ನವ ದೆಹಲಿ: ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾದಲ್ಲಿ ಮತ್ತೆ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಆರ್ಥಿಕ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ತನ್ನ ಸಿಬ್ಬಂದಿ ಬಲದಲ್ಲಿ 13% ಕಡಿತ ಮಾಡಿದೆ. (Meta Layoff) ಬ್ಲೂಮ್‌ಬರ್ಗ್ ವರದಿಯ ಪ್ರಕಾರ ಮೆಟಾದಲ್ಲಿ ಈ ವಾರ ಮತ್ತೆ ಸಾಮೂಹಿಕ ಉದ್ಯೋಗ ಕಡಿತ ನಿರೀಕ್ಷಿಸಲಾಗಿದೆ.
ಮೆಟಾ ಸಿಇಒ ಮಾರ್ಕ್ ಜುಕರ್ ಬರ್ಗ್ ಅವರು ಕಂಪನಿಯ ದಕ್ಷತೆಯನ್ನು ಸುಧಾರಿಸಲು ಉದ್ಯೋಗ ಕಡಿತ ಅನಿವಾರ್ಯ ಎಂದು ತಿಳಿಸಿದ್ದಾರೆ. ಕಳೆದ ನವೆಂಬರ್‌ನಲ್ಲಿ ಮೆಟಾ 11,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು.
ಹೀಗಾಗಿ ತಂತ್ರಜ್ಞಾನ ವಲಯದಲ್ಲಿನ ಸಿಬ್ಬಂದಿ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ. ಜಾಲತಾಣಗಳಲ್ಲೂ ತಮ್ಮ ಆತಂಕವನ್ನು ತೋಡಿಕೊಂಡಿದ್ದಾರೆ.