ಸ್ಯಾನ್ ಫ್ರಾನ್ಸಿಸ್ಕೊ: ಸಾಮಾಜಿಕ ಜಾಲತಾಣ ದಿಗ್ಗಜ ಟ್ವಿಟರ್‌ನಲ್ಲಿ (Meta lay off) ಇತ್ತೀಚೆಗೆ ಎಲಾನ್ ಮಸ್ಕ್ ಅವರು 3,700ಕ್ಕೂ ಹೆಚ್ಚು ಉದ್ಯೋಗ ಕಡಿತ ಪ್ರಕ್ರಿಯೆಗೆ ಚಾಲನೆ ನೀಡಿರುವ ಬೆನ್ನಲ್ಲೇ, ಮತ್ತೊಂದು ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್‌ಬುಕ್‌ನ ಮಾತೃಸಂಸ್ಥೆಯಲ್ಲಿ ಕೂಡ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬ ವರದಿಯಾಗಿದೆ.
ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಮಾರ್ಕ್ ಜುಕರ್ ಬರ್ಗ್ ನೇತೃತ್ವದ ಮೆಟಾದಲ್ಲಿ ಈ ವಾರ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. 18 ವರ್ಷ ಇತಿಹಾಸವಿರುವ ಫೇಸ್‌ಬುಕ್‌ನ ಮಾತೃಸಂಸ್ಥೆಯಲ್ಲಿ ಇದೇ ಮೊದಲ ಭಾರಿಗೆ ಸಾಮೂಹಿಕ ಉದ್ಯೋಗ ಕಡಿತದ ಆತಂಕ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ.
ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ 87,000 ಉದ್ಯೋಗಿಗಳನ್ನು ಒಳಗೊಂಡಿದೆ. ಕಂಪನಿಯು ಹೆಚ್ಚು ಬೆಳವಣಿಗೆಯ ಅವಕಾಶ ಇರುವ ವಲಯಗಳಲ್ಲಿ ಹೂಡಿಕೆ ಮಾಡಲಿದೆ ಎಂದು ಜುಕರ್ ಬರ್ಗ್ ಇತ್ತೀಚೆಗೆ ಹೇಳಿದ್ದರು. ಕಳೆದ ಮೂರನೇ ತ್ರೈಮಾಸಿಕದಲ್ಲಿ ಮೆಟಾದ ಆದಾಯದಲ್ಲೂ ಇಳಿಕೆಯಾಗಿತ್ತು.