Site icon Vistara News

ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಬಂಧನ

Untitled(23)

ಮುಂಬೈ: ಭ್ರಷ್ಟಾಚಾರ ಪ್ರಕರಣ ಸಂಬಂಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ಅಧಿಕಾರಿಗಳು ಬುಧವಾರ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಕಸ್ಟಡಿಗೆ ತೆಗೆದುಕೊಂಡು ನಂತರ ಬಂಧಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್‌ನಲ್ಲಿ ಅನಿಲ್‌ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ದೇಶ್‌ಮುಖ್‌ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು.

ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಮುಂಬೈ ಸೆಷನ್ಸ್ ಕೋರ್ಟ್ ಕೂಡ ದೇಶ್‌ಮುಖ್‌ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ವೀರ್‌ ಸಿಂಗ್‌ ಅವರು ಅನಿಲ್‌ ದೇಶಮುಖ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಆ ಬಳಿಕ ಅನಿಲ್‌ ದೇಶ್‌ಮುಖ್‌ ಅವರನ್ನು ಗೃಹ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಕಳೆದ ವರ್ಷದ ನವೆಂಬರ್‌ 1ರಂದು ಜಾರಿ ನಿರ್ದೇಶನಾಲಯ ದೇಶ್‌ಮುಖ್‌ ಅವರನ್ನು ಬಂಧಿಸಿತ್ತು. 

Exit mobile version