ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು - Vistara News

ಶ್ರದ್ಧಾಂಜಲಿ

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

ಲಕ್ಕೂರು ಆನಂದ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

ಲಕ್ಕೂರು ಆನಂದ lakkuru Anand
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಲಬುರಗಿ: ಪ್ರತಿಭಾವಂತ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ (Central Sahitya Akademy) ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ (Lakkuru Ananda) ಅವರು ಮೇ 20ರಂದು ನಿಧನ (Death news) ಹೊಂದಿದ್ದಾರೆ. ಪೊಲೀಸರು ಇದೊಂದು ಅನುಮಾನಾಸ್ಪದ ಸಾವು (UDR Case) ಎಂದು ‌ದೂರು ದಾಖಲಿಸಿಕೊಂಡಿದ್ದಾರೆ.

44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಆಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ.

ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದರಿಗೆ ಸಂದಿದೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಆನಂದ್ ಅವರ ಶವ ಆಳಂದ‌ ತಾಲೂಕಿನ‌ ಕಡಗಂಚಿ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇವರು ಪಿಎಚ್‌ಡಿ ಮಾಡುತ್ತಿದ್ದರು. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಶ್ರದ್ಧಾಂಜಲಿ

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

M R Mamata: ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ

VISTARANEWS.COM


on

M R Mamata

ತುಮಕೂರು: ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ (47) (M R Mamata) ಅವರು ಅನಾರೋಗ್ಯದಿಂದ ನಿಧನರಾದರು. ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಮೆದುಳು ರಕ್ತಸ್ರಾವದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮಮತಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಪತ್ರಕರ್ತ ಎಚ್‌.ಆರ್‌.ರವೀಶ್‌, ಪುತ್ರ ಪ್ರಜ್ವಲ್‌ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇವರು ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತುಮಕೂರಿನಲ್ಲಿ ಹಿರಿಯ ಸಹಾಯಕ ನಿರ್ದೇಶಕಿಯಾಗಿ 2 ವರ್ಷದಿಂದ ಕೆಲಸ ಮಾಡುತ್ತಿದ್ದರು. ಅಧಿಕಾರಿಯಾಗಿದ್ದಾಗ ಹಲವಾರು ಜನಪರ ಕೆಲಸಗಳನ್ನು ಇವರು ಮಾಡಿದ್ದರು. ಬೆಂಗಳೂರು ಉತ್ತರ ತಾಲೂಕಿನ ಕುದುರೆಗೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತುಮಕೂರು ತಾಲೂಕಿನ ಹಾಲನೂರು ಗ್ರಾಮದ ಗಂಡನ ಮನೆಯ ತೋಟದಲ್ಲಿ ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿದೆ.

ಇದನ್ನೂ ಓದಿ | PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

Continue Reading

ಕರ್ನಾಟಕ

Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾಗಿದ್ದಾರೆ. ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸೋಮವಾರ ನಡೆಯಲಿದೆ.

VISTARANEWS.COM


on

Puttamadegowda

ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು. ನಿವೃತ್ತ ಶಿಕ್ಷಕ ಪುಟ್ಟಮಾದೇಗೌಡ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆಮ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ಪುಟ್ಟಮಾದೇಗೌಡ ಅವರಿಗೆ ಸಿ.ಪಿ ಯೋಗೇಶ್ವರ್ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ | Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಇದನ್ನೂ ಓದಿ | Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

Continue Reading

ಶ್ರದ್ಧಾಂಜಲಿ

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Veerabaswanthreddy Mudnal: ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Veerabaswanthreddy Mudnal

ಯಾದಗಿರಿ: ಮಾಜಿ ಶಾಸಕ ಹಾಗೂ ಹಿರಿಯ ವೈದ್ಯ ಡಾ.ವೀರಬಸವಂತರೆಡ್ಡಿ ಮುದ್ನಾಳ (76) (Veerabaswanthreddy Mudnal) ಅವರು ಅನಾರೋಗ್ಯರಿಂದ ಸೋಮವಾರ ನಿಧನರಾದರು. ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ವಿಬಿಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿದ್ದರು. 2010ರಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಇವರು ಯಾದಗಿರಿ ಜಿಲ್ಲೆ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬಿ.ವೈ.ವಿಜಯೇಂದ್ರ ಸಂತಾಪ

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಪಕ್ಷದ ಮುಖಂಡರು ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಸಂತಾಪ ಕೋರುವೆ. ವೈದ್ಯಕೀಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಾ, ಜನರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸರಳ ವ್ಯಕ್ತಿತ್ವದ ಶ್ರೀ ವೀರಬಸವಂತರೆಡ್ಡಿ ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.

ಮೃತರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ಆಘಾತದ ನೆರಳಿನಿಂದ ಹೊರಬರುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ.
ಓಂಶಾಂತಿ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

Continue Reading

ಕರ್ನಾಟಕ

Anchor Aparna: ಪಂಚಭೂತಗಳಲ್ಲಿ ಅಪರ್ಣಾ ಲೀನ; ಸ್ಮಾರ್ತ ಸಂಪ್ರದಾಯದಂತೆ ನೆರವೇರಿದ ಅಂತ್ಯಸಂಸ್ಕಾರ

Anchor Aparna: ಬೆಂಗಳೂರಿನ ಬನಶಂಕರಿಯ ಅಪರ್ಣಾ ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಶುಕ್ರವಾರ ಮಧ್ಯಾಹ್ನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾದ ಖ್ಯಾತ ನಿರೂಪಕಿ, ನಟಿ ಅಪರ್ಣಾ (Anchor Aparna) ಅವರ ಅಂತ್ಯಸಂಸ್ಕಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್‌ ಗೌರದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು.

ಇದಕ್ಕೂ ಮುನ್ನ ಬನಶಂಕರಿಯ ಅಪರ್ಣಾ (actress aparna) ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಪ್ತ ಸಾಗರದಾಚೆ ಎಲ್ಲೋ ಹಾಡಿನ ಮೂಲಕ ಚಿತ್ರರಂಗದ ಆಪ್ತರು ಕಣ್ಣೀರ ವಿದಾಯ ಹೇಳಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ, ನಟ ಶ್ರೀನಾಥ್, ರಾಘವೇಂದ್ರ ರಾಜಕುಮಾರ್‌, ತೇಜಸ್ವಿನಿ ಅನಂತಕುಮಾರ್, ರಮೇಶ್‌ ಅರವಿಂದ್‌, ವಿನಯ್‌ ರಾಜಕುಮಾರ್‌, ನಿರೂಪಕಿ ಶ್ವೇತಾ ಚೆಂಗಪ್ಪ, ಬ್ರಹ್ಮಾಂಡ ಗೂರೂಜಿ ನರೇಂದ್ರ ಬಾಬು ಶರ್ಮಾ, ಇಂದ್ರಜಿತ್‌ ಲಂಕೇಶ್‌, ಮಂಡ್ಯ ರಮೇಶ್‌, ತಾರಾ ಸೇರಿ ಚಿತ್ರರಂಗ, ರಾಜಕೀಯ ನಾಯಕರು ಸೇರಿ ವಿವಿಧ ಗಣ್ಯರು ಅಂತಿಮ ದರ್ಶನ ಪಡೆದರು.

ಸೃಜನ್ ಲೋಕೇಶ್ ಹಾಗೂ ಕುಟುಂಬಸ್ಥರು ಅಂತ್ಯಸಂಸ್ಕಾರದ ವೇಳೆ ಭಾಗಿಯಾಗಿದ್ದರು. ಈ ವೇಳೆ ಅಪರ್ಣ ಪತಿ ನಾಗರಾಜ್‌ಗೆ ಸೃಜನ್ ಲೋಕೇಶ್ ಸಾಂತ್ವನ ಹೇಳಿದರು. ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಸಂಪ್ರದಾಯದ ಪ್ರಕಾರ ಅಪರ್ಣಾ ಅಂತ್ಯಕ್ರಿಯೆ ನೆರವೇರಿತು.

ಇದನ್ನೂ ಓದಿ | Anchor Aparna:  ಹೂವು-ಹಾರ ತರದಂತೆ ಮನವಿ ಮಾಡಿ, ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ!

ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (57) (Anchor Aparna) ಅವರು ಗುರುವಾರ ರಾತ್ರಿ ನಿಧನರಾಗಿದ್ದರು.

ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ಮಂಗಳವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬನಶಂಕರಿ ನಿವಾಸದಲ್ಲಿ ಪತಿ ಹಾಗೂ ಕೇರ್ ಟೇಕರ್ಸ್ ಜತೆ ಅಪರ್ಣಾ ವಾಸಿಸುತ್ತಿದ್ದರು. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.

1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರು ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ | Anchor Aparna: ಅಪರ್ಣಾ ಕೊನೆ ಆಸೆ ಏನಾಗಿತ್ತು? ಕನಸು ಈಡೇರುವ ಮುನ್ನವೇ ಕಣ್ಮುಚ್ಚಿದ ನಟಿ!

1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ.

Continue Reading
Advertisement
ಬಿಡದಿ ಟೌನ್‌ಶಿಪ್‌
Latest2 days ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest2 days ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest3 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest3 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ5 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest5 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest5 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest5 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌