ಜಮ್ಮು: ನಗರ ಹೊರವಲಯದ ಎರಡು ಮನೆಗಳಲ್ಲಿ ಒಂದೇ ಕುಟುಂಬದ ಆರು ಜನರ ಶವ (Family Suicide) ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಎರಡು ಮನೆಗಳಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿರುವ ಕಾರಣ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಜಮ್ಮು ನಗರ ಹೊರವಲಯದ ತವಿ ವಿಹಾರದಲ್ಲಿರುವ ಒಂದು ಮನೆಯಲ್ಲಿ ಇಬ್ಬರು ಹಾಗೂ ಮತ್ತೊಂದು ನಿವಾಸದಲ್ಲಿ ನಾಲ್ಕು ಶವಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆ ಪ್ರಕಾರ ಆತ್ಮಹತ್ಯೆ ಎಂದು ತಿಳಿದುಬಂದಿದ್ದರೂ, ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಸಕೀನಾ ಬೇಗಂ, ಇವರ ಇಬ್ಬರು ಪುತ್ರಿಯರಾದ ನಸೀಮಾ ಅಖ್ತರ್, ರುಬಿನಾ ಬಾನೊ, ಪುತ್ರ ಜಾಫರ್ ಸಲೀಮ್, ಸಂಬಂಧಿಕರಾದ ನೂರ್ ಉಲ್ ಹಬೀಬ್ ಹಾಗೂ ಸಾಜದ್ ಅಹ್ಮದ್ ಎಂದು ಗುರುತಿಸಲಾಗಿದೆ. ಆರೂ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಸಾಗಿಸಲಾಗಿದೆ. ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ | Rto Agent Suicide | ನದಿಗೆ ಹಾರಿ ಆರ್‌ಟಿಒ ಏಜೆಂಟ್ ಆತ್ಮಹತ್ಯೆ!