Collegium decision : ಹೈಕೋರ್ಟ್‌ನ ಸಿಜೆ ಪ್ರಸನ್ನ ಬಿ ವರಾಳೆ ಸುಪ್ರೀಂಗೆ: ಕೊಲಿಜಿಯಂ ಶಿಫಾರಸು - Vistara News

ಕರ್ನಾಟಕ

Collegium decision : ಹೈಕೋರ್ಟ್‌ನ ಸಿಜೆ ಪ್ರಸನ್ನ ಬಿ ವರಾಳೆ ಸುಪ್ರೀಂಗೆ: ಕೊಲಿಜಿಯಂ ಶಿಫಾರಸು

Collegium Decision : ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿರುವ ಪ್ರಸನ್ನ ಬಿ ವರಾಳೆ ಅವರನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ.

VISTARANEWS.COM


on

Prasanna Varale Supreme Court Collegium
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿರುವ ಪ್ರಸನ್ನ ಬಿ ವರಾಳೆ ಅವರಿಗೆ ಸುಪ್ರೀಂಕೋರ್ಟ್‌ಗೆ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಹೈಕೋರ್ಟ್ (Karnataka High Court) ಮುಖ್ಯ ನ್ಯಾಯಮೂರ್ತಿಗಳಾಗಿರುವ (Chief justice of Karnataka High court) ಪ್ರಸನ್ನ ಬಾಲಚಂದ್ರ ವರಾಳೆ (Prasanna Balachandra varale) ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಕೊಲಿಜಿಯಂ (Supreme court Collegium) ಶುಕ್ರವಾರ ಶಿಫಾರಸು (Collegium decision) ಮಾಡಿದೆ. ಅಪಾರ ಕಾನೂನು ಜ್ಞಾನದ ಜತೆಗೆ ಉತ್ತಮ ನ್ಯಾಯದಾನ ಮತ್ತು ತಾಳ್ಮೆಯ ಆಲಿಸುವಿಕೆಗಳಿಗಾಗಿ ಸಿಜೆ ಅವರು ಎಲ್ಲರ ಮನಸು ಗೆದ್ದಿದ್ದಾರೆ.

ನ್ಯಾಯಮೂರ್ತಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಳ್ಳುವ ಮೂಲಕ ವೃತ್ತಿ ಜೀವನ ಆರಂಭಿಸಿದರು. ಆರಂಭಿಕ ವರ್ಷಗಳಲ್ಲಿ ವಕೀಲ ಎಸ್ ಎನ್ ಲೋಯಾ ಅವರ ಅಡಿಯಲ್ಲಿ ಪ್ರಾಕ್ಟೀಸ್‌ ಮಾಡಿದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. 2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ವರಾಳೆ ಅವರು ಅಕ್ಟೋಬರ್ 15, 2022ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.

ಕೊಲಿಜಿಯಂ ನಿರ್ಣಯದಲ್ಲಿ ಹೇಳಿದ್ದೇನು?

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಕೊಲಿಜಿಯಂ ನಿರ್ಣಯದ ಪ್ರಕಾರ, ನ್ಯಾಯಮೂರ್ತಿ ವರಾಳೆ ಅವರು ಅಸಾಧಾರಣ ನಡವಳಿಕೆ ಮತ್ತು ಸಮಗ್ರತೆಯನ್ನು ಹೊಂದಿರುವ ಸಮರ್ಥ ನ್ಯಾಯಾಧೀಶರಾಗಿದ್ದಾರೆ ಮತ್ತು ಉನ್ನತ ಮಟ್ಟದ ವೃತ್ತಿಪರ ನೈತಿಕತೆಯನ್ನು ಕಾಪಾಡಿಕೊಂಡಿದ್ದಾರೆ.

“ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯುವ ಮೊದಲು, ಅವರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸಿವಿಲ್, ಕ್ರಿಮಿನಲ್, ಕಾರ್ಮಿಕ ಮತ್ತು ಆಡಳಿತಾತ್ಮಕ ಕಾನೂನು ವಿಷಯಗಳಲ್ಲಿ ಮತ್ತು ಔರಂಗಾಬಾದ್‌ನ ಹೈಕೋರ್ಟ್ ಪೀಠದಲ್ಲಿ ಸಾಂವಿಧಾನಿಕ ವಿಷಯಗಳಲ್ಲಿ 23 ವರ್ಷಗಳ ಕಾಲ ಬಾರ್‌ನಲ್ಲಿ ಪ್ರಾಕ್ಟೀಸ್‌ ಮಾಡಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರ ಅಖಿಲ ಭಾರತ ಜ್ಯೇಷ್ಠತೆಯಲ್ಲಿ ನ್ಯಾಯಮೂರ್ತಿ ವರಾಳೆ ಅವರು 6ನೇ ಸ್ಥಾನದಲ್ಲಿದ್ದಾರೆ. ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರ ಹಿರಿತನದಲ್ಲಿ, ಅವರು ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ” ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ನೇಮಕಕ್ಕೆ ಸಮ್ಮತಿ ಸಿಕ್ಕಿದರೆ ಮೂರನೇ ದಲಿತ ನ್ಯಾಯಮೂರ್ತಿ

ನ್ಯಾ. ವರಾಳೆ ಅವರ ನೇಮಕಾತಿ ಶಿಫಾರಸನ್ನು ಕೇಂದ್ರ ಸರ್ಕಾರ ಅನುಮೋದಿಸಿದರೆ, ಪ್ರಸಕ್ತ ಸುಪ್ರೀಂ ಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದಲಿತ ಸಮುದಾಯದ ಮೂರನೇ ನ್ಯಾಯಮೂರ್ತಿ ವರಾಳೆ ಅವರಾಗಲಿದ್ದಾರೆ. ನ್ಯಾ. ಬಿ ಆರ್ ಗವಾಯಿ ಮತ್ತು ನ್ಯಾ. ಸಿ ಟಿ ರವಿಕುಮಾರ್ ಅವರು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ದಲಿತ ಸಮುದಾಯ ಇನ್ನಿಬ್ಬರು ನ್ಯಾಯಮೂರ್ತಿಗಳು. ಪರಿಶಿಷ್ಟ ಜಾತಿಗೆ ಸೇರಿದ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ಪಿ ಬಿ ವರಾಳೆ ಅವರು ದೇಶಾದ್ಯಂತದ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿ ಹುದ್ದೆ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.‌

ಇದನ್ನೂ ಓದಿ: Karnataka High Court : ಶ್ರೀರಂಗಪಟ್ಟಣ ಮಸೀದಿಯಲ್ಲಿ ಮದರಸಾ?; ಹೈಕೋರ್ಟ್‌ ನೋಟಿಸ್‌

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ.ಎಸ್‌ ದಿನೇಶ್‌ ಕುಮಾರ್‌ ಹೆಸರು

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಂಚ್ರ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿರುವ ಬೆನ್ನಿಗೇ, ಅವರ ಪದೋನ್ನತಿಯಿಂದ ತೆರವಾಗುವ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ.ಎಸ್‌ ದಿನೇಶ್‌ ಕುಮಾರ್‌ ಅವರ ಹೆಸರನ್ನು ಕೊಲಿಜಿಯಂ ಶುಕ್ರವಾರ ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ದಿನೇಶ್‌ ಕುಮಾರ್ ಅವರು 2015ರಿಂದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದು, 2024ರ ಫೆಬ್ರವರಿ 24ರಂದು ನಿವೃತ್ತರಾಗಲಿದ್ದಾರೆ.

“ಹೈಕೋರ್ಟ್‌ ನ್ಯಾಯಾಧೀಶರಾಗಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ಭಾಗದಲ್ಲಿ ಸಾಕಷ್ಟು ಅನುಭವವನ್ನು ನ್ಯಾ. ದಿನೇಶ್‌ ಕುಮಾರ್‌ ಗಳಿಸಿದ್ದಾರೆ. ಫೆಬ್ರವರಿ 24, 2024 ರಂದು ನ್ಯಾ. ದಿನೇಶ್‌ ಕುಮಾರ್‌ ನಿವೃತ್ತರಾಗಲಿದ್ದು, ಮುಖ್ಯ ನ್ಯಾಯಮೂರ್ತಿಯಾಗಿ ಒಂದು ತಿಂಗಳಿಗಿಂತ ಸ್ವಲ್ಪ ಹೆಚ್ಚು ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಅವರು ಉತ್ಕೃಷ್ಟ ಸಮಗ್ರತೆ, ಪ್ರಾಮಾಣಿಕತೆ ಮತ್ತು ಸಾಮರ್ಥ್ಯಗಳಿಂದ ಗಮನಸೆಳೆದವರಾಗಿದ್ದಾರೆ. ನೇಮಕವಾದಾಗಿನಿಂದ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾ. ದಿನೇಶ್‌ ಕುಮಾರ್‌ ಮಹತ್ತರ ಸೇವೆ ಸಲ್ಲಿಸಿದ್ದಾರೆ” ಎಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂನ ನಿರ್ಣಯದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರ ಹಿರಿತನದಲ್ಲಿ, ನ್ಯಾಯಮೂರ್ತಿ ದಿನೇಶ್‌ ಕುಮಾರ್ ಅವರು ಪ್ರಸ್ತುತ ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಕರ್ತವ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿ ನರೇಂದರ್ ಜಿ ನಂತರ ಎರಡನೇ ಹಿರಿಯರಾಗಿದ್ದಾರೆ ಎಂಬ ಅಂಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರನ್ನೊಳಗೊಂಡ ಕೊಲಿಜಿಯಂ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

2015 ರಲ್ಲಿ ನ್ಯಾಯಪೀಠಕ್ಕೆ ಬಡ್ತಿ ಪಡೆಯುವ ಮೊದಲು, ನ್ಯಾಯಮೂರ್ತಿ ಕುಮಾರ್ ಅವರು 1990 ರಿಂದ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದರು ಮತ್ತು ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಹಾಜರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

ಮೇ 11ರಂದು ಸಂಜಯನಗರ ಅಣ್ಣಯ್ಯಪ್ಪ ಲೇ ಔಟ್‌ನಲ್ಲಿ ಚೈತ್ರಾ ಶವ ಪತ್ತೆಯಾಗಿತ್ತು. ಚೈತ್ರಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಚೈತ್ರಾ ಪತಿ,‌ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದರು.

VISTARANEWS.COM


on

suspicious death Self Harming By Hight court lawyer
Koo

ಬೆಂಗಳೂರು: ವಕೀಲೆ (Advocate) ಚೈತ್ರಾ ಗೌಡ ಅನುಮಾನಾಸ್ಪದ ಸಾವು (Suspicious Death) ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ಪೋಸ್ಟ್‌ ಮಾರ್ಟಮ್‌ (post mortem) ರಿಪೋರ್ಟ್‌ ಅನ್ನು ಪಡೆದಿದ್ದು, ತನಿಖೆ ಮುಗಿಸಿರುವ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿದೆ.

ಮೇ 11ರಂದು ಸಂಜಯನಗರ ಅಣ್ಣಯ್ಯಪ್ಪ ಲೇ ಔಟ್‌ನಲ್ಲಿ ಚೈತ್ರಾ ಶವ ಪತ್ತೆಯಾಗಿತ್ತು. ಚೈತ್ರಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಚೈತ್ರಾ ಪತಿ,‌ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದರು.

ವಿಚಾರಣೆ ವೇಳೆ, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಜೊತೆಗೆ ಯಾವುದೇ ಹಣಕಾಸಿನ ಸಮಸ್ಯೆ ಕೂಡ ಇರಲಿಲ್ಲ ಎಂದು ಶಿವಕುಮಾರ್‌ ತಿಳಿಸಿದ್ದರು. ಆದರೆ ಪ್ರಾಪರ್ಟಿ ವಿಚಾರವಾಗಿ ಆಗಾಗ್ಗೆ ಸ್ವಲ್ಪ ಜಗಳ ನಡೀತಾ ಇತ್ತು. ಇದರಿಂದ ಖಿನ್ನತೆಗೊಳಗಾಗಿದ್ದಳು ಎಂದು ಮಾಹಿತಿ ನೀಡಿದ್ದರು.

ಮರಣೋತ್ತರ ಪರೀಕ್ಷೆಯಲ್ಲೂ ಇದು ಆತ್ಮಹತ್ಯೆ ಎಂದು ಕಂಡುಬಂದಿದೆ. ಜೊತೆಗೆ ಮನೆಯಲ್ಲಿ ಸಿಕ್ಕ ಡೆತ್ ನೋಟ್ ಕೂಡ ಚೈತ್ರಾ ಬರೆದಿರುವುದು ಖಚಿತವಾಗಿದೆ. ಚೈತ್ರಾ, ತಮ್ಮ ಕುಟುಂಬಸ್ಥರ ಬಳಿ ಮೂರು ತಿಂಗಳ ಹಿಂದೆಯೇ ತಾವು ಸಾಯುವುದಾಗಿ ಮಾತಾಡಿದ್ದರು. ಈ ಮಾತಾಡಿದ ಬಳಿಕವೇ ಡೆತ್‌ ನೋಟ್‌ ಬರೆದಿಟ್ಟಿರುವುದು ಗೊತ್ತಾಗಿದೆ. 10 ದಿನಗಳ‌ ತನಿಖೆ ಬಳಿಕ ಹಿರಿಯ ಅಧಿಕಾರಿಗಳಿಗೆ ಸಂಜಯನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಏನಿದು ಪ್ರಕರಣ?

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ನಲ್ಲಿ ಒಂದರಲ್ಲಿ ಚೈತ್ರಾ ಕುಟುಂಬ ಹಾಗೂ ಇನ್ನೊಂದು ಫ್ಲಾಟ್‌ನಲ್ಲಿ ಮೃತಳ ತಮ್ಮ ವಾಸವಾಗಿದ್ದರು. ಶನಿವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜತೆ ನಂತರ ತಮ್ಮನನೊಟ್ಟಿಗೂ ಚೈತ್ರಾ ಮಾತನಾಡಿದ್ದಾರೆ. 11 ಗಂಟೆ ಸುಮಾರಿಗೆ ಚೈತ್ರಾಳ ತಮ್ಮ ಕರೆದಾಗ ಸ್ಪಂದಿಸಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಕೂಡಲೇ ಚೈತ್ರಾಳ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚೈತ್ರಾರ ಬೆಡ್‌ ರೂಮಿನಲ್ಲಿ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿದೆ. ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 11ರಂದು ಇದನ್ನು ಬರೆಯಲಾಗಿತ್ತು. ಡೆತ್‌ನೋಟ್‌ನಲ್ಲಿ, ನನ್ನ ಪತಿ ತುಂಬಾ ಒಳ್ಳೆಯವರು. ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್‌ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಆಗುತ್ತಿಲ್ಲ, ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೆನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ನಾನು ಸೂಸೈಡ್ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಸಹ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನಕ್ಕೆ ಅಂತ್ಯವಾಡಿದ್ದೇನೆ ಎಂದು ಬರೆದಿದ್ದಾರೆ.

ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Continue Reading

ಕ್ರೈಂ

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Assault Case: ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು (30) ಕೇಳಿದ್ದರು. ಇದಕ್ಕೆ ಕೆರಳಿದ 5 ಜನ ಪುಂಡರ ಗುಂಪು ಗೋವಿಂದರಾಜು ಬಳಿ ಜಗಳ ತೆಗೆದು ಹಲ್ಲೆ ನಡೆಸಿದೆ. ಕುಡಿದ ಮತ್ತಿನಲ್ಲಿದ್ದ ಪುಂಡರು ಮದ್ಯದ ಬಾಟಲಿಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

VISTARANEWS.COM


on

assault case koratagere
ಆರೋಪಿಗಳಾದ ಪುನೀತ್‌, ಭರತ್
Koo

ತುಮಕೂರು: ಗೃಹ ಸಚಿವ ಜಿ. ಪರಮೇಶ್ವರ್‌ (Home Minister G Parameshwara) ಅವರ ಸ್ವಕ್ಷೇತ್ರ ಕೊರಟಗೆರೆಯಲ್ಲಿ (Koratagere) ಪುಂಡರ ಹಾವಳಿ (hooliganism) ಮಿತಿಮೀರಿದ್ದು, ದಾರಿ ಬಿಡಿ ಎಂದು ಕೇಳಿದ್ದಕ್ಕೆ ಸೈನಿಕನ (Soldier) ಮೇಲೆಯೇ ಮಾರಣಾಂತಿಕ ಹಲ್ಲೆ (Assault case) ನಡೆಸಲಾಗಿದೆ. ಸದ್ಯ ಹಲ್ಲೆಗೀಡಾಗಿರುವ ಯೋಧ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.

ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು (30) ಕೇಳಿದ್ದರು. ಇದಕ್ಕೆ ಕೆರಳಿದ 5 ಜನ ಪುಂಡರ ಗುಂಪು ಗೋವಿಂದರಾಜು ಬಳಿ ಜಗಳ ತೆಗೆದು ಹಲ್ಲೆ ನಡೆಸಿದೆ. ಕುಡಿದ ಮತ್ತಿನಲ್ಲಿದ್ದ ಪುಂಡರು ಮದ್ಯದ ಬಾಟಲಿಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಕೋರರನ್ನು ಕೊರಟಗೆರೆ ತಾಲ್ಲೂಕಿನ ಅರಸಾಪುರದ ಭರತ್ (29), ಮಧುಗಿರಿ ತಾಲ್ಲೂಕಿನ ಕೊಡಗದಾಲದ ಪುನೀತ (32), ಹುಣಸವಾಡಿಯ ಗೌರಿಶಂಕರ (32), ಶಿವಾ (32), ಕೊಡಿಗೇನಹಳ್ಳಿ ಸಮೀಪದ ಭಟ್ಟಗೆರೆಯ ದಿಲೀಪ್ (35) ಎಂದು ಗುರುತಿಸಲಾಗಿದೆ. ಸದ್ಯ ಐವರ ವಿರುದ್ಧ ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ಹಾಗೂ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಗೋವಿಂದರಾಜು ಭಾರತೀಯ ಭೂಸೇನೆ ಸಿಪಾಯಿಯಾಗಿ ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಜೆಯ ಮೇಲೆ ತಮ್ಮ ಊರು ರಾಯವಾರಕ್ಕೆ ಬಂದಿದ್ದ ಗೋವಿಂದರಾಜು, ಕೆಲಸದ ನಿಮಿತ್ತ ಬೇರೇನಹಳ್ಳಿ ಕ್ರಾಸ್‌ಗೆ ಹೋಗಿದ್ದಾಗ ಘಟನೆ ನಡೆದಿದೆ. ಇತ್ತೀಚೆಗೆ ಭೈರೇನಹಳ್ಳಿ ಕ್ರಾಸ್ ಹಲವು ಕ್ರೈಂಗಳಿಗೆ ಸಾಕ್ಷಿಯಾಗಿದೆ. ಈ ಮುಂಚೆ ಕಾರ್‌ ಹಾರ್ನ್ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ‌ ಇರಿಯಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಗೃಹ ಸಚಿವ ಪರಮೇಶ್ವರ್ ಕಾರಿನ ಮೇಲೆ ಕಲ್ಲು ತೂರಲಾಗಿತ್ತು. ಈ ಸ್ಥಳದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ರೂ ಪೊಲೀಸರು ತಲೆ‌ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಪಾದಿಸಿದ್ದಾರೆ.

ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

ಹಾವೇರಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು ಸಂಭವಿಸಿದ್ದು, ತಿರುಪತಿಗೆ ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Continue Reading

ಪ್ರಮುಖ ಸುದ್ದಿ

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Rameshwaram Cafe : ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Rameshwaram Cafe
Koo

ಹೈದರಾಬಾದ್: ಹೈಟೆಕ್​ ರೀತಿಯಲ್ಲಿ ದೋಸೆ ಸೇರಿದಂತೆ ಆಹಾರ ಪದಾರ್ಥಗಳನ್ನು ತಯಾರಿ ಮಾಡುವ ಮತ್ತು ದಕ್ಷಿಣ ಭಾರತದ ಉಪಾಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ (Rameshwaram Cafe) ಮೇಲೆ ಹೈದರಾಬಾದ್​​ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ. ರಾಮೇಶ್ವರಂ ಕೆಫೆ ಕೆಲವು ತಿಂಗಳ ಹಿಂದೆ ರಾಷ್ಟ್ರ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು. ಬೆಂಗಳೂರಿನ ವೈಟ್​ಫೀಲ್ಡ್​ ಶಾಖೆಯ ಮೇಲೆ ಬಾಂಬ್​ ದಾಳಿ ನಡೆದ ಬಳಿಕ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಬಗ್ಗೆ ಈಗಲೂ ತನಿಖೆ ನಡೆಯುತ್ತಿದೆ.

ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 450 ಕೆ.ಜಿ ಹಸಿ ಅಕ್ಕಿ, 300 ಕೆಜಿ ಲೇಬಲ್ ಮಾಡದ ಬೆಲ್ಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ಆಹಾರ ತಯಾರಿಸುವವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ ಮತ್ತು ರಾಮೇಶ್ವರಂ ಕೆಫೆಯಲ್ಲಿ ಕಸದ ಬುಟ್ಟಿಗಳನ್ನು ಮುಚ್ಚಳಗಳಿಂದ ಮುಚ್ಚಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನೇಕ ಕಡೆ ದಾಳಿ

ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹೈದರಾಬಾದ್​ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದಾರೆ ಮತ್ತು ಅನೇಕ ಜನಪ್ರಿಯ ತಿನಿಸುಗಳ ಅಂಗಡಿಗಳು ನೈರ್ಮಲ್ಯ ಮಾನದಂಡಗಳನ್ನು ಕಾಪಾಡಿಕೊಳ್ಳದಿರುವುದು ಕಂಡುಬಂದಿದೆ. ಅದೇ ದಿನ, ಬಾಹುಬಲಿ ಕಿಚನ್ ಎಂಬ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದೆ. ಸಂಗ್ರಹಿಸಿದ ಆಹಾರ ಪದಾರ್ಥಗಳಲ್ಲಿ ಜಿರಳೆಗಳು ಕಂಡುಬಂದಿದ್ದವು. ರೆಸ್ಟೋರೆಂಟ್​ನ ಅಡುಗೆಮನೆಯ ಆವರಣವು ತುಂಬಾ ಅನೈರ್ಮಲ್ಯ ಸ್ಥಿತಿಯಲ್ಲಿ ಕಂಡುಬಂದಿದ್ದು, ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಇತ್ತೀಚೆಗೆ ತನ್ನ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ (ಕ್ಯೂಎಸ್ಆರ್) ಜಾಲವನ್ನು ಟೆಕ್ ರಾಜಧಾನಿ ಬೆಂಗಳೂರಿನಿಂದ ವಿಸ್ತರಿಸಿದೆ. ಈ ವರ್ಷದ ಜನವರಿಯಲ್ಲಿ ಹೈದರಾಬಾದ್​ನ ಮಾಧಾಪುರ ಪ್ರದೇಶದಲ್ಲಿ ಹೋಟೆಲ್​ ಪ್ರಾರಂಭಿಸಲಾಗಿತ್ತು. ಈ ಕೆಫೆಯು ತುಪ್ಪದ ಇಡ್ಲಿ ಮತ್ತು ದೋಸೆಗಳಿಗೆ ಹೆಸರುವಾಸಿಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಹೋಟೆಲ್​ನ ಆಹಾರ ಪ್ರಿಯರಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಸಂಪೂರ್ಣ ಜನದಟ್ಟಣೆಯ ರೆಸ್ಟೋರೆಂಟ್ ಗೆ ಅನೇಕ ಸೆಲೆಬ್ರಿಟಿಗಳು ಆಗಾಗ್ಗೆ ಭೇಟಿ ನೀಡುತ್ತಾರೆ. ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಶಾಖೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕಾಗಿ ಸುದ್ದಿಯಲ್ಲಿತ್ತು. ಮಾರ್ಚ್ 1 ರಂದು ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದರು.

Continue Reading

ಹಾವೇರಿ

Road Accident: ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

Road Accident: ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

VISTARANEWS.COM


on

ranebennuru road accident
Koo

ಹಾವೇರಿ: ಹಾವೇರಿ ಜಿಲ್ಲೆಯ (Haveri news) ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು (Road Accident) ಸಂಭವಿಸಿದ್ದು, ತಿರುಪತಿಗೆ (Tirupati) ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರ ಬಲಿ, ಇಬ್ಬರು ಗಂಭೀರ

ಚಿಕ್ಕೋಡಿ: ಮುಂಗಾರು ಆಗಮನಕ್ಕೆ ಮುನ್ನವೇ ಸಿಡಿಲಿನ ಮೂಲಕ ಇಬ್ಬರ ಬಲಿ ಪಡೆದುಕೊಂಡಿದೆ. ಚಿಕ್ಕೋಡಿ ಗ್ರಾಮಾಂತರ ಭಾಗದಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ಹೊರವಲಯದಲ್ಲಿ ಘಟನೆ ಸಿಡಿಲು ಬಡಿದು ರೈತ ಮಹಿಳೆ ಸಾವಿಗೀಡಾಗಿದ್ದಾರೆ. ಶೋಭಾ ಕೃಷ್ಣ ಕುಲಗೋಡೆ (45) ಮೃತ ರೈತ ಮಹಿಳೆ. ಸಂಜೆ ಕೃಷಿ ಚಟುವಟಿಕೆ ಮಾಡುವ ಸಂದರ್ಭದಲ್ಲಿ ಸಿಡಿಲು ಹೊಡೆದು ಮೃತಪಟ್ಟಿದ್ದಾರೆ. ನಾಲ್ಕು ಜನರಿಗೆ ಗಾಯಗಳಾಗಿವೆ. ಮಲ್ಲಪ್ಪ ಶಂಕರ್ ಮೇತ್ರಿ, ಭಾರತಿ ಕೆಂಪಣ್ಣ ಕಮತೆ, ಬಾಬುರಾವ್ ಅಶೋಕ ಚೌವ್ಹಾಣ್, ಪ್ರವೀಣ್ ಕಲ್ಲಪ್ಪ ಧರ್ಮಟ್ಟಿ ಗಾಯಗೊಂಡವರು. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿ ಗುರು ಪುಂಡಲಿಕ (35) ಎಂಬವರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮರದ ಕೆಳಗೆ ನಿಂತಾಗ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಗುರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸಂಕೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.

ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಚಿಕ್ಕಮಗಳೂರು: ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕನೊರ್ವ (Road Accident) ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಒಕ್ಕಳ್ಳಿ ಬಳಿ ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಸತೀಶ್ (28) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಣಕಲ್‌ನಿಂದ ಸಾರಗೋಡು ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ 50ಕ್ಕೂ ಹೆಚ್ಚು ಗೊಬ್ಬರದ ಚೀಲಗಳನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಇಳಿಜಾರಿನಲ್ಲಿ ಭಾರ ತಡೆಯಲು ಆಗದೆ ಟ್ರ್ಯಾಕ್ಟರ್‌ ಪಲ್ಟಿ ಹೊಡೆದಿದೆ. ಪಲ್ಟಿಯಾದ ರಭಸಕ್ಕೆ ಟ್ರ್ಯಾಕ್ಟರ್‌ ಸಂಪೂರ್ಣ ಉಲ್ಟಾ ಹೊಡೆದಿದೆ. ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತೀಶ್‌ ಟ್ರ್ಯಾಕ್ಟರ್‌ನಡಿ ಸಿಲುಕಿ ಮೃತಪಟ್ಟಿದ್ದಾನೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Continue Reading
Advertisement
suspicious death Self Harming By Hight court lawyer
ಕ್ರೈಂ31 seconds ago

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

bulldozer justice
ಪ್ರಮುಖ ಸುದ್ದಿ20 mins ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ37 mins ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ39 mins ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Road Accident
ಪ್ರಮುಖ ಸುದ್ದಿ58 mins ago

Road Accident : ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಮಂದಿಗೆ ಗಾಯ

koti kannada movie
ಪ್ರಮುಖ ಸುದ್ದಿ1 hour ago

koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ranebennuru road accident
ಹಾವೇರಿ1 hour ago

Road Accident: ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

Udho Udho Shri Renuka Yellamma
ಪ್ರಮುಖ ಸುದ್ದಿ1 hour ago

Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

superstar rajnikanth
ಪ್ರಮುಖ ಸುದ್ದಿ2 hours ago

Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

thunderbolt
ಚಿಕ್ಕೋಡಿ2 hours ago

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌