Kiccha Sudeep : ಕಿಚ್ಚ ಸುದೀಪ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ MN ಕುಮಾರ್‌, NM ಸುರೇಶ್‌ಗೆ ನಿರ್ಬಂಧ - Vistara News

ಕೋರ್ಟ್

Kiccha Sudeep : ಕಿಚ್ಚ ಸುದೀಪ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ MN ಕುಮಾರ್‌, NM ಸುರೇಶ್‌ಗೆ ನಿರ್ಬಂಧ

Kiccha Sudeep : ನಟ ಸುದೀಪ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನಗರದ ಸಿವಿಲ್‌ ನ್ಯಾಯಾಲಯ ಇಬ್ಬರು ನಿರ್ಮಾಪಕರಿಗೆ ಆದೇಶ ನೀಡಿದೆ. ಸುದೀಪ್‌ ಅವರು ಮಧ್ಯಂತರ ಅರ್ಜಿಯೊಂದನ್ನು ಸಲ್ಲಿಸಿ ಮಾತಿಗೆ ಕಡಿವಾಣ ಹಾಕುವಂತೆ ಕೋರಿದ್ದರು.

VISTARANEWS.COM


on

Kiccha sudeep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರನಟ ಕಿಚ್ಚ ಸುದೀಪ್‌ (Kiccha Sudeep) ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನಿರ್ಮಾಪಕರಾದ ಎಂ.ಎನ್.ಕುಮಾರ್ (Producer MN Kumar), ಎನ್.ಎಂ.ಸುರೇಶ್ (NM Suresh) ಅವರಿಗೆ ಆದೇಶ ನೀಡಿದೆ. ಇವರಿಬ್ಬರು ನೀಡುತ್ತಿರುವ ಮಾನಹಾನಿಕರ ಹೇಳಿಕೆಗಳನ್ನು ತಡೆಯಬೇಕು ಎಂದು ಸುದೀಪ್‌ ಅವರು ಸಿವಿಲ್‌ ಕೋರ್ಟ್‌ಗೆ ಮಧ್ಯಂತರ ಅರ್ಜಿ (Interlocutory Application) ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ 11ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ (XI Addl. City Civil and Sessions Court) ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಇಂಜಂಕ್ಷನ್‌ ಮೂಲ ಪ್ರಕರಣದ ತೀರ್ಪು ಬರುವವರೆಗೂ ಚಾಲ್ತಿಯಲ್ಲಿರುತ್ತದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 9ಕ್ಕೆ ಮುಂದೂಡಲಾಗಿದೆ.

ಕಿಚ್ಚ ಸುದೀಪ್‌ ಅವರು ಮುಂಗಡ ಹಣ ಪಡೆದು ಕಾಲ್‌ಶೀಟ್‌ ನೀಡಿಲ್ಲ ಎಂದು ನಿರ್ಮಾಪಕ ಎಂನ್‌ ಕುಮಾರ್‌ ಅವರು ಆರೋಪ ಮಾಡುವ ಮೂಲಕ ಹುಟ್ಟಿಕೊಂಡ ವಿವಾದ ಈಗ ನ್ಯಾಯಾಲಯದ ಮೆಟ್ಟಿಲೇರಿದೆ. ನಿರ್ಮಾಪಕರಾದ ಎಂ.ಎನ್‌. ಕುಮಾರ್‌, ಎನ್‌ಎಂ ಸುರೇಶ್‌ ಸೇರಿದಂತೆ ಹಲವು ನಿರ್ಮಾಪಕರು ಸುದೀಪ್‌ ವಿರುದ್ಧ ಮುಗಿಬಿದ್ದಿದ್ದರು. ತಾವು ಹಿಂದೆ ಮುಂಗಡ ಹಣ ನೀಡಿದ್ದು, ಸುದೀಪ್‌ ಅವರು ಕಾಲ್‌ಶೀಟೂ ನೀಡದೆ, ಹಣವನ್ನೂ ವಾಪಸ್‌ ನೀಡದೆ ಸತಾಯಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

Kiccha sudeep MN Kumar

ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಲು ರವಿಚಂದ್ರನ್‌, ಚಿತ್ರ ನಿರ್ಮಾಪಕರ ಸಂಘ ಸೇರಿದಂತೆ ಹಲವು ಹಿರಿಯರು ಪ್ರಯತ್ನ ನಡೆಸಿದ್ದರು. ಆದರೆ, ನಿರ್ಮಾಪಕರು ತಮ್ಮ ಆರೋಪಗಳನ್ನು ಮುಂದುವರಿಸಿದ್ದರು. ಈ ಹಂತದಲ್ಲಿ ಸುದೀಪ್‌ ಕೂಡಾ ಆಕ್ರೋಶಿತರಾಗಿ ಇದನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವುದು ಬೇಡ. ಕೋರ್ಟ್‌ನಲ್ಲೇ ತೀರ್ಮಾನವಾಗಲಿ. ಇದರಿಂದ ಇನ್ನು ಮುಂದೆ ಆರೋಪ ಮಾಡುವವರು ಯೋಚನೆ ಮಾಡಲು ಅವಕಾಶವಾಗುತ್ತದೆ. ಹೀಗಾಗಿ ನ್ಯಾಯಾಲಯದ ಮೂಲಕವೇ ನ್ಯಾಯ ಪಡೆಯುವುದಾಗಿ ಪ್ರಕಟಿಸಿದ್ದರು.

ನ್ಯಾಯಕ್ಕಾಗಿ ಕೋರ್ಟ್‌ ಮೊರೆ ಹೊಕ್ಕ ಸುದೀಪ್‌

ಎಂಎನ್‌ ಕುಮಾರ್‌ ಅವರು ತಾನು ಮುಂಗಡ ಪಡೆದು ವಂಚಿಸಿದ್ದೇನೆ ಎಂಬ ಅರ್ಥದಲ್ಲಿ ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತನ್ನ ಮಾನಹಾನಿ ಆಗಿದೆ ಎಂದು ಸುದೀಪ್‌ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು. ಎಂ.ಎನ್‌. ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಎನ್‌ ಎಂ ಸುರೇಶ್‌ ಕೂಡಾ ಭಾಗಿಯಾಗಿದ್ದರಿಂದ ಅವರನ್ನೂ ಕೋರ್ಟ್‌ಗೆ ಎಳೆಯಲಾಗಿತ್ತು.

ಆಗಸ್ಟ್​ 10ರಂದು ನಡೆದ ವಿಚಾರಣೆಯ ವೇಳೆ ಸುದೀಪ್​ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಬಂದು ಹೇಳಿಕೆ ದಾಖಲಿಸಿದ್ದರು. ದಾವೆಯ ವಿಚಾರಣೆ ನಡೆಸಿದ ಕೋರ್ಟ್‌ ಆಗಸ್ಟ್‌ 26ರಂದು ಕೋರ್ಟ್‌ಗೆ ಹಾಜರಾಗುವಂತೆ ಇಬ್ಬರೂ ನಿರ್ಮಾಪಕರಿಗೆ ಸಮನ್ಸ್‌ ನೀಡಿತ್ತು.

ಈ ವೇಳೆ ಸುದೀಪ್‌ ಪರ ವಕೀಲರು ಆ ಸಂದರ್ಭದಲ್ಲಿ ಮಾತನಾಡಿ ‘ಸುದೀಪ್‌ ಅವರು ಕಾನೂನಿನ ಪ್ರಕಾರವಾಗಿ ಕೋರ್ಟ್‌ಗೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷ್ಯಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದಿದ್ದರು.

ಇದನ್ನೂ ಓದಿ: Kiccha Sudeep : ನನ್ನ ಒಳ್ಳೆಯತನ ದುರುಪಯೋಗದ ಟೂಲ್‌ ಅಲ್ಲ! ಖಡಕ್‌ ಸಂದೇಶ ಕೊಟ್ಟ ಕಿಚ್ಚ ಸುದೀಪ್

ಇಷ್ಟೆಲ್ಲ ವಿದ್ಯಮಾನಗಳ ನಡುವೆಯೂ ಮಾತಿನ ದಾಳಿ ಮುಂದುವರಿದ ಹಿನ್ನೆಲೆಯಲ್ಲಿ ತನ್ನ, ಮತ್ತು ಕುಟುಂಬದ ಬಗ್ಗೆ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನೀಡಬೇಕು ಎಂದು ಕೋರಿ ಸುದೀಪ್‌ ಮಧ್ಯಂತರ ಅರ್ಜಿ (Interlocutory Application) ಸಲ್ಲಿಸಿದ್ದರು. Interlocutory Application ಅಂದರೆ ಮೂಲ ದಾವೆಯ ವಿಚಾರಣೆ ನಡೆಯುತ್ತಿರುವಾಗಲೇ ಅದರ ಉಲ್ಲಂಘನೆ, ಸಮಕಾಲೀನ ಪ್ರಕ್ರಿಯೆಗಳಿಗೆ ಪೂರಕವಾಗಿ ಸಲ್ಲಿಸಲಾಗುವ ಅರ್ಜಿ. ಇದೀಗ ಆ ಪ್ರಕರಣದ ವಿಚಾರಣೆ ನಡೆದು ಇಂಜಂಕ್ಷನ್‌ ನೀಡಲಾಗಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್‌ 9ಕ್ಕೆ ಮುಂದೂಡಲಾಗಿದೆ. ಉಳಿದಂತೆ ಆಗಸ್ಟ್‌ 26ರಂದು ಹಾಜರಾಗಬೇಕು ಎಂದು ನಿರ್ಮಾಪಕರಿಬ್ಬರಿಗೆ ನೀಡಿದ ಸಮನ್ಸ್‌ ಹಾಗೇ ಮುಂದುವರಿಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rahul Gandhi: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ

ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಆಗಮಿಸಿದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ‌ ಶಿವಕುಮಾರ್ (DCM DK Shivakumar) ಬರಮಾಡಿಕೊಂಡರು.

VISTARANEWS.COM


on

rahul gandhi dk shivakumar cm siddaramaiah
Koo

ಬೆಂಗಳೂರು: ಮುಂಜಾನೆ ಒಂಬತ್ತು ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) ಬಂದಿಳಿದಿದ್ದು, ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ‌ ಶಿವಕುಮಾರ್ (DCM DK Shivakumar) ಬರಮಾಡಿಕೊಂಡರು. ಮಧ್ಯಾಹ್ನ 11 ಗಂಟೆಗೆ ಮಾನನಷ್ಟ ಮೊಕದ್ದಮೆ (Defamation Case) ವಿಚಾರಣೆ ಎದುರಿಸಲು ಅವರು ಜನಪ್ರತಿನಿಧಿಗಳ ಕೋರ್ಟ್‌ ಮುಂದೆ ಹಾಜರಾಗಲಿದ್ದಾರೆ.

ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಏರ್‌ಪೋರ್ಟ್‌ಗೆ ಆಗಮಿಸಿದ ಡಿಕೆಶಿ ಹೇಳಿಕೆ ನೀಡಿ, “ಬಿಜೆಪಿಯವರು ರಾಹುಲ್ ಗಾಂಧಿ ವಿರುದ್ಧ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. 2500 ಕೋಟಿಗೆ ಸಿಎಂ ಸ್ಥಾನ ಮಾರಾಟವಾಗಿದೆ ಅಂತ ಅಂದು ಪೇಪರ್‌ಗಳಲ್ಲಿ ಬಂದಿತ್ತು. ಅದಕ್ಕೆ ನಾನು ಸಿದ್ದರಾಮಯ್ಯ 40 ಪರ್ಸೆಂಟ್ ಅಂತ ಜಾಹಿರಾತು ಕೊಟ್ಟಿದ್ದೆವು. ಇದರಲ್ಲಿ ರಾಹುಲ್ ಗಾಂಧಿ ಪಾತ್ರವಿಲ್ಲ. ಆ ಸಮಯದಲ್ಲಿ ರಾಹುಲ್ ಗಾಂಧಿ ಅಧ್ಯಕ್ಷರಾಗಿರಲಿಲ್ಲ” ಎಂದು ಹೇಳಿದರು.

ರಾಹುಲ್‌ ಮೇಲೆ ಕೋರ್ಟ್‌ ಗರಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕಳೆದ ಬಾರಿ ಇದರ ವಿಚಾರಣೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಇವರಿಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಆದರೆ ರಾಹುಲ್‌ ಗಾಂಧಿ ಆಗಮಿಸಿರಲಿಲ್ಲ. ಇದರಿಂದ ಗರಂ ಆಗಿದ್ದ ನ್ಯಾಯಾಧೀಶರು, ಮುಂದಿನ ಬಾರಿ ರಾಹುಲ್‌ ಖುದ್ದು ಹಾಜರಿರುವಂತೆ ನಿರ್ದೇಶನ ನೀಡಿತ್ತು.

ಈ ಪ್ರಕರಣದ ದಾಖಲಿಸಿರುವ ಬಿಜೆಪಿ ಕಾರ್ಯದರ್ಶಿ, ಎಂಎಲ್‌ಸಿ ಕೇಶವಪ್ರಸಾದ್, “ಸಾಮಾನ್ಯರಂತೆ ರಾಹುಲ್‌ ಅವರಿಗೂ ಕಾನೂನು ಒಂದೇ” ಎಂದು ಹೇಳಿದ್ದಾರೆ. “ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸುಳ್ಳು ಜಾಹೀರಾತು ನೀಡಿದ್ದರು. ರಾಹುಲ್‌ ಗಾಂಧಿ ಅದನ್ನು ರಿಟ್ವೀಟ್ ಮಾಡಿಕೊಂಡರು. ಹಾಗಾಗಿ ಮೂವರ ವಿರುದ್ಧ ದೂರು ನೀಡಲಾಗಿತ್ತು. ಕೋರ್ಟ್ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.‌ ಸಿಎಂ, ಡಿಸಿಎಂ ಹಾಜರಾಗಿದ್ದರು. ರಾಹುಲ್‌ ಏಳನೇ ತಾರೀಕು ಹಾಜರಾಗುವುದಾಗಿ ಹೇಳಿದ್ದಾರೆ. ಮೊದಲ ದಿನವೇ ಅವರು ಹಾಜರಾಗಬೇಕಿತ್ತು. ಬರದಿದ್ದಾಗ ಕೋರ್ಟ್‌ ಅವರಿಗೆ ಒಂದು ಅವಕಾಶ ಕೊಟ್ಟಿದೆ. ಬರದಿದ್ದರೆ, ಜಾಮೀನುರಹಿತ ವಾರೆಂಟ್ ಇಶ್ಯೂ ಮಾಡಬೇಕು ಅಂತ ನಾವು ವಾದ ಮಂಡಿಸಿದ್ದೆವು” ಎಂದಿದ್ದಾರೆ.

“ರಾಷ್ಟ್ರೀಯ ನಾಯಕರಾಗಿ ಅವರು ಕೋರ್ಟ್ ಸಮನ್ಸ್‌ಗೆ ಎಷ್ಟು ಗೌರವ ಕೊಡ್ತಾರೆ ಅಂತ ಮೊದಲ ದಿನವೇ ತೋರಿಸಬಹುದಿತ್ತು. ನೆಲದ ಕಾನೂನಿಗೆ ಗೌರವ ಕೊಟ್ಟು, ನಾಳೆ ಬರಲೇಬೇಕು. ಇಲ್ಲದಿದ್ದರೆ ನಾನ್ ಬೇಲಬಲ್ ವಾರೆಂಟ್ ಇಶ್ಯೂ ಆಗಲಿದೆ. ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೂ ಎಲ್ಲಾ ಹೋರಾಟ ಮಾಡುವ ಕ್ಷಮತೆ ಇದೆ. ನಮ್ಮ ವಿರುದ್ಧ ಹಾಕಿರುವ ಜಾಹೀರಾತು ಸುಳ್ಳು. ಅವರು ಅದಕ್ಕೆ ದಾಖಲೆ ಕೊಡಬೇಕು. ಜನರ ದಾರಿ ತಪ್ಪಿಸಬಹುದು, ಆದರೆ ಕೋರ್ಟ್ ದಾರಿ ತಪ್ಪಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Continue Reading

ಪ್ರಮುಖ ಸುದ್ದಿ

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Rahul Gandhi: ವಿಚಾರಣೆಗೆ ಮುನ್ನ ಆಗಮಿಸಿದ ಸಿಎಂ ಹಾಗೂ ಡಿಸಿಎಂ, ಕೋರ್ಟ್ ಹಾಲ್ ಮುಂದೆ ಸಾಮಾನ್ಯರಂತೆ, ಜೊತೆಯಾಗಿ ಕುಳಿತರು. ನಂತರ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಮುಂದೆ ಇಬ್ಬರೂ ಹಾಜರಾದರು.

VISTARANEWS.COM


on

rahul gandhi
Koo

ಬೆಂಗಳೂರು: ಬಿಜೆಪಿಗೆ (BJP) ಮಾನನಷ್ಟ (Defamation Case) ಮಾಡಿರುವ ಪ್ರಕರಣದಲ್ಲಿ ಎಸಿಎಂಎಂ ಕೋರ್ಟ್‌ (ACMM court) ಮುಂದೆ ಇಂದು ಹಾಜರಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಶರತ್ತುಬದ್ಧ ಜಾಮೀನು (Bail) ಪಡೆದರು. ಪ್ರಕರಣದ ಇನ್ನೊಬ್ಬ ಆರೋಪಿ ರಾಹುಲ್‌ ಗಾಂಧಿ (Rahul Gandhi) ಗೈರು ಹಾಜರಾಗಿರುವ ಕುರಿತು ನ್ಯಾಯಾಧೀಶರು ಗರಂ ಆದರು.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ಇಂದು ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರಾದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ A4 ಆರೋಪಿಯಾಗಿದ್ದಾರೆ.

ವಿಚಾರಣೆಗೆ ಮುನ್ನ ಆಗಮಿಸಿದ ಸಿಎಂ ಹಾಗೂ ಡಿಸಿಎಂ, ಕೋರ್ಟ್ ಹಾಲ್ ಮುಂದೆ ಸಾಮಾನ್ಯರಂತೆ, ಜೊತೆಯಾಗಿ ಕುಳಿತರು. ನಂತರ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಮುಂದೆ ಇಬ್ಬರೂ ಹಾಜರಾದರು. ಪಾರ್ಟಿ ಪ್ರೆಸಿಡೆಂಟ್ ಹಾಗೂ ಎರಡನೇ ಆರೋಪಿ ಒಂದೇ ಎಂದು ವಕೀಲರು ತಿಳಿಸಿದರು. ಇಬ್ಬರನ್ನೂ ಹೊರ ಹೋಗಬಹುದೆಂದು ಜಡ್ಜ್‌ ಸೂಚಿಸಿದರು. ಇಬ್ಬರಿಗೂ ಶರತ್ತುಬದ್ಧ ಜಾಮೀನು ಮಂಜೂರು ಮಾಡಲಾಯಿತು. ಡಿಸಿಎಂ ಪರ ಎಎಜಿ ಎಸ್.ಎ ಅಹಮದ್ ವಾದಿಸಿದರು.

ನಾಲ್ಕನೇ ಆರೋಪಿ ರಾಹುಲ್ ಗಾಂದಿ ದೆಹಲಿಯಲ್ಲಿದ್ದಾರೆ. ಇಂದು ಇಂಡಿಯಾ ಕೂಟದ ಮೀಟಿಂಗ್ ಇದೆ. ಹೀಗಾಗಿ ರಾಹುಲ್ ಗಾಂಧಿ ಹಾಜರಾಗಲಾಗುತ್ತಿಲ್ಲ. ನಾಲ್ಕನೇ ತಾರೀಕು ಚುನಾವಣೆ ರಿಸಲ್ಟ್ ಇದೆ. ಹೀಗಾಗಿ ಕಾಲಾವಕಾಶ ನೀಡುವಂತೆ ವಿನಂತಿಸಿದರು. ಹಾಗಿದ್ದರೆ ಇಂದೇ ಬಂದು ಮುಗಿಸಿಕೊಂಡು ಹೋಗಬಹುದಿತ್ತಲ್ಲ, ದೆಹಲಿಗೆ ಹೋಗೋದಕ್ಕೆ ಐದು ದಿನ ಬೇಕಾಗಿಲ್ಲವಲ್ಲ ಎಂದು ಜಡ್ಜ್ ಪ್ರಶ್ನಿಸಿದರು. ನಂತರ ಮಧ್ಯಾಹ್ನ ಮೂರು ಗಂಟೆಗೆ ತಮ್ಮ ಆದೇಶವನ್ನು ಕಾಯ್ದಿರಿಸಿದರು.

ದೂರುದಾರರ ಪರ ಹಾಜರಾದ ವಕೀಲ ವಿನೋದ್ ಕುಮಾರ್, “ನ್ಯಾಯಾಲಯದಿಂದ ಸಮನ್ಸ್ ಜಾರಿ ಆದಾಗ ಬರಬೇಕು. ಪದೇ ಪದೆ ಕಾರಣ ನೀಡಿದ್ರೆ ಹೇಗೆ? ಎರಡು ಮೂರು ಸಲ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಮುಂದೆಯೂ ಬೇರೆ ಬೇರೆ ಸಭೆ ಇದೆ ಅಂತ ಹಾಜರಾಗದೇ ಇರಬಹುದು. ಇವತ್ತಿಗೆ ಎಲೆಕ್ಷನ್ ಮುಗಿಯುತ್ತೆ. ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರೇ ಆಗಿರಲಿ, ಕಾನೂನಿನ ಮುಂದೆ ಎಲ್ಲರೂ ಒಂದೇ. ಹೀಗಾಗಿ ರಾಹುಲ್ ಗಾಂಧಿಗೆ ವಾರೆಂಟ್ ಜಾರಿ ಮಾಡಿ” ಎಂದು ಮನವಿ ಮಾಡಿದರು.

ಶರತ್ತುಬದ್ಧ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಶ್ಯೂರಿಟಿ ಪತ್ರಗಳಿಗೆ ಸಹಿ ಹಾಕಿ ತೆರಳಿದರು. “ನನಗೂ ಮತ್ತು ಸಿಎಂಗೆ ಸಮನ್ಸ್ ನೀಡಲಾಗಿತ್ತು. ಹೀಗಾಗಿ ಬಂದಿದ್ದೇವೆ. ರಾಹುಲ್ ಗಾಂಧಿ ಅವರು ಸಹ ಬರಬೇಕಿತ್ತು. ಆದರೆ INDIA ಕೂಟದ ಸಭೆ ಇದೆ. ರಾಹುಲ್ ಗಾಂಧಿ ಸಹ ಬರುತ್ತಾರೆ. ಅವರಿಗೆ ನ್ಯಾಯಾಂಗದ ಮೇಲೆ ಗೌರವ ಇದೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

ರಾಹುಲ್‌ ಗಾಂಧಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ವಕೀಲ ಬಿ.ಎನ್ ಜಗದೀಶ್ ವಾದ ಮಂಡಿಸಿದರು.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

CM Siddaramaiah: ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

VISTARANEWS.COM


on

cm Siddaramaiah And DK Shivakumar
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರೂ ಇಂದು ಮಾನನಷ್ಟ ಮೊಕದ್ದಮೆಯೊಂದಕ್ಕೆ (Defamation case) ಸಂಬಂಧಿಸಿ ಎಸಿಎಂಎಂ ನ್ಯಾಯಾಲಯಕ್ಕೆ (ACMM court) ಹಾಜರಾಗಲಿದ್ದಾರೆ. ಬೆಳಗ್ಗೆ ಇಬ್ಬರೂ ಹಾಜರಾಗಿ ಜಾಮೀನು ಅರ್ಜಿ (bail plea) ಸಲ್ಲಿಸಲಿದ್ದಾರೆ.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ (BJP) ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರ್ ಆಗುತ್ತಿದ್ದಾರೆ. ವಿಧಾನಸಭೆ ಚುನಾವಣೆ (Assembly election) ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ.

“2500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಇಂದು ನಡೆಯುವ ವಿಚಾರಣೆಗೆ ಸಿಎಂ, ಡಿಸಿಎಂ ಹಾಜರ್ ಆಗಲಿದ್ದಾರೆ.

ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

ಏನು ಹೇಳಿದ್ದರು?

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Continue Reading

ಕರ್ನಾಟಕ

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ತೀರ್ಪು ಮುಂದಕ್ಕೆ

Bhavani Reavanna : ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

VISTARANEWS.COM


on

Bhavani Reavanna
Koo

ಬೆಂಗಳೂರು: ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Reavanna) ಅವರಿಗೆ ಬಂಧನ ಭೀತಿ ಶುರುವಾಗಿದೆ. ತಮ್ಮನ್ನು ಬಂಧಿಸದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಅವರಿಗೆ ಬಂಧನ ಭೀತಿ ಶುರುವಾಗಿದೆ. ಏತನ್ಮಧ್ಯೆ ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಎಸ್​ಐಟಿ ಅಧಿಕಾರಿಗಳು ಮತ್ತೊಂದು ನೋಟಿಸ್​ ನೀಡಿದ್ದಾರೆ.

ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

ಒಂದೆಡೆ ಮಗ ಪ್ರಜ್ವಲ್‌ ರೇವಣ್ಣ (prajwal revanna case) ನಿನ್ನೆ ರಾತ್ರಿ ಬಂಧನವಾಗಿದ್ದು, ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತಿದೆ. ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ. “ಪ್ರಕರಣಕ್ಕೆ ಸಂಬಂಧಿಸಿ 01/06/2024ರಂದು ತನಿಖೆಗೆ ತನಿಖಾಧಿಕಾರಿಗಳು ಬರಲಿದ್ದು, ತಾವು ನೀಡಿದ ಈ ವಿಳಾಸದಲ್ಲಿ ತಮ್ಮನ್ನು ತನಿಖೆಗೆ ಒಳಪಡಿಸಲಾಗುವುದು. ಅಗತ್ಯ ಸಹಕಾರ ನೀಡಬೇಕು” ಎಂದು ನೊಟೀಸ್ ನೀಡಿದ್ದಾರೆ.

ಇದನ್ನೂ ಓದಿ ;Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

“ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. 15-05-24ರಂದು ನೀಡಿದ ನೋಟೀಸ್‌ಗೆ, ಹೊಳೆನರಸೀಪುರದ ಚನ್ನಾಂಭಿಕ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ. ಆದ್ದರಿಂದ ನೀವು ಹೇಳಿರುವಂತೆ ನಾವು ನಿಮ್ಮನ್ನು 01-06-24ರಂದು ವಿಚಾರಣೆಗೆ ಒಳಪಡಿಸಲಿದ್ದು, ಖುದ್ದು ಹಾಜರಿರಬೇಕು. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕು” ಎಂದು ಎಸ್‌ಐಟಿ ಮುಖ್ಯಸ್ಥ ಹೇಮಂತ್‌ಕುಮಾರ್‌ ಆದೇಶಿಸಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಇದುವರೆಗೆ ಎರಡು ನೋಟೀಸ್‌ಗಳನ್ನು ನೀಡಲಾಗಿದೆ. ನಂತರ ಎಸ್ಐಟಿಗೆ ಪತ್ರ ಬರೆದಿದ್ದ ಭವಾನಿ, ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಬರುತ್ತಿರುವುದಾಗಿ ಎಸ್ಐಟಿಯಿಂದ ನೊಟೀಸ್‌ ಹೋಗಿದೆ. ಹಾಸನ ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಹಾಗೂ ಭವಾನಿ ನಿವಾಸದ ಬಾಗಿಲಿಗೆ SIT ಟೀಂ ನೋಟೀಸ್ ಅಂಟಿಸಿದೆ. ಹೀಗಾಗಿ ನಾಳೆ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರ ಮೊದಲ ಸುತ್ತಿನ ವಿಚಾರಣೆ ನಡೆಯಲಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರಂದೇ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ.

Continue Reading
Advertisement
Raksha Khadse
ರಾಜಕೀಯ8 mins ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ35 mins ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ37 mins ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

CM Siddaramaiah
ಕರ್ನಾಟಕ43 mins ago

CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

karnataka weather Forecast
ಮಳೆ48 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Free Bus Problem
ಪ್ರಮುಖ ಸುದ್ದಿ50 mins ago

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Actor Darshan Arrested
ಪ್ರಮುಖ ಸುದ್ದಿ1 hour ago

Actor Darshan Arrested : ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Mens Stripe Shirt Fashion
ಫ್ಯಾಷನ್1 hour ago

Mens Stripe Shirt Fashion: ಮೆನ್ಸ್ ಕ್ಯಾಶುವಲ್‌ ಲುಕ್‌ಗೆ ರೀ ಎಂಟ್ರಿ ನೀಡಿದ ಸ್ಟ್ರೈಪ್ಡ್ ಶರ್ಟ್ಸ್

MS Dhoni
ಕ್ರೀಡೆ1 hour ago

MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

Job Alert
ಉದ್ಯೋಗ1 hour ago

Job Alert: ಬಿಎಸ್ಎಫ್‌ನಲ್ಲಿದೆ ಬರೋಬ್ಬರಿ 1,526 ಹುದ್ದೆ; ದ್ವಿತೀಯ ಪಿಯು ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ48 mins ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ7 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌