗೆ ಅವಕಾಶ ನೀಡಲಾಗಿತ್ತು.

ಎರಡಕ್ಕಿಂತ ಹೆಚ್ಚು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶವಿರಲಿಲ್ಲ. ಕಳೆದ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳನ್ನು ಸೇರಿಸಿದ್ದರಿಂದ ಬಿಸಿಸಿಐ ಉಳಿಸಿಕೊಳ್ಳುವ ಆಟಗಾರರ ಸಂಖ್ಯೆಯನ್ನು ಕಡಿಮೆ ಮಾಡಿತ್ತು. ಹಿಂದಿನ ಮೆಗಾ ಹರಾಜಿನಲ್ಲಿ, ಆಟಗಾರರ ಉಳಿಸಿಕೊಳ್ಳುವಿಕೆ ಹರಾಜಿನ ಸಮಯದಲ್ಲಿ ರೈಟ್ ಟು ಮ್ಯಾಚ್ (ಆರ್​ಟಿಎಂ) ಕಾರ್ಡ್​​ಗಳ ಬಳಕೆಯ ಮೂಲಕ ಐದು ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ ನೀಡಲಾಗಿತ್ತು.

ಬಿಸಿಸಿಐ ಆಟಗಾರರ ಹರಾಜು ಪ್ರಕ್ರಿಯೆ ಆರಂಭ

ಮುಂಬರುವ ಐಪಿಎಲ್ 2025 ಮೆಗಾ ಹರಾಜಿಗೆ, ಬಿಸಿಸಿಐ ಉಳಿಸಿಕೊಳ್ಳುವ ನಿಯಮವನ್ನು ಇನ್ನೂ ಪ್ರಕಟಿಸಿಲ್ಲ. ಆದಾಗ್ಯೂ, ಮಂಡಳಿಯು ಈಗಾಗಲೇ ಉಳಿಸಿಕೊಳ್ಳುವ ಆಟಗಾರರ ನೀತಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಕ್ರಿಕ್​ಬಜ್​ ವರದಿ ಮಾಡಿದೆ. ಈ ತಿಂಗಳ ಕೊನೆಯಲ್ಲಿ ಫ್ರಾಂಚೈಸಿ ಮಾಲೀಕರ ಸಭೆಯಲ್ಲಿ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಬಿಸಿಸಿಐ ಹಂಗಾಮಿ ಸಿಇಒ ಮತ್ತು ಐಪಿಎಲ್ ಉಸ್ತುವಾರಿ ಹೇಮಂಗ್ ಅಮಿನ್ ಈಗಾಗಲೇ ಫ್ರಾಂಚೈಸಿಗಳ ಸಿಇಒಗಳೊಂದಿಗೆ ಸಮಾಲೋಚನೆ ನಡೆಸಿ ಉಳಿಸಿಕೊಳ್ಳುವ ನೀತಿಯ ಬಗ್ಗೆ ಅವರ ಅಭಿಪ್ರಾಯಗಳನ್ನು ಪಡೆದಿದ್ದಾರೆ.

ಹೆಚ್ಚಿನ ಫ್ರಾಂಚೈಸಿಗಳು ಐದರಿಂದ ಏಳು ಆಟಗಾರರನ್ನು ಉಳಿಸಿಕೊಳ್ಳಲು ವಿನಂತಿ ಮಾಡಿದ್ದರೆ. ಫ್ರಾಂಚೈಸಿಗಳಲ್ಲಿ ಒಂದು ಎಂಟು ಆಟಗಾರರನ್ನು ಉಳಿಸಿಕೊಳ್ಳಲು ಸೂಚಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅದೇ ಸಮಯದಲ್ಲಿ, ಕೆಲವು ಫ್ರಾಂಚೈಸಿಗಳು ಉಳಿಸಿಕೊಳ್ಳುವ ನಿಯಮ ಇರಬಾರದು ಎಂದು ಹೇಳಿದೆ ಎನ್ನಲಾಗಿದೆ. ಮತ್ತೊಂದು ಫ್ರಾಂಚೈಸಿ ಆರ್​ಟಿಎಂ ಮಾತ್ರ ಹೊಂದಲು ವಿನಂತಿಸಿದೆ ಮತ್ತು ಯಾವುದೇ ಅವಕಾಶವಿಲ್ಲ.

ಇದನ್ನೂ ಓದಿ: Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ – ಸಲಾಂ ಜಾಮಿ ಭಾಯ್!

ಈ ವರ್ಷದ ಮೇ ತಿಂಗಳಲ್ಲಿ, ಹಿರಿಯ ವೀಕ್ಷಕವಿವರಣೆಗಾರ ಹರ್ಷ ಭೋಗ್ಲೆ ಅವರು ಕೆಕೆಆರ್ ಸಿಇಒ ವೆಂಕಿ ಮೈಸೂರು ಅವರು ಎಂಟು ಆರ್ಟಿಎಂ ಕಾರ್ಡ್ಗಳನ್ನು ಉಳಿಸಿಕೊಳ್ಳಲು ಬಯಸಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಅಂತಹ ಕ್ರಮವು ಆಟಗಾರರಿಗೆ ಹರಾಜಿನಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ ಮತ್ತು ಫ್ರಾಂಚೈಸಿಗಳು ಸಹ ಅವರನ್ನು ಮರಳಿ ಖರೀದಿಸಲು ಸಾಧ್ಯವಾಗುತ್ತದೆ.

ಫ್ರಾಂಚೈಸಿಗಳೊಂದಿಗೆ ಮಾತನಾಡಿದ ನಂತರ, ಬಿಸಿಸಿಐ ಈಗ ಪ್ರಕ್ರಿಯೆಯನ್ನು ಅಂತಿಮಗೊಳಿಸುತ್ತಿದೆ ಮತ್ತು ಮಾಲೀಕರ ಸಭೆಯಲ್ಲಿ ತನ್ನ ಅಂತಿಮ ನಿರ್ಧಾರವನ್ನು ಬಹಿರಂಗಪಡಿಸಲಿದೆ. ಏತನ್ಮಧ್ಯೆ, ಭಾರತದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಲವಾರು ಪ್ರಮುಖ ಆಟಗಾರರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಬಿಸಿಸಿಐ ಸದ್ಯಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ.

Continue Reading

ಕರ್ನಾಟಕ

Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

Advocate G Devarajegowda: ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಇಂದು ದೇವರಾಜೇಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

VISTARANEWS.COM


on

Advocate G Devarajegowda
Koo

ಹಾಸನ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ವಕೀಲ ದೇವರಾಜೇಗೌಡ (Advocate G Devarajegowda) ಜೈಲಿನಿಂದ ಮಂಗಳವಾರ ಬಿಡುಗಡೆಯಾಗಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಇಂದು ದೇವರಾಜೇಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೂನ್ 5ರಂದು ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ದೇವರಾಜೇಗೌಡ ಜಾಮೀನು ಅರ್ಜಿ ಸಲ್ಲಿಸಿದಾಗ ಕೋರ್ಟ್ ನಿರಾಕರಿಸಿತ್ತು. ಆದರೆ, ಹೈಕೋರ್ಟ್‌ ಜಾಮೀನು ನೀಡಿದ್ದರಿಂದ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೇವರಾಜೇಗೌಡರನ್ನು ಬಿಡುಗಡೆ ಮಾಡಲಾಗಿದೆ.

2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಆದರೆ, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದರು. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿತ್ತು.

ಇದನ್ನೂ ಓದಿ | Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

ವಕೀಲ ದೇವರಾಜೇಗೌಡ ಬಂಧನವಾಗಿದ್ದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

Continue Reading

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading
Advertisement
Tamanna Bhatia
Latest4 mins ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು15 mins ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ20 mins ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ23 mins ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Anjanadri Temple Hundi Count
ಕರ್ನಾಟಕ25 mins ago

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Pancreatitis
ಆರೋಗ್ಯ27 mins ago

Pancreatitis: ಏನಿದು ಪ್ಯಾಂಕ್ರಿಯಾಟೈಟಿಸ್‌ನಿಂದ ಉಂಟಾಗುವ ಉರಿಯೂತ? ಇದಕ್ಕೇನು ಪರಿಹಾರ?

MLA Shivaram Hebbar spoke in Taluk level janaspandana programme yallapur
ಉತ್ತರ ಕನ್ನಡ30 mins ago

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Advocate G Devarajegowda
ಕರ್ನಾಟಕ30 mins ago

Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

Uttara Kannada News Meeting by DC Gangubai Manakar in Karwar
ಉತ್ತರ ಕನ್ನಡ32 mins ago

Uttara Kannada News: ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಚುರುಕುಗೊಳಿಸಲು ಡಿಸಿ ಸೂಚನೆ

Minister Lakshmi Hebbalkar has submitted various proposals to the Union Minister seeking grant for the strengthening of the department
ಕರ್ನಾಟಕ34 mins ago

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌