ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ (Valmiki Corporation Scam) ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ (CID) ಹಾಗೂ ಎಸ್‌ಐಟಿ (SIT) ಅಧಿಕಾರಿಗಳು, ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಅಡಗಿಸಿಟ್ಟಿದ್ದ ಬರೋಬ್ಬರಿ 10 ಕೆಜಿ ಚಿನ್ನದ ಬಿಸ್ಕೆಟ್‌ಗಳನ್ನು (Gold Biscuits) ವಶಕ್ಕೆ ಪಡೆದಿದೆ.
ಆರೋಪಿಯು ಹೈದರಾಬಾದ್‌ನ ಫ್ಲಾಟ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಆರೋಪಿ ಸತ್ಯನಾರಾಯಣ ವರ್ಮಾ ವಾಲೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 15 ಕೆಜಿ ಚಿನ್ನದ ಬಿಸ್ಕೆಟ್‌ಗಳ ಬಗ್ಗೆ ಬಾಯಿ ಬಿಟ್ಟಿದ್ದು, ಅದರಂತೆ ಹೈದ್ರಾಬಾದ್‌ನ ತನ್ನ ಫ್ಲಾಟ್‌ನಲ್ಲಿ 10 ಕೆಜಿ ಚಿನ್ನದ ಗಟ್ಟಿ ಇಟ್ಟಿರುವುದಾಗಿ ಹೇಳಿದ್ದ.
ಇದೀಗ ಎಸ್‌ಐಟಿ ತನಿಖಾ ತಂಡ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದು ಉಳಿದ 5 ಕೆಜಿ ಚಿನ್ನದ ಬಿಸ್ಕೆಟ್‌ಗಾಗಿ ಶೋಧ ನಡೆಸುತ್ತಿದೆ. ಒಟ್ಟಾರೆ ವಾಲೀಕಿ ನಿಗಮದ ಹಣದಿಂದ ಸತ್ಯನಾರಾಯಣ ವರ್ಮಾ ಬರೋಬ್ಬರಿ 35 ಕೆಜಿ ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಮಾಹಿತಿಯನ್ನು ತನಿಖಾ ತಂಡ ಕಲೆ ಹಾಕಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸತ್ಯನಾರಾಯಣ ವರ್ಮಾ ನಾಪತ್ತೆಯಾಗಿದ್ದ. ಎಸ್‌ಐಟಿ ತಂಡ ಸತತ ಒಂದು ವಾರ ಕಾಲ ಹುಡುಕಾಟ ನಡೆಸಿದ್ದರಾದರೂ ಪತ್ತೆಯಾಗಿರಲಿಲ್ಲ.
ತದನಂತರ ವರ್ಮಾ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ಹೈದ್ರಾಬಾದ್‌ನಲ್ಲಿರುವುದು ಗೊತ್ತಾಗಿತ್ತು. ತಕ್ಷಣ ತನಿಖಾ ತಂಡ ಹೈದರಾಬಾದ್‌ಗೆ ತೆರಳಿ ಈತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ನಗರಕ್ಕೆ ಕರೆತಂದು ತೀವ್ರ ವಿಚಾರಣೆಗೊಳಪಡಿಸಿದಾಗ ಹಣ ಹಾಗೂ ಚಿನ್ನದ ಬಗ್ಗೆ ತಿಳಿಸಿದ್ದ. ಸತ್ಯನಾರಾಯಣ ವರ್ಮಾ ಬಂಧನಕ್ಕೊಳಗಾಗುವ ವೇಳೆಗಾಗಲೇ ಹಣ, ಚಿನ್ನವನ್ನು ಬೇರೆಬೇರೆ ಕಡೆಗೆ ಸಾಗಿಸಿದ್ದ. ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹಣ ಹಾಗೂ ಫ್ಲಾಟ್ ಖರೀದಿ ಬಗ್ಗೆ ಸತ್ಯನಾರಾಯಣ ವರ್ಮಾ ಬಾಯ್ಬಿಟ್ಟಿದ್ದ.
ತದನಂತರ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಎಸ್‌ಐಟಿ ತಂಡ ಹೈದ್ರಾಬಾದ್‌ಗೆ ತೆರಳಿ ವರ್ಮಾಗೆ ಸೇರಿದ ಫ್ಲಾಟ್ ಶೋಧ ನಡೆಸಿತ್ತು. ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. ಹೈದರಾಬಾದ್‌ನ ಸೀಮಾಪೇಟೆ, ಮೀಯಾಪುರದಲ್ಲಿ ವಾಸವಿ ಬಿಲ್ಡರ್ಸ್‌ನಲ್ಲಿ ತಲಾ 2 ಫ್ಲಾಟ್ ಸೇರಿ ಬರೋಬ್ಬರಿ 11 ಫ್ಲಾಟ್ ಖರೀದಿಸಿರುವ ಬಗ್ಗೆ ಎಸ್‌ಐಟಿಗೆ ಮಾಹಿತಿ ಲಭ್ಯವಾಗಿದೆ.
ವಾಲ್ಮೀಕಿ ನಿಗಮ ಹಗರಣ; ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್!
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಕೇಸ್ (Valmiki Corporation Scam)ನಲ್ಲಿ ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಿಸಲಾಗಿದೆ. ಈ ಮೂಲಕ ಕೇಂದ್ರ ತನಿಖಾ ಸಂಸ್ಥೆ ಜತೆ ರಾಜ್ಯ ಸರ್ಕಾರ ನೇರ ಸಂಘರ್ಷಕ್ಕೆ ಇಳಿಯಿತಾ ಎನ್ನುವ ಪ್ರಶ್ನೆ ಮೂಡಿದೆ. ಮಾಜಿ ಸಚಿವ ಬಿ.ನಾಗೇಂದ್ರ (B Nagendra) ಹೆಸರು ಹೇಳುವಂತೆ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಲಾಗಿದೆ ಎಂಬ ಆರೋಪದಲ್ಲಿ ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಹಿಂದಿನ ನಿರ್ದೇಶಕ ಕಲ್ಲೇಶ್ ಬಿ. ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಮೇಲೆ ಪ್ರಕರಣ ದಾಖಲಾಗಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧನವಾಗಿರುವ ಮಾಜಿ ಸಚಿವ ನಾಗೇಂದ್ರ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ನಿಗಮದ ಈ ಹಿಂದಿನ ಎಂಡಿ ಕಲ್ಲೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇಡಿ ಕಚೇರಿ ಶಾಂತಿನಗರದಲ್ಲಿ ಇರುವುದರಿಂದ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬಿಎನ್‌ಎಸ್ ಕಾಯ್ದೆಯಡಿ ಕೇಸ್
ಸೆಕ್ಷನ್ 3(5), 351(2), 352ರಡಿ (ಕ್ರಿಮಿನಲ್ ಬೆದರಿಕೆ ಮತ್ತು ಶಾಂತಿ ಹದಗೆಡಿಸುವ ಉದ್ದೇಶದಿಂದ ಅವಮಾನ ಆರೋಪ) ಎಫ್‌ಐಆರ್ ದಾಖಲಿಸಿಕೊಂಡಿರುವ ವಿಲ್ಸನ್ ಗಾರ್ಡನ್ ಪೊಲೀಸರು ಇಡಿ ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ಆರೋಪಗಳ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಿದ್ದಾರೆ. ಸದ್ಯ ಮುಂದಿನ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳ ಪೊಲೀಸರು ಚರ್ಚಿಸುತ್ತಿದ್ದಾರೆ.
ಇದನ್ನೂ ಓದಿ: TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ