Judge vs Judge: ಇಂದು ಸುಪ್ರೀಂ ಕೋರ್ಟ್‌ ಮುಂದೆ ಕೋಲ್ಕತ್ತಾ ಹೈಕೋರ್ಟ್‌ನ ಜಡ್ಜ್‌ vs ಜಡ್ಜ್‌ ಪ್ರಕರಣ - Vistara News

ಕೋರ್ಟ್

Judge vs Judge: ಇಂದು ಸುಪ್ರೀಂ ಕೋರ್ಟ್‌ ಮುಂದೆ ಕೋಲ್ಕತ್ತಾ ಹೈಕೋರ್ಟ್‌ನ ಜಡ್ಜ್‌ vs ಜಡ್ಜ್‌ ಪ್ರಕರಣ

ಕಲ್ಕತ್ತಾ ಹೈಕೋರ್ಟ್‌ನ ಏಕಸದಸ್ಯ ಪೀಠ ಮತ್ತು ವಿಭಾಗೀಯ ಪೀಠದ ತೀರ್ಪುಗಳ ನಡುವಿನ ವಿವಾದಕ್ಕೆ (Judge vs Judge) ಸಂಬಂಧಿಸಿದ ವಿಷಯವನ್ನು ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠ ವಿಚಾರಣೆ ನಡೆಸಲಿದೆ.

VISTARANEWS.COM


on

America tortured Nikhil Gupta, Petition to the Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಕೋಲ್ಕತ್ತಾ ಹೈಕೋರ್ಟ್‌ನಲ್ಲಿ (Calcutta High Court) ಉದ್ಭವಿಸಿರುವ ಜಡ್ಜ್‌ ವರ್ಸಸ್‌ ಜಡ್ಜ್‌ (Judge vs Judge) ಪ್ರಕರಣವೊಂದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ (Supreme court) ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದು, ಇಂದು ವಿಶೇಷ ವಿಚಾರಣೆಗೆ ನ್ಯಾಯಪೀಠ ಸಭೆ ಸೇರಲಿದೆ.

ಕಲ್ಕತ್ತಾ ಹೈಕೋರ್ಟ್‌ನ ಏಕಸದಸ್ಯ ಪೀಠ ಮತ್ತು ವಿಭಾಗೀಯ ಪೀಠದ ತೀರ್ಪುಗಳ ನಡುವಿನ ವಿವಾದಕ್ಕೆ ಸಂಬಂಧಿಸಿದ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Chief Justice DY Chandrachud) ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠ ವಿಚಾರಣೆ ನಡೆಸಲಿದೆ.

ಏನಿದು ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ವರ್ಸಸ್‌ ನ್ಯಾಯಮೂರ್ತಿ ಸೌಮೆನ್ ಸೇನ್ ಪ್ರಕರಣ?

1) ಆರಂಭದಲ್ಲಿ, ಪಶ್ಚಿಮ ಬಂಗಾಳದ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಎಂಬಿಬಿಎಸ್ ಅಭ್ಯರ್ಥಿಗಳ ದಾಖಲಾತಿಯಲ್ಲಿನ ಅಕ್ರಮಗಳ ಕುರಿತು ಕೇಂದ್ರೀಯ ತನಿಖಾ ದಳಕ್ಕೆ ತನಿಖೆಗೆ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರ ಏಕ ಪೀಠ ಆದೇಶಿಸಿತ್ತು.

2) ನಂತರ, ಪಶ್ಚಿಮ ಬಂಗಾಳ ಸರ್ಕಾರವು ಈ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿತು. ನ್ಯಾಯಮೂರ್ತಿಗಳಾದ ಸೌಮೆನ್ ಸೇನ್ ಮತ್ತು ಉದಯ್ ಕುಮಾರ್ ಅವರ ವಿಭಾಗೀಯ ಪೀಠವು ಪ್ರಕರಣದ ಸಿಬಿಐ ತನಿಖೆಗೆ ಏಕ ಪೀಠ ನೀಡಿದ ಆದೇಶಕ್ಕೆ ತಡೆ ನೀಡಿತು.

3) ಗುರುವಾರ, ವಿಭಾಗೀಯ ಪೀಠವು ನೀಡಿದ ಆದೇಶವು ಸಂಪೂರ್ಣ ಕಾನೂನುಬಾಹಿರ ಮತ್ತು ನಿರ್ಲಕ್ಷಿಸಬೇಕಾದ್ದು ಎಂದು ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿತು. ಹಿಂದಿನ ಆದೇಶ ಅಥವಾ ಮೇಲ್ಮನವಿಯ ಮೆಮೊ ಇಲ್ಲದಿರುವಾಗ ವಿಭಾಗೀಯ ಪೀಠ ತಡೆಯಾಜ್ಞೆ ಹೇಗೆ ಹೊರಡಿಸಲು ಸಾಧ್ಯ ಎಂದು ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿದರು.

4) ನ್ಯಾಯಮೂರ್ತಿ ಗಂಗೋಪಾಧ್ಯಾಯ ಇನ್ನೂ ಮುಂದುವರಿದು, ವಿಭಾಗೀಯ ಪೀಠದ ನೇತೃತ್ವ ವಹಿಸಿದ ನ್ಯಾಯಮೂರ್ತಿ ಸೇನ್ ಅವರು ರಾಜ್ಯದ ರಾಜಕೀಯ ಪಕ್ಷವೊಂದರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಆದ್ದರಿಂದ ನ್ಯಾಯಮೂರ್ತಿ ಸೇನ್ ನೇತೃತ್ವದ ಪೀಠವು ನೀಡಿದ ಆದೇಶಗಳನ್ನು ಸುಪ್ರೀಂ ಕೋರ್ಟ್‌ ಮರುಪರಿಶೀಲಿಸಬೇಕಾದೀತು ಎಂದು ಟಿಪ್ಪಣಿ ಮಾಡಿದರು.

5) “ಜಸ್ಟೀಸ್ ಸೇನ್ ಅವರು ಈ ರಾಜ್ಯದಲ್ಲಿ ಒಂದು ರಾಜಕೀಯ ಪಕ್ಷಕ್ಕಾಗಿ ಸ್ಪಷ್ಟವಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ, ಗೌರವಾನ್ವಿತ ಸುಪ್ರೀಂ ಕೋರ್ಟ್ ಈ ಆದೇಶಗಳನ್ನು ಮರುಪರಿಶೀಲಿಸುವ ಅವಶ್ಯಕತೆಯಿದೆ. ಅವರ ಕ್ರಮಗಳು ಸ್ಪಷ್ಟವಾಗಿ ದುಷ್ಕೃತ್ಯಕ್ಕೆ ಸಮಾನವಾಗಿವೆ” ಎಂದು ನ್ಯಾಯಮೂರ್ತಿ ಗಂಗೋಪಾಧ್ಯಾಯ ಹೇಳಿದರು.

6) 2021ರಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ವರ್ಗಾವಣೆಗೆ ಶಿಫಾರಸು ಮಾಡಿದ್ದರೂ ಜಸ್ಟಿಸ್ ಸೇನ್ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರಾಗಿ ಏಕೆ ಉಳಿದರು ಎಂದು ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಪ್ರಶ್ನಿಸಿದರು.

7) ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ತಮ್ಮ ಆದೇಶದಲ್ಲಿ ನ್ಯಾಯಾಧೀಶರ ನಡುವಿನ ಖಾಸಗಿ ಸಂಭಾಷಣೆಯನ್ನೂ ಬಹಿರಂಗಪಡಿಸಿದ್ದಾರೆ. ಇತ್ತೀಚಿನ ನ್ಯಾಯಾಲಯದ ರಜೆಯ ಹಿಂದಿನ ದಿನದಂದು ನ್ಯಾಯಮೂರ್ತಿ ಅಮೃತಾ ಸಿನ್ಹಾ ಅವರನ್ನು ನ್ಯಾಯಮೂರ್ತಿ ಸೇನ್ ತಮ್ಮ ಕೋಣೆಗೆ ಕರೆಸಿಕೊಂಡಿದ್ದರು ಹಾಗೂ ಅಭಿಷೇಕ್ ಬ್ಯಾನರ್ಜಿ ಅವರಿಗೆ ರಾಜಕೀಯ ಭವಿಷ್ಯವಿದೆ ಮತ್ತು ಅವರು ವಿಚಲಿತರಾಗಬಾರದು ಎಂದು ಹೇಳಿದ್ದರು ಎಂದರು.

8) ನ್ಯಾಯಮೂರ್ತಿ ಅಮೃತಾ ಸಿನ್ಹಾ ಅವರು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಈ ವಿಷಯವನ್ನು ವರದಿ ಮಾಡಿದ್ದಾರೆ. ಅವರು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ವರದಿ ಮಾಡಿದ್ದಾರೆ ಎಂದು ನ್ಯಾಯಮೂರ್ತಿ ಗಂಗೋಪಾಧ್ಯಾಯ ಪ್ರತಿಪಾದಿಸಿದರು.

9) ನ್ಯಾಯಮೂರ್ತಿ ಅಭಿಜೀತ್ ಗಂಗೋಪಾಧ್ಯಾಯ ಅವರನ್ನು ಈ ಹಿಂದೆ ಸುಪ್ರೀಂ ಕೋರ್ಟ್‌, ತಾವು ವಿಚಾರಣೆ ನಡೆಸುತ್ತಿದ್ದ ಪ್ರಕರಣಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತ್ತು. ಗಂಗೋಪಾಧ್ಯಾಯ ಆಗಾಗ್ಗೆ ರಾಜಕೀಯ ಎನಿಸುವ ಹೇಳಿಕೆಗಳನ್ನು ನೀಡಿದ್ದಾರೆ. ಈ ಹೇಳಿಕೆಗಳಲ್ಲಿ ಹೆಚ್ಚಿನವು ರಾಜ್ಯದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧದ ಹೇಳಿಕೆಗಳು.

ಇದನ್ನೂ ಓದಿ: Republic Day 2024: ಗಣರಾಜ್ಯೋತ್ಸವದಂದು `ಧ್ವಜ ಅರಳಿಸುವಿಕೆ’; ಸ್ವಾತಂತ್ರ್ಯ ದಿನದಂದು ʻಧ್ವಜಾರೋಹಣʼ… ವ್ಯತ್ಯಾಸವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Pennar River Dispute: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್‌, 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

VISTARANEWS.COM


on

Pennar River Dispute
Koo

ಬೆಂಗಳೂರು: ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ (Pennar River Dispute) ಸಂಬಂಧಿಸಿ 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೀರು ಹಂಚಿಕೆ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ನ್ಯಾ.ಹಿಮಾ ಕೊಯ್ಲಿ ನೇತೃತ್ವದ ಪೀಠ, ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ನಿರ್ದೇಶನ ನೀಡಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಅಂತಾರಾಜ್ಯ ವಿವಾದವಾಗಿದ್ದರಿಂದ ನ್ಯಾಯಾಧೀಕರಣ ಸ್ಥಾಪನೆಗೆ ಆಗ್ರಹಿಸಿತ್ತು. ಆದರೆ ಮಾತುಕತೆಯಲ್ಲಿ ಇತ್ಯರ್ಥ ಮಾಡಿಕೊಳ್ಳುವ ಇರಾದೆಯನ್ನು ಕರ್ನಾಟಕ ವ್ಯಕ್ತಪಡಿಸಿತ್ತು. ಹಾಗಾಗಿ ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸಲು 8 ವಾರಗಳಲ್ಲಿ ವರದಿ ನೀಡುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

2022ರ ಡಿಸೆಂಬರ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್‌ ನದಿ (ದಕ್ಷಿಣ ಪಿನಾಕಿನಿ) ನೀರು ಬಳಕೆ ವಿವಾದ ಬಗೆಹರಿಸಲು ಮೂರು ತಿಂಗಳೊಳಗೆ ನ್ಯಾಯಾಧಿಕರಣ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಇದರಿಂದಾಗಿ, ಮಾತುಕತೆ ಮೂಲಕ ಜಲವಿವಾದ ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ದಕ್ಷಿಣ ಪಿನಾಕಿನಿಯ ಉಪನದಿಯಾದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಲು ಮುಂದಾಗಿದೆ. ಕೋಲಾರ, ಮಾಲೂರು, ಬಂಗಾರಪೇಟೆಯ ಹಲವು ಹಳ್ಳಿಗಳು ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಸುಮಾರು 240 ಕೋಟಿ ರೂ. ವೆಚ್ಚದ ಅಣೆಕಟ್ಟು ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಅನುಮತಿಯನ್ನೂ ಪಡೆದಿದೆ. ಆದರೆ, ಇದಕ್ಕೆ ತಮಿಳುನಾಡು ಸರ್ಕಾರ ತಕರಾರು ತೆಗೆದಿದ್ದು, ಸುಪ್ರೀಂ ಕೋರ್ಟ್‌ ಮೊರೆಹೋಗಿದೆ.

ತಮಿಳುನಾಡು ತಕರಾರು ಏನು?

ಪೆನ್ನಾರ್‌ ನದಿಯ ನೀರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವುದು ಅಂತಾರಾಜ್ಯ ಜಲವಿವಾದ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂಬುದು ತಮಿಳುನಾಡಿನ ತಕರಾರಾಗಿದೆ. ಮಾರ್ಕಂಡೇಯ ನದಿಯು ಪೆನ್ನಾರ್‌ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ. ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್‌ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ, ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಕರಾರು ತೆಗೆದಿದೆ.

ಇದನ್ನೂ ಓದಿ | Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಕರ್ನಾಟಕದ ವಾದವೇನು?

ಅಣೆಕಟ್ಟು ನಿರ್ಮಾಣ ಯೋಜನೆ ವೈಜ್ಞಾನಿಕವಾಗಿದ್ದು, ಕೇಂದ್ರ ಜಲಶಕ್ತಿ ಸಚಿವಾಲಯವೇ ಅನುಮತಿ ನೀಡಿದೆ ಎಂದು ಕರ್ನಾಟಕ ವಾದ ಮಂಡಿಸಿದೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದು ಕರ್ನಾಟಕದ ಉದ್ದೇಶವಾಗಿತ್ತು. ಇದನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೂ ಮನವರಿಕೆ ಮಾಡಿತ್ತು. ನ್ಯಾಯಾಧಿಕರಣದ ರಚನೆಯು ಬಿಕ್ಕಟ್ಟು ಬಗೆಹರಿಸಲು ಸಮಯ ತೆಗೆದುಕೊಳ್ಳುವುದರಿಂದ ಮಾತುಕತೆಗೆ ಕರ್ನಾಟಕ ಆದ್ಯತೆ ನೀಡಿತ್ತು.

Continue Reading

ಪ್ರಮುಖ ಸುದ್ದಿ

DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

DK Shivakumar: ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

VISTARANEWS.COM


on

dcm dk shivakumar
Koo

ಬೆಂಗಳೂರು: ಒಂದು ಸಲ ನಮ್ಮ ಸರಕಾರ ಪ್ರಕರಣವನ್ನು ಲೋಕಾಯುಕ್ತಕ್ಕೆ (Lokayukta) ಕೊಟ್ಟ ಮೇಲೆ ಸಿಬಿಐಯವರು ತನಿಖೆ (CBI Probe) ಮಾಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ (Supreme Court) ತೀರ್ಮಾನವನ್ನು ಒಪ್ಪಿಕೊಳ್ಳುತ್ತೇನೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಆರಂಭಿಸಿರುವ ತನಿಖೆಯನ್ನು ಕೈಬಿಡುವಂತೆ ಸೂಚಿಸಬೇಕು ಎಂದು ಡಿಕೆ ಶಿವಕುಮಾರ್ (DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

ಲೋಕಾಯುಕ್ತದವರು ಇನ್ವೆಸ್ಟಿಗೇಶನ್ ಮಾಡುತ್ತಿದ್ದಾರೆ. CBIನವರಿಗೆ ಮಾಡಬೇಡಿ ಅಂತ ಹೇಳಿದರೂ ಮಾಡುತ್ತಿದ್ದಾರೆ. ಏನು ಬೇಕಾದರೂ ಮಾಡಲಿ, ನನ್ನದೇನೂ ತಪ್ಪಿಲ್ಲ. ನಮ್ಮ‌ ಸರ್ಕಾರ ಒಂದು ಸಲ ವಿತ್‌ಡ್ರಾ ಮಾಡಿದ ಮೇಲೆ ಮುಗಿಯಿತು. ನನ್ನ ಆಸ್ತಿ ದಾಖಲೆ ಏನಿದೆ ಕೊಡ್ತೀನಿ ಎಂದು ಡಿಕೆಶಿ ತಿಳಿಸಿದರು. ಕೇಂದ್ರ ಸರ್ಕಾರ ಇದನ್ನು ಉದ್ದೇಶಪೂರ್ವಕ ಮಾಡುತ್ತಿದೆಯಾ ಎಂಬ ಪ್ರಶ್ನೆಗೆ ʼಕೋರ್ಟ್ ಬಗ್ಗೆ ಏನು ಮಾತನಾಡಲೂ ಆಗುವುದಿಲ್ಲ. ಕೋರ್ಟ್ ಹೇಳಿದಂತೆ ಕೇಳಬೇಕುʼ ಎಂದು ಡಿಕೆಶಿ ಉತ್ತರಿಸಿದರು.

ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಇದನ್ನೂ ಓದಿ: DK Shivakumar : ಡಿಕೆ ಶಿವಕುಮಾರ್‌ ಟಿಪ್ಪಣಿ ಆಧರಿಸಿ ಮಾಡಿದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆಗೆ ಹೈಕೋರ್ಟ್‌ ತಡೆ

Continue Reading

ಪ್ರಮುಖ ಸುದ್ದಿ

DK Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ಶಾಕ್‌, ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

DK Shivakumar: 2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು.

VISTARANEWS.COM


on

DK Shivakumar cbi supreme court
Koo

ಬೆಂಗಳೂರು: ಅಕ್ರಮ ಆಸ್ತಿ (Disproportionate assets) ಗಳಿಕೆ ಆರೋಪದಡಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ, CBI) ಆರಂಭಿಸಿರುವ ತನಿಖೆಯನ್ನು (CBI probe) ಕೈಬಿಡುವಂತೆ ಸೂಚಿಸಬೇಕು ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಅನುಮತಿ ಪಡೆಯದೆ ತನಿಖೆ ಆರಂಭಿಸಲಾಗಿದೆ. 2018 ರ ತಿದ್ದುಪಡಿಯ ದಿನಾಂಕದ ಮೊದಲು ಸೆಕ್ಷನ್ 17 ಎ ಸೇರಿಸಲಾದ ಅಪರಾಧಗಳಿಗೆ ಸೆಕ್ಷನ್ 17 ಎ ಅನ್ವಯಿಸುತ್ತದೆಯೇ ಎಂಬ ವಿಷಯವನ್ನು ಘನ ಪೀಠಕ್ಕೆ ಉಲ್ಲೇಖಿಸಲಾಗಿದೆ ಎಂದು ಅವರು ಚಂದ್ರಬಾಬು ನಾಯ್ಡು ಪ್ರಕರಣದ ತೀರ್ಪನ್ನು ಉಲ್ಲೇಖಿಸಿದರು.

ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ತ್ರಿವೇದಿ ಅವರು, ವಿಭಜಿತ ತೀರ್ಪಿನ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಉತ್ತರಿಸಿದರು. ಡಿಕೆಶಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡುತ್ತಿರುವುದಾಗಿ ತಿಳಿಸಿದರು. ಆದರೆ, ಪೀಠ ಇದಕ್ಕೆ ನಿರಾಸಕ್ತಿ ವ್ಯಕ್ತಪಡಿಸಿತು.

ಯಾವುದಿದು ಪ್ರಕರಣ?

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ಹಾಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ರದ್ದು ಮಾಡಲು ನಿರ್ಧರಿಸಿದೆ. ಅದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಮತ್ತೆ ಹೈಕೋರ್ಟ್ ಮೊರೆ ಹೋಗಿರುವ ಸಿಬಿಐ, ಒಮ್ಮೆ ತನಿಖೆಗೊಳಪಡಿಸಲಾಗಿರುವ ಪ್ರಕರಣವನ್ನು ಪುನಃ ಹಿಂಪಡೆಯುವುದು ಸಲ್ಲದು ಎಂದು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಅತ್ತ, ಸುಪ್ರೀಂ ಕೋರ್ಟ್‌ಗೂ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

ಕರ್ನಾಟಕ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಅಕ್ರಮಗಳು ಬಿಜೆಪಿ ಆಡಳಿತಾವಧಿಯಲ್ಲೇ ಶುರುವಾಗಿರುವಂಥವು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾದ ನಂತರ ಅವು ಮೇಲೆದ್ದಿವೆ. ಬಿಜೆಪಿಯು ಆ ಎಲ್ಲಾ ಹಗರಣಗಳನ್ನು ನಮ್ಮ ತಲೆಗೆ ಕಟ್ಟಲು ನೋಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

Continue Reading

ದೇಶ

Homemakers Rights: ಪತ್ನಿ ಗೃಹಿಣಿಯಾಗಿದ್ದರೆ ಪತಿಯು ಎಟಿಎಂ, ದುಡ್ಡು ಕೊಡಬೇಕು; ಸುಪ್ರೀಂ ಮಹತ್ವದ ಆದೇಶ

Homemakers Rights: ಜೀವನಾಂಶವು ದಾನವಲ್ಲ. ಅದು ವಿವಾಹಿತ ಮಹಿಳೆಯರ ಹಕ್ಕು ಎಂದು ಪೀಠ ಹೇಳಿದೆ. “ಗೃಹಿಣಿಯಾಗಿರುವ ಪತ್ನಿಯು ಭಾವನಾತ್ಮಕವಾಗಿ ಮತ್ತು ಇತರ ರೀತಿಯಲ್ಲಿ ತಮ್ಮ ಮೇಲೆ ಅವಲಂಬಿತಳಾಗಿದ್ದಾಳೆ ಎಂಬ ಅಂಶವನ್ನು ಕೆಲವು ಪತಿಯಂದಿರು ಅರಿತುಕೊಳ್ಳುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ನಾಗರತ್ನಾ ಹೇಳಿದರು. ಇದೇ ವೇಳೆ, ಪತಿಯು ಪತ್ನಿಗೆ ಯಾವೆಲ್ಲ ಸೌಕರ್ಯ ನೀಡಬೇಕು ಎಂಬುದನ್ನು ಕೂಡ ಅವರು ತಿಳಿಸಿದರು.

VISTARANEWS.COM


on

Homemakers Rights
Koo

ನವದೆಹಲಿ: “ಮುಸ್ಲಿಂ ಮಹಿಳೆಯು (Muslim Woman) ಕೂಡ ವಿಚ್ಛೇದನದ ಬಳಿಕ ಮಾಜಿ ಪತಿಯಿಂದ ಜೀವನಾಂಶ ಪಡೆಯಬಹುದು” ಎಂಬುದಾಗಿ ಸುಪ್ರೀಂ ಕೋರ್ಟ್‌ (Supreme Court) ಮಹತ್ವದ ಆದೇಶ ಹೊರಡಿಸಿದೆ. ಇದೇ ವೇಳೆ ಗೃಹಿಣಿಯರ ಹಕ್ಕುಗಳ ಕುರಿತು ಕೂಡ ನ್ಯಾಯಪೀಠವು ಪ್ರಸ್ತಾಪಿಸಿದೆ. “ವಿವಾಹಿತ ಮಹಿಳೆಯು ಗೃಹಿಣಿಯಾಗಿದ್ದರೆ, ಆಕೆಗೆ ಪತಿಯು ಜಂಟಿ ಬ್ಯಾಂಕ್‌ ಖಾತೆ (Homemakers Rights) ಮಾಡಿಸಬೇಕು. ಆಕೆಗೊಂದು ಎಟಿಎಂ ಕೊಡಬೇಕು. ಕುಟುಂಬ ನಿರ್ವಹಣೆ ಸೇರಿ ಹಲವು ಖರ್ಚು-ವೆಚ್ಚಗಳಿಗೆ ಹಣ ನೀಡಬೇಕು” ಎಂಬುದಾಗಿ ಕೂಡ ತಿಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನಾ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರಿದ್ದ ನ್ಯಾಯಪೀಠವು ಎರಡು ಪ್ರತ್ಯೇಕ ತೀರ್ಪುಗಳಲ್ಲಿ ಹಲವು ಅಂಶಗಳನ್ನು ಪ್ರಸ್ತಾಪಿಸಿದೆ. ಸೆಕ್ಷನ್ 125 ಸಿಆರ್​ಪಿಸಿ ಎಲ್ಲ ಮಹಿಳೆಯರಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ನಾಗರತ್ನಾ ಹೇಳಿದರು. ತನ್ನ ಪತ್ನಿಗೆ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ಹೈದರಾಬಾದ್‌ ಮೂಲದ ಮೊಹಮ್ಮದ್ ಅಬ್ದುಲ್ ಸಮದ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದ. ಬುಧವಾರ ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು, ಮುಸ್ಲಿಂ ಮಹಿಳೆಯರಿಗೂ ವಿಚ್ಛೇದನದ ಬಳಿಕ ಮಾಜಿ ಪತಿಯಿಂದ ಜೀವನಾಂಶ ಪಡೆಯುವ ಹಕ್ಕಿದೆ ಎಂದು ತೀರ್ಪು ನೀಡಿದೆ. ಹಾಗೆಯೇ, ನ್ಯಾಯಪೀಠವು, ಗೃಹಿಣಿಯರ ಹಕ್ಕುಗಳ ಬಗ್ಗೆಯೂ ಪ್ರಸ್ತಾಪಿಸಿತು.

“ಗೃಹಿಣಿಯಾಗಿರುವ ಪತ್ನಿಯು ನನ್ನ ಮೇಲೆ ಅವಲಂಬಿತಳಾಗಿದ್ದಾಳೆ. ಆಕೆಗೆ ನನ್ನ ಬೆಂಬಲದ ಅಗತ್ಯವಿದೆ ಎಂಬುದನ್ನು ಪತಿಯು ಅರಿಯಬೇಕು. ಅದರಲ್ಲೂ, ಹಣಕಾಸು ವಿಷಯದಲ್ಲಿ ಪತಿಯು ಉದಾರಿಯಾಗಿರಬೇಕು. ಪತ್ನಿಗೆ ಹಣಕಾಸು ಸ್ವಾತಂತ್ರ್ಯವನ್ನು ಕೊಡಬೇಕು. ಜಂಟಿ ಬ್ಯಾಂಕ್‌ ಖಾತೆ ಮಾಡಿಸಿ, ಆಕೆಗೊಂದು ಎಟಿಎಂ ನೀಡಬೇಕು. ಅದರಲ್ಲೂ, ಹೆಣ್ಣುಮಕ್ಕಳು ವೈಯಕ್ತಿಕ ಕಾರಣಗಳಿಗಾಗಿ ಮಾಡುವ ಖರ್ಚುಗಳಿಗೆ ಪತಿಯು ಒಂದಷ್ಟು ಹಣ ಕೊಡಬೇಕು. ಪ್ರತಿ ಬಾರಿಯೂ ಮಹಿಳೆಯು ಕೈಚಾಚುವಂತಹ ಪರಿಸ್ಥಿತಿಯು ಮನೆಯಲ್ಲಿ ಇರಬಾರದು” ಎಂದು ನ್ಯಾ.ನಾಗರತ್ನಾ ಅವರು ಹೇಳಿದರು.

“ಗೃಹಿಣಿಯಾಗಿರುವವರಿಗೆ ಹಣಕಾಸು ಸ್ವಾತಂತ್ರ್ಯ ನೀಡುವುದರಿಂದ ಅವರಿಗೆ ಮನೆಯಲ್ಲಿ ಹೆಚ್ಚು ಸುರಕ್ಷತೆಯ ಭಾವನೆ ಮೂಡುತ್ತದೆ. ಹಾಗಾಗಿ, ಮನೆಯ ಖರ್ಚಿನ ಜತೆಗೆ ಆಕೆಯ ವೈಯಕ್ತಿಕ ಖರ್ಚುಗಳಿಗೂ ಪತಿಯು ಹಣ ಕೊಡಬೇಕು. ಪತಿಯ ಹಣದ ಮೇಲೆ ಅವಲಂಬಿತಳಾದ ಮಹಿಳೆಯ ಮನಸ್ಥಿತಿಯನ್ನು ಅರಿಯಬೇಕು. ಹಾಗಾದಾಗ ಮಾತ್ರ ಮಹಿಳೆಯು ನೆಮ್ಮದಿಯಿಂದ ಇರಲು ಸಾಧ್ಯ” ಎಂಬುದಾಗಿ ಕೋರ್ಟ್‌ ತಿಳಿಸಿದೆ.

ಇದನ್ನೂ ಓದಿ: Supreme Court: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಕೇಳಬಹುದು: ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು

Continue Reading
Advertisement
Crime News
ಪ್ರಮುಖ ಸುದ್ದಿ4 mins ago

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Lady Police Officer
Latest15 mins ago

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

kiccha sudeep‌ Fans
ಸಿನಿಮಾ41 mins ago

Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

Ratna Bhandar
ದೇಶ48 mins ago

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

GT World Mall
ಪ್ರಮುಖ ಸುದ್ದಿ57 mins ago

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Viral Video
Latest59 mins ago

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Dog Attacks
Latest1 hour ago

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Kashmir Encounter
ದೇಶ1 hour ago

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Monsoon star fashion Actress Mokshita Pai
ಫ್ಯಾಷನ್1 hour ago

Monsoon star fashion: ಮಾನ್ಸೂನ್‌ ಟ್ರಾವೆಲ್‌ ಫ್ಯಾಷನ್‌ಗೆ ಸೈ ಎಂದ ನಟಿ ಮೋಕ್ಷಿತಾ ಪೈ

KL Rahul
ಪ್ರಮುಖ ಸುದ್ದಿ2 hours ago

KL Rahul : ಕೊರಗಜ್ಜನ ಆದಿ ಸ್ಥಾನಕ್ಕೆಭೇಟಿ ನೀಡಿದ ಕೆ. ಎಲ್​ ರಾಹುಲ್​, ಅಥಿಯಾ ಶೆಟ್ಟಿ ದಂಪತಿ, ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌