Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು - Vistara News

ವಾಣಿಜ್ಯ

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (Unified Pension Scheme) ಅರ್ಥೈಸಿಕೊಳ್ಳಲು ನೆರವಾಗುವ ಕೆಲವು ಪ್ರಮುಖ ಅಂಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

VISTARANEWS.COM


on

Unified Pension Scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನಿವೃತ್ತಿಯ ಬಳಿಕ ಸರ್ಕಾರಿ ನೌಕರರಿಗೆ (central government employees) ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಉದ್ದೇಶದಿಂದ 23 ಲಕ್ಷ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ʼಏಕೀಕೃತ ಪಿಂಚಣಿ ಯೋಜನೆʼಗೆ (Unified Pension Scheme) ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಯುಪಿಎಸ್‌ ವೈಶಿಷ್ಟ್ಯಗಳೇನು?

1. ಖಚಿತ ಪಿಂಚಣಿ

ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇ. 50ರಷ್ಟು ಖಚಿತವಾದ ಪಿಂಚಣಿಯನ್ನು ಪಡೆಯುತ್ತಾರೆ. 25 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ. ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.

2. ಖಚಿತವಾದ ಕುಟುಂಬ ಪಿಂಚಣಿ

ಅಪಘಾತದಿಂದ ನೌಕರ ಮರಣ ಹೊಂದಿದರೆ ಅವರ ಸಂಗಾತಿಯು ಅಥವಾ ಅವಲಂಬಿತರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಮರಣದ ಮೊದಲು ಉದ್ಯೋಗಿ ಪಡೆಯುತ್ತಿದ್ದ ಪಿಂಚಣಿಯ ಶೇ. 60ರಷ್ಟು ಅವರ ಸಂಗಾತಿಗೆ ಕುಟುಂಬ ಪಿಂಚಣಿಯಾಗಿ ದೊರೆಯುತ್ತದೆ.

3. ಖಚಿತವಾದ ಕನಿಷ್ಠ ಪಿಂಚಣಿ

ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ನಿವೃತ್ತಿಯ ಅನಂತರ ತಿಂಗಳಿಗೆ 10,000 ರೂ. ಕನಿಷ್ಠ ಪಿಂಚಣಿಯ ಖಾತರಿ ಇದೆ.

4. ಹಣದುಬ್ಬರ ಸೂಚ್ಯಂಕ

ಖಚಿತ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ.

5. ದರ ಏರಿಕೆ ಪರಿಹಾರ

ಸೇವೆಯಲ್ಲಿರುವ ಉದ್ಯೋಗಿಗಳಂತೆಯೇ ಯುಪಿಎಸ್ ಅಡಿಯಲ್ಲಿ ನಿವೃತ್ತರಾದ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ದರ ಏರಿಕೆ ಪರಿಹಾರವನ್ನು ಪಡೆಯುತ್ತಾರೆ.


6. ನಿವೃತ್ತಿಯ ಮೇಲೆ ಒಟ್ಟು ಮೊತ್ತ

ಗ್ರಾಚ್ಯುಟಿ ಜೊತೆಗೆ ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತದ ಪಾವತಿಯನ್ನು ಸ್ವೀಕರಿಸುತ್ತಾರೆ. ಈ ಪಾವತಿಯು ವೇತನ ಮತ್ತು ತುಟ್ಟಿ ಭತ್ಯೆ ಸೇರಿ ನಿವೃತ್ತಿಯ ದಿನಾಂಕ ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ. ಈ ಒಟ್ಟು ಮೊತ್ತದ ಪಾವತಿಯು ಖಚಿತವಾದ ಪಿಂಚಣಿಯ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.

7. ಸರ್ಕಾರದ ಕೊಡುಗೆ

ಈ ಪಿಂಚಣಿ ಯೋಜನೆಯಡಿ ಸರ್ಕಾರವು ತನ್ನ ಕೊಡುಗೆಯನ್ನು ಶೇ. 14ರಿಂದ ಶೇ.18.5ಕ್ಕೆ ಹೆಚ್ಚಿಸುತ್ತಿದೆ. ಆದರೆ ನೌಕರರ ಕೈಯಿಂದ ಈಗಿರುವ ಪ್ರಮಾಣದಷ್ಟೇ ಹಣ ಈ ಯೋಜನೆಗೆ ಸಂದಾಯವಾಗುತ್ತದೆ. ಹಾಗಾಗಿ ಇದರಿಂದ ನೌಕರರಿಗೆ ಹೆಚ್ಚು ಪ್ರಯೋಜನ ಸಿಗುವಂತಾಗುತ್ತದೆ.


8. ನಿವೃತ್ತಿ ಹೊಂದಿದವರಿಗೂ ಅನ್ವಯ

ಏಕೀಕೃತ ಪಿಂಚಣಿ ಯೋಜನೆಯ ನಿಬಂಧನೆಗಳು ರಾಷ್ಟ್ರೀಯ ಪಿಂಚಣಿ ಯೋಜನೆ ಹೊಂದಿರುವ ಹಿಂದಿನ ನಿವೃತ್ತರಿಗೆ ಅಂದರೆ ಈಗಾಗಲೇ ನಿವೃತ್ತಿ ಹೊಂದಿದವರಿಗೂ ಅನ್ವಯಿಸುತ್ತದೆ. ಹಿಂದಿನ ಅವಧಿಯ ಬಾಕಿಯನ್ನು ಪಿಪಿಎಫ್ ದರಗಳಲ್ಲಿ ಬಡ್ಡಿಯೊಂದಿಗೆ ಪಾವತಿಸಲಾಗುತ್ತದೆ.

ಇದನ್ನೂ ಓದಿ: Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

9. ಏಕೀಕೃತ ಪಿಂಚಣಿ ಯೋಜನೆಗೆ ಸೇರುವ ಆಯ್ಕೆ

ಅಸ್ತಿತ್ವದಲ್ಲಿರುವ ಎನ್‌ಪಿಎಸ್, ವಿಆರ್‌ಎಸ್ ಜೊತೆಗೆ ಎನ್‌ಪಿಎಸ್ ಜೊತೆಗೆ ಭವಿಷ್ಯದ ಉದ್ಯೋಗಿಗಳು ಯುಪಿಎಸ್‌ಗೆ ಸೇರುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಆಯ್ಕೆಯನ್ನು ಒಮ್ಮೆ ಮಾಡಿಕೊಂಡರೆ ಅದೇ ಅಂತಿಮವಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಯುಪಿಎಸ್ ಅನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ರಾಜ್ಯ ಸರ್ಕಾರಗಳೂ ಅಳವಡಿಸಿಕೊಳ್ಳಬಹುದಾಗಿದೆ. ಆದರೆ ಕೇಂದ್ರದಂತೆ ರಾಜ್ಯ ಸರ್ಕಾರವೂ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಣಿಜ್ಯ LPG ಸಿಲಿಂಡರ್ ಬೆಲೆ ಮತ್ತೆ ಏರಿಕೆ

VISTARANEWS.COM


on

ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ತೈಲ ಸರಬರಾಜಿಗೆ ಅಡ್ಡಿಆತಂಕಗಳು ಉಂಟಾಗಿದ್ದು, ಇದೀಗ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ದೇಶಾದ್ಯಂತ ವಾಣಿಜ್ಯ ಬಳಕೆಯ ಸಿಲಿಂಡರ್‌ ರೂ.42 ರಿಂದ ರೂ.53ಕ್ಕೆ ಏರಿಕೆಯಾಗಿದೆ.
ಈ ಬೆಲೆ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಬೇಕರಿ ಹಾಗೂ ಇತರೆ ವಾಣಿಜ್ಯ ವಲಯಗಳ ಮೇಲೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ.
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್‌ ಬೆಲೆಯಲ್ಲಿ ₹42 ಹೆಚ್ಚಳ ಮಾಡಲಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್‌ ದರ ₹46 ಏರಿಕೆಯಾಗಿದ್ದು, ಹೊಸ ಬೆಲೆ ₹3,113.50ಕ್ಕೆ ತಲುಪಿದೆ.
ಇದರ ಜೊತೆಗೆ 5 ಕೆಜಿ ಎಫ್‌ಟಿಎಲ್ (Free Trade LPG) ಸಿಲಿಂಡರ್‌ ಬೆಲೆಯಲ್ಲೂ ₹11 ಹೆಚ್ಚಳವಾಗಿದೆ. ಪರಿಣಾಮವಾಗಿ 5 ಕೆಜಿ ಸಿಲಿಂಡರ್‌ನ ಹೊಸ ದರ ₹821.50 ಆಗಿದೆ.
ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಏರಿಕೆಯಿಂದ ಆಹಾರೋದ್ಯಮ ಸೇರಿದಂತೆ ವಿವಿಧ ಸೇವಾ ಕ್ಷೇತ್ರಗಳ ನಿರ್ವಹಣಾ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕೆಲವು ವಲಯಗಳಲ್ಲಿ ಉತ್ಪನ್ನ ಮತ್ತು ಸೇವೆಗಳ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest1 hour ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest3 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ5 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest23 hours ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest1 day ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest1 day ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest1 day ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest1 day ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest1 day ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest1 day ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌