Vivo probe| ವಿವೊ ಕಂಪನಿಯ 2 ಚೀನಿ ನಿರ್ದೇಶಕರು ಕಳೆದ ವರ್ಷವೇ ಭಾರತದಿಂದ ಪರಾರಿ? - Vistara News

ಪ್ರಮುಖ ಸುದ್ದಿ

Vivo probe| ವಿವೊ ಕಂಪನಿಯ 2 ಚೀನಿ ನಿರ್ದೇಶಕರು ಕಳೆದ ವರ್ಷವೇ ಭಾರತದಿಂದ ಪರಾರಿ?

ಚೀನಾ ಮೂಲದ ಸ್ಮಾರ್ಟ್‌ಫೋನ್‌ ಕಂಪನಿಗಳು ಭಾರತದಲ್ಲಿ ದೊಡ್ಡ ಮಟ್ಟಿನ ವಹಿವಾಟು ನಡೆಸುತ್ತಿವೆ. ಆದರೆ ಇದೀಗ ಅವುಗಳ ವ್ಯವಹಾರಗಳ ಬಗ್ಗೆ ಐಟಿ, ಇ.ಡಿ ತನಿಖೆ ಆಳವಾಗುತ್ತಿರುವುದು ಗಮನಾರ್ಹ.

VISTARANEWS.COM


on

vivo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಚೀನಾ ಮೂಲದ ವಿವೊ ಸೇರಿದಂತೆ ನಾನಾ ಸ್ಮಾರ್ಟ್‌ ಫೋನ್‌ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ( Enforcement Directorate) ಕಳೆದ ವರ್ಷದಿಂದೀಚೆಗೆ ತನಿಖೆಯನ್ನು ಚುರುಕುಗೊಳಿಸಿದ ಬೆನ್ನಲ್ಲೇ ವಿವೊ ಕಂಪನಿಗೆ ಸಂಬಂಧಿಸಿದ ಇಬ್ಬರು ಚೀನಿ ನಿರ್ದೇಶಕರು ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಚೀನಾ ಮೂಲದ ಸ್ಮಾರ್ಟ್‌ಫೋನ್‌ ಉತ್ಪಾದಕ ವಿವೊ ಕಂಪನಿಯ ನಿರ್ದೇಶಕರಾಗಿದ್ದ ಜೆನ್‌ಶೆನ್‌ ಒಯು ಮತ್ತು ಜೆಂಗ್‌ ಜಿ ಎಂಬ ಇಬ್ಬರು ನಿರ್ದೇಶಕರು ಕಳೆದ ವರ್ಷವೇ ಭಾರತದಿಂದ ಪರಾರಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿನ ಒಟ್ಟು ೪೦ ಸ್ಥಳಗಳಲ್ಲಿ ವಿವೊ ಹಾಗೂ ಸಂಬಂಧಿತ ಕಂಪನಿಗಳ ಮೇಲೆ ಇ.ಡಿ ದಾಳಿ ಇತ್ತೀಚೆಗೆ ನಡೆದಿದೆ. ಸಿಬಿಐ ಕೂಡ ಈಗಾಗಲೇ ತನಿಖೆ ನಡೆಸುತ್ತಿದೆ.

ಆದಾಯ ತೆರಿಗೆ ಇಲಾಖೆ, ಕಾರ್ಪೊರೇಟ್‌ ವ್ಯವಹಾರಗಳ ಇಲಾಖೆ ಕೂಡ ಚೀನಾ ಮೂಲದ ಸ್ಮಾರ್ಟ್‌ಫೋನ್‌ ಉತ್ಪಾದಕ ಕಂಪನಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿವೆ.

ವಿವೊ ವಿರುದ್ಧದ ತನಿಖೆ ಚುರುಕು

ವಿವೊ ವಿರುದ್ಧದ ತನಿಖೆಯನ್ನು ಜಾರಿ ನಿರ್ದೇಶನಾಲಯವು ಚುರುಕುಗೊಳಿಸಿದೆ. ಜಮ್ಮು ಕಾಶ್ಮೀರದಲ್ಲಿ ವಿವೊ ಸ್ಮಾರ್ಟ್‌ ಫೋನ್‌ಗಳ ವಿತರಕ ಕಂಪನಿ ಆಗಿರುವ ಗ್ರ್ಯಾಂಡ್‌ ಪ್ರಾಸ್ಪೆಕ್ಟ್‌ ಇಂಟರ್‌ನ್ಯಾಶನಲ್‌ ಕಮ್ಯುನಿಕೇಶನ್‌ನ ಇಬ್ಬರು ಚಾರ್ಟರ್ಡ್‌ ಅಕೌಂಟೆಂಟ್‌ಗಳು ಮತ್ತು ಕಂಪನಿಯ ಒಬ್ಬರು ಕಾರ್ಯದರ್ಶಿ ವಿರುದ್ಧ ಇ.ಡಿ ತನಿಖೆ ನಡೆಸುತ್ತಿದೆ ಎಂದು ವರದಿಯಾಗಿದೆ. ನಕಲಿ ದಾಖಲಾತಿಗಳನ್ನು ಬಳಸಿಕೊಂಡು ಈ ಕಂಪನಿ ನೋಂದಣಿಯಾಗಿದೆ ಎಂದು ಆರೋಪಿಸಲಾಗಿದೆ.

ಐಟಿ, ಇ.ಡಿ ತನಿಖೆ ಏಕೆ?

ಆದಾಯ ತೆರಿಗೆ ಇಲಾಖೆ ಹಾಗೂ ಇ.ಡಿ ಚೀನಾ ಮೂಲದ ಸ್ಮಾರ್ಟ್‌ಫೋನ್‌ ಕಂಪನಿಗಳ ವಿರುದ್ಧ ಕಳೆದ ವರ್ಷದಿಂದೀಚೆಗೆ ತನಿಖೆಯನ್ನು ತೀವ್ರಗೊಳಿಸಿವೆ. ಇದಕ್ಕೆ ಕಾರಣಗಳೂ ಇವೆ. ಚೀನಿ ಸ್ಮಾರ್ಟ್‌ ಫೋನ್‌ ಕಂಪನಿಗಳು ಮಾರುಕಟ್ಟೆಯಲ್ಲಿ ಲಾಭ ಗಳಿಸಿದರೂ, ತೆರಿಗೆಯನ್ನು ತಪ್ಪಿಸುವ ಸಲುವಾಗಿ ತಮ್ಮ ವಾಸ್ತವ ಆದಾಯದ ಲೆಕ್ಕಗಳನ್ನು ಮರೆ ಮಾಚುತ್ತಿರುವ ಆರೋಪವನ್ನು ಎದುರಿಸುತ್ತಿವೆ. ಈ ಬಗ್ಗೆ ಐಟಿ ಇಲಾಖೆ ತನಿಖೆ ನಡೆಸುತ್ತಿದೆ. ಮತ್ತೊಂದು ಕಡೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ತನಿಖೆ ಕೈಗೊಂಡಿದೆ.

” ಭಾರತೀಯ ತನಿಖಾ ಸಂಸ್ಥೆಗಳು ಕಾನೂನುಬದ್ಧ ಹಾಗೂ ನ್ಯಾಯಬದ್ಧವಾಗಿ ತನಿಖೆ ನಡೆಸುವ ಹಾಗೂ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೀನಾ ಮೂಲದ ಕಂಪನಿಗಳಿಗೆ ಉದ್ಯಮಸ್ನೇಹಿ ವಾತಾವರಣವನ್ನು ಕಲ್ಪಿಸಿಕೊಡುವ ವಿಶ್ವಾಸ ಇದೆʼʼ ಎಂದು ಚೀನಾ ರಾಯಭಾರ ಕಚೇರಿ ವಕ್ತಾರ ವಾಂಗ್‌ ಶಿಯೊಜಿಯಾನ್‌ ಟ್ವೀಟ್‌ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Parliament Sessions: ಎರಡು ದಿನಗಳ ವಿರಾಮದ ನಂತರ ಸಂಸತ್‌ ಕಲಾಪ ಇಂದು ಮತ್ತೆ ಆರಂಭವಾಗಲಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ವಾರ ಸಂಸತ್ತು ಬಿಸಿ ಏರಿದ ಚರ್ಚೆಗೆ ಸಾಕ್ಷಿಯಾಗುವ ಎಲ್ಲ ಲಕ್ಷಣಗಳಿವೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿನ ಅಕ್ರಮ, ಅಗ್ನಿಪಥ್ ಯೋಜನೆ ಮುಂತಾದ ಪ್ರಮುಖ ವಿಷಯಗಳ ಮೇಲೆ ಪ್ರತಿಪಕ್ಷಗಳ ಇಂಡಿ ಒಕ್ಕೂಟ ಎನ್‌ಡಿಎ ಸರ್ಕಾರದ ಮೇಲೆ ದಾಳಿ ನಡೆಸಲು ಸಜ್ಜಾಗಿದೆ. ಸಂಸತ್ತು ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ನೋಡಿ.

VISTARANEWS.COM


on

Parliament Sessions
Koo

ನವದೆಹಲಿ: ಎರಡು ದಿನಗಳ ವಿರಾಮದ ನಂತರ ಸಂಸತ್‌ ಕಲಾಪ (Parliament Sessions) ಇಂದು ಮತ್ತೆ ಆರಂಭವಾಗಲಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ವಾರ ಸಂಸತ್ತು ಬಿಸಿ ಏರಿದ ಚರ್ಚೆಗೆ ಸಾಕ್ಷಿಯಾಗುವ ಎಲ್ಲ ಲಕ್ಷಣಗಳಿವೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಯಲ್ಲಿನ ಅಕ್ರಮ, ಅಗ್ನಿಪಥ್ ಯೋಜನೆ ಮುಂತಾದ ಪ್ರಮುಖ ವಿಷಯಗಳ ಮೇಲೆ ಪ್ರತಿಪಕ್ಷಗಳ ಇಂಡಿ ಒಕ್ಕೂಟ ಎನ್‌ಡಿಎ ಸರ್ಕಾರದ ಮೇಲೆ ದಾಳಿ ನಡೆಸಲು ಸಜ್ಜಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಮತ್ತು ಹಣದುಬ್ಬರದ ಜತೆಗೆ ಪ್ರತಿಪಕ್ಷಗಳು ಭಾರತದಲ್ಲಿ ನಿರುದ್ಯೋಗ ಸಮಸ್ಯೆಗಳ ಬಗ್ಗೆಯೂ ಧ್ವನಿ ಎತ್ತುವ ಸಾಧ್ಯತೆಯಿದೆ.

ನೀಟ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಶುಕ್ರವಾರ ಕೋಲಾಹಲ ನಡೆದ ಕಾರಣ ಸ್ಪೀಕರ್‌ ಓಂ ಬಿರ್ಲಾ ಅವರು ಲೋಕಸಭೆ ಅಧಿವೇಶನವನ್ನು ಸೋಮವಾರಕ್ಕೆ ಮುಂದೂಡಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವನ್ನು ಆದ್ಯತೆಯ ಮೇರೆಗೆ ಚರ್ಚಿಸುವ ನಿರ್ಣಯವನ್ನು ಅಂಗೀಕರಿಸುವಂತೆ ಇಂಡಿ ಒಕ್ಕೂಟದ ಸದಸ್ಯರು ಕೋರಿದ ಬಳಿಕ ಗದ್ದಲ ಪ್ರಾರಂಭವಾಗಿತ್ತು. ಈ ಕೋಲಾಹಲದ ಮಧ್ಯೆ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮೊದಲು ಮಧ್ಯಾಹ್ನ 12ರವರೆಗೆ ಮತ್ತು ನಂತರ ಜುಲೈ 1ರವರೆಗೆ ಮುಂದೂಡಿದ್ದರು.

ಇವತ್ತು ಏನಾಗಲಿದೆ?

ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ ಅವರು, ʼʼನೀಟ್‌ ವಿವಾದ ಅತ್ಯಂತ ಪ್ರಮುಖವಾದುದು. ಈ ವಿಚಾರವಾಗಿ ಚರ್ಚೆ ನಡೆಸಲು ಪಟ್ಟು ಹಿಡಿಯುತ್ತೇವೆʼʼ ಎಂದು ಈ ಹಿಂದೆಯೇ ಘೋಷಿಸಿದ್ದಾರೆ. ಶುಕ್ರವಾರ ಈ ಬಗ್ಗೆ ಪ್ರಸ್ತಾವಿಸಿದ್ದರೂ, ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಸದನವು ಕೈಗೆತ್ತಿಕೊಳ್ಳಲಿರುವುದರಿಂದ ನೀಟ್ ಕುರಿತು ಚರ್ಚೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಓಂ ಬಿರ್ಲಾ ಹೇಳಿದ್ದರಿಂದ ಸದನದಲ್ಲಿ ಗದ್ದಲ ಏರ್ಪಟ್ಟಿತ್ತು.

ನೀಟ್ ವಿವಾದದ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಇತ್ತ ರಾಜ್ಯಸಭೆಯಲ್ಲಿಯೂ ಕೋಲಾಹಲ ನಡೆಯಿತು. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇತರ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಉಭಯ ಸದನಗಳಲ್ಲಿ ಈ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಗ್ನಿಪಥ್ ಯೋಜನೆ, ಹಣದುಬ್ಬರ ಮತ್ತು ನಿರುದ್ಯೋಗದಂತಹ ಇತರ ವಿಷಯಗಳನ್ನು ಇಂಡಿ ಬಣದ ನಾಯಕರು ಪ್ರಸ್ತಾವಿಸಲಿದ್ದು, ನೀಟ್ ವಿಷಯದ ಬಗ್ಗೆ ಸಂಸತ್ತಿನ ನಿಯಮ 267ರ ಅಡಿ ಚರ್ಚೆಗೆ ಒತ್ತಾಯಿಸಲಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. ಬಿಜೆಪಿ ಹಿರಿಯ ನಾಯಕಿ ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ, ಸಂಸದೆ ಬಾನ್ಸುರಿ ಸ್ವರಾಜ್ ಅವರು ಈ ನಿರ್ಣಯವನ್ನು ಅನುಮೋದಿಸಲಿದ್ದಾರೆ.

ಲೋಕಸಭೆಯಲ್ಲಿ ವಂದನಾ ನಿರ್ಣಯದ ಮೇಲಿನ ಚರ್ಚೆಗೆ 16 ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಇದಕ್ಕೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದಾರೆ. ರಾಜ್ಯಸಭೆಯಲ್ಲಿ ಇದಕ್ಕಾಗಿ 21 ಗಂಟೆಗಳನ್ನು ಮೀಸಲಿಡಲಾಗಿದೆ.

ಭಾನುವಾರ ರಾಹುಲ್‌ ಗಾಂಧಿ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ, ʼʼಪ್ರತಿಪಕ್ಷ ಪ್ರಜಾಪ್ರಭುತ್ವದ ಮುಖ್ಯ ಭಾಗ. ನಿಮ್ಮ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾವಿಸುವುದಾಗಿ ಭರವಸೆ ನೀಡುತ್ತೇನೆ. ಆ ಮೂಲಕ ನಾನು ನಿಮ್ಮ ಧ್ವನಿಯನ್ನು ಎತ್ತುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತೀವ್ರ ಹೋರಾಟದ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Continue Reading

ಪ್ರಮುಖ ಸುದ್ದಿ

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

Milk Price Hike: ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

VISTARANEWS.COM


on

shubham milk price hike
Koo

ಬಳ್ಳಾರಿ: ಶುಭಂ ಗೋಲ್ಡ್‌ ಹಾಲಿನ ದರವನ್ನು (Shubham Gold Milk) ಅರ್ಧ ಲೀಟರ್‌ಗೆ ಏಕಾಏಕಿ 4 ರೂ. ಹೆಚ್ಚಳ ಮಾಡಲಾಗಿದೆ. ಘೋಷಿತ ದರ ಏರಿಕೆಗಿಂತ (Milk Price Hike) ಹೆಚ್ಚು ದರ ಏರಿಸಲಾಗಿದೆ ಎಂದು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಕೆಎಂಎಫ್‌ ನಂದಿನ ಹಾಲಿನ (KMF Nandini Milk) ದರ ಹೆಚ್ಚಿಸಿ ಪರಿಷ್ಕೃತ ದರದ ಪಟ್ಟಿ ಬಿಡುಗಡೆ ಮಾಡಿತ್ತು. ಪ್ರತಿ ಲೀಟರ್‌ ಹಾಗೂ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲಿ 50 ಎಂಎಲ್‌ ಹಾಲಿನ ಪ್ರಮಾಣ ಹೆಚ್ಚಿಸಿ 2 ರೂ. ಹೆಚ್ಚಳ ಮಾಡಿರುವುದಾಗಿ ಘೋಷಣೆ ಮಾಡಿತ್ತು. ಆದ್ರೆ ಶುಭಂ ಗೋಲ್ಡ್ ಹಾಲಿನ ದರವನ್ನು ತಾನೇ ಘೋಷಿಸಿದಂತೆ 2 ರೂ. ಹೆಚ್ಚಳ ಮಾಡುವ ಬದಲು ಅರ್ಧ ಲೀಟರ್‌ಗೆ 3 ರೂ. ಹಾಗೂ 1 ಲೀಟರ್‌ಗೆ 4 ರೂ. ಹೆಚ್ಚಳ ಮಾಡಿದೆ. ಈಗ ಬಂದಿರುವ ಹೊಸ ಪ್ಯಾಕೆಟ್‌ನಲ್ಲಿ ದುಬಾರಿ ಬೆಲೆ ಮುದ್ರಿತವಾಗಿದೆ. ಈ ಮೊದಲು ಅರ್ಧ ಲೀಟರ್‌ಗೆ 26 ರೂ. ಇದ್ದ ಶುಭಂ ಗೋಲ್ಡ್ ಹಾಲು 28 ರೂ. ಬದಲು 29 ರೂ. ಆಗಿದೆ. 1 ಲೀಟರ್‌ಗೆ 49 ರೂ. ಇದ್ದ ಹಾಲು 51 ರೂ. ಬದಲು 53 ರೂಪಾಯಿ ಆಗಿದೆ.

ಹೀಗಾಗಿ, ಹಾಲಿನ ದರ ಏರಿಕೆ ವಿಚಾರದಲ್ಲಿ ಕೆಎಂಏಫ್‌ ಹಾಗೂ ಸರ್ಕಾರ ಸುಳ್ಳು ಹೇಳಿದೆ ಎಂದು ಬಳಕೆದಾರರು ಆಕ್ರೋಶಿಸಿದ್ದಾರೆ. ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ದರ ಹೆಚ್ಚಳದ ಹಾಲು ಮಾರಾಟವಾಗುತ್ತಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಗೃಹಿಣಿಯರು, ಏಕಾಏಕಿ ದರ ಹೆಚ್ಚಳ ಮಾಡಿ ನಮ್ಮ ಜೇಬಿಗೆ ಸರಕಾರ ಕತ್ತರಿ ಹಾಕ್ತಿದೆ ಎಂದು ಆಕ್ರೋಶಿಸಿದ್ದಾರೆ.

ಕೆಎಂಎಫ್‌ ದರ ಹೆಚ್ಚಳ ಹೀಗಿತ್ತು:

ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 44 ರೂ.

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 45 ರೂ.

ಹೋಮೋಜಿನೈಸ್ಡ್‌ ಹಸುವಿನ ಹಾಲು
550 ಎಂಎಲ್‌ – 26 ರೂ.
1050 ಎಂಎಲ್‌ – 48 ರೂ.

ಸ್ಪೆಷಲ್‌ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಸಮೃದ್ಧಿ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 53 ರೂ.

ಹೋಮೋಜಿನೈಸ್ಡ್‌ ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 51 ರೂ.

ಸಂತೃಪ್ತಿ ಹಾಲು
550 ಎಂಎಲ್‌ – 30 ರೂ.
1050 ಎಂಎಲ್‌ – 57 ರೂ.

ಶುಭಂ ಗೋಲ್ಡ್‌ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 51 ರೂ.

ಡಬಲ್‌ ಟೋನ್ಡ್‌ ಹಾಲು
550 ಎಂಎಲ್‌ – 23 ರೂ.
1050 ಎಂಎಲ್‌ – 43 ರೂ.

ಇದನ್ನೂ ಓದಿ: Nandini Milk Price Hike : ಕೈಗೆ ಸಿಗದ ನಂದಿನಿ ಹಾಲು; ಪರಿಷ್ಕೃತ ದರ ಎಷ್ಟು?

Continue Reading

ಪ್ರಮುಖ ಸುದ್ದಿ

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Hosur Airport: ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು.

VISTARANEWS.COM


on

hosur airport
Koo

ಬೆಂಗಳೂರು: ಹೊಸೂರಿನಲ್ಲಿ (Hosur) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ನಿರ್ಮಿಸುವುದಾಗಿ (Hosur Airport) ಘೋಷಿಸಿದ ತಮಿಳುನಾಡು ಸರ್ಕಾರ (Tamil Nadu Govt) ಇದೀಗ ಅದರ ಹೊಣೆಯನ್ನು ಬಿಐಎಎಲ್‌ಗೆ (BIAL) ವಹಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್‌ ಮಾಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Kempegowda Internationa Airport) ನಿರ್ವಹಿಸುತ್ತಿರುವ ಬಿಐಎಎಲ್‌ಗೆ ಜವಾಬ್ದಾರಿ ನೀಡಲು ಮಾತುಕತೆ ನಡೆದಿದೆ. ಕೆಂಪೇಗೌಡ ನಿಲ್ದಾಣಕ್ಕೆ 25 ವರ್ಷ ತುಂಬುವವರೆಗೆ 150 ಕಿಮೀ ವ್ಯಾಪ್ತಿಯೊಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ ಎಂಬ ಒಪ್ಪಂದವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಮಾಡಿಕೊಂಡಿತ್ತು. ಬಿಐಎಎಲ್‌ ಜುಲೈ 5, 2004ರಂದು ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ದೃಷ್ಟಿಯಿಂದ 2033ರವರೆಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ತಲೆ ಎತ್ತುವಂತಿಲ್ಲ.

ಈ ತಡೆಯನ್ನು ಮೀರಲು ಸ್ಟಾಲಿನ್‌ ಸರ್ಕಾರ ಪ್ಲ್ಯಾನ್‌ ಹಾಕಿಕೊಂಡಿದೆ. ಈ ಬಗ್ಗೆ ತಮಿಳುನಾಡು ಕೈಗಾರಿಕಾ ಅಭಿವೃದ್ಧಿ ನಿಗಮ ಟಿಡ್ಕೊದ ಉನ್ನತ ಅಧಿಕಾರಿಗಳ ಸಭೆ ನಡೆದಿದ್ದು, ಬಿಐಎಎಲ್ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದಕ್ಕೆ ಬಿಐಎಎಲ್‌ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಬಿಐಎಎಲ್‌ಗೆ ಹೊಸೂರು ವಿಮಾನ ನಿಲ್ದಾಣ ಟೆಂಡರ್ ಕೊಟ್ಟರೆ ಈ ಒಪ್ಪಂದ ಅನ್ವಯ ಆಗುವುದಿಲ್ಲ ಎನ್ನಲಾಗುತ್ತಿದೆ.

ಹೊಸೂರು ಕೈಗಾರಿಕಾ ವಲಯಕ್ಕೆ ಹೆಚ್ಚಿದ ಬೇಡಿಕೆ

ತಮಿಳುನಾಡು ಏರ್‌ಪೋರ್ಟ್ ಘೋಷಣೆ‌ ಬೆನ್ನಲ್ಲೇ ಹೊಸೂರು ಕೈಗಾರಿಕಾ ವಲಯಕ್ಕೆ ಬೇಡಿಕೆ ಹೆಚ್ಚಿದೆ. ಕಳೆದ ಐದು ವರ್ಷದಲ್ಲಿ ಹೊಸೂರು ಸುತ್ತ 200 ಹೊಸ ಕಂಪನಿಗಳು- ಕಾರ್ಖಾನೆಗಳು ಆರಂಭವಾಗಿವೆ. ಬೆಂಗಳೂರು ಸುತ್ತ ಅನುಷ್ಠಾನ ಆಗಬೇಕಿದ್ದ ಕಂಪನಿಗಳು ಹೊಸೂರಿಗೆ ಶಿಫ್ಟ್ ಆಗಿವೆ.

ಇದಕ್ಕೆ ಕಾರಣ, ತಮಿಳುನಾಡು ಸರ್ಕಾರ ಕೈಗಾರಿಕಾ ಕಂಪನಿಗಳಿಗೆ ಕಡಿಮೆ ಬೆಲೆಗೆ ಭೂಮಿ ನೀಡಿತ್ತು. ಮೆಟ್ರೋ ನಗರ ಬೆಂಗಳೂರಿಗೆ ಹತ್ತಿರದಲ್ಲೇ ಇರಿವುದರಿಂದ ಮೂಲಸೌಕರ್ಯಗಳಿಗೆ ಮೋಸವಿಲ್ಲ. ಇನ್ನು ಅತ್ತಿಬೆಲೆವರೆಗೂ ಮೆಟ್ರೋ ವಿಸ್ತೀರ್ಣದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅದೂ ಅನುಷ್ಠಾನಗೊಳ್ಳಲಿದೆ. ಹೊಸೂರು ಹೊಸ ಇಂಡಸ್ಟ್ರಿಗಳಿಗೆ ವರದಾನವಾಗುತ್ತಿದೆ. ಬೆಂಗಳೂರಿನ ಕಂಪನಿಗಳು ಹೊಸೂರಿಗೆ ಸ್ಥಳಾಂತರಕ್ಕೆ ಇದೂ ಕೂಡಾ ಕಾರಣ.

ಹೊಸೂರಿನಲ್ಲಿ ಕಾಸ್ಟ್ ಆಫ್ ಲಿವಿಂಗ್ ಕಡಿಮೆ, ಟ್ರಾನ್ಸ್ ಪೋರ್ಟ್ ಕನೆಕ್ಟಿವಿಟಿ ಹೆಚ್ಚು ಇದೆ. ಟ್ರಾಫಿಕ್ ಸಮಸ್ಯೆ ಕಡಿಮೆ ಹಾಗೂ ಮೂಲಭೂತ ಸೌಕರ್ಯ ಹೆಚ್ಚಾಗಿ ಲಭ್ಯವಿದೆ. ಹೀಗಾಗಿ ದೊಡ್ಡ ಕಂಪನಿಗಳು ಅತ್ತ ಶಿಫ್ಟ್‌ ಆಗಲು ಯೋಚಿಸುತ್ತಿವೆ. ನಗರದೊಳಗೆ ಹೆಚ್ಚುತ್ತಿರುವ ಟ್ರಾಫಿಕ್‌, ಜೀವನವೆಚ್ಚ ಜಾಗದ ಕೊರತೆಗಳು ಇದನ್ನು ಇನ್ನಷ್ಟು ಪ್ರಚೋದಿಸುತ್ತಿವೆ.

ಇದನ್ನೂ ಓದಿ: Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Continue Reading

ಕರ್ನಾಟಕ

Bangalore–Mysore Expressway : ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Bangalore–Mysore Expressway : ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

VISTARANEWS.COM


on

Bengaluru-Mysuru highway
Koo

ಬೆಂಗಳೂರು: ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಇಂದಿನಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ಹೈವೇಯಲ್ಲಿ ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಹೆಚ್ಚಿನ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳು, ಕ್ಯಾಮೆರಾಗಳ ಹೊರತಾಗಿಯೂ ಪೊಲೀಸರು ಹೆದ್ದಾರಿಗಳಿಗೆ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳನ್ನು ಸಂಗ್ರಹಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರನ್ನು ತಡೆಯಲು ಸುಮಾರು 800 ಆಲ್ಕೋಮೀಟರ್‌ಗಳು ಮತ್ತು 155 ಲೇಸರ್ ಸ್ಪೀಡ್ ಗನ್‌ಗಳನ್ನು ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ವಿತರಿಸಲಾಗುತ್ತಿದೆ.

Continue Reading
Advertisement
Rakshit Shetty Visited Koragajja Temple And Prayed
ಸಿನಿಮಾ15 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ27 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ27 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್27 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ30 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್37 mins ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Birla Opus
ವಾಣಿಜ್ಯ48 mins ago

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Kalki 2898 AD Prabhas Film Hits Jackpot 500 Cr WW In Opening
ಟಾಲಿವುಡ್1 hour ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

hosur airport
ಪ್ರಮುಖ ಸುದ್ದಿ1 hour ago

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Healthy Foods For Kidney
ಆರೋಗ್ಯ1 hour ago

Healthy Foods For Kidney: ನಮ್ಮ ಕಿಡ್ನಿ ಆರೋಗ್ಯವಾಗಿರಲು ಈ ಆಹಾರ ಸೇವನೆ ಸೂಕ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌