ಕ್ರೈಂ
100ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿ ಯುವಕನ ಹತ್ಯೆ; ಕಳೆದ ತಿಂಗಳಷ್ಟೇ ಮದುವೆಯಾಗಿದ್ದವನ ಶವ ಸಿಕ್ಕಿದ್ದು ಪೊದೆಯಲ್ಲಿ
ಚಿಂಟು ಮಂಗಳವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ. ಆತನನ್ನು ತುಂಬ ಹುಡುಕಲಾಗಿತ್ತು. ಆದರೆ ಪತ್ತೆಯಾಗಿರಲಿಲ್ಲ. ಬುಧವಾರ ಮನೆ ಸಮೀಪದ ಪೊದೆಯಲ್ಲಿ ಅವನ ಮೃತದೇಹ ಸಿಕ್ಕಿತ್ತು.
ಪಾಟ್ನಾ: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಪೊದೆಯಲ್ಲಿ ಸಿಕ್ಕಿದೆ. ಆ ಶವದ ಮೇಲೆಲ್ಲ ಚಾಕುವಿನಿಂದ ಚುಚ್ಚಿದ ಗುರುತಿದೆ. ಸುಮಾರು ನೂರಕ್ಕೂ ಹೆಚ್ಚು ಬಾರಿ ಚುಚ್ಚಿ ಈ ಯುವಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ನಡೆದಿದ್ದು ಬಿಹಾರದಲ್ಲಿ. ಯುವಕನ ಹೆಸರು ಚಿಂಟು ಎಂದಾಗಿದ್ದು, ಸೀತಾಮಾರ್ಹಿ ನಗರದ ನಿವಾಸಿಯಾಗಿದ್ದ.
ಚಿಂಟು ಮಂಗಳವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ. ಆತನನ್ನು ತುಂಬ ಹುಡುಕಲಾಗಿತ್ತು. ಆದರೆ ಪತ್ತೆಯಾಗಿರಲಿಲ್ಲ. ಬುಧವಾರ ಮನೆ ಸಮೀಪದ ಪೊದೆಯಲ್ಲಿ ಅವನ ಮೃತದೇಹ ಸಿಕ್ಕಿತ್ತು. ಪೊಲೀಸರಿಗೆ ಮಾಹಿತಿ ನೀಡಲಾಯಿತು. ಚಿಂಟುವಿನ ಮುಖ ಮತ್ತು ದೇಹದ ಮೇಲೆ ಚಾಕುವಿನಿಂದ ಹರಿತ ಗಾಯಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಚಿಂಟು ಕಳೆದ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಮಾರ್ಚ್ 8ರಂದು ಹೋಳಿ ಹಬ್ಬದ ದಿನ ಚಿಂಟು ಮತ್ತು ನೆರೆಮನೆಯವನಾದ ರಾಮಾ ಮಹತೋ ನಡುವೆ ದೊಡ್ಡಮಟ್ಟದ ಗಲಾಟೆಯಾಗಿತ್ತು. ಆತನೇ ಚಿಂಟುವನ್ನು ಹತ್ಯೆ ಮಾಡಿದ್ದಾನೆ ಎಂದು ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಇನ್ನು ಚಿಂಟು ಹತ್ಯೆಯ ಬೆನ್ನಲ್ಲೇ ಸ್ಥಳೀಯವಾಗಿ ಹಲವು ರಸ್ತೆಗಳ ತಡೆ ನಡೆಸಿ ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಹಾಗೇ, ಆರೋಪಿಯನ್ನು ಶೀಘ್ರವೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಬಿಹಾರದಲ್ಲಿ 10 ಲಕ್ಷ ಸ್ಮಾರ್ಟ್ ಪ್ರಿಪೇಯ್ಡ್ ಮೀಟರ್ ಅಳವಡಿಸಲಿದೆ ಜಿಯೋಥಿಂಗ್ಸ್
ಕರ್ನಾಟಕ
Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು
Suicide Case: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಿಹಳ್ಳಿಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಂಡ್ಯ: ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ. ಮಾಡಿಕೊಂಡಿರುವ ಘಟನೆ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ವಿದ್ಯಾ (32), ಪುರುಷೋತ್ತಮ (46) ಮೃತರು. ಮೊದಲಿಗೆ ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ವಿದ್ಯಾ (32) ಗುರುವಾರ ಸಂಜೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಷಯ ತಿಳಿದು ಮನೆಗೆ ಬಂದ ಪತಿ ಪುರುಷೋತ್ತಮ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಶರಣಾಗಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Road Accident : ಹಾಸನದಲ್ಲಿ ಬೈಕ್ ಮೇಲೆಯೇ ಹರಿದ ಬಸ್: ಸವಾರ ಸ್ಥಳದಲ್ಲೇ ಮೃತ್ಯು, ಯುವತಿಗೆ ಗಾಯ
ಮಂಗಳೂರಿನಲ್ಲಿ ಬಸ್ಸಿನಡಿಗೆ ಬಿದ್ದು ಮಹಿಳೆ ಸಾವು
ಮಂಗಳೂರು: ನಗರದ ಬೆಂದೂರುವೆಲ್ ವೃತ್ತದಲ್ಲಿ ಬಸ್ಸಿನಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಖಾಸಗಿ ಬಸ್ಸಿನಿಂದ ಇಳಿದು ರಸ್ತೆ ದಾಟುವಾಗ ಅದೇ ಬಸ್ಸಿನಡಿಗೆ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಐರಿನ್ ಡಿಸೋಜ (65) ಮೃತ ಮಹಿಳೆ. ಅಪಘಾತದ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ನಾಲ್ಕು ದಿನದಲ್ಲಿ ಎರಡನೇ ಬಲಿ ಇದಾಗಿದೆ.
ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ; ನದಿಯಲ್ಲಿ ಶವ ಪತ್ತೆ
ಕಡಬ (ಮಂಗಳೂರು): ಮಾರ್ಚ್ 31ರಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿದೆ. ಶಿಕ್ಷಣ ಇಲಾಖೆ ಮತ್ತು ವಿದ್ಯಾರ್ಥಿಗಳು ಇದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಇಷ್ಟರ ನಡುವೆಯೇ ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Student death) ಮಾಡಿಕೊಂಡಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಗುಂಡಿಮಜಲ್ ಗ್ರಾಮದಲ್ಲಿ ಅದ್ವೈತ್ ಶೆಟ್ಟಿ (15) ಎಂಬ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದ ಅದ್ವೈತ್ ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ. ಮನೆಯಿಂದ ಹೊರಗೆ ಹೋದವನು ಕಣ್ಮರೆಯಾಗಿದ್ದ ಆತನಿಗಾಗಿ ಮನೆಯವರು ರಾತ್ರಿ ಇಡೀ ಹುಡುಕಾಟ ನಡೆಸಿದರು. ಬೆಳಗ್ಗೆವರೆಗೂ ಬಾಲಕ ಪತ್ತೆಯಾಗಿರಲಿಲ್ಲ.
ಗುರುವಾರ ಮುಂಜಾನೆಯೂ ಹುಡುಕಾಟ ಮುಂದುವರಿದಾಗ ಕುಮಾರಧಾರಾ ನದಿಯ ನಾಕೂರು ಗಯಾ ಎಂಬಲ್ಲಿ ನದಿಯ ಪಕ್ಕದಲ್ಲಿ ಸ್ಕೂಲ್ ಬ್ಯಾಗ್ ಪತ್ತೆಯಾಯಿತು. ಬಳಿಕ ಪುತ್ತೂರು ಅಗ್ನಿಶಾಮಕ ದಳದಿಂದ ನದಿಯಲ್ಲಿ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಯಿತು.
ಕಡಬ ಹಾಗೂ ಬೆಳ್ಳಾರೆ ಪೊಲೀಸರು ಆಗಮಿಸಿದ್ದು, ಪೋಷಕರ ಬಳಿ ವಿವರಣೆ ಪಡೆದಿದ್ದಾರೆ. ಮನೆಯವರಿಗೂ ಈ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾರ್ಚ್ 31ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿರುವುದರಿಂದ ಅದರ ಭಯದಿಂದಲೇ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಕರ್ನಾಟಕ
Viral Video: ಅರ್ಧ ರಾತ್ರೀಲಿ ಮಧ್ಯ ರಸ್ತೇಲಿ ಮೊಬೈಲ್ ಹಿಡಿದು ನಿಂತಿದ್ದ ಇನ್ಫ್ಲುಯೆನ್ಸರ್; ಮುಂದಾಗಿದ್ದೇನು?
Viral Video: ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್‌ಗಳು (social media influencers) ಎಲ್ಲೆಂದರಲ್ಲಿ ಮೊಬೈಲ್ ಹಿಡಿದು ವಿಡಿಯೊ ಮಾಡುವ ಮುನ್ನ ಹುಷಾರಾಗಿ ಇರಬೇಕು ಎಂದು ಸಾರುತ್ತಿದೆ ಈ ಘಟನೆ.
ಬೆಂಗಳೂರು: ನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿದೆ. ಸ್ಕೂಟರ್‌ನಲ್ಲಿ ಬಂದ ಕಳ್ಳರಿಬ್ಬರು ಮೊಬೈಲ್ ಕಸಿದು ಪರಾರಿ ಆಗಲು ಯತ್ನಿಸಿದ್ದಾರೆ. ರೆಸ್ಟೋರೆಂಟ್ ಬಳಿ ನಿಂತು ವಿಡಿಯೊ ಮಾಡುತ್ತಿದ್ದ ಇನ್ಫ್ಲುಯೆನ್ಸರ್‌ವೊಬ್ಬರ ಮೊಬೈಲ್ ಎಗರಿಸಲು ಬಂದ ಕಳ್ಳರ ಕೃತ್ಯದ ವಿಡಿಯೊ ಬೆಂಗಳೂರು 360 ಎಂಬ ಟ್ವಿಟರ್ ಪೇಜ್‌ನಲ್ಲಿ ವೈರಲ್ (viral video) ಆಗಿದೆ.
ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಆಗಿರುವ ರುಚಿಕಾ ಎಂಬುವರು ರೆಸ್ಟೋರೆಂಟ್‌ವೊಂದರ ಕಂಟೆಂಟ್ ಕ್ರಿಯೆಟ್ ಮಾಡಲು ಮುಂದಾಗಿದ್ದರು. ಮೊದಲಿಗೆ ಇಬ್ಬರು ಹುಡುಗಿಯರು Ever tried Gufha Restaurant? ಎನ್ನುತ್ತಾ ಮತ್ತಿಬ್ಬರು ಹುಡುಗಿಯರತ್ತ ಕ್ಯಾಮೆರಾ ತಿರುಗಿಸಿದರು. ಅಷ್ಟರಲ್ಲಿ ಸ್ಕೂಟರ್‌ನಲ್ಲಿ ಬಂದ ಇಬ್ಬರು ಖದೀಮರು ಮೊಬೈಲ್ ಎಗರಿಸಲು ಮುಂದಾದರು.
ವಿಡಿಯೊ ಸಮೇತ ತಮ್ಮ ಅನುಭವ ಹಂಚಿಕೊಂಡಿರುವ ರುಚಿಕಾ, ನಾವು ಕಂಟೆಂಟ್ ಕ್ರಿಯೇಟರ್‌ಗಳಾಗಿರುವುದರಿಂದ ರೆಸ್ಟೋರೆಂಟ್‌ವೊಂದರ ಕಂಟೆಂಟ್ ಶೂಟಿಂಗ್ ಮಾಡುತ್ತಿದ್ದೆವು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಹುಡುಗರು ನಮ್ಮ ಕೈನಲ್ಲಿದ್ದ ನನ್ನ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಆದರೆ ಅದೃಷ್ಟವಶಾತ್ ನಾನು ಆ ಸಮಯದಲ್ಲಿ ನನ್ನ ಫೋನ್ ಅನ್ನು ಕೆಳಗೆ ಮಾಡಿದ್ದರಿಂದ ಕಳ್ಳತನ ಆಗುವುದು ತಪ್ಪಿತು ಎಂದಿದ್ದಾರೆ.
ಮೊಬೈಲ್ ಕಸಿಯಲು ಬಂದ ಕಳ್ಳರು
ರಾತ್ರಿ 11.15ರ ಸುಮಾರಿಗೆ ಜಯನಗರದಲ್ಲಿರುವ ರೆಸ್ಟೋರೆಂಟ್ ಹೊರಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಈ ಘಟನೆ ನಡೆಯುವ ಮುನ್ನ ಈ ಯುವತಿಯರು ಕನಿಷ್ಠ 20 ನಿಮಿಷಗಳ ಕಾಲ ಅಲ್ಲೆ ವಿಡಿಯೊ ರೆಕಾರ್ಡ್ ಮಾಡುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಇದೆನ್ನಲ್ಲ ದೂರದಿಂದಲೇ ಗಮನಿಸಿ ಕಳ್ಳರು ಫೋನ್ ಎಗರಿಸುವ ಕೃತ್ಯಕ್ಕೆ ಮುಂದಾಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು, ಘಟನೆಯ ವಿವರ ಹಾಗೂ ದೂರುದಾರರ ಫೋನ್ ನಂಬರ್ ನೀಡುವಂತೆ ತಿಳಿಸಿದ್ದಾರೆ.
ತಮಗೂ ಹೀಗೆಲ್ಲ ಆಗಿದೆ ಎಂದು ಕಮೆಂಟ್
ಯುವತಿಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಇದೇ ರೀತಿಯ ಅನುಭವ ತಮಗೂ ಆಗಿದೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಅದರಲ್ಲೊಬ್ಬರು ತಾನು ರಾತ್ರಿ 8.30ರ ಸುಮಾರಿಗೆ ಕೋರಮಂಗಲ 1ನೇ ಬ್ಲಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಟೊದಲ್ಲಿ ಹಿಂಬಾಲಿಸಿ ಕೆಲವರು ಫೋನ್ ಕಸಿದುಕೊಳ್ಳಲು ಪ್ರಯತ್ನಸಿದರು. ಆದರೆ ಫೋನ್ ಗಟ್ಟಿಯಾಗಿ ಹಿಡಿದಿದ್ದರಿಂದ ಅದು ಸಾಧ್ಯವಾಗಲಿಲ್ಲ. ನಿತ್ಯವೂ ಈ ದಾರಿಯಲ್ಲೆ ಮನೆಗೆ ಹೋಗಿ ಬರಬೇಕಾಗಿರುವುದರಿಂದ ಭೀತಿಯಲ್ಲೆ ಓಡಾಡಬೇಕಿದೆ ಎಂದಿದ್ದಾರೆ.
ಇದನ್ನೂ ಓದಿ: Karnataka Rain: ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಬೆಂಗಳೂರು ಸೇರಿ ಇಲ್ಲೆಲ್ಲ ವರ್ಷಧಾರೆ
ಬೆಂಗಳೂರು ಸೇರಿದಂತೆ ವಿವಿಧೆಡೆ ಕಳ್ಳತನ ಪ್ರಕರಣಗಳು ವರದಿ ಆಗುತ್ತಿದ್ದು, ಪೊಲೀಸರ ಕಾರ್ಯವೈಖರಿ ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಸರಗಳ್ಳತನದಿಂದ ಹಿಡಿದು ಮೊಬೈಲ್ ಹಾಗೂ ಅಪಾರ್ಟ್‌ಮೆಂಟ್‌ನಲ್ಲಿ ಚಪ್ಪಲಿ, ಶೂ ಕಳ್ಳತನ ಮಾತ್ರವಲ್ಲದೆ ಮನೆಯ ಮುಂದೆ ಇಟ್ಟಿರುವ ಹೂ ಕುಂಡಗಳನ್ನೂ ಕಳ್ಳತನ ಮಾಡುವ ಖರ್ತಾನಕ್ ಕಳ್ಳರ ಹಾವಳಿ ಹೆಚ್ಚಿದೆ.
ಕ್ರೈಂ
Viral News : ಅಪ್ಪ ಓದಿಕೋ ಎಂದಿದ್ದೇ ತಪ್ಪಾಯ್ತು; ನೇಣು ಬಿಗಿದುಕೊಂಡು ಮೃತಳಾದ 9 ವರ್ಷದ ಇನ್‌ಸ್ಟಾ ಕ್ವೀನ್!
ಅಪ್ಪ ಓದಿಕೊಳ್ಳುವುದಕ್ಕೆ ಹೇಳಿದರು ಎನ್ನುವ ಕಾರಣಕ್ಕೇ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ವಿಚಾರ ಎಲ್ಲೆಡೆ ಸುದ್ದಿಯಾಗಿದೆ.
ಚೆನ್ನೈ: ಮಕ್ಕಳೆಂದ ಮೇಲೆ ಆಟ, ಪಾಠ ಇರಲೇಬೇಕು. ಓದದೆ ಆಟವನ್ನೇ ಆಡುತ್ತಿದ್ದರೆ ತಂದೆ ತಾಯಿ ಬೈಯುವುದು, ಹೊಡೆಯುವುದು ಸಾಮಾನ್ಯವೇ. ಆದರೆ ತಮಿಳುನಾಡಿನಲ್ಲಿ ಬಾಲಕಿಯೊಬ್ಬಳು ತನ್ನ ತಂದೆ ಓದಿಕೊಳ್ಳುವುದಕ್ಕೆ ಹೇಳಿದರು ಎನ್ನುವ ಕಾರಣಕ್ಕೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್‌ಸ್ಟಾಗ್ರಾಂನಲ್ಲಿ ಮಿಂಚುತ್ತಿದ್ದ ಆ ಬಾಲಕಿಯ ಸಾವು ಇದೀಗ ಎಲ್ಲೆಡೆ ವೈರಲ್ (Viral News) ಸುದ್ದಿಯಾಗಿದೆ. ಈ ಬಾಲಕಿ ಇನ್‌ಸ್ಟಾ ಕ್ವೀನ್ ಎಂದೇ ಖ್ಯಾತಳಾಗಿದ್ದಳು.
ಇದನ್ನೂ ಓದಿ: Viral Video: ಐಸ್ ಕ್ರೀಂ ತಯಾರಿಸೋಕೆ ಫ್ರಿಜ್ ಬೇಡ್ವೇ ಬೇಡ; ಸೀಲಿಂಗ್ ಫ್ಯಾನ್ ಇದ್ದರೂ ಸಾಕು ಎನ್ನುತ್ತಿದ್ದಾರೆ ಈ ಮಹಿಳೆ
ತಮಿಳುನಾಡಿನ ತಿರವಲ್ಲೂರು ನಿವಾಸಿ ಶಿವಮೂರ್ತಿ ಅವರ ಮಗಳು ಪ್ರತೀಕ್ಷಾ ಈಗಿನ್ನೂ 9ನೇ ವರ್ಷದಲ್ಲಿದ್ದಳು. ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್, ಪೋಸ್ಟ್‌ಗಳನ್ನು ಹಾಕುತ್ತಿದ್ದ ಪ್ರತೀಕ್ಷಾ ಊರಲೆಲ್ಲ ತುಂಬ ಪ್ರಸಿದ್ಧಳಾಗಿದ್ದಳಂತೆ. ಊರವರೆಲ್ಲರೂ ಆಕೆಗೆ ಇನ್‌ಸ್ಟಾ ಕ್ವೀನ್ ಎಂದೇ ಕರೆಯುತ್ತಿದ್ದರಂತೆ. ಸೋಮವಾರದಂದು ಆಕೆ ಶಿವಮೂರ್ತಿ ಅವರ ಮಾವನ ಮನೆ ಬಳಿ ಆಟವಾಡುತ್ತಿದ್ದಳು. ಅದನ್ನು ಕಂಡ ಶಿವಮೂರ್ತಿ ಆಟವಾಡಿದ್ದು ಸಾಕು, ಮನೆಗೆ ಹೋಗಿ ಓದಿಕೋ ಎಂದು ಹೇಳಿದ್ದಾರೆ. ಹಾಗೆಯೇ ಮನೆಯ ಕೀಯನ್ನು ಆಕೆಯ ಕೈಗೆ ಕೊಟ್ಟಿದ್ದಾರೆ.
ಮಗಳಿಗೆ ಕೀ ಕೊಟ್ಟ ಶಿವಮೂರ್ತಿ ಬೈಕ್‌ಗೆ ಪೆಟ್ರೋಲ್ ಹಾಕಿಸಿಕೊಂಡು ಬರಲೆಂದು ತೆರಳಿದ್ದಾರೆ. ರಾತ್ರಿ 8.15ರ ವೇಳೆಗೆ ಮನೆಗೆ ವಾಪಸು ಬಂದಿದ್ದಾರೆ. ಆಗ ಮನೆ ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕರೆದರೂ ಮಗಳು ಬಂದು ಬಾಗಿಲು ತೆರೆದಿಲ್ಲ. ಗಾಬರಿಗೊಂಡ ಶಿವಮೂರ್ತಿ ಮನೆಯ ಕಿಟಕಿಯೊಂದನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಪ್ರತೀಕ್ಷಾ ಟವಲ್ ಒಂದರಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಆಕೆಯ ಜೀವ ಹೋಗದೆ ಒದ್ದಾಡುತ್ತಿದ್ದ ಹಿನ್ನೆಲೆ ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ
Gubbi News: ಅರಣ್ಯ ಒತ್ತುವರಿ ತೆರವಿಗೆ ಮುಂದಾದ ಅಧಿಕಾರಿಗಳು, ಸಿಬ್ಬಂದಿ ಮೇಲೆರಗಿದ ರೈತರು; ಇಬ್ಬರಿಗೆ ತೀವ್ರ ಗಾಯ
Gubbi News: ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಪ್ರದೇಶವನ್ನು ವಶಕ್ಕೆ ಪಡೆಯಲು ಕಂದಕ ತೆಗೆಯಲು ಮುಂದಾಗಿದ್ದಾರೆ. ಈ ವೇಳೆ ರೈತರು ಮತ್ತು ಅಧಿಕಾರಿಗಳ ಮಧ್ಯೆ ಸಂಘರ್ಷ ಏರ್ಪಟ್ಟಿದ್ದು, ರೊಚ್ಚಿಗೆದ್ದ ರೈತರು ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಗುಬ್ಬಿ: ಚೇಳೂರು ಹೋಬಳಿಯ ಗಂಗಯ್ಯನಪಾಳ್ಯದಲ್ಲಿ ಅರಣ್ಯ ಪ್ರದೇಶ ಒತ್ತುವರಿ (Forest Department Encroachment) ವಿಚಾರದಲ್ಲಿ ಕಳೆದ 15 ದಿನಗಳಿಂದಲೂ ರೈತರು ಮತ್ತು ಅರಣ್ಯ ಇಲಾಖೆಯ ಮಧ್ಯೆ ನಡೆಯುತ್ತಿರುವ ಘರ್ಷಣೆ ಮುಂದುವರಿದಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಪ್ರದೇಶವನ್ನು ವಶಕ್ಕೆ ಪಡೆಯುವ ಸಂಬಂಧ ಗುರುವಾರ (ಮಾ.30) ಕಂದಕ ತೆಗೆಯಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ರೈತ ಮುಖಂಡ ದೊಡ್ಡನಂಜಯ್ಯನವರ ನೇತೃತ್ವದಲ್ಲಿ ಕೆಲಸಕ್ಕೆ ತಡೆ ಒಡ್ಡಲು ರೈತರೆಲ್ಲರು ಮುಂದಾದರು. ಅರಣ್ಯ ಇಲಾಖೆಯವರು ಅವರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
ಇದನ್ನೂ ಓದಿ: AAP Poster Campaign: ಮೋದಿ ಓಡಿಸಿ, ದೇಶ ಉಳಿಸಿ ಬಳಿಕ ದೇಶಾದ್ಯಂತ ಆಪ್‌ನಿಂದ ಪೋಸ್ಟರ್ ಕ್ಯಾಂಪೇನ್ ಶುರು!
ಈ ಘರ್ಷಣೆಯಲ್ಲಿ ಕುಣಿಗಲ್ ವಲಯ ಅರಣ್ಯ ಅಧಿಕಾರಿ ಮನ್ಸೂರ್ ಹಾಗೂ ಗಸ್ತು ವನಪಾಲಕರೊಬ್ಬರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳಿಗೆ ಚೇಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಕ್ರಮ ತೆಗೆದುಕೊಂಡಿದ್ದಾರೆ. ಸದ್ಯ ಗಂಗಯ್ಯನಪಾಳ್ಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
-
ಕರ್ನಾಟಕ14 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್15 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ12 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್12 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ13 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕರ್ನಾಟಕ13 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ13 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!
-
ಕ್ರಿಕೆಟ್10 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ