ಬೆಂಗಳೂರು: ಹೈಕೋರ್ಟ್ನಲ್ಲಿ ನಡೆಯುವ ಕಾರ್ಯ ಕಲಾಪಗಳನ್ನು ಸಾರ್ವಜನಿಕ ವೀಕ್ಷಣೆಗಾಗಿ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಹ್ಯಾಕರ್ಸ್ಗಳು ಹ್ಯಾಕ್ (Cyber crime) ಮಾಡಿ, ಅಶ್ಲೀಲ ದೃಶ್ಯಗಳನ್ನು ಅಪ್ಲೋಡ್ ಮಾಡಿದ್ದಾರೆ. ಹೈಕೋರ್ಟ್ ಕಲಾಪಕ್ಕೂ ಸೈಬರ್ ಹ್ಯಾಕರ್ಸ್ ಹಾವಳಿಯಿಂದಾಗಿ ವಿಡಿಯೋ ಕಾನ್ಫರೆನ್ಸ್ ಸ್ಥಗಿತ ಮಾಡಲಾಗಿದೆ.
ಸೈಬರ್ ಸೆಕ್ಯುರಿಟಿ ಸಮಸ್ಯೆ ಹಿನ್ನೆಲೆಯಲ್ಲಿ ಸದ್ಯಕ್ಕೆ ವಿಡಿಯೊ ಕಾನ್ಫರೆನ್ಸ್ ಅನ್ನು ಸ್ಥಗಿತ ಮಾಡಲಾಗಿದೆ ಎಂದು ಸಿಜೆ ಪ್ರಸನ್ನ ಬಿ ವರಾಳೆ ಸ್ಪಷ್ಟನೆ ನೀಡಿದ್ದಾರೆ. ಕೆಲ ಕೋರ್ಟ್ ಹಾಲ್ಗಳ ವಿಡಿಯೊ ಕಾನ್ಫರೆನ್ಸ್ ಹ್ಯಾಕ್ ಆಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸಿಬ್ಬಂದಿ ಸದ್ಯಕ್ಕೆ ಸೌಲಭ್ಯ ಸ್ಥಗಿತಗೊಳಿಸಿದ್ದಾರೆ.
ಲೈವ್ ಸ್ಟ್ರೀಮಿಂಗ್ ಹ್ಯಾಕ್ ಮಾಡಿದ್ದು, ಬಳಿಕ ಅಶ್ಲೀಲ ದೃಶ್ಯಗಳನ್ನೆಲ್ಲ ಅಪ್ಲೋಡ್ ಮಾಡಿದ್ದಾರೆ. ಇದರಿಂದಾಗಿ ಮುಜುಗರಕ್ಕೆ ಒಳಗಾಗಬೇಕಾಯಿತು. ಹ್ಯಾಕ್ ಆಗಿದ್ದು ತಿಳಿಯುತ್ತಿದ್ದಂತೆ ಹೈಕೋರ್ಟ್ ಸಿಬ್ಬಂದಿ ಕೇಂದ್ರ ವಿಭಾಗ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರನ್ವಯ ಎಫ್ಐಆರ್ ದಾಖಲು ಮಾಡಲಾಗಿದೆ. ದೂರು ದಾಖಲಿಸಿಕೊಂಡಿರುವ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.