Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌ - Vistara News

ವಾಣಿಜ್ಯ

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

Stock Market: ಬಾಂಬೆ ಷೇರು ಪೇಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ.

VISTARANEWS.COM


on

Stock Market
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಂಬೆ ಷೇರು ಪೇಟೆ (Stock Market)ಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ 79,000 ಅಂಕ ತಲುಪಿದ್ದ ಸೆನ್ಸೆಕ್ಸ್‌ (Sensex) ಇಂದು (ಜುಲೈ 2) ಕೂಡ ಮೇಲ್ಮುಖವಾಗಿ ಸಾಗಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ.

ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ. ಐಟಿ ಕಂಪನಿಗಳ ಲಾಭ ಮತ್ತು ಯುಎಸ್ ಫೆಡರಲ್ ಸೆಪ್ಟೆಂಬರ್‌ನಲ್ಲಿ ರಿಸರ್ವ್ ಬಡ್ಡಿದರ ಕಡಿತದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು ಇಂದು ಈ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ.

ಹಿಂದಿನ ಸೆಷನ್‌ನಲ್ಲಿ ಶೇ. 2ರಷ್ಟು ಏರಿಕೆ ಕಂಡಿದ್ದ ಐಟಿ ಷೇರುಗಳು ಇಂದು ಮತ್ತೆ ಶೇ. 0.7ರಷ್ಟು ಹೆಚ್ಚಳ ದಾಖಲಿಸಿವೆ. ಎಲ್ಲ 13 ಪ್ರಮುಖ ವಲಯಗಳು ಲಾಭವನ್ನು ಕಂಡವು. ಅದರಲ್ಲಿಯೂ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಕ್ರಮವಾಗಿ ಶೇ. 0.4 ಮತ್ತು ಶೇ. 0.2 ಹೆಚ್ಚಳ ಕಂಡವು.

ಈ ಮಧ್ಯೆ ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ವಿರುದ್ಧ ರೂಪಾಯಿ 12 ಪೈಸೆ ದುರ್ಬಲಗೊಂಡು 83.56ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಬಲವಾದ ಯುಎಸ್ ಡಾಲರ್ ಮತ್ತು ಹೆಚ್ಚಾದ ಕಚ್ಚಾ ತೈಲ ಬೆಲೆಗಳು ಇದಕ್ಕೆ ಕಾರಣ. ತೈಲ ಆಮದುದಾರರು ಮತ್ತು ವಿದೇಶಿ ಹೂಡಿಕೆದಾರರು ಯುಎಸ್ ಡಾಲರ್‌ ಹೆಚ್ಚಾಗಿ ಬಳಸುತ್ತಿದ್ದು, ಇದು ರೂಪಾಯಿ ಕುಸಿತಕ್ಕೆ ಕಾರಣವಾಗಿದೆ ಎಂದು ವಿದೇಶಿ ವಿನಿಮಯ ವ್ಯಾಪಾರಿಗಳು ವಿವರಿಸಿದ್ದಾರೆ.

ಇಂಟರ್‌ ಬ್ಯಾಂಕ್‌ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ 83.51 ಮೌಲ್ಯದೊಂದಿಗೆ ದಿನವನ್ನು ಆರಂಭಿಸಿತು. ಆದರೆ ಬಳಿಕ ಡಾಲರ್ ವಿರುದ್ಧ 83.56ಕ್ಕೆ ಇಳಿಯಿತು. ಈ ಮೂಲಕ ಸೋಮವಾರಕ್ಕಿಂತ 12 ಪೈಸೆ ಕುಸಿತ ದಾಖಲಿಸಿದೆ.

ಗುರುವಾರ (ಜೂನ್‌ 27)ದ ಆರಂಭಿಕ ವಹಿವಾಟಿನಲ್ಲಿ ಕುಸಿದ ನಂತರ ಬೆಂಚ್ ಮಾರ್ಕ್ ಸೂಚ್ಯಂಕಗಳು ಜಿಗಿದುಕೊಂಡಿದ್ದವು. ಅಂದು ಸೆನ್ಸೆಕ್ಸ್ ಮೊದಲ ಬಾರಿಗೆ ಐತಿಹಾಸಿಕ 79,000 ಗಡಿಯನ್ನು ದಾಟಿತ್ತು ಮತ್ತು ನಿಫ್ಟಿ ಬ್ಲೂ-ಚಿಪ್ ಷೇರುಗಳ ಖರೀದಿಯ ಮಧ್ಯೆ ತನ್ನ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು. ರಿಲಯನ್ಸ್‌ ಇಂಡಸ್ಟ್ರೀಸ್‌ನ ಬ್ಲೂ-ಚಿಪ್ ಮತ್ತು ಐಸಿಐಸಿಐಯ ಷೇರು ಖರೀದಿಯೊಂದಿಗೆ 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 339.51 ಪಾಯಿಂಟ್ಸ್ ಏರಿಕೆ ಕಂಡು 79,013.76ಕ್ಕೆ ತಲುಪಿದ್ದರೆ ಅದೇ ರೀತಿ ನಿಫ್ಟಿ ಕೂಡ 97.6 ಪಾಯಿಂಟ್ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 23,966.40ಕ್ಕೆ ಮುಟ್ಟಿತ್ತು. “ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಸೆನ್ಸೆಕ್ಸ್ ಅನ್ನು 80,000 ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ಬ್ಯಾಂಕಿಂಗ್ ಮತ್ತು ಟೆಲಿಕಾಂನಂತಹ ಕ್ಷೇತ್ರಗಳಲ್ಲಿ ಬಲವಾದ ಲಾರ್ಜ್ ಕ್ಯಾಪ್‌ಗಳು ಈಗ ಏರಿಕೆ ಪ್ರವೃತ್ತಿಯನ್ನು ಮುನ್ನಡೆಸುತ್ತಿವೆ” ಎಂದು ತಜ್ಞರು ಹೇಳಿದ್ದಾರೆ. 

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

Stock Market: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ ಕೂಡ ಸೆನ್ಸೆಕ್ಸ್  ಮತ್ತು ನಿಫ್ಟಿ ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ. ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು.

VISTARANEWS.COM


on

Stock Market
Koo

ಮುಂಬೈ: ಭಾರತೀಯ ಷೇರು ಮಾರುಕಟ್ಟೆ (Stock Market)ಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ (ಜುಲೈ 3) ಕೂಡ ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ (Nifty) ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ.

ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು. ಜತೆಗೆ ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿತ್ತು. ಜಾಗತಿಕವಾಗಿ ಪೂರಕ ವಾತಾವರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈ ಸಂಚಲನ ಮೂಡಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೂನ್ 10ರ ನಂತರ ಇಲ್ಲಿಯವರೆಗೆ ಸೆನ್ಸೆಕ್ಸ್‌ನಲ್ಲಿ 3,000ಕ್ಕೂ ಹೆಚ್ಚು ಪಾಯಿಂಟ್‌ಗಳು ಏರಿವೆ. ವಿಶೇಷ ಎಂದರೆ 1980ರ ದಶಕದಲ್ಲಿ ಪ್ರಾರಂಭವಾದ ನಂತರ ಸೆಕ್ಸೆಕ್ಸ್‌ ಮೊದಲ ಬಾರಿಗೆ 80,400ರ ಗಡಿಯನ್ನು ಸಮೀಪಿಸಿದೆ. ಭಾರತದಲ್ಲಿ ಮಾನ್ಸೂನ್ ಪ್ರಗತಿಯೂ ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಎಚ್‌ಸಿಎಲ್‌ ಟೆಕ್, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್, ಎಂ & ಎಂ, ಟಿಸಿಎಸ್, ಬಜಾಜ್ ಫೈನಾನ್ಸ್, ಟಾಟಾ ಸ್ಟೀಲ್ ಮತ್ತು ಟೆಕ್ ಎಂ ಮುಂತಾದ ಪ್ರಮುಖ ಲಾರ್ಜ್ ಕ್ಯಾಪ್ ಷೇರುಗಳಲ್ಲಿ ಶೇ. 1.35ರಷ್ಟು ಏರಿಕೆಯಾಗಿದೆ. ಜತೆಗೆ ಬಿಎಸ್ಇ ಮಿಡ್‌ಕ್ಯಾಪ್‌ ಮತ್ತು ಸ್ಮಾಲ್‌ಕ್ಯಾಪ್‌ ಸೆನ್ಸೆಕ್ಸ್ ಕ್ರಮವಾಗಿ ಶೇ. 0.36 ಮತ್ತು ಶೇ. 0.57ರಷ್ಟು ಏರಿಕೆ ದಾಖಲಿಸಿವೆ. ಇನ್ನು ಎಚ್‌ಡಿಎಫ್‌ಸಿ ಬ್ಯಾಂಕ್, ಸಿಪ್ಲಾ, ಡಾ.ರೆಡ್ಡೀಸ್, ಶ್ರೀರಾಮ್ ಫೈನಾನ್ಸ್ ಮತ್ತು ಅದಾನಿ ಎಂಟರ್‌ಟೈನ್‌ಮೆಂಟ್‌ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ.

ದೇಶೀಯ ಮಾರುಕಟ್ಟೆಯ ಜತೆಗೆ ಜಾಗತಿಕ ಮಾರುಕಟ್ಟೆಗಳೂ ಸಕಾರಾತ್ಮಕವಾಗಿ ಸ್ಪಂದಿಸಿವೆ. ಟೆಕ್ ಷೇರುಗಳ ಲಾಭದಿಂದ ವಾಲ್ ಸ್ಟ್ರೀಟ್ ದಾಖಲೆಯ ಗರಿಷ್ಠ ಮಟ್ಟದಲ್ಲಿ ಕೊನೆಗೊಂಡಿದೆ. ಎಸ್ & ಪಿ 500 ಶೇ. 0.51ರಷ್ಟು ಮತ್ತು ನಾಸ್ಡಾಕ್ ಕಾಂಪೊಸಿಟ್ ಶೇ. 0.88ರಷ್ಟು ಏರಿಕೆಯಾಗಿದೆ. ಇನ್ನು ಜಪಾನ್‌ನ ನಿಕೈ 225 ಶೇ. 0.27, ಕೊರಿಯಾದ ಕೋಸ್ಪಿ ಶೇ. 0.87 ಮತ್ತು ಏಷ್ಯಾ ಡೌ ಶೇ. 1ರಷ್ಟು ಏರಿಕೆ ದಾಖಲಿಸಿವೆ. ಹಾಂಗ್‌ಕಾಂಗ್‌ನ ಹಾಂಗ್ ಸೆಂಗ್ ಕೂಡಾ ಶೇ. 0.56ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

ಯುಎಸ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಪ್ರಗತಿ ಸಾಧಿಸುದ್ದೇವೆ ಎಂದು ಹೇಳಿಕ ನೀಡಿದ ನಂತರ ಮಾರುಕಟ್ಟೆಗಳು ಧನಾತ್ಮಕ ಪ್ರದರ್ಶನ ತೋರುತ್ತಿವೆ. ಮಂಗಳವಾರ ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿತ್ತು. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿತ್ತು. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿತ್ತು. 

Continue Reading

ವಾಣಿಜ್ಯ

Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

Price Hike: ರಿಲಯನ್ಸ್‌ ಜಿಯೋ, ಏರ್‌ಟೆಲ್‌, ವೋಡಾಫೋನ್‌ ಐಡಿಯಾ ಮುಂತಾದ ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿವೆ. ಇದೀಗ ಮೊಬೈಲ್‌ ಕಂಪನಿಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಸರ್ಕಾರ ಮತ್ತು ಟೆಲಿಕಾಂ ನಿಯಂತ್ರಕ ಸಂಸ್ಥೆ ಟೆಲಿಕಾಂ ಕಂಪನಿಗಳ ಬೆಲೆ ಹೆಚ್ಚಳವನ್ನು ತಡೆಯುವುದಿಲ್ಲ ಮತ್ತು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Price Hike
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕೆಲ ದಿನಗಳ ಹಿಂದೆ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸಿವೆ (Price Hike). ರಿಲಯನ್ಸ್‌ ಜಿಯೋ (Reliance Jio), ಏರ್‌ಟೆಲ್‌ (Airtel), ವೋಡಾಫೋನ್‌ ಐಡಿಯಾ (Vodafone Idea) ಮುಂತಾದ ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿವೆ. ಇದೀಗ ಮೊಬೈಲ್‌ ಕಂಪನಿಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದು ಸಾಧ್ಯವೆ? ಈ ಕುರಿತಾದ ನಿಯಮ ಏನು ಹೇಳುತ್ತದೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಸರ್ಕಾರ ಮತ್ತು ಟೆಲಿಕಾಂ ನಿಯಂತ್ರಕ ಸಂಸ್ಥೆ ಟೆಲಿಕಾಂ ಕಂಪನಿಗಳ ಬೆಲೆ ಹೆಚ್ಚಳವನ್ನು ತಡೆಯುವುದಿಲ್ಲ ಮತ್ತು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ʼʼಹಾಗೆ ನೋಡಿದರೆ ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿನ ದರ ಇನ್ನೂ ಅಗ್ಗವಾಗಿದೆ. ಕಂಪನಿಗಳು ಸೇವೆಗಳ ಗುಣಮಟ್ಟದ ಸೇವೆ ನೀಡಲು ತಮ್ಮ ಗಮನವನ್ನು ಹರಿಸಬೇಕುʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಟೆಲಿಕಾಂ ಕ್ಷೇತ್ರದಲ್ಲಿ ಸಾಕಷ್ಟು ಸ್ಪರ್ಧೆ ಇದೆ. ಇದೀಗ ಸರ್ಕಾರ ಮಧ್ಯಪ್ರವೇಶಿಸುವಷ್ಟು ಪರಿಸ್ಥಿತಿ ಗಂಭೀರವಾಗಿಲ್ಲ. ಸುಮಾರು ಮೂರು ವರ್ಷಗಳ ನಂತರ ಸ್ವಲ್ಪ ಮಟ್ಟಿನ ಬೆಲೆ ಏರಿಕೆಯಾಗಿದೆಯಷ್ಟೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬೆಲೆ ಏರಿಕೆಯ ಬಿಸಿ

ಈ ವಾರ ಭಾರತದ ಮೂರು ಪ್ರಮುಖ ಖಾಸಗಿ ಟೆಲಿಕಾಂ ಕಂಪನಿಗಳಾದ ರಿಲಯನ್ಸ್‌ ಜಿಯೋ, ಏರ್‌ಟೆಲ್‌ ಮತ್ತು ವೋಡಾಫೋನ್‌ ಐಡಿಯಾ ಮೊಬೈಲ್ ರೀಚಾರ್ಜ್‌ ದರವನ್ನು ಶೇ. 11-25ರಷ್ಟು ಹೆಚ್ಚಿಸಿವೆ. ʼʼಮೊಬೈಲ್‌ ರೀಚಾರ್ಜ್‌ ದರದಲ್ಲಿನ ಶೇ. 13 ಹೆಚ್ಚಳವು ತೀರಾ ಹೊರೆ ಎನಿಸಿಕೊಂಡಿಲ್ಲ. ದರ ಹೆಚ್ಚಳ ಮಧ್ಯಮವಾಗಿದೆ. ಇದು ಮನೆಯ ವೆಚ್ಚದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿಲ್ಲʼʼ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (Trai) ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿ, “ಟೆಲಿಕಾಂ ಕಂಪನಿಗಳು ದರ ನಿರ್ಧರಿಸುವ ವಿಚಾರದಲ್ಲಿ ಸ್ವತಂತ್ರರಾಗಿದ್ದಾರೆ. ಅವರ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಸಿಸುವುದಿಲ್ಲ. ಆದರೆ ಅವರು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಬೇಕು. ಗುಣಮಟ್ಟದಲ್ಲಿ ರಾಜಿಯಾದರೆ ನಾವು ಮಧ್ಯಪ್ರವೇಶಿಸುತ್ತೇವೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

ಬೆಂಗಳೂರು: ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯಲ್ಲಿ (ಟಾರೀಫ್‌ ದರಪಟ್ಟಿಯನ್ನು) ಹೆಚ್ಚಳ ಮಾಡಿವೆ. ಮೂರು ಟೆಲಿಕಾಂಗಳ ಬೆಲೆ ಏರಿಕೆ ಕಂಡ ಯೋಜನೆಗಳ ಹೊಸ ದರಗಳನ್ನು ಹೋಲಿಸಿ ನೋಡಿದರೆ ನಮ್ಮ ಕಂಪನಿಯ ದರವೇ ಕಡಿಮೆ ಎಂದು ರಿಲಯನ್ಸ್‌ ಜಿಯೋ ಟೆಲಿಕಾಂ ಹೇಳಿಕೊಂಡಿದೆ.

ಜಿಯೋ ಸೇರಿದಂತೆ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಸಹ ತಮ್ಮ ಯೋಜನೆಗಳ ಬೆಲೆ ಏರಿಕೆ ಮಾಡಿವೆ. ಅದಾಗ್ಯೂ ಜಿಯೋದ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಪ್ರತಿಸ್ಪರ್ಧಿಗಳಿಗಿಂತ ಶೇ. 20ರಷ್ಟು ಕಡಿಮೆ ಬೆಲೆಯಲ್ಲಿ ಲಭ್ಯ. ಹಾಗೆಯೇ ಜಿಯೋ ಸಂಸ್ಥೆಯ ಅತ್ಯಂತ ಕಡಿಮೆ ಪೋಸ್ಟ್‌ಪೇಯ್ಡ್ ಯೋಜನೆಯು ಹತ್ತಿರದ ಪ್ರತಿಸ್ಪರ್ಧಿಯ ಪೋಸ್ಟ್ ಪೇಯ್ಡ್ ಪ್ಲಾನ್‌ಗಿಂತ ಶೇ. 29ರಷ್ಟು ಕಡಿಮೆಯಾಗಿದೆ ಎಂದು ಈ ಕಂಪನಿ ಹೇಳಿದೆ.

Continue Reading

ವಾಣಿಜ್ಯ

Credit Card New Rules: ಕ್ರೆಡಿಟ್ ಕಾರ್ಡ್‌ಗೆ ಹೊಸ ನಿಯಮ; ಗ್ರಾಹಕರು ಈಗ ಏನು ಮಾಡಬೇಕು?

ಎಲ್ಲಾ ಕ್ರೆಡಿಟ್ ಕಾರ್ಡ್ (Credit Card New Rules) ಬಿಲ್ ಪಾವತಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ನಿರ್ವಹಿಸುವ ಭಾರತ್ ಬಿಲ್ ಪಾವತಿ ವ್ಯವಸ್ಥೆ ಮೂಲಕ ರವಾನಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ ಆದೇಶ ಮಾಡಿದ್ದು, ಇದು ಕ್ರೆಡಿಟ್ ಕಾರ್ಡ್ ಬಳಸುತ್ತಿರುವ ಗ್ರಾಹಕರ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Credit Card New Rules
Koo

ಕ್ರೆಡಿಟ್ ಕಾರ್ಡ್ (Credit Card New Rules) ಬಿಲ್ ಪಾವತಿ (bill payment) ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಮಾಡಲಾಗಿದ್ದು, ಇದು ಗ್ರಾಹಕರ ಮೇಲೆ ಪರಿಣಾಮ ಬೀರಲಿದೆ. ಎಲ್ಲಾ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ನಿರ್ವಹಿಸುವ ಭಾರತ್ ಬಿಲ್ ಪಾವತಿ ವ್ಯವಸ್ಥೆ (BBPS) ಮೂಲಕ ರವಾನಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ (RBI) ಆದೇಶದಲ್ಲಿ ತಿಳಿಸಿದೆ.

ಆದರೆ, ಕ್ರೆಡಿಟ್ ಕಾರ್ಡ್ ಪಾವತಿಗಳಿಗಾಗಿ CRED ಮತ್ತು PhonePe ನಂತಹ ಜನಪ್ರಿಯ ಅಪ್ಲಿಕೇಶನ್‌ಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ತಮ್ಮ ಬ್ಯಾಂಕ್‌ಗಳು ಇನ್ನೂ ಸಕ್ರಿಯವಾಗಿಲ್ಲ ಎಂದು ಅನೇಕ ಗ್ರಾಹಕರು ದೂರಿದ್ದಾರೆ.

ಬ್ಯಾಂಕ್ ಏಕೀಕರಣದ ಪ್ರಸ್ತುತ ಸ್ಥಿತಿ ಏನಿದೆ?

ಭಾರತದಲ್ಲಿ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಲು ಅಧಿಕಾರ ಹೊಂದಿರುವ 34 ಬ್ಯಾಂಕ್‌ಗಳಲ್ಲಿ 12 ಮಾತ್ರ ಪ್ರಸ್ತುತ BBPS ಪ್ಲಾಟ್‌ಫಾರ್ಮ್‌ನಲ್ಲಿ ಇದೆ. ಉಳಿದ 22 ಬ್ಯಾಂಕ್‌ಗಳು ಇನ್ನೂ ವ್ಯವಸ್ಥೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಲ್ಲಿವೆ. ಪ್ರಸ್ತುತ ಎಸ್‌ಬಿಐ ಕಾರ್ಡ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಯು ಸಣ್ಣ ಹಣಕಾಸು ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಫೆಡರಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸಾರಸ್ವತ್ ಬ್ಯಾಂಕ್ ಗಳು ಬಿಬಿಪಿಎಸ್ ಪ್ಲಾಟ್ ಫಾರ್ಮ್ ನಲ್ಲಿ ಇವೆ.

ಆಕ್ಸಿಸ್ ಬ್ಯಾಂಕ್, ಹೆಚ್ ಡಿಎಫ್ ಸಿ ಬ್ಯಾಂಕ್, ಐಡಿಎಫ್ ಸಿ ಫಸ್ಟ್ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಯೆಸ್ ಬ್ಯಾಂಕ್ ಗಳು ಸೇರಿದಂತೆ ಇನ್ನು ಹಲವು ಬ್ಯಾಂಕ್ ಗಳು ಬಿಬಿಪಿಎಸ್ ನೊಂದಿಗೆ ಸೇರುವ ಪ್ರಯತ್ನದಲ್ಲಿದೆ.

ಇನ್ನೂ ಅಪ್‌ಡೇಟ್‌ ಆಗಿಲ್ಲ ಏಕೆ?

ಕೆಲವು ಬ್ಯಾಂಕ್‌ಗಳು ಬಿಬಿಪಿಎಸ್ ಅನ್ನು ಅಳವಡಿಸಿಕೊಳ್ಳುವಲ್ಲಿ ವಿಳಂಬವನ್ನು ಅನುಸರಿಸಲು ಹಲವಾರು ಅಂಶಗಳು ಕಾರಣವೆಂದು ಹೇಳಬಹುದು. ಏಕೀಕರಣವು ಅಸ್ತಿತ್ವದಲ್ಲಿರುವ ಸಿಸ್ಟಮ್‌ಗಳಿಗೆ ಗಮನಾರ್ಹವಾದ ನವೀಕರಣಗಳ ಅಗತ್ಯವಿದೆ. ಇದು ಸಂಕೀರ್ಣವಾಗಿದ್ದು, ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಮತ್ತು ಇದು ದುಬಾರಿ ಪ್ರಕ್ರಿಯೆಯಾಗಿದೆ.

ಕೆಲವು ಬ್ಯಾಂಕುಗಳು ಈ ಪ್ರಕ್ರಿಯೆಯನ್ನು ಸಮರ್ಥವಾಗಿ ಕೈಗೊಳ್ಳಲು ಅಗತ್ಯವಾದ ಸಂಪನ್ಮೂಲಗಳು ಅಥವಾ ತಾಂತ್ರಿಕ ಸಾಮರ್ಥ್ಯಗಳನ್ನು ಹೊಂದಿಲ್ಲ. ಇದಲ್ಲದೆ, ಬ್ಯಾಂಕ್‌ಗಳು ಬಿಲ್ ಪಾವತಿ ಸೌಲಭ್ಯಕ್ಕಿಂತ ಹೆಚ್ಚು ನಿರ್ಣಾಯಕ ಅಥವಾ ಲಾಭದಾಯಕವೆಂದು ಪರಿಗಣಿಸುವ ಡಿಜಿಟಲ್ ಬ್ಯಾಂಕಿಂಗ್ ಅಥವಾ ಹಣಕಾಸು ಸೇವೆಗಳ ಇತರ ಕ್ಷೇತ್ರಗಳಿಗೆ ಆದ್ಯತೆ ನೀಡುತ್ತಿದೆ. ಹೆಚ್ಚುವರಿಯಾಗಿ, ಅನೇಕ ಬ್ಯಾಂಕುಗಳು ತಮ್ಮದೇ ಆದ ಪಾವತಿ ವ್ಯವಸ್ಥೆಯನ್ನು ಹೊಂದಿವೆ ಮತ್ತು ಗ್ರಾಹಕರನ್ನು ತಮ್ಮ ಪರಿಸರ ವ್ಯವಸ್ಥೆಯೊಳಗೆ ನಿಕಟ ಸಂಬಂಧಗಳನ್ನು ಕಾಪಾಡಿಕೊಳ್ಳಲು ಮತ್ತು ವಹಿವಾಟಿನ ಮೇಲೆ ನಿಯಂತ್ರಣವನ್ನು ಇರಿಸಿಕೊಳ್ಳಲು ಆದ್ಯತೆ ನೀಡುತ್ತಿವೆ. ಹಾಗಾಗಿ ಈ ಅಪ್‌ಡೇಟ್‌ ಪ್ರಕ್ರಿಯೆ ವಿಳಂಬವಾಗಿದೆ.

ಏನು ಇದರ ಪರಿಣಾಮ?

ಆರ್‌ಬಿಐನ ಹೊಸ ಆದೇಶವು ಪ್ರಾಥಮಿಕವಾಗಿ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳನ್ನು ಅವಲಂಬಿಸಿರುವ ಕ್ರೆಡಿಟ್ ಕಾರ್ಡ್ ಬಳಕೆದಾರರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಈ ಪ್ಲಾಟ್‌ಫಾರ್ಮ್‌ಗಳು ಕೊಡುಗೆಗಳನ್ನು ನೀಡುತ್ತಿತ್ತು.

ಬ್ಯಾಂಕ್‌ಗಳು ಬಿಬಿಪಿಎಸ್ ಅನ್ನು ಅಳವಡಿಸಿಕೊಳ್ಳದಿದ್ದರೆ ಬಳಕೆದಾರರು ತಮ್ಮ ಪಾವತಿಗಳೊಂದಿಗೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಬಿಬಿಪಿಎಸ್‌ನ ಹಿಂದಿನ ಮುಖ್ಯ ಆಲೋಚನೆಯು ಬಿಲ್ ಪಾವತಿ ಪ್ರಕ್ರಿಯೆಯನ್ನು ಕೇಂದ್ರೀಕರಿಸುವುದು ಮತ್ತು ಸುಗಮಗೊಳಿಸುವುದು. ಬಳಕೆದಾರರಿಗೆ ಒಂದೇ ಪ್ಲಾಟ್‌ಫಾರ್ಮ್‌ನಿಂದ ಬಹು ಬಿಲ್‌ಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಬಿಬಿಪಿಎಸ್ ಗೆ ಪ್ರವೇಶವಿಲ್ಲದೆ ಬಳಕೆದಾರರು ಹಲವಾರು ಪ್ಲಾಟ್‌ಫಾರ್ಮ್‌ಗಳನ್ನು ನ್ಯಾವಿಗೇಟ್ ಮಾಡಬೇಕಾಗಬಹುದು ಅಥವಾ ಹಲವಾರು ಪಾವತಿ ಸೆಟಪ್‌ಗಳನ್ನು ನಿರ್ವಹಿಸಬೇಕಾಗಬಹುದು. ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸಬಹುದು.

ಬಿಬಿಪಿಎಸ್ ನೊಂದಿಗೆ ಬ್ಯಾಂಕ್‌ಗಳನ್ನು ಸಂಯೋಜಿಸದ ಕ್ರೆಡಿಟ್ ಕಾರ್ಡ್ ಬಳಕೆದಾರರು ಕೆಲವು ಬಿಲ್ ಪಾವತಿಗಳಿಗೆ ತಮ್ಮ ಕಾರ್ಡ್‌ಗಳನ್ನು ಬಳಸಲು ಸಾಧ್ಯವಾಗದಿರಬಹುದು.

ಇದನ್ನೂ ಓದಿ: SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

ಹಾಗಾದರೆ ಗ್ರಾಹಕರು ಏನು ಮಾಡಬಹುದು?

ಸದ್ಯಕ್ಕೆ ಬಿಬಿಪಿಎಸ್ ಪ್ಲಾಟ್‌ಫಾರ್ಮ್‌ನಲ್ಲಿ ತಮ್ಮ ಬ್ಯಾಂಕ್ ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಲು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಸಲಹೆ ನೀಡಲಾಗುತ್ತಿದೆ. ಈ ಮಾಹಿತಿಯು ಸಾಮಾನ್ಯವಾಗಿ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಥವಾ ಗ್ರಾಹಕ ಸೇವಾ ಚಾನೆಲ್‌ಗಳ ಮೂಲಕ ಲಭ್ಯವಿರುತ್ತದೆ. ಬ್ಯಾಂಕ್‌ಗಳು ಇನ್ನೂ ಬಿಬಿಪಿಎಸ್ ನಲ್ಲಿ ಸೇರಿಕೊಳ್ಳದೇ ಇದ್ದರೆ ತಮ್ಮ ಬಿಲ್ ಪಾವತಿ ಕಷ್ಟವಾಗಬಹುದು. ಗಡುವು ಮೀರಿದ ದಂಡ ಶುಲ್ಕದಿಂದ ಪಾರಾಗಲು ಪರ್ಯಾಯ ಪಾವತಿ ವಿಧಾನಗಳನ್ನು ಹುಡುಕಿಕೊಳ್ಳಬೇಕಾಗುತ್ತದೆ. ಆಯಾ ಬ್ಯಾಂಕ್‌ನ ಕಾಲ್‌ ಸೆಂಟರ್‌ಗೆ ಕರೆ ಮಾಡಿ ನೆರವು ಕೋರಬೇಕು.

Continue Reading

ಬೆಂಗಳೂರು

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

Toyota Kirloskar Motor: ಸಾಮರ್ಥ್ಯ ವರ್ಧನೆಯನ್ನು ಉತ್ತೇಜಿಸುವ ಪ್ರಯತ್ನಗಳ ಮುಂದುವರಿದ ಭಾಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಗೆ ಬೆಂಬಲ ನೀಡಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಯೊಂದಿಗೆ ಕೈಜೋಡಿಸಿದೆ.

VISTARANEWS.COM


on

Toyota Kirloskar Motor has joined hands with the IISC to support the establishment of a Mobility Engineering Laboratory
Koo

ಬೆಂಗಳೂರು: ಸಾಮರ್ಥ್ಯ ವರ್ಧನೆಯನ್ನು ಉತ್ತೇಜಿಸುವ ಪ್ರಯತ್ನಗಳ ಮುಂದುವರಿದ ಭಾಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) (Toyota Kirloskar Motor) ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಗೆ ಬೆಂಬಲ ನೀಡಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಯೊಂದಿಗೆ ಕೈಜೋಡಿಸಿದೆ.

ಭವಿಷ್ಯದ ಸಾಮರ್ಥ್ಯವನ್ನು ಪೂರೈಸಬಹುದಾದ ಅಪೇಕ್ಷಿತ ಪರಿಸರ ವ್ಯವಸ್ಥೆಯನ್ನು ರಚಿಸಲು ಉದ್ಯಮ ಮತ್ತು ಶಿಕ್ಷಣ ಸಂಸ್ಥೆಗಳು ಒಗ್ಗೂಡುವ ಅಗತ್ಯವನ್ನು ಗುರುತಿಸಿ, ಐಐಎಸ್‌ಸಿ, ಈ ಪ್ರವರ್ತಕ ಕಾರ್ಯಕ್ರಮವನ್ನು ಕಲಿಕೆಯ ಕ್ಷೇತ್ರದಲ್ಲಿ ಟಿಕೆಎಂ ಬೆಂಬಲಿಸುತ್ತದೆ. ಸುಧಾರಿತ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಬೋಧನೆಯನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದುವ ಜೊತೆಗೆ ಉನ್ನತ ಮಟ್ಟದ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದೆ.

ಚಲನಶೀಲತೆ ವಲಯವು ಹವಾಮಾನ ಬದಲಾವಣೆಯಿಂದ ಪ್ರೇರಿತವಾದ ಮಾದರಿ ಬದಲಾವಣೆಯನ್ನು ಅನುಭವಿಸುತ್ತಿದೆ. ಇದು ಪಳೆಯುಳಿಕೆ ಇಂಧನಗಳಿಂದ ದೂರ ಸರಿಯುವ ಅಗತ್ಯವನ್ನು ಪ್ರೇರೇಪಿಸುತ್ತದೆ. ಭಾರತದಲ್ಲಿ ಆಟೋಮೋಟಿವ್ ಉದ್ಯಮವು ಹಸಿರು ತಂತ್ರಜ್ಞಾನಗಳಿಗೆ ವೇಗವಾಗಿ ಬದಲಾಗುವ ಮತ್ತು ಜಾಗತಿಕವಾಗಿ ನಡೆಯುತ್ತಿರುವ ಇಂಧನ ಪರಿವರ್ತನೆಯನ್ನು ಸ್ವೀಕರಿಸುವ ಸವಾಲುಗಳನ್ನು ಎದುರಿಸುತ್ತಿದೆ. ಅದೇ ಸಮಯದಲ್ಲಿ ಅದರ ಸ್ಪರ್ಧಾತ್ಮಕತೆಯನ್ನು ಉಳಿಸಿಕೊಳ್ಳುತ್ತದೆ.

ಇದನ್ನೂ ಓದಿ: Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಐಐಎಸ್‌ಸಿ ತನ್ನ ಬಲವಾದ ಉದ್ಯಮ ಸಂಪರ್ಕಗಳು ಮತ್ತು ಉತ್ಕೃಷ್ಟತೆಯ ಬದ್ಧತೆಯೊಂದಿಗೆ ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿಯನ್ನು ಬಳಸಿಕೊಳ್ಳಲು ಸೂಕ್ತ ಸ್ಥಾನದಲ್ಲಿದೆ. ಈ ಸೌಲಭ್ಯವು ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಸುಧಾರಿತ ಚಲನಶೀಲತೆ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಅಗತ್ಯವಾದ ಬಹುಶಿಸ್ತೀಯ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸಲು ಸಹಾಯ ಮಾಡುತ್ತದೆ. ಸಮಗ್ರ ಪರೀಕ್ಷೆ ಮತ್ತು ಅಭಿವೃದ್ಧಿಗಾಗಿ ಹಾರ್ಡ್‌ವೇರ್-ಇನ್-ಲೂಪ್ (ಎಚ್‌ಐಎಲ್) ಸಿಮ್ಯುಲೇಶನ್ ಅನ್ನು ಬಳಸಿಕೊಂಡು ಪ್ರಯೋಗಾಲಯವು ವಿದ್ಯುದ್ದೀಕೃತ ವಾಹನ ಪವರ್ ಟ್ರೇನ್ ತಂತ್ರಜ್ಞಾನಗಳ ಮೇಲೆ ಕೇಂದ್ರೀಕರಿಸುತ್ತದೆ.

ಹಣಕಾಸು ವರ್ಷ 2024 ರಿಂದ 2027 ರವರೆಗೆ, ಟಿಕೆಎಂ ಮೊಬಿಲಿಟಿ ಎಂಜಿನಿಯರಿಂಗ್ ಪ್ರಯೋಗಾಲಯದ ಸ್ಥಾಪನೆ ಮತ್ತು ಹೈಸ್ಪೀಡ್ ಡೈನಮೋಮೀಟರ್, ಬ್ಯಾಟರಿ ಎಮ್ಯುಲೇಟರ್, ಆಟೋಮೇಷನ್ ಮತ್ತು ನಿಯಂತ್ರಣ ವ್ಯವಸ್ಥೆಗಳು, ವಾಹನ ಸಿಮ್ಯುಲೇಶನ್ ಸಾಫ್ಟ್‌ವೇರ್ ಮತ್ತು ಮೋಟರ್ಸ್ ಮತ್ತು ಎಂಜಿನ್‌ಗಾಗಿ ಮೌಂಟಿಂಗ್ ಹಾರ್ಡ್‌ವೇರ್‌ನಂತಹ ಅಗತ್ಯ ಉಪಕರಣಗಳು ಮತ್ತು ಮೂಲಸೌಕರ್ಯಗಳ ಖರೀದಿಗೆ ಬೆಂಬಲ ನೀಡುತ್ತದೆ. ಈ ಪ್ರಯೋಗಾಲಯವು ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಂಶೋಧನೆಗೆ ಬೆಂಬಲ ನೀಡಲಿದೆ.

ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿಯ ಗಮನಾರ್ಹ ಲಕ್ಷಣವೆಂದರೆ ವಿದ್ಯುದ್ದೀಕೃತ ವಾಹನ ಪವರ್ ಟ್ರೇನ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಹಾರ್ಡ್‌ವೇರ್-ಇನ್-ಲೂಪ್ (ಎಚ್ ಐಎಲ್) ಪರೀಕ್ಷಾ ಸೌಲಭ್ಯ. ಎಚ್ಐಎಲ್ ಸಿಮ್ಯುಲೇಶನ್ ರಿಯಲ್-ವರ್ಲ್ಡ್ ಮಾಪನಗಳನ್ನು ಸಿಮ್ಯುಲೇಶನ್‌ಗಳೊಂದಿಗೆ ಸಂಯೋಜಿಸುತ್ತದೆ. ಇದು ಪುನರುತ್ಪಾದಕ, ವೇಗದ ಮತ್ತು ವೆಚ್ಚ-ಪರಿಣಾಮಕಾರಿ ಪರೀಕ್ಷೆಗೆ ಅನುವು ಮಾಡಿಕೊಡುತ್ತದೆ. ಇದು ವಾಹನ ಅಭಿವೃದ್ಧಿಗೆ ನಿರ್ಣಾಯಕವಾಗಿದೆ, ಸಿಮ್ಯುಲೇಟೆಡ್ ರಿಯಲ್-ವರ್ಲ್ಡ್ ಚಾಲನಾ ಪರಿಸ್ಥಿತಿಗಳಲ್ಲಿ ಎಂಜಿನ್‌ಗಳು, ಮೋಟರ್‌ಗಳು ಮತ್ತು ಬ್ಯಾಟರಿಗಳಂತಹ ವೈಯಕ್ತಿಕ ಘಟಕಗಳ ಪರೀಕ್ಷೆಯನ್ನು ಸಕ್ರಿಯಗೊಳಿಸುತ್ತದೆ.

ಇದನ್ನೂ ಓದಿ: Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

ಈ ಪ್ರಯೋಗಾಲಯವು ವಾಹನ ಡ್ರೈವ್ ಟ್ರೇನ್ ಸಂರಚನೆಗಳು ಮತ್ತು ನಿಯಂತ್ರಣ ತಂತ್ರಗಳ ವಿನ್ಯಾಸ ಮತ್ತು ಅಭಿವೃದ್ಧಿಗೆ ಅನುಕೂಲ ಮಾಡಿಕೊಡುತ್ತದೆ. ಭೌತಿಕ ಮೂಲಮಾದರಿಗಳಿಗೆ ಸಂಬಂಧಿಸಿದ ವೆಚ್ಚಗಳು ಮತ್ತು ಅಭಿವೃದ್ಧಿ ಸಮಯವನ್ನು ಕಡಿಮೆ ಮಾಡುವಾಗ ಸುರಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಖಚಿತಪಡಿಸುತ್ತದೆ.

ಈ ಬಗ್ಗೆ ಐಐಎಸ್‌ಸಿ ನಿರ್ದೇಶಕ ಪ್ರೊ.ಜಿ.ರಂಗರಾಜನ್ ಮಾತನಾಡಿ, ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪಿಸಲು ಟಿಕೆಎಂನೊಂದಿಗೆ ಕೈಜೋಡಿಸಲು ನಾವು ಸಂತೋಷಪಡುತ್ತೇವೆ. ಈ ಸೌಲಭ್ಯವು ನಮ್ಮ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಎಮಿಷನ್ ಕಡಿತ ಮತ್ತು ಇಂಧನ ದಕ್ಷತೆ ಸೇರಿದಂತೆ ವಾಹನ ಉದ್ಯಮದಲ್ಲಿನ ನಿರ್ಣಾಯಕ ಸವಾಲುಗಳನ್ನು ಎದುರಿಸಲು ಅತ್ಯಾಧುನಿಕ ಉಪಕರಣಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುತ್ತದೆ.

ಟಿಕೆಎಂನೊಂದಿಗಿನ ಸಹಯೋಗವು ಶೈಕ್ಷಣಿಕ ಮತ್ತು ಉದ್ಯಮದ ಅತ್ಯುತ್ತಮ ಮನಸ್ಸುಗಳನ್ನು ಒಟ್ಟುಗೂಡಿಸುವ ಜತೆಗೆ ನಾವೀನ್ಯತೆ ಮತ್ತು ಉತ್ಕೃಷ್ಟತೆಯ ಸಂಸ್ಕೃತಿಯನ್ನು ಬೆಳೆಸುತ್ತದೆ. ವಿಶೇಷವಾಗಿ ವಿದ್ಯುದೀಕೃತ ವಾಹನ ಪವರ್ ಟ್ರೇನ್ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಈ ಸಹಯೋಗದ ಪರಿಣಾಮವಾಗಿ ನಾವು ಅನೇಕ ಗಮನಾರ್ಹ ಪ್ರಗತಿಗಳನ್ನು ನಿರೀಕ್ಷಿಸುತ್ತೇವೆ. ಮೊಬಿಲಿಟಿ ಎಂಜಿನಿಯರಿಂಗ್‌ನಲ್ಲಿ ನಾವು ಹೊಸದಾಗಿ ಪ್ರಾರಂಭಿಸಿದ ಎಂಟೆಕ್ ಕಾರ್ಯಕ್ರಮವನ್ನು ಬೆಂಬಲಿಸುವಲ್ಲಿ ಪ್ರಯೋಗಾಲಯವು ನಿರ್ಣಾಯಕ ಪಾತ್ರ ವಹಿಸುತ್ತದೆ. ನಾವು ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಆಟೋಮೋಟಿವ್ ಉದ್ಯಮದ ರೂಪಾಂತರವನ್ನು ಮುನ್ನಡೆಸಲು ಅಗತ್ಯವಿರುವ ಕೌಶಲ್ಯ ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ದಾಲ್ವಿ ಮಾತನಾಡಿ, ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆಗೆ ಸಮಾನಾರ್ಥಕವಾಗಿರುವ ಐಐಎಸ್‌ಸಿಯೊಂದಿಗೆ ಪಾಲುದಾರರಾಗಲು ನಮಗೆ ಗೌರವವಿದೆ. ಈ ತಿಳಿವಳಿಕೆ ಒಪ್ಪಂದವು ಚಲನಶೀಲತೆ ಎಂಜಿನಿಯರಿಂಗ್‌ನಲ್ಲಿ ನಾವೀನ್ಯತೆಯನ್ನು ಉತ್ತೇಜಿಸುವ ನಮ್ಮ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ತಾಂತ್ರಿಕ ಪ್ರಗತಿ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ಸಹಯೋಗದ ಶಕ್ತಿಯನ್ನು ನಾವು ನಂಬುತ್ತೇವೆ.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಯನ್ನು ಬೆಂಬಲಿಸುವ ಮೂಲಕ ನಾವು ಸಂಶೋಧನಾ ಮೂಲಸೌಕರ್ಯವನ್ನು ಹೆಚ್ಚಿಸಲು ಮಾತ್ರವಲ್ಲದೆ ಸುಸ್ಥಿರ ಚಲನಶೀಲತೆಯ ಭವಿಷ್ಯದಲ್ಲಿ ಮತ್ತು ಭಾರತದಲ್ಲಿ ನುರಿತ ಎಂಜಿನಿಯರ್‌ಗಳ ಅಭಿವೃದ್ಧಿಗೆ ಬೆಂಬಲ ನೀಡುತ್ತಿದ್ದೇವೆ. ಈ ಪ್ರಯೋಗಾಲಯವು ಪ್ರವರ್ತಕ ಸಂಶೋಧನೆಗೆ ಒಂದು ಕ್ರೂಸಿಬಲ್ ಆಗಿ ಕಾರ್ಯನಿರ್ವಹಿಸುತ್ತದೆ. ಹವಾಮಾನ ಬದಲಾವಣೆ ಮತ್ತು ಸ್ವಚ್ಛ, ಹೆಚ್ಚು ಪರಿಣಾಮಕಾರಿ ಸಾರಿಗೆ ಪರಿಹಾರಗಳ ಅಗತ್ಯದಂತಹ ನಮ್ಮ ಕಾಲದ ಒತ್ತಡದ ಸವಾಲುಗಳನ್ನು ಪರಿಹರಿಸುವ ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ಅನುವು ಮಾಡಿಕೊಡುತ್ತದೆ. ಈ ಕಾರ್ಯಕ್ರಮವು ಅದ್ಭುತ ಸಂಶೋಧನೆಯನ್ನು ವೇಗ ವರ್ಧಿಸುತ್ತದೆ ಎಂದು ನಮಗೆ ವಿಶ್ವಾಸವಿದ್ದು, ಸುಸ್ಥಿರ ಚಲನಶೀಲತೆಯ ಭವಿಷ್ಯವನ್ನು ಮುನ್ನಡೆಸುವ ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಇದು ಪೋಷಿಸುತ್ತದೆ ಎಂದು ತಿಳಿಸಿದ್ದಾರೆ.

Continue Reading
Advertisement
dengue fever mysore death
ಪ್ರಮುಖ ಸುದ್ದಿ3 mins ago

Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

Hathras Stampede
ದೇಶ7 mins ago

Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

Virat Kohli
ಕ್ರೀಡೆ7 mins ago

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Shiva Rajkumar Bhairavana Kone PaaTa Title announce
ಸ್ಯಾಂಡಲ್ ವುಡ್32 mins ago

Shiva Rajkumar: ‘ಭೈರವನ ಕೊನೆ ಪಾಠ’ದಲ್ಲಿ ಶಿವರಾಜ್‌ಕುಮಾರ್‌; ಹ್ಯಾಟ್ರಿಕ್ ಹೀರೊಗೆ ಹೇಮಂತ್‌ ರಾವ್‌ ಆ್ಯಕ್ಷನ್‌ ಕಟ್‌!

rain news no entry falls
ಪ್ರಮುಖ ಸುದ್ದಿ42 mins ago

Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

Tornado Effect in Udupi
ಉಡುಪಿ47 mins ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

MS Dhoni
ಕ್ರೀಡೆ52 mins ago

MS Dhoni: ಪತ್ನಿಗೆ ಕೇಕ್​ ತಿನ್ನಿಸಿ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಧೋನಿ; ವಿಡಿಯೊ ವೈರಲ್​

Hathras Stampede
ದೇಶ1 hour ago

Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

Stock Market
ವಾಣಿಜ್ಯ1 hour ago

Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

Team India Arrival
ಕ್ರೀಡೆ1 hour ago

Team India Arrival: ಪ್ರಧಾನಿ ಮೋದಿ ಔತಣ ಕೂಟಕ್ಕೆ ತೆರಳಿದ ಟೀಮ್​ ಇಂಡಿಯಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tornado Effect in Udupi
ಉಡುಪಿ48 mins ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

ಟ್ರೆಂಡಿಂಗ್‌