Site icon Vistara News

Tax devolution : ಕೇಂದ್ರದಿಂದ ಕರ್ನಾಟಕಕ್ಕೆ 4,314 ಕೋಟಿ ರೂ. ತೆರಿಗೆ ಹಣ ಬಿಡುಗಡೆ

cash

ನವ ದೆಹಲಿ: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಬಾಬ್ತು 1,18,280 ಕೋಟಿ ರೂ. ಗಳನ್ನು ಹಂಚಿಕೆ ಮಾಡಿದೆ. ಇದು ಮೂರನೇ ಕಂತಿನ ಹಣವಾಗಿದೆ. (Tax devolution) ಈ ಪೈಕಿ ಕರ್ನಾಟಕಕ್ಕೆ 4,314 ಕೋಟಿ ರೂ. ಹಂಚಿಕೆಯಾಗಿದೆ. ಹಣಕಾಸು ಸಚಿವಾಲಯ ಈ ಬಗ್ಗೆ ಟ್ವೀಟ್‌ ಮಾಡಿದ್ದು, ಯಾವ ರಾಜ್ಯಕ್ಕೆ ಎಷ್ಟು ನೀಡಲಾಗಿದೆ ಎಂಬ ವಿವರವನ್ನು ಪಟ್ಟಿ ನೀಡಿದೆ. ರಾಜ್ಯಗಳಿಗೆ ಬಂಡವಾಳ ವೆಚ್ಚಕ್ಕೆ, ಸಾಮಾಜಿಕ ಕಲ್ಯಾಣ ಯೋಜನೆಗಳ ಜಾರಿಗೆ ಈ ಹಣ ಅನುಕೂಲಕರವಾಗಲಿದೆ.

ಭಾರತದ ಜಿಎಸ್‌ಟಿ ಸಂಗ್ರಹ ಮೇನಲ್ಲಿ 1,57,090 ಕೋಟಿ ರೂ.ಗೆ ಏರಿಕೆಯಾಗಿದೆ. ಅಂದರೆ 12% ಹೆಚ್ಚಳವಾಗಿದೆ ಎಂದು ಹಣಕಾಸು ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿದ ಅಂಕಿ ಅಂಶಗಳು ತಿಳಿಸಿದೆ. (GST) ಭಾರತ ಏಪ್ರಿಲ್‌ನಲ್ಲಿ ದಾಖಲೆಯ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಿತ್ತು. ಇದರೊಂದಿಗೆ ಸತತ 14 ತಿಂಗಳಿಗೆ ಸರಾಸರಿ 1.4 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಜಿಎಸ್‌ಟಿ ಸಂಗ್ರಹವಾದಂತಾಗಿದೆ.

ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ 5ನೇ ಸಲ ಮಾಸಿಕ 1.5 ಲಕ್ಷ ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗಿದೆ. ಕಳೆದ ಮೇನಲ್ಲಿ ಸಂಗ್ರಹವಾಗಿರುವ ಜಿಎಸ್‌ಟಿಯಲ್ಲಿ ಸಿಜಿಎಸ್‌ಟಿ 28,411 ಕೋಟಿ ರೂ, ಎಸ್‌ಜಿಎಸ್‌ಟಿ 35,828 ಕೋಟಿ ರೂ, ಐಜಿಎಸ್‌ ಟಿ 81,368 ಕೋಟಿ ರೂ, ಸೆಸ್‌ 11,489 ಕೋಟಿ ರೂ. ಸಂಗ್ರಹವಾಗಿದೆ.

ಕರ್ನಾಟಕದಲ್ಲಿ 2023ರ ಮೇನಲ್ಲಿ 10,317 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಏಪ್ರಿಲ್‌ನಲ್ಲಿ 9,232 ಕೋಟಿ ರೂ. ಸಂಗ್ರಹವಾಗಿತ್ತು. ಆಮದು ಮಾಡುವ ಸರಕುಗಳಿಂದ ಜಿಎಸ್‌ಟಿ ಸಂಗ್ರಹದಲ್ಲಿ 12% ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಮೇನಲ್ಲಿ 23,536 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು. ತಮಿಳುನಾಡಿನಲ್ಲಿ 8953 ಕೋಟಿ ರೂ. ಸಂಗ್ರಹವಾಗಿತ್ತು. ಕೇರಳದಲ್ಲಿ 2297 ಕೋಟಿ ರೂ, ಪಶ್ಚಿಮ ಬಂಗಾಳದಲ್ಲಿ 5162 ಕೋಟಿ ರೂ, ಗುಜರಾತ್‌ನಲ್ಲಿ 9800 ಕೋಟಿ ರೂ, ಉತ್ತರಪ್ರದೇಶದಲ್ಲಿ 7468 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿತ್ತು.

Exit mobile version