Site icon Vistara News

Diplomatic passport : ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌, ರಾಹುಲ್‌ ಗಾಂಧಿ ಹಿಂತಿರುಗಿಸಿದ್ದೇಕೆ?

diplomatic passport in maroon colour

#image_title

ನವ ದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇತ್ತೀಚೆಗೆ ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಬಳಿಕ ತಮ್ಮ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic passport) ಅನ್ನು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಬಳಿಕ ಸಾಮಾನ್ಯ ಪಾಸ್‌ಪೋರ್ಟ್‌ಗೆ ಎನ್‌ಒಸಿ (no objection certificate) ಪಡೆಯಲು ದಿಲ್ಲಿ ಕೋರ್ಟ್‌ನಿಂದ ಅನುಮತಿ ಕೋರಿದ್ದಾರೆ. ಮೇ 31ರಿಂದ ಅಮೆರಿಕ ಪ್ರವಾಸವನ್ನು ರಾಹುಲ್‌ ಗಾಂಧಿ ಕೈಗೊಳ್ಳಲಿದ್ದಾರೆ. ಆದರೆ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಎಂದರೇನು? ಇದನ್ನು ವ್ಯಕ್ತಿಯೊಬ್ಬ ಹೇಗೆ ಪಡೆಯಬಹುದು?

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport):

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್ಸ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?: ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಡಿಪ್ಲೊಮ್ಯಾಟಿಕ್‌ ಇಮ್ಯುನಿಟಿ: ಈ ಪಾಸ್‌ ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಅತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ: ಈ ಪಾಸ್‌ ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಖು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತದೆ.

ಇದನ್ನೂ ಓದಿ: Rahul Gandhi: 3 ವರ್ಷದ ಅವಧಿಗೆ ಸಾಮಾನ್ಯ ಪಾಸ್‌ಪೋರ್ಟ್‌ ಪಡೆಯಲು ರಾಹುಲ್ ಗಾಂಧಿಗೆ ಅನುಮತಿ ನೀಡಿದ ದಿಲ್ಲಿ ಕೋರ್ಟ್

Exit mobile version