ನವ ದೆಹಲಿ: ಮುಂಗಾರು ಅವಧಿಯ ಟೊಮೆಟೊ, ಈರುಳಳಿ, ಆಲೂಗಡ್ಡೆ ಬಿತ್ತನೆಯ ಪ್ರಮಾಣ ಕಳೆದ ವರ್ಷದಲ್ಲಿ ಇದ್ದಷ್ಟೇ ಈ ವರ್ಷವೂ ಮುಂದುವರಿದಿದ್ದು, ಅನುಕೂಲಕರ ಮಟ್ಟದಲ್ಲಿ ಇದೆ ಎಂದು ಕೃಷಿ ಇಲಾಖೆ ತಿಳಿಸಿದೆ.
ಈರುಳ್ಳಿಯನ್ನು ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮತ್ತು ಮಧ್ಯಪ್ರದೇಶದಲ್ಲಿ ಪ್ರಮುಖವಾಗಿ ಬಿತ್ತನೆ ಮಾಡಲಾಗಿದೆ. ಜುಲೈ ೫ಕ್ಕೆ ೨೬,೮೪೦ ಹೆಕ್ಟೇರ್‌ಗಳಲ್ಲಿ ಈರುಳ್ಳಿ ಬಿತ್ತನೆ ನಡೆದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೨೬,೬೭೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿತ್ತು.
ಟೊಮೆಟೊವನ್ನು ಮುಖ್ಯವಾಗಿ ಉತ್ತರಾಖಂಡ್, ಹಿಮಾಚಲಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಬೆಳೆಯಲಾಗುತ್ತಿದೆ. ೩೬,೧೨೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೩೬,೧೨೦ ಹೆಕ್ಟೇರ್‌ಗಳಲ್ಲಿ ಬೆಳೆಯಲಾಗಿತ್ತು. ಒಟ್ಟು ಹತ್ತು ರಾಜ್ಯಗಳಲ್ಲಿ ೫೮,೭೫೦ ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೊ ಬಿತ್ತನೆ ನಡೆದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ೫೦,೯೯೦ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆಸಲಾಗಿತ್ತು.