Site icon Vistara News

Narayana Murthy: ವಾರಕ್ಕೆ 70 ಗಂಟೆ ಕೆಲಸ ಮಾಡಲು ಯುವಕರಿಗೆ ಇನ್ಫೋಸಿಸ್ ನಾರಾಯಣಮೂರ್ತಿ ಸಲಹೆ!

Narayana Murthy

Narayana Murthy reacts to being asked how AI will hurt job prospects

ನವದೆಹಲಿ: ಕಳೆದ ಎರಡು ಮೂರು ದಶಕಗಳಲ್ಲಿ ಅಗಾಧ ಪ್ರಗತಿ ಸಾಧಿಸಿರುವ ಭಾರತವು(India), ಪ್ರಚಂದ ಆರ್ಥಿಕತೆಯ ರಾಷ್ಟ್ರಗಳೊಂದಿಗೆ ಸ್ಪರ್ಧಿಸಬೇಕಾದರೆ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70 Hours Works) ಮಾಡಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ (NR Narayana Murthy) ಹೇಳಿದ್ದಾರೆ. ಗುರುವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ 3ಒನ್4 ಕ್ಯಾಪಿಟಲ್‌ನ ಪಾಡ್‌ಕಾಸ್ಟ್ ‘ದಿ ರೆಕಾರ್ಡ್’ ನ (The Record) ಮೊದಲ ಸಂಚಿಕೆಯಲ್ಲಿ ನಾರಾಯಣಮೂರ್ತಿ ಅವರು ಭಾಗವಹಿಸಿ ಮಾತನಾಡಿದರು. ರಾಷ್ಟ್ರ ನಿರ್ಮಾಣ, ತಂತ್ರಜ್ಞಾನ, ಅವರ ಕಂಪನಿ ಇನ್ಫೋಸಿಸ್ (Infosys) ಮತ್ತು ಹಲವಾರು ಇತರ ವಿಷಯಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಇನ್ಫೋಸಿಸ್‌ನ ಮಾಜಿ ಸಿಎಫ್ಒ ಮೋಹನ್‌ದಾಸ್ ಪೈ ಅವರೊಂದಿಗಿನ ಮಾತುಕತೆಯಲ್ಲಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು, ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ಚೀನಾದಂತಹ ದೇಶಗಳೊಂದಿಗೆ ಸ್ಪರ್ಧಿಸಲು, ಭಾರತದ ಯುವಕರು ಹೆಚ್ಚುವರಿ ಗಂಟೆಗಳ ಕೆಲಸವನ್ನು ಮಾಡಬೇಕಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಜಪಾನ್ ಮತ್ತು ಜರ್ಮನಿ ಯುವಕರು ಇದೇ ರೀತಿ ಮಾಡಿದ್ದರು.

ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ನಾವು ನಮ್ಮ ಕೆಲಸದ ಉತ್ಪಾದಕತೆಯನ್ನು ಸುಧಾರಿಸದ ಹೊರತು, ನಾವು ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡದ ಹೊರತು ನಾವು ಪ್ರಚಂಡ ಪ್ರಗತಿಯನ್ನು ಸಾಧಿಸಿದ ದೇಶಗಳೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಇನ್ಫೋಸಿಸ್ ನಾರಾಯಣಮೂರ್ತಿ ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ: Viral Video : ಕರೀನಾ ಕಪೂರ್‌ ವರ್ತನೆ ಬಗ್ಗೆ ನಾರಾಯಣಮೂರ್ತಿ ಗರಂ; ನಟಿ ಪರ ನಿಂತ ಸುಧಾ ಮೂರ್ತಿ!

77 ವರ್ಷದ ನಾರಾಯಣಮೂರ್ತಿ ಅವರು, ಇಂದಿನ ಯುವಕರಿಗೆ ನನ್ನ ಮನವಿ ಏನೆಂದರೆ, ಅವರು ತಮ್ಮ ದೇಶಕ್ಕಾಗಿ ವಾರಕ್ಕೆ 70 ಗಂಟೆಗಳ ಕೆಲಸ ಮಾಡಲು ಆರಂಭಿಸಬೇಕು. ಎರಡನೇ ಮಹಾಯುದ್ಧದ ಬಳಿಕ ಜರ್ಮನಿ ಮತ್ತು ಜಪಾನ್ ಇದೇ ರೀತಿ ಮಾಡಿತ್ತು. ಕೆಲವು ವರ್ಷಗಳ ಕಾಲ ಪ್ರತಿ ಜರ್ಮನ್ ಹೆಚ್ಚುವರಿ ಗಂಟೆಗಳ ಕಾಲ ಕೆಲಸ ಮಾಡುವುದನ್ನು ಖಾತ್ರಿ ಪಡಿಸಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.

ವಾರಕ್ಕೆ 70 ಗಂಟೆಗಳ ಕಾಲ ಇಂದಿನ ಯುವಕರು ಕೆಲಸ ಮಾಡಬೇಕು ಎಂಬ ಇನ್ಫೋಸಿಸ್ ನಾರಾಯಣಮೂರ್ತಿ ಅವರ ಅಭಿಪ್ರಾಯಕ್ಕೆ ಉದ್ಯಮದ ಹಲವರು ತಮ್ಮ ಸಹಮತವನ್ನು ವ್ಯಕ್ತಪಡಿಸಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version