Vishnu Naik: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿಷ್ಣು ನಾಯ್ಕ ನಿಧನ - Vistara News

ಶ್ರದ್ಧಾಂಜಲಿ

Vishnu Naik: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿಷ್ಣು ನಾಯ್ಕ ನಿಧನ

Vishnu Naik: ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿಷ್ಣು ನಾಯ್ಕ ಅವರು, ತಮ್ಮ 50 ವರ್ಷಗಳ ಸಾಹಿತ್ಯ ಕೃಷಿಯಲ್ಲಿ 25 ಸಂಪಾದಿತ ಕೃತಿಗಳನ್ನು ಒಳಗೊಂಡು 66 ಕೃತಿಗಳನ್ನು ರಚಿಸಿದ್ದಾರೆ.

VISTARANEWS.COM


on

Rajyotsava awardee Vishnu Naik passes away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂಕೋಲಾ: ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಂಕೋಲಾ ತಾಲೂಕಿನ ಅಂಬಾರಕೊಡ್ಲದ ವಿಷ್ಣು ನಾಯ್ಕ (80) (Vishnu Naik) ಶನಿವಾರ ತಡರಾತ್ರಿ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಗ್ರಾಮೀಣ ಸೊಗಡಿನೊಂದಿಗಿದ್ದ ಇವರ ಬರವಣಿಗೆ ಎಂಥವರನ್ನೂ ಆಕರ್ಷಿಸುತ್ತಿತ್ತು. ಸರಿಸುಮಾರು 50 ವರ್ಷಗಳ ಕಾಲ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಸಾಹಿತ್ಯ ಲೋಕದ ಚೇತನ ಇನ್ನಿಲ್ಲವಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ವಿಷ್ಣು ನಾಯ್ಕ ಅವರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ವಿಷ್ಣು ನಾಯ್ಕ ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

1944ರಲ್ಲಿ ತಾಲೂಕಿನ ಅಂಬಾರಕೊಡ್ಲದಲ್ಲಿ ಜನಿಸಿದ್ದ ವಿಷ್ಣು ನಾಯ್ಕ ಅವರು ಅಂಬಾರಕೊಡ್ಲ ಹಾಗೂ ಅಂಕೋಲಾದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಜಾನಪದ ಸಾಹಿತ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿಷ್ಣು ನಾಯ್ಕ ಅವರು, ತಮ್ಮ 50 ವರ್ಷಗಳ ಸಾಹಿತ್ಯ ಕೃಷಿಯಲ್ಲಿ 25 ಸಂಪಾದಿತ ಕೃತಿಗಳನ್ನು ಒಳಗೊಂಡು 66 ಕೃತಿಗಳನ್ನು ರಚಿಸಿದ್ದಾರೆ.

ಕವನ, ನಾಟಕ, ಅಂಕಣ, ವಿಮರ್ಶೆ, ಕಥಾಸಂಕಲನ ಮತ್ತು ಜೀವನ ಪರಿಚಯಗಳ ಕೃತಿಗಳನ್ನು ಬರೆದಿದ್ದಾರೆ. 2007ರಲ್ಲಿ ಭಟ್ಕಳದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ರಾಘವೇಂದ್ರ ಪ್ರಕಾಶನದ ಮಾಲೀಕರು

ರಾಘವೇಂದ್ರ ಪ್ರಕಾಶನದ ಮಾಲೀಕರು ಆಗಿದ್ದ ಇವರು, ಅನೇಕ ಪ್ರಮುಖ ಕೃತಿಗಳನ್ನು ಬರೆದಿದ್ದಾರೆ. ಸುಮನ, ಆ ರೀತಿ ಈ ರೀತಿ, ನನ್ನ ಅಂಬಾರಕೊಡಲು, ವಾಸ್ತವ, ಹೊಸಭತ್ತ ಮುಚ್ಚಿದ ಬಾಗಿಲು ಮತ್ತು ಮರಿಗುಬ್ಬಿ, ನೋವು ಪ್ರೀತಿಯ ಪ್ರಶ್ನೆ (ಕವನ ಸಂಗ್ರಹಗಳು) ಕಣ್ಣೀರ ಕತೆಗಳು (ಸಂಕಲನ) ಅಯ್ನೋರ ಪೂಜೆ; ಒಂದು ಹನಿ ಮತ್ತು ಇತರ ಬೀದಿನಾಟಕಗಳು; ಯುದ್ಧ (ನಾಟಕಗಳು) ಡಾ. ಗೌರೀಶ ಕಾಯ್ಕಿಣಿ ಸಮಗ್ರ ಸಂಪುಟಗಳು (ಸಂಪಾದನೆ) ದುಡಿಯುವ ಕೈಗಳ ಹೋರಾಟದ ಕತೆ (ಮಾನವಿಕ) ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರ ಈ ಪ್ರಕಾಶನದಲ್ಲಿ 183 ಗ್ರಂಥಗಳನ್ನು ಪ್ರಕಟಿಸಿದ್ದರು.

ಸಂದ ಪ್ರಶಸ್ತಿಗಳು ಹಲವು

ಕೆ.ಎಚ್. ಪಾಟೀಲರ ಸಂಪಾದಕತ್ವದಲ್ಲಿ ಹೊರ ತರುತ್ತಿದ್ದ ‘ವಿಶಾಲ ಕರ್ನಾಟಕ’ ದೈನಿಕ ಪತ್ರಿಕೆಯ ಪಾಕ್ಷಿಕ ಅಂಕಣಕಾರರಾಗಿ, ಮಂಗಳೂರಿನ ವಡ್ಡರ್ಸೆ ರಘುರಾಮ ಶೆಟ್ಟರ ಸಂಪಾದಕತ್ವದಲ್ಲಿ ತರುತ್ತಿದ್ದ ‘ಮುಂಗಾರು’ ದೈನಿಕ ಪತ್ರಿಕೆಯ ವರದಿಗಾರರಾಗಿ, ‘ಕರಾವಳಿ ಮುಂಜಾವು’, ‘ಕರಾವಳಿ ಸುಪ್ರಭಾತ’, ‘ಮುನ್ನಡೆ’, ‘ತೇಜಸ್ವಿ ಪ್ರಪಂಚ’, ಮುಂತಾದ ಪತ್ರಿಕೆಗಳ ಅಂಕಣಕಾರರಾಗಿ ಕಾರ್ಯನಿರ್ವಹಣೆ. ಇವರ ಸಾಹಿತ್ಯ ಕೊಡುಗೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಆದರ್ಶ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಗ್ರಂಥ ಪ್ರಕಾಶಕ ಪ್ರಶಸ್ತಿ, ಎಸ್.ವಿ. ಪರಮೇಶ್ವರ ಭಟ್ಟರ ಕನ್ನಡ ಪರಿಚಾರಕ ಪ್ರಶಸ್ತಿ, ಬೇಂದ್ರೆ ಕಾವ್ಯ ಪ್ರಶಸ್ತಿ, ಕಾಯ್ಕಿಣಿ ಪ್ರತಿಷ್ಠಾನ ಪ್ರಶಸ್ತಿ, ಚೌಡಯ್ಯ ಸಾಹಿತ್ಯ ಪ್ರಶಸ್ತಿಗಳು ಅವರನ್ನರಸಿವೆ. ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ, ರಾಜ್ಯದಲ್ಲಿ ನಡೆದಿದ್ದ ಹಲವಾರು ಸಾಹಿತ್ಯ ಗೋಷ್ಠಿಗಳ ಅಧ್ಯಕ್ಷತೆಯನ್ನು ವಹಿಸಿ ಮುನ್ನಡೆಸಿದ್ದರು.

ಮನೆಯ ಮಹಡಿಯಲ್ಲಿ ಸಾಹಿತ್ಯ ವಸ್ತು ಸಂಗ್ರಹಾಲಯ ಸ್ಥಾಪಿಸಿದ್ದ ಅವರು ಅಲ್ಲಿ ನಾಡಿನ ಹೆಸರಾಂತ ಸಾಹಿತಿಗಳೊಂದಿಗೆ ನಡೆಸಿದ ಪತ್ರ ವ್ಯವಹಾರ, ಉಭಯ ಕುಶಲೋಪರಿ ವಿನಿಮಯ, ಹೆಸರಾಂತ ಸಾಹಿತಿಗಳ ಕೈಬರಹ, ದಿನಕರ ದೇಸಾಯಿ ಅವರ ಸಾಹಿತ್ಯ ಕೃತಿಗಳನ್ನು ಇರಿಸಿದ್ದರು. ಅಲ್ಲದೆ, ದೇಶಿ ವಸ್ತುಗಳ ಸಂಗ್ರಹವನ್ನೂ ಇರಿಸಿದ್ದರು.

ವಿಷ್ಣು ನಾಯ್ಕ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ 11.30ಕ್ಕೆ ಅಂಬಾರಕೊಡ್ಲ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Uttara Kannada News: ಅಳಿವಿನಂಚಿನಲ್ಲಿರುವ ಹಾರ್ನ್‌ಬಿಲ್ ಪಕ್ಷಿ ಪ್ರಬೇಧವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯ; ಸ್ಮಿತಾ ಬಿಜ್ಜೂರ್

ಕಂಬನಿ ಮಿಡಿದ ಉ.ಕ. ಜಿಲ್ಲಾ ಕಸಾಪ

“ನಾಡಿನ ಹಿರಿಯ ಸಾಹಿತಿ, ಕವಿ, ಅಂಕೋಲೆಯ ವಿಷ್ಣು ನಾಯ್ಕರು ನಮ್ಮನಗಲಿದರೆಂದು ತಿಳಿಸಲು ವಿಷಾಧಿಸುವೆ. ತಮ್ಮ ಪ್ರಗತಿಪರ ಬರಹ, ಚಿಂತನಶೀಲ ಮಾತು, ಜೀವನ ಪ್ರೀತಿಯ ಕಾವ್ಯ, ಶಿಸ್ತಿನ ಸಂಘಟನೆ, ಸರಳತೆಯ ಬದುಕಿನ ಮೂಲಕ ನಾಡಿನಾದ್ಯಂತ ಚಿರ ಪರಿಚಿತರಾಗಿದ್ದ ವಿಷ್ಣು ನಾಯ್ಕರು, ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯಾಗಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಅಗಿದ್ದ ಇವರು ಶೈಕ್ಷಣಿಕವಾಗಿ, ಸಾಹಿತ್ಯಿಕವಾಗಿ ನನ್ನ ಗುರುಗಳೂ ಕೂಡಾ ಆಗಿದ್ದರು. ಇವರ ಅಗಲಿಕೆ ವೈಯಕ್ತಿಕವಾಗಿ ನನಗಂತೂ ಸಹಿಸಿಕೊಳ್ಳಲಾಗದಂತಹ ವೇದನೆಯಾಗಿದೆ. ನಾಡಿನ ಅಕ್ಷರಲೋಕಕ್ಕೂ ತುಂಬಲಾರದ ನಷ್ಟ. ಉಸಿರು ನಿಲ್ಲಿಸಿದ ಆ ಹಿರಿಯ ಚೇತನಕ್ಕೆ ನಮನಗಳು” ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್. ವಾಸರೆ ಕಂಬನಿ ಮಿಡಿದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Swagat Babu: ಕನ್ನಡ ಚಲನಚಿತ್ರ ನಿರ್ಮಾಪಕ ಸ್ವಾಗತ್ ಬಾಬು ಇನ್ನಿಲ್ಲ

Swagat Babu: ಅವರು ನಿರ್ಮಿಸಿದ್ದ ಚಂದ್ರಮುಖಿ ಪ್ರಾಣಸಖಿ, ಶ್ರೀರಸ್ತು ಶುಭಮಸ್ತು, ಸ್ಮೈಲ್ ಮುಂತಾದ ಸಿನಿಮಾಗಳು ಹಿಟ್‌ ಆಗಿದ್ದವು. ಇವಲ್ಲದೇ ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದರು.

VISTARANEWS.COM


on

swagat babu no more
Koo

ಬೆಂಗಳೂರು: ಕನ್ನಡ ಚಲನಚಿತ್ರಗಳ ನಿರ್ಮಾಪಕ (film producer) ಹಾಗೂ ವಿತರಕರಾಗಿದ್ದ (distributor) ಸ್ವಾಗತ್‌ ಬಾಬು (Swagat Babu) ಅವರು ಮೃತಪಟ್ಟಿದ್ದಾರೆ. ಅವರು ನಿರ್ಮಿಸಿದ್ದ ಚಂದ್ರಮುಖಿ ಪ್ರಾಣಸಖಿ, ಶ್ರೀರಸ್ತು ಶುಭಮಸ್ತು, ಸ್ಮೈಲ್ ಮುಂತಾದ ಸಿನಿಮಾಗಳು ಹಿಟ್‌ ಆಗಿದ್ದವು. ಇವಲ್ಲದೇ ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದರು. ಸುದೀರ್ಘ 35 ವರ್ಷಗಳಿಂದ ಅವರು ಕನ್ನಡ ಚಿತ್ರೋದ್ಯಮದ (kannada film industry) ಆಗುಹೋಗುಗಳಲ್ಲಿ ತೊಡಗಿಸಿಕೊಂಡಿದ್ದರು. ಸ್ವಾಗತ್‌ ಬಾಬು ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್‌ ಇನ್ನಿಲ್ಲ

ಬೆಂಗಳೂರು: ತಮಿಳು ಸಿನಿಮಾಗಳ ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ನಿನ್ನೆ (ಮೇ 27ರಂದು) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

Continue Reading

ಬೆಂಗಳೂರು

R. Jayakumar: ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅನಾರೋಗ್ಯದಿಂದ ನಿಧನ

R. Jayakumar: ಕೊಡಗಿನವರಾದ ಜಯಕುಮಾರ್ ಅವರು ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

R. Jayakumar
Koo

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64) ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು. ಕೊಡಗಿನವರಾದ ಜಯಕುಮಾರ್ (R. Jayakumar), ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಇವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಇವರು ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು. ಅವರ ದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹೋರಾಟದ ಹಾದಿ ಆರಿಸಿಕೊಂಡಿದ್ದ ಜಯಕುಮಾರ್: ಸಿಎಂ

ಹಿರಿಯ ಪತ್ರಕರ್ತ ಜಯಕುಮಾರ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಆರ್. ಜಯಕುಮಾರ್ ನಿಧನದಿಂದ ದು:ಖಿತನಾಗಿದ್ದೇನೆ.
ಕಮ್ಯುನಿಸ್ಟ್ ಸಿದ್ಧಾಂತಕ್ಕೆ ಒಲಿದು ಸಂಘಟನೆ ಮತ್ತು ಹೋರಾಟದ ಹಾದಿಯನ್ನು ಆರಿಸಿಕೊಂಡಿದ್ದ ಜಯಕುಮಾರ್ ಬದುಕಿನುದ್ದಕ್ಕೂ ಬಡವರು, ಶೋಷಿತರು ಮತ್ತು ಅವಕಾಶ ವಂಚಿತರ ಪರವಾಗಿ ದನಿ ಎತ್ತುತ್ತಾ ಬಂದವರು.
ಜಯಕುಮಾರ್ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಕೆಯುಡಬ್ಲ್ಯುಜೆ ಸಂತಾಪ

ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್.ಜಯಕುಮಾರ್ ಭಾಜನರಾಗಿದ್ದರು. ಅನಾರೋಗ್ಯದ ಕಾರಣದಿಂದ ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದ ಕಾರಣ, ಮೈಸೂರಿನ ಅವರ ತೋಟದ ಮನೆಗೆ ಹೋಗಿ ಅಲ್ಲಿ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

ಜಯಕುಮಾರ್ ನಿಧನದಿಂದ ಕ್ರಿಯಾಶೀಲ ಪತ್ರಕರ್ತನನ್ನು ಸುದ್ದಿಮನೆ ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.

Continue Reading

ಕ್ರೈಂ

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

Jayashree Gurannavar: ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡುತ್ತಾ ಗುರುತಿಸಿಕೊಂಡಿದ್ದ ಜಯಶ್ರೀ ಗುರನ್ನವರ್ ಅವರು, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟದ ಮೂಲಕ ಗಮನ ಸೆಳೆದಿದ್ದರು.

VISTARANEWS.COM


on

Jayashree Gurannavar
Koo

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್(40) ಅವರು ಅನಾರೋಗ್ಯದಿಂದ ಬುಧವಾರ ನಿಧನರಾದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹೋರಾಟಗಾರ್ತಿ(Jayashree Gurannavar), ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡುತ್ತಾ ಗುರುತಿಸಿಕೊಂಡಿದ್ದ ಜಯಶ್ರೀ ಅವರು, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟದ ಮೂಲಕ ಗಮನ ಸೆಳೆದಿದ್ದರು. ಇವರಿಗೆ ಒಬ್ಬ ಮಗ ಇದ್ದಾನೆ.

ಇದನ್ನೂ ಓದಿ | Gas Leak deaths: ಮುಚ್ಚಿದ ಮನೆಯಲ್ಲಿ ಗ್ಯಾಸ್‌ ಸೋರಿಕೆ, ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ 4 ಮಂದಿ

ಕಬ್ಬಿನ ಬಾಕಿ ಬಿಲ್‌ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗುವ ಮೂಲಕ ಸರ್ಕಾರದ ಗಮನ ಸೆಳೆಯಲು ದೊಡ್ಡ ಮಟ್ಟದ ಹೋರಾಟ ಮಾಡಿದ್ದರು. ಈ ವೇಳೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತನಾಡಿ ಟೀಕೆಗೆ ಒಳಗಾಗಿದ್ದರು. ಬಳಿಕ ಜಯಶ್ರೀ ಅವರು ರಾಜ್ಯಾದ್ಯಂತ ಸಂಚಾರ ಮಾಡಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಯಲ್ಲಿ ರೈತ ಸಂಘಟನೆಯಲ್ಲಿ ಸೇರ್ಪಡೆ ಮಾಡಲು ಶ್ರಮಿಸಿದ್ದರು.

ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Iqbal Ahmed Saradgi

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) (EX MP Iqbal Ahmed Saradgi) ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಹಾಗೂ ಮಾಜಿ ಸಿಎಂ ದಿ. ಧರ್ಮ ಸಿಂಗ್ (Dharm Singh) ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಕಲಬುರಗಿ (kalaburagi) ನಗರದಲ್ಲಿ 1944 ಜೂನ್ 5ರಂದು ಜನಿಸಿದ ಸರಡಗಿ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎಎಲ್ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕೇಂದ್ರ ಹಜ್‌ ಸಮಿತಿ, ವಕ್ಫ್‌ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಇದನ್ನೂ ಓದಿ | Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ತಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ.

Continue Reading

ಶ್ರದ್ಧಾಂಜಲಿ

Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Iqbal Ahmed Saradgi: ಕಲಬುರಗಿಯ ಮಾಜಿ ಸಂಸದ ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

VISTARANEWS.COM


on

Iqbal Ahmed Saradgi
Koo

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) (EX MP Iqbal Ahmed Saradgi) ಮಂಗಳವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಹಾಗೂ ಮಾಜಿ ಸಿಎಂ ದಿ. ಧರ್ಮ ಸಿಂಗ್ (Dharm Singh) ಪರಮಾಪ್ತರಲ್ಲಿ ಒಬ್ಬರಾಗಿದ್ದರು.

ಕಲಬುರಗಿ (kalaburagi) ನಗರದಲ್ಲಿ 1944 ಜೂನ್ 5ರಂದು ಜನಿಸಿದ ಸರಡಗಿ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎಎಲ್ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕೇಂದ್ರ ಹಜ್‌ ಸಮಿತಿ, ವಕ್ಫ್‌ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ತಂದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ.

ನಗರದ ಐವಾನ್- ಇ-ಶಾಹಿ ಪ್ರದೇಶದಲ್ಲಿರುವ ಸರಡಗಿ ನಿವಾಸದಲ್ಲಿ ಇಂದು ಇಡೀ ದಿನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 5 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

ವಿಜಯನಗರ: ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ, ಹಂಪಿಯ ಸ್ಮಾರಕಗಳ ಮೇಲೆ ಆಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಹಂಪಿಯ ರಥ ಬೀದಿಯಲ್ಲಿರುವ ಸಾಲು ಮಂಟಪಗಳಲ್ಲಿ ಕೆಲವು ಉರುಳಿ ಬಿದ್ದಿವೆ.

ಹಂಪಿಗೆ ವಿಶ್ವಖ್ಯಾತಿಯನ್ನು ತಂದುಕೊಟ್ಟ ವಿಜಯನಗರ ಸಾಮ್ರಾಜ್ಯದ ಕಾಲದ ಕಲ್ಲು ಮಂಟಪಗಳು ಇವಾಗಿದ್ದು, ಮಳೆಗೆ ಕುಸಿದುಬಿದ್ದಿವೆ. ಇವುಗಳನ್ನು ವಿಜಯನಗರ ಅರಸರು ನಿರ್ಮಿಸಿದ್ದರು. ಇವು ಪಂಪಾ ವಿರೂಪಾಕ್ಷ ದೇವಾಲಯದ ರಥ ಬೀದಿಯಲ್ಲಿದ್ದು, ಹಂಪಿಗೆ ಬಂದಿಳಿಯುವವರಿಗೆ ಮೊದಲಾಗಿ ಕಾಣಿಸುವಂತಿವೆ. ಇವು ಮೊದಲೇ ಶಿಥಿಲವಾಗಿದ್ದು, ದುರಸ್ತಿಯ ಅಗತ್ಯದಲ್ಲಿದ್ದವು.

ಹಂಪಿಯ ಸ್ಮಾರಕಗಳು ಯುನೆಸ್ಕೋ ಪಟ್ಟಿಗೆ ಸೇರಿವೆ. ಹೀಗಾಗಿಯೇ ಇವುಗಳನ್ನು ನೋಡಲು ವಿದೇಶಗಳಿಂದ ಜನ ಆಗಮಿಸುತ್ತಾರೆ. ಆದರೆ ಪುರಾತತತ್ವ ಇಲಾಖೆ ಇವುಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಸ್ಮಾರಕಗಳ ರಕ್ಷಣೆಗೆ ಲಕ್ಷ ಲಕ್ಷ ರೂಪಾಯಿ ಹಣ ಬರುತ್ತಿದ್ದರೂ, ಕೇಂದ್ರ ಪುರಾತತ್ವ ಇಲಾಖೆ ಇವುಗಳ ಸ್ಥಿತಿಗತಿಯ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ದೂರಲಾಗಿದೆ.

ಕಳೆದ ಒಂದು ವಾರದಿಂದ ವಿಜಯನಗರ ಜಿಲ್ಲಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಹಂಪಿಯಲ್ಲಿ ಇನ್ನಷ್ಟು ಶಿಥಿಲ ಸ್ಮಾರಕಗಳಿವೆ. ಸೂಕ್ತ ನಿರ್ವಹಣೆ ಇಲ್ಲದೇ ಇದ್ದಕ್ಕಿದ್ದಂತೆ ಉರುಳಿ ಬಿದ್ದಿರುವ ಸಾಲು ಮಂಟಪಗಳು, ಐತಿಹಾಸಿಕ ಹಂಪಿಯ ಸ್ಮಾರಕಗಳ ನಿರ್ವಹಣೆಯ ಸಮಸ್ಯೆಯತ್ತ ಬೆಟ್ಟು ಮಾಡಿವೆ.

ಇದನ್ನೂ ಓದಿ: Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

Continue Reading
Advertisement
Tattoo Care
ಆರೋಗ್ಯ8 mins ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Banglore rain
ಪ್ರಮುಖ ಸುದ್ದಿ38 mins ago

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Chamarajanagar Lok Sabha Constituency
ಪ್ರಮುಖ ಸುದ್ದಿ38 mins ago

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Dina Bhavishya
ಭವಿಷ್ಯ38 mins ago

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Amul Milk
ದೇಶ5 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ6 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ7 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ8 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ8 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20248 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌