ಪ್ರಮುಖ ಸುದ್ದಿ
PM Kisan Samman Nidhi Yojana : ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತು ಯಾವಾಗ? ವಿವರ ತಿಳಿಯುವುದು ಹೇಗೆ?
ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತು ಇತ್ತೀಚೆಗೆ ಬಿಡುಗಡೆಯಾಗಿದೆ. ಫಲಾನುಭವಿಗಳಿಗೆ 14ನೇ ಕಂತು (PM Kisan Samman Nidhi Yojana) ಕೂಡ ಸಿಗಲಿದೆ. ವಿವರ ಇಲ್ಲಿದೆ.
ನವ ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM- Kisan Samman Nidhi Yojana) 13ನೇ ಕಂತು ಇತ್ತೀಚೆಗೆ ಬಿಡುಗಡೆಯಾಗಿದೆ. (PM-KISAN) ಫಲಾನುಭವಿ ರೈತರು ಈಗ ಮುಂದಿನ ಕಂತಿನ ನಿರೀಕ್ಷೆಯಲ್ಲಿ ಇದ್ದಾರೆ. ಕೇಂದ್ರ ಸರ್ಕಾರ 14ನೇ ಕಂತನ್ನು 2023ರ ಏಪ್ರಿಲ್ ಮತ್ತು ಜುಲೈ ನಡುವೆ ಬಿಡುಗಡೆಗೊಳಿಸುವ ನಿರೀಕ್ಷೆ ಇದೆ. ಪಿಎಂ-ಕಿಸಾನ್ ಯೋಜನೆಯಲ್ಲಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ 6,000 ರೂ. ಹಣಕಾಸು ನೆರವು ಸಿಗುತ್ತದೆ. 2,000 ರೂ. ಗಳ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ.
ಈ ಹಣವನ್ನು ಪಡೆಯಲು ರೈತರು ಪಿಎಂ ಕಿಸಾನ್ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇದನ್ನು ಆನ್ ಲೈನ್ ಇಲ್ಲವೇ ಆಫ್‌ಲೈನ್ ಮೂಲಕ ಮಾಡಬಹುದು. ಒಂದು ವೇಳೆ ಪಿಎಂ ಕಿಸಾನ್ ನಿಧಿ ಲಭಿಸದಿದ್ದರೆ ಕೆಳಕಂಡ ಇ-ಮೇಲ್ ಐಡಿ ಅಥವಾ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು. ನಾಲ್ಕು ತಿಂಗಳಿಗೊಮ್ಮೆ ವಿತರಣೆಯಾಗುತ್ತದೆ. ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುತ್ತದೆ.
- ಇ-ಮೇಲ್ ಐಡಿ: [email protected], [email protected]
- ಪಿಎಂ ಕಿಸಾನ್ ಸಹಾಯವಾಣಿ: 011-24300606
- ಪಿಎಂ ಕಿಸಾನ್ ಟೋಲ್ ಫ್ರೀ ಸಂಖ್ಯೆ: 1800-115-526
ಪಿಎಂ ಕಿಸಾನ್ ಫಲಾನುಭವಿಗಳ ಸ್ಟೇಟಸ್ ತಿಳಿಯುವುದು ಹೇಗೆ?
- pmkisan.gov.in ವೆಬ್ ಸೈಟ್ ತೆರೆಯಿರಿ
- farmers corner ಸೆಕ್ಷನ್ ಅಡಿಯಲ್ಲಿ Beneficiary Status ಕ್ಲಿಕ್ಕಿಸಿ.
- ಆಧಾರ್ ವಿವರಗಳನ್ನು ಅಥವಾ ಬ್ಯಾಂಕ್ ಖಾತೆ ವಿವರ ಸಲ್ಲಿಸಿ
- ಈಗ Get Data ಕ್ಲಿಕ್ಕಿಸಿ ಕಂತಿನ ಮಾಹಿತಿ ಪಡೆಯಿರಿ.
2019ರ ಫೆಬ್ರವರಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ದಿಲ್ಲಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ 12ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆಗೊಳಿಸಿದರು.
ಪಿಎಂ ಕಿಸಾನ್ ಸ್ಕೀಮ್‌ಗೆ ಯಾರು ಅರ್ಜಿ ಸಲ್ಲಿಸಬಹುದು?
ಯಾವುದೇ ಸರ್ಕಾರದ ಯೋಜನೆಯಲ್ಲಿ ಫಲ ಪಡೆಯಲು ನಿರ್ದಿಷ್ಟ ಅರ್ಹತೆ ಇರುತ್ತದೆ. ಅದರ ಆಧಾರದಲ್ಲಿ ಸೌಲಭ್ಯ ಬಿಡುಗಡೆಯಾಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಸಣ್ಣ ಮತ್ತು ಮಧ್ಯಮ ರೈತರು ಪ್ರಯೋಜನ ಪಡೆಯಬಹುದು.
ಬೇಕಾಗುವ ದಾಖಲೆಗಳು:
ಪಿಎಂ ಕಿಸಾನ್ ಯೋಜನೆಯ ಸೌಲಭ್ಯಗಳನ್ನು ಪಡೆಯಲು ರೈತರು ಕೆಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಹೆಸರು, ವಯಸ್ಸು, ಲಿಂಗ ಮತ್ತು ಎಸ್‌ಸಿ/ಎಸ್‌ಟಿ ಕೆಟಗರಿ ಕುರಿತ ದಾಖಲೆಗಳನ್ನು ನೀಡಬೇಕಾಗುತ್ತದೆ. ಆಧಾರ್ ಸಂಖ್ಯೆಯನ್ನೂ ಕೊಡಬೇಕಾಗುತ್ತದೆ. ಭೂಮಿಯ ಮಾಲಿಕತ್ವ ದಾಖಲೆ, ಬ್ಯಾಂಕ್ ಖಾತೆ ವಿವರಗಳನ್ನೂ ನೀಡಬೇಕಾಗುತ್ತದೆ.
ಇಕೆವೈಸಿ ಕಡ್ಡಾಯ:
ಸರ್ಕಾರ ಪಿಎಂ-ಕಿಸಾನ್ ಅಡಿಯಲ್ಲಿ ಇ-ಕೆವೈಸಿಯನ್ನು (eKYC) ಕಡ್ಡಾಯಗೊಳಿಸಿದೆ. OTP ಆಧಾರಿತ eKYC ಅನ್ನೂ ಕಲ್ಪಿಸಲಾಗಿದೆ. ಆದ್ದರಿಂದ ಇ-ಕೆವೈಸಿಯನ್ನು ಪೂರ್ಣಗೊಳಿಸದಿದ್ದರೆ, ಪೂರ್ಣಗೊಳಿಸುವುದು ಒಳಿತು. ತಪ್ಪಿದರೆ ಯೋಜನೆಯ ಅನುಕೂಲಗಳು ಸಿಗದು.
PM – Kisan ಯೋಜನೆಗೆ ಯಾರು ಅರ್ಜಿ ಸಲ್ಲಿಸಬಾರದು?
ಪಿಎಂ ಕಿಸಾನ್ ವೆಬ್‌ಸೈಟ್ ಪ್ರಕಾರ (PM-Kisan Website) ಕೆಳಕಂಡ ಕೆಟಗರಿಯಲ್ಲಿ ಇರುವವರು ಯೋಜನೆಗೆ ಅರ್ಜಿ ಸಲ್ಲಿಸಬಾರದು.
ಎಲ್ಲ ಸಾಂಸ್ಥಿಕ ಭೂ ಮಾಲೀಕರು ( Institutional Land holders)̧, ಕುಟುಂಬದಲ್ಲಿ ಒಬ್ಬರು ಅಥವಾ ಹೆಚ್ಚು ಸದಸ್ಯರು ಸಾಂವಿಧಾನಿಕ ಹುದ್ದೆಯಲ್ಲಿದ್ದರೆ ಯೋಜನೆಯ ಸೌಲಭ್ಯ ಸಿಗದು. ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್ತು, ಮುನಿಸಿಪಲ್ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹಾಲಿ ಅಥವಾ ಮಾಜಿಗಳಾಗಿದ್ದರೂ ಅರ್ಜಿ ಸಲ್ಲಿಸುವಂತಿಲ್ಲ. ಕೇಂದ್ರ-ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳು ಅರ್ಜಿ ಹಾಕುವಂತಿಲ್ಲ. ಮಾಸಿಕ 10,000 ರೂ. ಅಥವಾ ಹೆಚ್ಚು ಪಿಂಚಣಿ ಪಡೆಯುವವರು, ಆದಾಯ ತೆರಿಗೆದಾರರು, ವೈದ್ಯರು, ಪ್ರೊಫೆಸರ್, ಎಂಜಿನಿಯರ್ ಇತ್ಯಾದಿ ವೃತ್ತಿಪರರು ಅರ್ಜಿ ಸಲ್ಲಿಸುವಂತಿಲ್ಲ.
ಪ್ರಮುಖ ಸುದ್ದಿ
Horoscope Today : ತುಲಾ ರಾಶಿಯವರಿಗೆ ಪ್ರಭಾವಿ ಜನರ ಬೆಂಬಲ; ನಿಮ್ಮ ರಾಶಿ ಭವಿಷ್ಯ ಹೇಗಿದೆ?
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಪಂಚಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇಂದಿನ ಪಂಚಾಂಗ (26-03-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 16:32 ವಾರ: ಭಾನುವಾರ
ನಕ್ಷತ್ರ: ಕೃತ್ತಿಕಾ 13:59 ಯೋಗ: ಪ್ರೀತಿ 23:30
ಕರಣ: ಬಾಲವ 16:32 ಇಂದಿನ ವಿಶೇಷ: ದೇವರ ದಾಸಿಮಯ್ಯ ಜಯಂತಿ
ಅಮೃತಕಾಲ: ಬೆಳಗ್ಗೆ 11 ಗಂಟೆ 33 ನಿಮಿಷದಿಂದ ಮಧ್ಯಾಹ್ನ 01 ಗಂಟೆ 12 ನಿಮಿಷದವರೆಗೆ.
ಸೂರ್ಯೋದಯ : 06:20 ಸೂರ್ಯಾಸ್ತ : 06:31
ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವಾಗುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣ. ಯಾರಾದರೂ ನಿಮ್ಮ ಭಾವನೆಗಳಿಗೆ ನಿರಾಸೆಯುಂಟುಮಾಡುವ ಸಾಧ್ಯತೆ, ಅವರ ಮಾತುಗಳನ್ನು ಲಕ್ಷಿಸದೇ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ಕೆಲವು ಆಘಾತಗಳನ್ನು ಎದುರಿಸಬೇಕಾಗಿ ಬರಬಹುದು. ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದೀತು. ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು, ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ತಂದುಕೊಡಲಿವೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಇಂದು ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ನಿಮ್ಮದಾಗುತ್ತದೆ. ಆರೋಗ್ಯ ಉತ್ತಮ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ ಮತ್ತು ಉದ್ಯೋಗದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?
ದೇಶ
ವಿಸ್ತಾರ ಸಂಪಾದಕೀಯ: ಅಮೆರಿಕದಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ಖಲಿಸ್ತಾನಿಗಳಿಗೆ ದೇಶಪ್ರೇಮಿಗಳ ತಿರುಗೇಟು
ಸಿಖ್ ಧರ್ಮ ಎಂಬುದು ಶತಮಾನಗಳಿಂದ ಹಿಂದೂಗಳ ಜತೆಗೆ ಅನ್ಯೋನ್ಯತೆಯಿಂದ ಇರುವ ಧರ್ಮ. ಅವರು ಬೇರೆ ಎಂದು ಹಿಂದೂಗಳಿಗೆ ಎಂದೂ ಅನಿಸಿಯೇ ಇಲ್ಲ. ಇಂಥವರ ನಡುವೆ ಪ್ರತ್ಯೇಕತೆಯ ವಿಷಬೀಜ ಬಿತ್ತಲು ಯತ್ನಿಸುವ ದೇಶವಿರೋಧಿ ಸಂಚನ್ನು ಈಗಲೇ ಹೊಸಕಿ ಹಾಕಬೇಕಿದೆ.
ಅಮೆರಿಕದ ಕಾನ್ಸುಲೇಟ್ ಕಚೇರಿ ಎದುರು ಸಾವಿರಾರು ಭಾರತೀಯರು ತ್ರಿವರ್ಣ ಧ್ವಜ ಹಾರಿಸಿ ಭಾರತದ ಪರ ಘೋಷಣೆ ಮೊಳಗಿಸಿದ್ದಾರೆ. ಹಿಂದೂ, ಮುಸ್ಲಿಂ, ಸಿಖ್ ಸೇರಿದಂತೆ ಎಲ್ಲ ಧರ್ಮೀಯರೂ ಇದರಲ್ಲಿ ಭಾಗವಹಿಸಿದ್ದು ಗಮನಾರ್ಹ. ಪಾಕ್ ಪ್ರೇರಿತ ಸಿಖ್ ಪ್ರತ್ಯೇಕತಾವಾದಿಗಳಿಗೆ ಇದು ತಕ್ಕ ತಿರುಗೇಟಾಗಿದೆ. ಕಳೆದ ಭಾನುವಾರ ಖಲಿಸ್ತಾನಿಗಳ ಗುಂಪು ಇಂಡಿಯನ್ ಕಾನ್ಸುಲೇಟ್ ಕಚೇರಿ ಮೇಲೆ ದಾಳಿ ಮಾಡಿ ತ್ರಿವರ್ಣ ಧ್ವಜವನ್ನು ಕೆಳಗಿಸಿ ಅವಮಾನ ಮಾಡಿತ್ತು. ಇವರನ್ನು ಪತ್ತೆಹಚ್ಚಿ ಸೂಕ್ತ ಶಿಕ್ಷೆಯನ್ನು ಅಲ್ಲಿನ ಸರ್ಕಾರಗಳು ವಿಧಿಸಬೇಕು ಅಥವಾ ಭಾರತಕ್ಕೆ ಹಸ್ತಾಂತರಿಸಬೇಕು. ಇದು ರಾಜನೀತಿಯ ಮಟ್ಟದಲ್ಲಿ ಆಗಬೇಕಾದ ಉಪಕ್ರಮ. ಈ ಬಗ್ಗೆ ಉಭಯ ದೇಶಗಳ ಸರ್ಕಾರಗಳು ಕ್ರಮ ತೆಗೆದುಕೊಳ್ಳಬೇಕಿದೆ. ಆದರೆ ನೈಜ ಭಾರತೀಯರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಬೇಕೋ ಆ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂಬುದು ನಮ್ಮ ಹೆಮ್ಮೆಗೆ ಕಾರಣವಾಗಿದೆ.
ಪಂಜಾಬ್‌ನಲ್ಲಿ ಖಲಿಸ್ತಾನಿಗಳು ಈಗಾಗಲೇ ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಪಾಕ್ ಪ್ರೇರಿತ ಡ್ರೋನ್‌ಗಳ ಮೂಲಕ ಪೂರೈಕೆಯಾಗುವ ಶಸ್ತ್ರಾಸ್ತ್ರಗಳು ಹಾಗೂ ಮಾದಕ ದ್ರವ್ಯಗಳ ಮೂಲಕ ಪಂಜಾಬ್‌ನ ಯುವಜನತೆಯನ್ನು ಹಾದಿ ತಪ್ಪಿಸಲು ಯತ್ನಿಸುತ್ತಿದ್ದಾರೆ. ಇವರು ಎಷ್ಟು ಬೆಳೆದಿದ್ದಾರೆ ಎಂದರೆ, ಇತ್ತೀಚೆಗೆ ಅಲ್ಲಿನ ತರಣ್ ತಾರಣ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ರಾಕೆಟ್ ಲಾಂಚರ್‌ನಿಂದ ದಾಳಿ ನಡೆಸಲಾಗಿತ್ತು. ಪಂಜಾಬ್ ಗುಪ್ತಚರ ಇಲಾಖೆ ಪ್ರಧಾನ ಕಚೇರಿ ಮೇಲೆಯೂ ಇದೇ ರೀತಿಯ ದಾಳಿ ನಡೆಸಲಾಗಿತ್ತು. ಇವರಿಗೆ ಬೆಂಬಲವಾಗಿ ದೇಶದಾಚೆಯ ಕೆಲವು ಪ್ರತ್ಯೇಕತಾವಾದಿ ಸಿಖ್ಖರ ಗುಂಪುಗಳು, ಖಲಿಸ್ತಾನ್ ಪರ ಸಂಘಟನೆಗಳೂ ವರ್ತಿಸುತ್ತಿವೆ. ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮತ್ತು ಅಮೆರಿಕದಲ್ಲಿ ಇವು ಹೆಚ್ಚಾಗಿವೆ. ಇವರ ಟಾರ್ಗೆಟ್ ಎಂದರೆ ಅಲ್ಲಿನ ಭಾರತೀಯರು, ಅವರ ಶ್ರದ್ಧಾಕೇಂದ್ರಗಳಾದ ದೇವಾಲಯಗಳು ಹಾಗೂ ಕಾನ್ಸುಲೇಟ್‌ಗಳು. ಇತ್ತೀಚಿನ ದಿನಗಳಲ್ಲಿ ಅನೇಕ ದೇವಾಲಯಗಳನ್ನು ಹಾನಿಗೊಳಪಡಿಸಲಾಗಿದೆ. ಈ ಸಂಘಟನೆಗಳು ವಿನಾಕಾರಣ ಭಾರತೀಯರನ್ನು ಕೆಣಕುತ್ತಿವೆ.
ಇದಕ್ಕೆ ತಕ್ಕ ಉತ್ತರವನ್ನು ಭಾರತೀಯರು ನೀಡಿದ್ದಾರೆ. ಈವರೆಗೆ ಇದನ್ನೆಲ್ಲ ತಾಳ್ಮೆಯಿಂದ ಸಹಿಸಿಕೊಂಡಿದ್ದ ಅನಿವಾಸಿ ಭಾರತೀಯರು ಈಗ ತಿರುಗಿ ಬಿದ್ದಿದ್ದಾರೆ. ಅಮೆರಿಕ ಮಾತ್ರವಲ್ಲ, ವಿಶ್ವದ ಮೂಲೆ ಮೂಲೆಗಳಲ್ಲಿ ಅನಿವಾಸಿ ಭಾರತೀಯರು ಒಗ್ಗಟ್ಟಿನಿಂದ ಇದ್ದಾರೆ ಮತ್ತು ಸದಾ ಭಾರತದ ಪರ ದನಿ ಎತ್ತುತ್ತಿದ್ದಾರೆ. ವಿದೇಶಗಳಲ್ಲಿನ ಭಾರತ ವಿರೋಧಿ ಚಟುವಟಿಕೆ ವಿರುದ್ಧ ಭಾರತ ಸರ್ಕಾರ ಈಗಾಗಲೇ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಪ್ರತೀಕಾರದ ಕ್ರಮವಾಗಿ ಭಾರತವು ದಿಲ್ಲಿಯಲ್ಲಿನ ಬ್ರಿಟನ್ ದೂತಾವಾಸ ಕಚೇರಿಯಲ್ಲಿನ ಹೆಚ್ಚುವರಿ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಖಲಿಸ್ತಾನಿಗಳಿಗೆ ಅನಿವಾಸಿ ಭಾರತೀಯರು ಇಷ್ಟೊಂದು ಸದರವಾಗಿರುವುದೇಕೆ? ಇವರಿಗೆ ಭದ್ರತೆಯಿಲ್ಲವೆಂದು ಖಲಿಸ್ತಾನಿಗಳು ಭಾವಿಸಿರಬಹುದು. ಆದರೆ ಅನಿವಾಸಿ ಭಾರತೀಯರ ನೆರವಿಗೆ ಭಾರತ ಸದಾ ಸನ್ನದ್ಧವಾಗಿದೆ. ಈ ಸಂದೇಶವನ್ನು ನಾವು ರವಾನಿಸಬೇಕು. ಅನಿವಾಸಿ ಭಾರತೀಯರೂ ತಾವು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ನೀಡಬೇಕು.
ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಕೇಂದ್ರೀಯ ತನಿಖಾ ದಳಗಳ ದುರುಪಯೋಗ ಆರೋಪ; ಪಾರದರ್ಶಕತೆ ಅಗತ್ಯ
ಇದರ ಜತೆಗೆ ಭಾರತದಲ್ಲಿ ಕೂಡ ಕೇಂದ್ರ ಸರ್ಕಾರ ಸಿಖ್ ಫಾರ್ ಜಸ್ಟಿಸ್, ವಾರಿಸ್ ಪಂಜಾಜ್ ದೇ ಇತ್ಯಾದಿ ಖಲಿಸ್ತಾನ್ ಪರ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಆರಂಭಿಸಿದೆ. ಪಂಜಾಬಿನಲ್ಲಿ ಪ್ರತ್ಯೇಕತೆಯ ಬೀಜ ಬಿತ್ತುತ್ತಿರುವ ಅಮೃತ್ ಪಾಲ್ ಸಿಂಗ್‌ನನ್ನು ಬೇಟೆಯಾಡಲು ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆತನ ಹಲವಾರು ಬೆಂಬಲಿಗರನ್ನು ಬಂಧಿಸಿದ್ದಾರೆ. ಸಿಖ್ ಧರ್ಮ ಎಂಬುದು ಶತಮಾನಗಳಿಂದ ಹಿಂದೂಗಳ ಜತೆಗೆ ಎರಕವಾಗಿ ಅನ್ಯೋನ್ಯತೆಯಿಂದ ಇರುವ ಧರ್ಮ. ಅವರು ಬೇರೆ ಎಂದು ಹಿಂದೂಗಳಿಗೆ ಎಂದೂ ಅನಿಸಿಯೇ ಇಲ್ಲ. ಇಂಥವರ ನಡುವೆ ಪ್ರತ್ಯೇಕತೆಯ ವಿಷಬೀಜ ಬಿತ್ತಲು ಯತ್ನಿಸುವ ದೇಶವಿರೋಧಿ ಸಂಚನ್ನು ಈಗಲೇ ಹೊಸಕಿ ಹಾಕಬೇಕಿದೆ. ಇದನ್ನು ಪೋಷಿಸುತ್ತಿರುವ ಕೆನಡಾ ಹಾಗೂ ಬ್ರಿಟನ್‌ನ ಕೆಲವು ರಾಜಕಾರಣಿಗಳ ಬಣ್ಣವನ್ನೂ ಬಯಲು ಮಾಡಬೇಕಿದೆ.
ಕ್ರೀಡೆ
Women’s Boxing: ಚಿನ್ನಕ್ಕೆ ಸಿಹಿ ಮುತ್ತು ನೀಡಿದ ಸ್ವೀಟಿ ಬೂರಾ
ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಬಾಕ್ಸರ್ಗಳಾದ ನೀತು ಗಂಗಾಸ್ ಮತ್ತು ಸ್ವೀಟಿ ಬೂರಾ ಚಿನ್ನದ ಪದಕಕ್ಕೆ ಪಂಚ್ ನೀಡಿದ್ದಾರೆ.
ನವದೆಹಲಿ: ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ(World Women’s Boxing) ಭಾರತದ ಬಾಕ್ಸರ್ಗಳು ಪ್ರಾಬಲ್ಯ ಮರೆದಿದ್ದಾರೆ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ 2 ಚಿನ್ನದ ಪದಕ ಗೆದ್ದಿದೆ. ಆರಂಭದಲ್ಲಿ ನೀತು ಗಂಗಾಸ್ ಚಿನ್ನ ಗೆದ್ದು ಭಾರತದ ಖಾತೆ ತೆರೆದರೆ ಇದರ ಬೆನ್ನಲ್ಲೇ ಸ್ವೀಟಿ ಬೂರಾ(Saweety Boora) ಕೂಡ ಚಿನ್ನದ ಪದಕ ಗೆದ್ದು ಸಿಹಿ ಸುದ್ದಿ ನೀಡಿದರು.
ಶನಿವಾರ ಇಲ್ಲಿ ನಡೆದ 81 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತದ ಸ್ವೀಟಿ ಬೂರಾ ಅವರು 4-3 ಅಂಕಗಳ ಅಂತರದಿಂದ ಚೀನಾದ ವಾಂಗ್ ಲೀನಾ ಅವರನ್ನು ಪ್ರಬಲ ಪಂಚ್ಗಳ ಮೂಲಕ ಹಿಮ್ಮೆಟ್ಟಿಸಿದರು. ರೋಚಕವಾಗಿ ಸಾಗಿದ ಈ ಪಂದ್ಯದಲ್ಲಿ ಆರಂಭಿಕ ಬೌಟ್ನಲ್ಲಿ ಸ್ವೀಟಿ ಬೂರಾ ಹಿನ್ನಡೆ ಅನುಭವಿಸಿದರೂ ಆ ಬಳಿಕದ ಬೌಟ್ನಲ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ಕೊಟ್ಟು ಅಂತಿಮವಾಗಿ ಪಂದ್ಯದಲ್ಲಿ ಮೇಲುಗೈ ಸಾಧಿಸಿದರು.
ಇದಕ್ಕೂ ಮುನ್ನ ನಡೆದ ದಿನದ ಮತ್ತೊಂದು ಪಂದ್ಯದಲ್ಲಿ 48 ಕೆಜಿ ವಿಭಾಗದದ ಫೈನಲ್ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಜಯಿಸಿದ್ದ ನೀತು ಗಂಗಾಸ್ ಚಿನ್ನ ಗೆದ್ದಿದ್ದರು. ಅವರು ಪ್ರಬಲ ಪಂಚ್ಗಳ ಮೂಲಕ ಮಂಗೋಲಿಯಾದ ಲುತ್ಸಾಯಿಖಾನ್ ಅಲ್ಟಂಟ್‌ಸೆಟ್‌ಸೆಗ್ ವಿರುದ್ಧ 5-0 ಅಂತರದ ಅಧಿಕಾರಯುತ ಗೆಲುವು ದಾಖಲಿಸಿದ್ದರು.
ಇದನ್ನೂ ಓದಿ World Women’s Boxing; ಚಿನ್ನದ ಪದಕಕ್ಕೆ ಪಂಚ್ ನೀಡಿದ ನೀತು ಗಂಗಾಸ್
ಇನ್ನೂ ಎರಡು ಚಿನ್ನ ನಿರೀಕ್ಷೆ
ಭಾನುವಾರ ನಡೆಯುವ 52 ಕೆಜಿ ವಿಭಾಗದಲ್ಲಿ ನಿಖತ್ ಮತ್ತು 75 ಕೆಜಿ ವಿಭಾಗದಲ್ಲಿ ಲವ್ಲಿನಾ ಬೊರ್ಗೊಹೈನ್ ಫೈನಲ್ ಪಂದ್ಯ ಆಡಿಲಿದ್ದಾರೆ. ಉಭಯ ಬಾಕ್ಸರ್ಗಳ ಮೇಲು ಪದಕ ನಿರೀಕ್ಷೆ ಇರಿಸಲಾಗಿದೆ. ಒಂದೊಮ್ಮೆ ಈ ಇಬ್ಬರು ಫೈನಲ್ನಲ್ಲಿ ಗೆದ್ದರೆ ಭಾರತ ನಾಲ್ಕು ಚಿನ್ನದ ಪದಕ ಗೆದ್ದಂತಾಗುತ್ತದೆ.
ಕರ್ನಾಟಕ
Reservation : ಮೀಸಲಾತಿ ಪರಿಷ್ಕರಣೆ ಮೂಲಕ ಧರ್ಮದ ಹೆಸರಿನಲ್ಲಿ ರಾಜ್ಯ ವಿಭಜನೆಗೆ ಬಿಜೆಪಿ ಯತ್ನ ಎಂದ ಜೆಡಿಎಸ್
ದೇವೇಗೌಡರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಲಾಗಿದೆ ಎಂದು ಜೆಡಿಎಸ್ ಹೇಳಿದೆ.
ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿದ ಪರಿಷ್ಕೃತ ಮೀಸಲಾತಿ ನೀತಿಯನ್ನು ಜೆಡಿಎಸ್ ತೀವ್ರವಾಗಿ ಆಕ್ಷೇಪಿಸಿದೆ. ಇದು ಧರ್ಮದ ಹೆಸರಿನಲ್ಲಿ ರಾಜ್ಯ ವಿಭಜನೆಗೆ ನಡೆಸಿದ ಯತ್ನ ಮತ್ತು ಜಾತಿ ಜಗಳ ಸೃಷ್ಟಿಸುವ ಸಂಚು ಎಂದು ಅದು ಹೇಳಿದೆ. ಜೆಡಿಎಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿ ಹತ್ತು ಅಂಶಗಳನ್ನು ಹಂಚಿಕೊಂಡಿದೆ.
ಎಲ್ಲಕ್ಕಿಂತ ಮುಖ್ಯವಾಗಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ ಎಂದು ಹೇಳಿದೆ.
ಜೆಡಿಎಸ್‌ನ ಆಕ್ರೋಶದ ಮಾತುಗಳು ಇಲ್ಲಿವೆ.
- ರಾಜ್ಯ @BJP4Karnataka ಸರಕಾರ ಪ್ರತಿಯೊಂದರಲ್ಲಿಯೂ ರಾಜಕೀಯ ಮಾಡುತ್ತದೆ, ಪ್ರತಿಯೊಂದರಲ್ಲಿಯೂ ಚುನಾವಣೆಯನ್ನೇ ಕಾಣುತ್ತದೆ! ಸಂಪುಟದಲ್ಲಿ ಸಭೆಯ ಮೀಸಲಾತಿ ಹಕೀಕತ್ತೇ ಒಂದು ಖತರ್ನಾಕ್ ನಾಟಕ. ಕೊಡಲು ಕೈ ಬಾರದು, ಕೊಡಲೂ ಆಗದು. ಹಣೆಗೆ ಮಣೆಯಿಂದ ಬಾರಿಸಿಕೊಳ್ಳುವುದೂ ಎಂದರೆ ಇದೆ. ಪಾಪದ ಪಾಶ ಬಿಜೆಪಿ ಬೆನ್ನುಬಿದ್ದಿದೆ.
- ಚುನಾವಣೆ ಎಂಬ ಚದುರಂಗದಾಟದಲ್ಲಿ @BJP4Karnataka ಬಿಸಿಲುಗುದುರೆಯ ಮೇಲೆ ಸವಾರಿ ಮಾಡುತ್ತಿದೆ, ಅಷ್ಟೇ ಅಲ್ಲ; ಕ್ರೂರ ವ್ಯಾಘ್ರನ ಮೇಲೂ ಕುಳಿತು ಕುರುಡಾಗಿ ಸರ್ಕಸ್ ಮಾಡುತ್ತಿದೆ. ಸಾಗು, ಇಲ್ಲವೇ ಹೋಗು ಎನ್ನುವ ದುಸ್ಥಿತಿಯಲ್ಲಿ ತೋಯ್ದಾಡುತ್ತಿದೆ.
- ಮತದ ಹೆಸರಿನಲ್ಲಿ ಮತಯುದ್ಧ ಗೆಲ್ಲಬಹುದೆಂದು ಚಟಕ್ಕೆ ಬಿದ್ದಿರುವ @BJP4Karnataka ಈಗ ಸರ್ವಜನರ ಕಲ್ಯಾಣದ ಪ್ರತೀಕವಾದ ಕರ್ನಾಟಕದಲ್ಲಿ ಮೀಸಲು ಕಳ್ಳಾಟ ಆಡಿದೆ. ಗೆಲ್ಲಲೇಬೇಕು, ಗೆಲ್ಲದಿದ್ದರೆ ಇನ್ನೊಬ್ಬರ ತಟ್ಟೆಗೆ ಕೈ ಹಾಕು, ಆಗದಿದ್ದರೆ ಕಸಿದುಕೋ.. ಇದೇ ಕಮಲಪಕ್ಷದ ಕುಟಿಲತೆ.
- ಮೂರೂವರೆ ವರ್ಷದಿಂದ ಗಾಳಿಯಲ್ಲಿ ಗಾಳೀಪಟ ಹಾರಿಸಿಕೊಂಡೇ ಕಾಗಕ್ಕ ಗುಬ್ಬಕ್ಕನ ಕಥೆ ಹೇಳಿದ್ದ @BJP4Karnataka, ಚುನಾವಣೆ ಗಿಮಿಕ್ಕಿನ ಸಂಪುಟ ಸಭೆಯಲ್ಲಿ ಮೀಸಲು ತುಪ್ಪವನ್ನು ಜನರ ಹಣೆಗೆ ಸವರುವ ಬೂಟಾಟಿಕೆ ನಡೆಸಿದೆ. ಕಳ್ಳ ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯಲು ಹೊರಟಿದೆ.
- ಒಬ್ಬರ ಅನ್ನ ಕಸಿದುಕೊಂಡು ಇನ್ನೊಬ್ಬರ ಹೊಟ್ಟೆ ತುಂಬಿಸಬಹುದು ಎನ್ನುವ ಬಿಜೆಪಿಗರ ರಕ್ಕಸ ಚಾಳಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಕ್ಕೆ ಶಾಶ್ವತ ಸಮಾಧಿ ಕಟ್ಟುವಂತಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲದವರ ನಡವಳಿಕೆ ಇದು.
- ಮೀಸಲು ಕೊಡುವುದು ತಪ್ಪಲ್ಲ, ಆದರೆ, ತನ್ನ ಹಿಡೆನ್ ಅಜೆಂಡಾವನ್ನು ಮೀಸಲಿನೊಳಕ್ಕೂ ನುಸುಳಿಸಿದ @BJP4Karnataka ನರಿ ರಾಜಕಾರಣ ಆಘಾತಕಾರಿ.
- ಸಾಮಾಜಿಕ ನ್ಯಾಯದಿಂದಲೇ ಇಡೀ ದೇಶಕ್ಕೆ ಮೇಲ್ಪಂಕ್ತಿಯಾಗಿದ್ದ ಕರ್ನಾಟಕವನ್ನು ಮೀಸಲು ಮೂಲಕವೇ ವಿಭಜಿಸಿ ಮತ ಫಸಲು ತೆಗೆಯುವ ದುರಾಲೋಚನೆಯೊಂದಿಗೆ ಬಿಜೆಪಿ, ಸಾಮಾಜಿಕ ನ್ಯಾಯಕ್ಕೆ ಚಟ್ಟ ಕಟ್ಟಿ ಸ್ಮಶಾನ ಕೇಕೆ ಹಾಕುತ್ತಿದೆ.
- ಒಳ ಮೀಸಲು ಎನ್ನುವುದು ಒಡೆಯಲಾಗದ ಕಗ್ಗಂಟೇನಲ್ಲ. ಬಿಜೆಪಿ ಸರಕಾರಕ್ಕೆ ಇಚ್ಛಾಶಕ್ತಿ ಇಲ್ಲವಷ್ಟೇ. ಆದರೆ, ಚುನಾವಣೆ ಹೊತ್ತಿನಲ್ಲಿ ಜಾತಿ ಜಾತಿಗಳ ನಡುವೆ ವೈಮನಸ್ಸು ತಂದು ಉರಿಯುವ ಕಿಚ್ಚಿನಲ್ಲಿ ಚಳಿ ಕಾಯಿಸಿಕೊಳ್ಳಬೇಕು ಎನ್ನುವುದೇ ಬಿಜೆಪಿಯ ಅಸಲಿ ಆಟ.
- ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ಅವರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ.
- ಬಿಜೆಪಿ ಪಾಪದಕೊಡ ಭರ್ತಿ ಆಗಿದೆ. ರಾಜ್ಯವನ್ನು ಧರ್ಮದ ಹೆಸರಿನಲ್ಲಿ ವಿಭಜಿಸಿ, ಜಾತಿಜಗಳಕ್ಕೆ ತುಪ್ಪ ಸುರಿಯುತ್ತಿದೆ. ಅರಗಿನ ಮನೆಯಲ್ಲಿ ಪಾಂಡವರಿಗೆ ಕೊಳ್ಳಿ ಇಡಲು ಹೋಗಿ ಮುಂದೊಮ್ಮೆ ತಾವೇ ಎಸಗಿದ ಪಾಪಕುಂಡದಲ್ಲಿ ಬೆಂದುಹೋದ ಕೌರವರಂತೆ, ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ. ಉರಿಯುತ್ತಿರುವ ಜನರ ಒಡಲು ತಣ್ಣಗಾಗುವುದಿಲ್ಲ. ನೆನಪಿರಲಿ.
ಇದನ್ನೂ ಓದಿ : Panchamasali Reservation : 2ಡಿ ಮೀಸಲಾತಿಗೆ ಪಂಚಮಸಾಲಿ ಒಪ್ಪಿಗೆ, ಎರಡು ವರ್ಷಗಳ ಹೋರಾಟಕ್ಕೆ ತೆರೆ
-
ಸುವಚನ28 mins ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಅಂಕಣ21 hours ago
Ramzan Fasting : ರಂಜಾನ್ ವ್ರತಾಚರಣೆಗಿದೆ ವೈಜ್ಞಾನಿಕ ದೃಷ್ಟಿಕೋನ; ಆರೋಗ್ಯ ವರ್ಧನೆಗೆ ಇದು ಎಷ್ಟು ಸಹಕಾರಿ?
-
ಅಂಕಣ22 hours ago
ರಾಜ ಮಾರ್ಗ ಅಂಕಣ : ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಆರೇ ದಿನ ಓದಿದರೂ ಪಾಸ್ ಆಗಬಹುದು! ಹಾಗಿದ್ರೆ ಏನು ಮಾಡಬೇಕು?
-
ಕರ್ನಾಟಕ22 hours ago
Modi In Karnataka: ಕೆಆರ್ ಪುರ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ; ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?
-
ಅಂಕಣ23 hours ago
ವಿಸ್ತಾರ ಅಂಕಣ: ಭಾರತಕ್ಕೆ ಈಗ ಬೇಕಿರುವುದು ʼಈಸ್ ಆಫ್ ಡೂಯಿಂಗ್ ಪಾಲಿಟಿಕ್ಸ್ʼ ಸೂಚ್ಯಂಕ
-
ಕರ್ನಾಟಕ20 hours ago
Congress Ticket list : ಸಿದ್ದರಾಮಯ್ಯ ವರುಣ ಕೇಳಿದ್ರು ಕೊಟ್ವಿ, ಕೋಲಾರ ಕೇಳಿದ್ದರೆ ಅದನ್ನೇ ಕೊಡುತ್ತಿದ್ದೆವು; ಡಿ.ಕೆ. ಶಿವಕುಮಾರ್
-
ಕರ್ನಾಟಕ20 hours ago
Modi In Karnataka: ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪ್ರವಾಸದ ಇಂಚಿಂಚು ಮಾಹಿತಿ ಇಲ್ಲಿದೆ
-
ಕರ್ನಾಟಕ15 hours ago
Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ