Meta Layoff : ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾದಲ್ಲಿ ಮತ್ತೆ ಸಾವಿರಾರು ಉದ್ಯೋಗ ಕಡಿತ - Vistara News

ಪ್ರಮುಖ ಸುದ್ದಿ

Meta Layoff : ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾದಲ್ಲಿ ಮತ್ತೆ ಸಾವಿರಾರು ಉದ್ಯೋಗ ಕಡಿತ

ಮೆಟಾದಲ್ಲಿ 11,000 ಉದ್ಯೋಗಿಗಳನ್ನು ಮೊದಲ ಹಂತದಲ್ಲಿ (Meta Layoff ) ವಜಾಗೊಳಿಸಲಾಗಿತ್ತು. ಇದೀಗ ಮತ್ತೊಂದು ಸುತ್ತಿನಲ್ಲಿ ಹುದ್ದೆ ಕಡಿತದ ಆತಂಕ ಉಂಟಾಗಿದೆ.

VISTARANEWS.COM


on

Meta Layoffs Is Facebook's popularity falling in India too?! A company's gateway to the elite
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾದಲ್ಲಿ ಮತ್ತೆ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಆರ್ಥಿಕ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ತನ್ನ ಸಿಬ್ಬಂದಿ ಬಲದಲ್ಲಿ 13% ಕಡಿತ ಮಾಡಿದೆ. (Meta Layoff) ಬ್ಲೂಮ್‌ಬರ್ಗ್‌ ವರದಿಯ ಪ್ರಕಾರ ಮೆಟಾದಲ್ಲಿ ಈ ವಾರ ಮತ್ತೆ ಸಾಮೂಹಿಕ ಉದ್ಯೋಗ ಕಡಿತ ನಿರೀಕ್ಷಿಸಲಾಗಿದೆ.

ಮೆಟಾ ಸಿಇಒ ಮಾರ್ಕ್‌ ಜುಕರ್‌ ಬರ್ಗ್‌ ಅವರು ಕಂಪನಿಯ ದಕ್ಷತೆಯನ್ನು ಸುಧಾರಿಸಲು ಉದ್ಯೋಗ ಕಡಿತ ಅನಿವಾರ್ಯ ಎಂದು ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ಮೆಟಾ 11,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು.

ಹೀಗಾಗಿ ತಂತ್ರಜ್ಞಾನ ವಲಯದಲ್ಲಿನ ಸಿಬ್ಬಂದಿ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ. ಜಾಲತಾಣಗಳಲ್ಲೂ ತಮ್ಮ ಆತಂಕವನ್ನು ತೋಡಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

Tomato Price: ಬಿಸಿಲಿನ ತಾಪಕ್ಕೆ ಹೆಚ್ಚಾಗಿ ಫಸಲು ಬಾರದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚುತ್ತಿದೆ. ಜೊತೆಗೆ ಟೊಮ್ಯಾಟೊ ಬೆಳೆಗೆ ಬಿನುಗು ರೋಗ ತಗುಲಿದ ಹಿನ್ನೆಲೆಯಲ್ಲಿ‌ ನಿರೀಕ್ಷಿತ ಫಸಲು ಕೂಡ ಬಂದಿಲ್ಲ.

VISTARANEWS.COM


on

tomato price rise
Koo

ಚಿಕ್ಕಬಳ್ಳಾಪುರ‌: ಟೊಮ್ಯಾಟೊ ಬೆಲೆ (tomato price) ಪುನಃ ನಾನೂರು ರೂಪಾಯಿ ದಾಟಿದೆ. ಹತ್ತು ಕೆಜಿ ಟೊಮ್ಯಾಟೊ ಬಾಕ್ಸ್ ಬೆಲೆ‌ (tomato price rise) ನಾನೂರು ರೂಪಾಯಿ ತಲುಪಿದ್ದು, ಗ್ರಾಹಕರ ಕೈ ಸುಡಲು ಸಿದ್ಧವಾಗಿದೆ.

ಬಿಸಿಲಿನ ತಾಪಕ್ಕೆ ಹೆಚ್ಚಾಗಿ ಫಸಲು ಬಾರದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚುತ್ತಿದೆ. ಜೊತೆಗೆ ಟೊಮ್ಯಾಟೊ ಬೆಳೆಗೆ ಬಿನುಗು ರೋಗ ತಗುಲಿದ ಹಿನ್ನೆಲೆಯಲ್ಲಿ‌ ನಿರೀಕ್ಷಿತ ಫಸಲು ಕೂಡ ಬಂದಿಲ್ಲ. ಆ ಬಾರಿ ಬಿಸಿಲಿನ ಪರಿಣಾಮ ನಿರೀಕ್ಷೆಗಿಂತ ಮೊದಲೇ ನೀರಿನ ಲಭ್ಯತೆ ಕಡಿಮೆಯಾಗಿದೆ. ಬೋರ್ವೆಲ್‌ಗಳಲ್ಲಿಯೂ ನೀರು ಬತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವು ರೈತರು ಟೊಮ್ಯಾಟೋ ಬೆಳೆಯಲು ಮುಂದಾಗಿಲ್ಲ.

ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಟೊಮ್ಯಾಟೊಗೆ ನಾನೂರು ರೂಪಾಯಿ ನಿಗದಿ ಮಾಡಲಾಗಿದೆ. ನಾಳೆ ನಾಡಿದ್ದರಲ್ಲಿ ಮತ್ತಷ್ಟು ಏರಬಹುದು ಎಂದು ನಿರೀಕ್ಷಿಸಲಾಗಿದೆ.

ಬೆಲೆ ಏರಿಕೆಗೆ ಕಾರಣ

ಉತ್ಪಾದನೆಯಲ್ಲಿ ಕುಸಿತ, ಹವಾಮಾನ ವೈಪರೀತ್ಯ, ಅತಿಯಾದ ಬಿಸಿಲು ಹಾಗೂ ಉಷ್ಣ ವಾತಾವರಣದಿಂದ ಬೆಳೆ ಕಡಿಮೆಯಾಗಿ ಬೆಲೆ ಏರಿಕೆಯಾಗಿದೆ. ಒಂದು ಅಧ್ಯಯನದ ಪ್ರಕಾರ ಗ್ರಾಹಕ ಕೊಂಡುಕೊಳ್ಳುವ ಬೆಲೆಯಲ್ಲಿ ರೈತನಿಗೆ ಕೇವಲ ಶೇಕಡಾ 32ರಷ್ಟು ಮಾತ್ರ ದಕ್ಕುತ್ತದೆ.

ಟೊಮೆಟೊ ಹೆಚ್ಚು ಬೆಳೆಯುವುದು ಎಲ್ಲಿ?

ಆಂಧ್ರಪ್ರದೇಶ, ಕರ್ನಾಟಕದ, ಒಡಿಶಾ, ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಪ್ರಮುಖವಾಗಿ ಬೆಳೆಯಲಾಗುತ್ತದೆ. ಈ ರಾಜ್ಯಗಳು ದೇಶದ ಒಟ್ಟು ಉತ್ಪಾದನೆಯು ಶೇಕಡಾ ಐವತ್ತರಷ್ಟು ಕೊಡುಗೆ ನೀಡುತ್ತವೆ. ಛತ್ತೀಸ್ ಗಢ, ಉತ್ತರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ ತೆಲಂಗಾಣ ಶೇಕಡಾ 40 ರಷ್ಟು ಟೊಮೆಟೊ ಉತ್ಪಾದನೆ ಮಾಡುತ್ತವೆ. ಮುಂಗಾರು ಮತ್ತು ಹಿಂಗಾರು ಬೆಳೆಯಾಗಿ ಟೊಮ್ಯಾಟೊ ಬೆಳೆಯಲಾಗುತ್ತದೆ. ಸಾಮಾನ್ಯವಾಗಿ ಮಾರ್ಚ್‌ನಿಂದ ಆಗಸ್ಟ್ ನಡುವೆ ಹಿಂಗಾರು ಬೆಳೆಯಲಾಗುತ್ತದೆ. ಮುಂಗಾರು ಬೆಳೆ ಸೆಪ್ಟಂಬರ್ ತಿಂಗಳಿನಿಂದ ಕೊಯ್ಲಿಗೆ ಬರುತ್ತದೆ. ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆಗಾಲದಲ್ಲಿ ಟೊಮ್ಯಾಟೊ ಬೆಳೆಯುತ್ತಾರೆ. ಬೇಸಿಗೆಯ ಉತ್ಪಾದನೆಯ ಶೇಕಡಾ 90ರಷ್ಟು ಬೆಳೆಯನ್ನು ಆಂಧ್ರ ಪ್ರದೇಶದ ಮದನಪಲ್ಲಿಯಲ್ಲಿ ಬೆಳೆಯುತ್ತಾರೆ.

ಮಾಹಿತಿಗಳ ಪ್ರಕಾರ 2020ರಿಂದ ಟೊಮ್ಯಾಟೊ ಉತ್ಪಾದನೆ ಕಡಿಮೆಯಾಗುತ್ತಿದೆ. 2019-2 0ರಲ್ಲಿ 21.187 ಮಿಲಿಯನ್ ಟನ್ ಗಳಷ್ಟು ಟೊಮ್ಯಾಟೊ ಉತ್ಪಾದನೆ ಆಗಿದ್ದರೆ 2020-21ರಲ್ಲೂ 20.69ಮಿಲಿಯನ್ ಟನ್ ಗೆ ಇಳಿದಿದೆ. 2022-23ರಲ್ಲೂ 20.62 ಮಿಲಿಯನ್ ಟನ್ ಗೆ ಕುಸಿದಿದೆ.

ಇದನ್ನೂ ಓದಿ: Sugar Price: ಟೊಮ್ಯಾಟೊ ‘ಹುಳಿ’ಯಾದ ಬೆನ್ನಲ್ಲೇ ಸಕ್ಕರೆ ‘ಕಹಿ’; ಜನರ ಹಬ್ಬದ ಖುಷಿಗೆ ಬೆಲೆಯೇರಿಕೆ ಬಿಸಿ

Continue Reading

ಪ್ರಮುಖ ಸುದ್ದಿ

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಪ್ರಸಾದ್ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ನಿರಂತರ ಜನಸೇವೆ ಸಲ್ಲಿಸಿದ್ದರು. ಕಳೆದ ಬಾರಿ ಬಿಜೆಪಿ ಸೇರಿ ಸಂಸದರಾಗಿದ್ದ ಅವರು ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು.

VISTARANEWS.COM


on

srinivasa prasad
Koo

ಬೆಂಗಳೂರು: 7 ಬಾರಿ ಸಂಸದರಾಗಿದ್ದ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ ಎಂದೇ ಖ್ಯಾತರಾಗಿದ್ದ ಹಿರಿಯ ರಾಜಕಾರಣಿ, ಮುತ್ಸದ್ಧಿ ವಿ.ಶ್ರೀನಿವಾಸ್ ಪ್ರಸಾದ್ (Srinivasa Prasad) ಇಂದು ಮುಂಜಾನೆ ನಿಧನರಾಗಿದ್ದಾರೆ (Srinivasa Prasad). ಚಾಮರಾಜನಗರ ಸಂಸದರಾಗಿ (Chamarajanagar MP) ಬಹು ದೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿದ್ದ ಪ್ರಸಾದ್ ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು.

ಈ ಹಿರಿಯ ನಾಯಕ, ಸಂಸದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ನಿರಂತರ ಜನಸೇವೆ ಅವರದಾಗಿತ್ತು.

ಕಾಲೇಜು ದಿನಗಳಲ್ಲಿ ಫುಟ್ಬಾಲ್ ಆಟಗಾರನಾಗಿದ್ದ ಶ್ರೀನಿವಾಸ ಪ್ರಸಾದ್‌, ಶಾರದಾ ವಿಲಾಸ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದವರು. ಯೌವನದಲ್ಲೇ ಮುಂಚೂಣಿ ನಾಯಕನಾಗಿದ್ದು ಫುಟ್ಬಾಲ್ ಟೀಮ್​ ಜತೆಗೆ ಏರಿಯಾ ಹುಡುಗರ ಕ್ಯಾಪ್ಟನ್ ಆಗಿದ್ದರು. ಬಲ್ಲಾಳ್ ಸರ್ಕಲ್‌ ನಲ್ಲಿ ಪಡ್ಡೆ ಹುಡುಗರ ಜತೆ ಇರುತ್ತಿದ್ದ ಪ್ರಸಾದ್ ಆಜಾನುಬಾಹುವಾಗಿದ್ದರಲ್ಲದೆ, ಹುಡುಗಿಯರ ಗಮನ ಸೆಳೆಯುತ್ತಿದ್ದರು.

ಅವರ ಪೂರ್ತಿ ಹೆಸರು ವೆಂಕಟಯ್ಯ ಶ್ರೀನಿವಾಸ ಪ್ರಸಾದ್. ಮೈಸೂರಿನ ಅಶೋಕಪುರಂನಲ್ಲಿ 1947ರ ಆಗಸ್ಟ್‌ 6ರಂದು ಜನಿಸಿದ ಇವರ ತಂದೆ ವೆಂಕಟಯ್ಯ, ಪತ್ನಿ ಭಾಗ್ಯಲಕ್ಷ್ಮಿ. ಮೂವರು ಮಕ್ಕಳಿದ್ದಾರೆ. ಮಗಳು ಪ್ರತಿಮಾ ಪ್ರಸಾದ್ ಐ.ಆರ್​.ಎಸ್. ಅಧಿಕಾರಿ, ಪೂರ್ಣಿಮಾ ಪ್ರಸಾದ್ ಮಾಜಿ ಶಾಸಕ ಹರ್ಷವರ್ಧನ್ ಪತ್ನಿ ಹಾಗೂ ಪೂನಂ ಪ್ರಸಾದ್ ಬಿಜೆಪಿ ಮುಖಂಡ ಡಾ.ಮೋಹನ್ ಪತ್ನಿ.

ಅವರು ಜನಪ್ರತಿನಿಧಿಯಾಗಿದ್ದ ಅವಧಿಗಳು:

ಬಿಜೆಪಿ: 2019- 2024
ಕಾಂಗ್ರೆಸ್​: 1983-1996, 1997-1998, 2006-2017
ಜೆಡಿಎಸ್​: 2004-2006
ಜೆಡಿಯು: 1999-2004
ಸಂಯುಕ್ತ ಪಾರ್ಟಿ: 1998-1999
ಪಕ್ಷೇತರ: 1996-1997
ಕಾಂಗ್ರೆಸ್: 1979-1983
ಜನತಾ ಪಾರ್ಟಿ: 1977-1979

ದಲಿತರ ದನಿ

ಶ್ರೀನಿವಾಸ ಪ್ರಸಾದ್ ರಾಜ್ಯದ ಅಗ್ರಮಾನ್ಯ ದಲಿತ ನಾಯಕರಾಗಿದ್ದರಲ್ಲದೆ, ಎಲ್ಲಿಯೇ ದಲಿತರ ಮೇಲೆ ದೌರ್ಜನ್ಯ ನಡೆದರೂ ಮೊದಲು ಖಂಡಿಸುತ್ತಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳ ಪ್ರಖರ ವಾಗ್ಮಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ದಲಿತ ಪ್ರಜ್ಞೆ ಮೂಡಿಸಿದ ನಾಯಕ. ಸಂವಿಧಾನ ಬದಲಾವಣೆ ಸಂಬಂಧ ಅನಂತಕುಮಾರ್ ಹೆಗಡೆ ಮಾತನಾಡಿದ್ದ ಬಗ್ಗೆ ವೇದಿಕೆ ಮೇಲೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದರು.

Srinivasa Prasad

ಸ್ವಾಭಿಮಾನಿ ಶ್ರೀನಿವಾಸ ಪ್ರಸಾದ್

2013ರಿಂದ 2018ರ ಅವಧಿಗೆ ನಂಜನಗೂಡು ಶಾಸಕರಾಗಿದ್ದ ಪ್ರಸಾದ್ ಅವರನ್ನು 2017ರ ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಕೈಬಿಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಶ್ರೀನಿವಾಸ ಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿದ್ದರು. ಸ್ವಾಭಿಮಾನಿ ಸಮಾವೇಶ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ಸಂಘಟಿಸಿ ನಂಜನಗೂಡು, ವರುಣ, ತಿ.ನರಸೀಪುರ, ಚಾಮರಾಜನಗರದಲ್ಲಿ ಸಮಾವೇಶ ಮಾಡಿದ್ದರು.

ಬೂಸಾ ಚಳವಳಿಯಲ್ಲಿ ಮೂಡಿದ ಬಂಡಾಯ ನಾಯಕ

1974ನೇ ಇಸವಿಯಲ್ಲಿ ಆಗ ಸಚಿವರಾಗಿದ್ದ ಬಿ.ಬಸವಲಿಂಗಪ್ಪ ಹೇಳಿಕೆಯಿಂದ ಬೂಸಾ ಚಳವಳಿಯೇ ನಡೆದು ಹೋಯ್ತು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಬಿ.ಬಸವಲಿಂಗಪ್ಪ ರಾಜೀನಾಮೆ ಪಡೆದಿದ್ದರು. ನೇರ, ನಿಷ್ಠುರ ನಡೆ-ನುಡಿಗೆ, ದಕ್ಷ ಆಡಳಿತಕ್ಕೆ ಹೆಸರಾಗಿದ್ದ ಸ್ವಾಭಿಮಾನಿ ನಾಯಕ ಬಿ.ಬಸವಲಿಂಗಪ್ಪ ಅವರಿಂದ ರಾಜೀನಾಮೆ ಪಡೆದದ್ದು ದಲಿತರನ್ನು ರೊಚ್ಚಿಗೆಬ್ಬಿಸಿತ್ತು. ಆಗ ಫುಟ್ಬಾಲ್ ಆಡಿಕೊಂಡಿದ್ದ ಅಶೋಕಪುರಂನ 26ರ ಹರೆಯದ ಯುವಕನ ರಕ್ತವೂ ಕುದಿಯಿತು. ಆ ಕುದಿಯ ಕಾರಣಕ್ಕೆ ರಾಜಕೀಯಕ್ಕೆ ಎಂಟ್ರಿಯಾದವರು ಶ್ರೀನಿವಾಸ ಪ್ರಸಾದ್.

ಕೃಷ್ಣರಾಜ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಯುವಕ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿ ಆ ಮೂಲಕ ಜಿಲ್ಲೆಯ ನಾಯಕ ದೇವರಾಜ ಅರಸುಗೆ ಮುಖಭಂಗ ಮಾಡಿದ್ದ. ರಾಜಕೀಯವಾಗಿ ಗಮನ ಸೆಳೆದಿದ್ದ. 1978ರ ವಿಧಾನಸಭೆ ಚುನಾವಣೆಗೆ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು. 1980ರಲ್ಲಿ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿ, 33 ಹರೆಯದಲ್ಲೇ ಸಂಸತ್ ಪ್ರವೇಶ ಮಾಡಿದರು. 9 ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, 7 ಸಲ ಗೆಲುವು ಕಂಡರು.

ರಾಜಕೀಯದ ಏಳುಬೀಳು

  • ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದ.
  • ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕ.
  • 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ
  • 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವ
  • 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ
  • 2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸೋಲು
  • 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.
  • 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ
  • ಇದನ್ನೂ ಓದಿ: Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ
Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for April 29 2024
Koo

ಚಂದ್ರನು ಸೋಮವಾರವೂ ಮಕರ ರಾಶಿಯಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಿ, ಇದರಿಂದ ನಿಮಗೆ ಆರ್ಥಿಕವಾಗಿ ಪ್ರಗತಿ ಸಿಗಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಧನಸ್ಸು ರಾಶಿಯವರಿಗೆ ಸಂತೋಷ ತುಂಬಿದ ವಾತಾವರಣ ನಿಮ್ಮದಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಹೆಚ್ಚಿದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 07:56 ವಾರ: ಸೋಮವಾರ
ನಕ್ಷತ್ರ: ಪೂರ್ವ ಆಷಾಢ 28:41 ಯೋಗ: ಸಿದ್ಧಿ 24:24
ಕರಣ: ತೈತುಲ 07:56 ಅಮೃತಕಾಲ: ಸೋಮವಾರ ರಾತ್ರಿ 11:56 ರಿಂದ ಮಂಗಳವಾರ ಮುಂಜಾನೆ 01:31
ದಿನದ ವಿಶೇಷ: ಬ್ರಹ್ಮಾವರ ರಥೋತ್ಸವ, ನೊಣವಿನಕೆರೆ ಬೇಟೆರಾಯ ರಥೋತ್ಸವ

ಸೂರ್ಯೋದಯ : 06:00   ಸೂರ್ಯಾಸ್ತ : 06:34

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ
1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲದಿಂದಾಗಿ ನೀವು ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಹೀಗಾಗಿ ಮಾತನಾಡುವಾಗ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಿ, ಇದರಿಂದ ನಿಮಗೆ ಆರ್ಥಿಕವಾಗಿ ಪ್ರಗತಿ ಸಿಗಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ನಡೆಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಹೀಗಾಗಿ ತುಸು ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿಯಾಗುವುದು. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯವನ್ನು ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆಯು ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಬಹದು. ಹೀಗಾಗಿ ಸ್ವಲ್ಪ ತಾಳ್ಮೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ ಉಂಟಾಗಲಿದೆ. ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ನಿಮ್ಮದಾಗಲಿದೆ. ಹಿರಿಯರಿಂದ ಮಾರ್ಗದರ್ಶನ ಪಡೆಯಿರಿ. ಅದು ನಿಮ್ಮ ಗುರಿಗೆ ಸ್ಪಷ್ಟತೆಯನ್ನು ನೀಡಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ನಿಮ್ಮದಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಹೆಚ್ಚಿದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮವನ್ನು ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ, ಅದೇ ಸಮಯದಲ್ಲಿ ಖರ್ಚುಗಳೂ ಹೆಚ್ಚಾಗುತ್ತದೆ. ನಿಮ್ಮ ಬಗ್ಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಹೀಗಾಗಿ ಅದರತ್ತ ಹೆಚ್ಚಿನ ಗಮನವನ್ನು ಕೊಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಈ ವೇಳೆ ನಿಮ್ಮ ಸಂಗಾತಿ ನೀಡುವ ಸಲಹೆ ಹಿತಕರವೆನಿಸಲಿದೆ. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಉಂಟು. ಕೌಟುಂಬಿಕವಾಗಿ ಶುಭಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
tomato price rise
ಕರ್ನಾಟಕ6 mins ago

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

srinivasa prasad
ಪ್ರಮುಖ ಸುದ್ದಿ37 mins ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ45 mins ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sleeping Tips
ಆರೋಗ್ಯ1 hour ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ1 hour ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Karnataka Weather
ಕರ್ನಾಟಕ2 hours ago

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Tooth Decay
ಆರೋಗ್ಯ2 hours ago

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ8 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ8 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202415 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202418 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202420 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202420 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ23 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌