Urban cooperative banks: RBI's new rule for the reform of urban cooperative banks, what is the effect?Urban cooperative banks : ನಗರ ಸಹಕಾರಿ ಬ್ಯಾಂಕ್‌ಗಳ ಸುಧಾರಣೆಗೆ ಆರ್‌ಬಿಐ ಹೊಸ ನಿಯಮ ಜಾರಿ, ಪರಿಣಾಮವೇನು? - Vistara News

ಪ್ರಮುಖ ಸುದ್ದಿ

Urban cooperative banks : ನಗರ ಸಹಕಾರಿ ಬ್ಯಾಂಕ್‌ಗಳ ಸುಧಾರಣೆಗೆ ಆರ್‌ಬಿಐ ಹೊಸ ನಿಯಮ ಜಾರಿ, ಪರಿಣಾಮವೇನು?

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ನಗರ ಸಹಕಾರಿ ಬ್ಯಾಂಕ್‌ಗಳ (Urban cooperative banks) ಸುಧಾರಣೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇದರ ಮಹತ್ವವೇನು? ಇಲ್ಲಿದೆ ವಿವರ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೋಮವಾರ ನಗರ ಸಹಕಾರಿ ಬ್ಯಾಂಕ್‌ಗಳ ಸುಧಾರಣೆಗೆ ಮಹತ್ವದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ( Urban cooperative banks ) ನಗರ ಸಹಕಾರಿ ಬ್ಯಾಂಕ್‌ಗಳ ಸ್ಟ್ಯಾಂಡರ್ಡ್‌ ಅಸೆಟ್‌ಗಳಿಗೆ ಪ್ರಾವಿಶನಿಂಗ್‌ ಕುರಿತ ಹೊಸ ನಿಯಮಾಳಿಗಳನ್ನು (ಮುನ್ನೇರ್ಪಾಟು) ಜಾರಿಗೊಳಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರ್‌ಬಿಐ, ನಗರ ಸಹಕಾರಿ ಬ್ಯಾಂಕ್‌ಗಳನ್ನು ನಿಯಂತ್ರಕ ಉದ್ದೇಶಗಳಿಗೆ 1,2,3 ಮತ್ತು 4 ಎಂದು ನಾಲ್ಕು ಸ್ತರಗಳಲ್ಲಿ ವರ್ಗೀಕರಿಸಿತ್ತು. ಇದಕ್ಕೂ ಮುನ್ನ 1 ಮತ್ತು 2 ಸ್ತರಗಳು ಮಾತ್ರ ಇತ್ತು.

ಇದೀಗ ಎರಡನೇ ಹಂತದಲ್ಲಿ ನಗರ ಸಹಕಾರಿ ಬ್ಯಾಂಕ್‌ಗಳ ಪ್ರಾವಿಶನ್‌ ನಿಯಮಗಳನ್ನು ಸುಧಾರಿಸಿದೆ. ಹಾಗಾದರೆ ಸ್ಟ್ಯಾಂಡರ್ಡ್‌ ಅಸೆಟ್‌ಗಳಲ್ಲಿ ಯಾವುದು ಬರುತ್ತದೆ? ಪ್ರಾವಿಶನಿಂಗ್‌ ಎಂದರೇನು? ನೋಡೋಣ.

ಬ್ಯಾಂಕ್‌ಗಳಲ್ಲಿ ಪ್ರಾವಿಶನಿಂಗ್‌ ಎಂದರೆ ಸಾಲ ಮರು ಪಾವತಿಯಾಗುವುದು ಕಷ್ಟವಾಗುತ್ತಿದ್ದು, ಬ್ಯಾಂಕಿಗೆ ನಷ್ಟವಾಗಬಹುದು ಎಂದಿದ್ದರೆ, ಅಂಥ ಸಂಭವನೀಯ ನಷ್ಟಕ್ಕೆ ಪ್ರತಿಯಾಗಿ ನಿರ್ದಿಷ್ಟ ಮೊತ್ತವನ್ನು ಲಾಭದಿಂದ ತೆಗೆದು ಪ್ರತ್ಯೇಕವಾಗಿ ಇಡುವುದು. ಇದನ್ನು ಪ್ರಾವಿಶನಿಂಗ್‌ ( ಮುನ್ನೇರ್ಪಾಟು) ಎನ್ನುತ್ತಾರೆ. ಇದರಿಂದ ಬ್ಯಾಂಕಿನ ಬ್ಯಾಲೆನ್ಸ್‌ ಶೀಟ್‌ ಸ್ವಚ್ಛವಾಗುತ್ತದೆ. ಬ್ಯಾಂಕಿನ ಆರ್ಥಿಕ ಆರೋಗ್ಯ ಚೆನ್ನಾಗಿರುತ್ತದೆ. ತೆರಿಗೆ ಸಂಬಂಧಿಸಿಯೂ ಬ್ಯಾಂಕಿಗೆ ಅನುಕೂಲವಾಗತ್ತದೆ.

cash

ಕೃಷಿ ಮತ್ತು ಸಣ್ಣ ಉದ್ದಿಮೆಗೆ ನೀಡುವ ಸಾಲಗಳು ಸ್ಟ್ಯಾಂಡರ್ಡ್‌ ಅಸೆಟ್‌ ವರ್ಗಕ್ಕೆ ಬರುತ್ತದೆ. ಇದಕ್ಕೆ ಫಂಡ್‌ನ 0.25% ಮೊತ್ತವನ್ನು ಪ್ರಾವಿಶನಿಂಗ್‌ ಇಡಲು ಆರ್‌ಬಿಐ ನಗರ ಸಹಕಾರಿ ಬ್ಯಾಂಕ್‌ಗಳಿಗೆ ಸೂಚಿಸಿದೆ.

ಕಮರ್ಶಿಯಲ್‌ ರಿಯಲ್‌ ಎಸ್ಟೇಟ್‌ (commercial real estate) ವಲಯಕ್ಕೆ ನೀಡುವ ಮುಂಗಡದಲ್ಲಿ ಫಂಡ್‌ನ 1% ಮೊತ್ತವನ್ನು ಪ್ರಾವಿಶನ್‌ ಇಡಲು ಸೂಚಿಸಲಾಗಿದೆ. ಕಮರ್ಶಿಯಲ್‌ ರಿಯಲ್‌ ಎಸ್ಟೇಟ್-ರೆಸಿಡೆನ್ಷಿಯಲ್‌ ಹೌಸಿಂಗ್‌ ಸೆಕ್ಟರ್‌ ಆಗಿದ್ದರೆ ಅನುಕ್ರಮವಾಗಿ 0.75% ಮತ್ತು 0.4% ಪ್ರಾವಿಶನ್‌ಗೆ ಸೂಚಿಸಲಾಗಿದೆ.

ಆರ್‌ಬಿಐ 100 ಕೋಟಿ ರೂ. ತನಕ ಠೇವಣಿ ಇರುವ ನಗರ ಸಹಕಾರಿ ಬ್ಯಾಂಕ್‌ಗಳನ್ನು ಮೊದಲನೇ ಸ್ತರದ (Tier 1) ನಗರ ಸಹಕಾರಿ ಬ್ಯಾಂಕ್‌ಗಳೆಂದು ವರ್ಗೀಕರಿಸಿದೆ. ಎರಡನೇ ಸ್ತರದಲ್ಲಿ 100-1000 ಕೋಟಿ ರೂ. ಠೇವಣಿ, ಮೂರನೇ ಸ್ತರದಲ್ಲಿ 1000-10000 ಕೋಟಿ ರೂ, ಹಾಗೂ ನಾಲ್ಕನೇ ಸ್ತರದಲ್ಲಿ 10,000 ಕೋಟಿ ರೂ.ಗಿಂತ ಮೇಲ್ಪಟ್ಟ ಠೇವಣಿಗಳು ಇರುವ ಬ್ಯಾಂಕ್‌ಗಳನ್ನು ವರ್ಗೀಕರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather Forecast: ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡಿಗೆ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯೊಂದಿಗೆ, ವ್ಯಾಪಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಸುತ್ತಮುತ್ತ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಡಗು, ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್‌ ನೀಡಲಾಗಿದೆ. ಜತೆಗೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನಾಡಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಧನಸ್ಸು ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ,ಕನ್ಯಾ,ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕಟಕ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಕನ್ಯಾ ರಾಶಿಯವರು ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 11:17 ವಾರ: ಮಂಗಳವಾರ
ನಕ್ಷತ್ರ: ಜೇಷ್ಠಾ 28:07 ಯೋಗ: ಆಯುಷ್ಮಾನ್ 06:49
ಕರಣ:ಬಾಲವ 11:17 ಅಮೃತಕಾಲ: ಸಂಜೆ 06:42 ರಿಂದ 08:25
ದಿನದ ವಿಶೇಷ: ಶರನ್ನವರಾತ್ರಿ ಆರನೇ ದಿವಸ ಕಾತ್ಯಾಯಿನಿ ಅವತಾರ.

ಸೂರ್ಯೋದಯ : 06:09   ಸೂರ್ಯಾಸ್ತ : 06:05

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ
12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಚಿಂತಿಸುವಿರಿ. ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ:ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಕೆಲಸ ಕಾರ್ಯಗಳು ನಿಧಾನವಾಗಿರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ ಅವಸರದಲ್ಲಿ ಕೆಲಸ ಮಾಡುವುದು ಬೇಡ.ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬೆಂಗಳೂರು

Food Poisoning : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ದಂಪತಿ ಸ್ಥಿತಿ ಗಂಭೀರ

Food Poisoning : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಮೃತಪಟ್ಟಿದೆ. ಮಗುವಿನ ಜತೆಗೆ ತಂದೆ-ತಾಯಿ ಕೂಡ ಕೇಕ್‌ ತಿಂದು ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಾರೆ. ದಂಪತಿ ಸ್ಥಿತಿ ಕೂಡ ಚಿಂತಾಜನಕವಾಗಿದೆ.

VISTARANEWS.COM


on

By

5-year-old boy dies after eating cake in Bengaluru Couple's condition critical
Koo

ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಕೇಕ್‌ ತಿಂದು ಒಂದೇ ಕುಟುಂಬದ ಮೂವರು (Food Poisoning) ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಧೀರಜ್ (5) ಎಂಬ ಮಗು ಸಾವನ್ನಪ್ಪಿದೆ. ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಾಲರಾಜ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಗನಿಗಾಗಿ ಮನೆಗೆ ಕೇಕ್‌ ತೆಗೆದು ಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜತೆ ಸೇರಿ ಮೂವರು ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ.

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಧೀರಜ್‌ ತೀವ್ರ ಅಸ್ವಸ್ಥಗೊಂಡಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬಾಲರಾಜ್ , ನಾಗಲಕ್ಷ್ಮಿ ದಂಪತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೆಪಿ ಅಗ್ರಹಾರ ಠಾಣೆ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೇಕ್ ತಂದಿದ್ದು ಯಾವ ಬೇಕರಿಯಿಂದ? ಕೇಕ್‌ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಪುಡ್ ಪಾಯನ್ಸ್‌ನಿಂದ ಸಾವು ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ವೈದ್ಯರ ವರದಿಗಾಗಿ ಕಾಯುತ್ತಿದ್ದಾರೆ.

ಬಾಲಕ ಧೀರಜ್‌ ತಂದೆ ಬಾಲರಾಜ್‌ ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ವ್ಯಕ್ತಿಯೊಬ್ಬರು ಕೇಕ್ ಆರ್ಡರ್ ಮಾಡಿ, ನಂತರ ಕ್ಯಾನ್ಸಲ್ ಮಾಡಿದ್ದರಂತೆ. ಹೀಗಾಗಿ ಬಾಲರಾಜ್‌ ಕೇಕ್ ಮನೆಗೆ ತಂದು ಕುಟುಂಬದೊಂದಿಗೆ ತಿಂದಿದ್ದಾರೆ. ನಂತರ ಮೂವರು ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡು ಧೀರಜ್‌ ಮೃತಪಟ್ಟಿದ್ದಾನೆ.
ಸದ್ಯ ಈ ಪ್ರಕರಣ ಹಲವು ಅನುಮಾನ ಮೂಡಿಸಿದೆ. ಕೇಕ್ ನಿಂದನೇ ಘಟನೆ ಸಂಭವಿಸಿದ್ಯಾ? ಅಥವಾ ಆತ್ಮಹತ್ಯೆಗೆ ಏನಾದರೂ ಪ್ರಯತ್ನ ಮಾಡಿದ್ರಾ? ಎಂಬ ಅನುಮಾನ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Electric shock : ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಕ್ಷಣಾರ್ಧದಲ್ಲೆ ಸುಟ್ಟುಕರಕಲು

Electric shock : ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ವಿದ್ಯುತ್‌ ತಂತಿ ಬಿದ್ದಿದ್ದು, ಕ್ಷಣಾರ್ಧದಲ್ಲೆ ಸುಟ್ಟುಕರಕಲಾಗಿದ್ದಾರೆ.

VISTARANEWS.COM


on

By

An electric wire fell on the woman Death due to electric shock
Koo

ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳೆಯೊಬ್ಬರು (Electric shock) ಬಲಿಯಾಗಿದ್ದಾರೆ. ನೆಲಮಂಗಲ ಶಾಸಕ ಶ್ರೀನಿವಾಸ್ ಅವರ ಮನೆ ಸಮೀಪವೇ ಈ ದುರ್ಘಟನೆ ನಡೆದಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕನಹಳ್ಳಿ ಬಳಿ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮಂಜಮ್ಮ (55) ಮೃತ ದುರ್ದೈವಿ.

ಮಂಜಮ್ಮ ಹಾಗೂ ಮತ್ತಿಬ್ಬರು ಮಹಿಳೆಯರು ಸೇರಿ ರಸ್ತೆ ಬದಿ ನಿಂತು ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಹೈಟೆನ್ಷನ್‌ ವೈರ್‌ ಮಂಜಮ್ಮ ಮೇಲೆ ಬಿದ್ದಿದೆ. ಅಷ್ಟೇ ಏಕಾಏಕಿ ಬೆಂಕಿ ಕಿಡಿ ಹೊತ್ತುಕೊಂಡಿದ್ದು, ಕ್ಷಣಾರ್ಧದಲ್ಲೇ ಕರೆಂಟ್‌ ಶಾಕ್‌ ಹೊಡೆದಿದೆ. ಈ ವೇಳೆ ಮಂಜಮ್ಮ ಕೆಳಗೆ ಬಿದ್ದಿದ್ದು, ಬೆಂಕಿಯು ಹೊತ್ತಿ ಉರಿದಿದೆ. ಜತೆಗೆ ಇದ್ದ ಮಹಿಳೆಯು ಮಂಜಮ್ಮರ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅವರಿಗೂ ಕರೆಂಟ್‌ ಶಾಕ್‌ ಹೊಡೆದಿದೆ. ಕೂಡಲೇ ಅಕ್ಕ-ಪಕ್ಕದ ಜನರು ಓಡಿ ಬಂದಿದ್ದು, ಮಹಿಳೆಯನ್ನು ಎಳೆದುಕೊಂಡು ರಕ್ಷಿಸಿದ್ದಾರೆ.

ಬಳಿಕ ನೋಡುನೋಡುತ್ತಿದ್ದಂತೆ ಮಂಜಮ್ಮ ಬೆಂಕಿಯಿಂದ ಸುಟ್ಟುಹೋಗಿದ್ದಾರೆ. ಇನ್ನು ಇದೆಲ್ಲವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ

ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದಾರೆ. ತಂದೆ, ತಾಯಿ ಸೇರಿ ಮಗು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮನೆಗೆ ಕೇಕ್‌ ತೆಗೆದು ಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜತೆ ಸೇರಿ ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ.

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಪಿ ಅಗ್ರಹಾರ ಠಾಣೆ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೇಕ್ ತಂದಿದ್ದು ಯಾವ ಬೇಕರಿಯಿಂದ? ಕೇಕ್‌ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ವೈದ್ಯರ ವರದಿಗಾಗಿ ಕಾಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather Forecast
ಮಳೆ3 ಗಂಟೆಗಳು ago

Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ3 ಗಂಟೆಗಳು ago

Dina Bhavishya : ಈ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನಾಡಬೇಡಿ

dasara 2024
ದಸರಾ ಸಂಭ್ರಮ15 ಗಂಟೆಗಳು ago

Dasara 2024 : ಮೈಸೂರು ದಸರಾ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ

53rd KVS National Games Kolkata Region School children win final match
ಬೆಂಗಳೂರು16 ಗಂಟೆಗಳು ago

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

5-year-old boy dies after eating cake in Bengaluru Couple's condition critical
ಬೆಂಗಳೂರು16 ಗಂಟೆಗಳು ago

Food Poisoning : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ದಂಪತಿ ಸ್ಥಿತಿ ಗಂಭೀರ

An electric wire fell on the woman Death due to electric shock
ಬೆಂಗಳೂರು17 ಗಂಟೆಗಳು ago

Electric shock : ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಕ್ಷಣಾರ್ಧದಲ್ಲೆ ಸುಟ್ಟುಕರಕಲು

Actor darshan
ಬೆಂಗಳೂರು18 ಗಂಟೆಗಳು ago

Actor Darshan : ರೇಣುಕಾಸ್ವಾಮಿ ಫೋಟೊಗಳು ನೈಜವಲ್ಲ!ಮತ್ತೆ ಎಫ್‌ಎಸ್‌ಎಲ್ ಮೊರೆ ಹೋದ ಖಾಕಿ ಪಡೆ

Bomb threat e-mails a headache for Bengaluru police
ಬೆಂಗಳೂರು19 ಗಂಟೆಗಳು ago

Bomb Threat : ಬೆಂಗಳೂರು ಪೊಲೀಸರಿಗೆ ತಲೆನೋವು ತಂದ ಬಾಂಬ್ ಬೆದರಿಕೆ‌ E-Mails

Road Accident
ಬಾಗಲಕೋಟೆ20 ಗಂಟೆಗಳು ago

Road Accident : ಬೈಕ್‌ ಸವಾರನ ಮುಖಕ್ಕೆ ಟ್ರ್ಯಾಕ್ಟರ್‌ ಬಡಿದು ಸಾವು;‌ ಪಾದಚಾರಿಗೆ ಡಿಕ್ಕಿ ಹೊಡೆದ ಚಿಗರಿ ಬಸ್

Self harming
ದಕ್ಷಿಣ ಕನ್ನಡ21 ಗಂಟೆಗಳು ago

Self Harming: ಮಾಜಿ ಶಾಸಕ‌ ಮೊಯ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ; ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ5 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌