ಅಪ್ಪ, ಚಿಕ್ಕಪ್ಪ, ಅಜ್ಜನಿಂದ ನಿರಂತರ ಅತ್ಯಾಚಾರಕ್ಕೆ ಒಳಗಾದ ಯುವತಿ; ರಕ್ಷಣೆ ಮಾಡಬೇಕಾದವರ ರಾಕ್ಷಸೀ ಕೃತ್ಯ - Vistara News

ಕ್ರೈಂ

ಅಪ್ಪ, ಚಿಕ್ಕಪ್ಪ, ಅಜ್ಜನಿಂದ ನಿರಂತರ ಅತ್ಯಾಚಾರಕ್ಕೆ ಒಳಗಾದ ಯುವತಿ; ರಕ್ಷಣೆ ಮಾಡಬೇಕಾದವರ ರಾಕ್ಷಸೀ ಕೃತ್ಯ

ಸದ್ಯ ಪುಣೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 17 ವರ್ಷದ ಹುಡುಗಿ, ವಿಶಾಖಾ ಕಮಿಟಿ ಎದುರು ತಾನು ಅನುಭವಿಸಿದ ಪಾಡನ್ನು ಹೇಳಿಕೊಂಡಿದ್ದಾಳೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ.

VISTARANEWS.COM


on

Stop Rape
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಮನೆ ಮಗಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯಬೇಕಾದವರೇ ಆಕೆಯನ್ನು ನಿರಂತರವಾಗಿ ಅತ್ಯಚಾರ ಮಾಡಿದ ಹೇಯ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಆಗಷ್ಟೇ ಹರೆಯಕ್ಕೆ ಕಾಲಿಡುತ್ತಿದ್ದ ಹುಡುಗಿಯ ಮೇಲೆ ಬೇರೆಯವರು ಕಣ್ಣಿಡದಂತೆ ಆಕೆಯ ಅಪ್ಪ, ಅಜ್ಜ, ಚಿಕ್ಕಪ್ಪ ರಕ್ಷಣೆ ಮಾಡಬೇಕಿತ್ತು. ಆದರೆ ಈ ಮೂರೂ ಜನ ಅವಳ ಮೇಲೆ ರೇಪ್​ ಮಾಡಿದ್ದಾರೆ. ಈ ಬಗ್ಗೆ ಆಕೆಯೇ ದೂರು ನೀಡಿದ್ದು, ಸದ್ಯ ಅವಳ ತಂದೆ ಅರೆಸ್ಟ್ ಆಗಿದ್ದಾನೆ.

ಸದ್ಯ ಪುಣೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 17 ವರ್ಷದ ಹುಡುಗಿ, ವಿಶಾಖಾ ಕಮಿಟಿ ಎದುರು ತಾನು ಅನುಭವಿಸಿದ ಪಾಡನ್ನು ಹೇಳಿಕೊಂಡಿದ್ದಾಳೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ. (ವಿಶಾಖಾ ಕಮಿಟಿ ಎಂದರೆ, ಲೈಂಗಿಕ ದೌರ್ಜನ್ಯದ ವಿರುದ್ಧ ಇರುವ ಕ್ರಮದ ಮಾರ್ಗಸೂಚಿಗಳ ಬಗ್ಗೆ ಸಂತ್ರಸ್ತರಿಗೆ ಅರಿವು ಮೂಡಿಸುವ ಸಮಿತಿ. ಇದು ವಿಶೇಷವಾಗಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ರೂಪಿಸಲ್ಪಟ್ಟಿದೆ. ಸಂತ್ರಸ್ತರಿಗೆ ಕಾನೂನು ಹೋರಾಟದ ನೆರವು ನೀಡುತ್ತಿದೆ. ಮೊಟ್ಟಮೊದಲು 1997ರಲ್ಲಿ ಸುಪ್ರೀಂಕೋರ್ಟ್​ನಿಂದ ಈ ಸಮಿತಿ ಘೋಷಿಸಲ್ಪಟ್ಟಿದೆ.)

‘ನಾನು 2016ರಿಂದ 2018ರವರೆಗೆ ಉತ್ತರ ಪ್ರದೇಶದ ನನ್ನ ಮನೆಯಲ್ಲಿ ಇದ್ದೆ. ಆಗ ನನ್ನ ಚಿಕ್ಕಪ್ಪ ಮತ್ತು ಅಜ್ಜನಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದೆ. ನನ್ನ ಮೇಲೆ ಅತ್ಯಾಚಾರ ಎಸಗಿದರು. 2018ರಲ್ಲಿ ಪುಣೆಗೆ ಬಂದೆ. ಇಲ್ಲಿ ನನ್ನ ಅಪ್ಪನ ಬಳಿ ನನ್ನ ಮೇಲಾದ ದೌರ್ಜನ್ಯ ಹೇಳಿಕೊಂಡೆ. ಅದೂ ನೇರವಾಗಿ ಹೇಳಲಾಗದೆ, ಒಂದು ಚೀಟಿಯಲ್ಲಿ ಬರೆದುಕೊಟ್ಟೆ. ಆ ನನ್ನ ಅಪ್ಪನೂ ಅದನ್ನೇ ಮಾಡಿದ. ನನ್ನ ಮೇಲೆ ರೇಪ್​ ಮಾಡಿದ ಚಿಕ್ಕಪ್ಪ, ಅಜ್ಜನ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು, ನನ್ನ ಅಮ್ಮ ಇಲ್ಲದಾಗಲೆಲ್ಲ ನನ್ನ ಮೇಲೆ ರೇಪ್​ ಮಾಡಿದ’ ಎಂದು ಹುಡುಗಿ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ಸದ್ಯ ಪುಣೆಯಲ್ಲಿಯೇ ಇದ್ದ ಅಪ್ಪನನ್ನು ಬಂಧಿಸಲಾಗಿದೆ. ಮೂರೂ ಮಂದಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Danushka Gunathilaka | ಅತ್ಯಾಚಾರ ಆರೋಪಿ ದನುಷ್ಕ ಗುಣತಿಲಕಗೆ ಷರತ್ತುಬದ್ಧ ಜಾಮೀನು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

Sexual Abuse: ಸೋಷಿಯಲ್ ಮೀಡಿಯಾದಿಂದ ಎಷ್ಟು ಒಳ್ಳೆಯದು ಇರುತ್ತದೆಯೋ ಅಷ್ಟೇ ಕೆಟ್ಟದ್ದು ಕೂಡ ಇದೆ. 13 ವರ್ಷದ ಬಾಲಕಿಯೊಬ್ಬಳು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹುಡುಗನನ್ನು ನಂಬಿ ಅತ್ಯಾಚಾರಕ್ಕೀಡಾಗಿದ್ದಾಳೆ. ಹುಡುಗಿಯನ್ನು ಕರೆದುಕೊಂಡು ಹೋದ ಹುಡುಗ ತನ್ನಿಬ್ಬರು ಗೆಳೆಯರೊಂದಿಗೆ ಸುತ್ತಾಡುವ ನೆಪದಲ್ಲಿ ಕಾರಿನಲ್ಲೇ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆರೋಪಿಗಳು ಬಾಲಕಿಯ ವಿಡಿಯೊವನ್ನು ಕೂಡ ಚಿತ್ರೀಕರಿಸಿದ್ದರು.

VISTARANEWS.COM


on

Sexual Abuse
Koo


ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Abuse) ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವಿಡಿಯೊವನ್ನು ಚಿತ್ರೀಕರಿಸಿ ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಮಾಹಿತಿಯ ಪ್ರಕಾರ, 13 ವರ್ಷದ ಸಂತ್ರಸ್ತೆ ಇನ್ಸ್ಟಾಗ್ರಾಮ್ ಮೂಲಕ ಮೂವರು ಆರೋಪಿಗಳಲ್ಲಿ ಒಬ್ಬನೊಂದಿಗೆ ಸ್ನೇಹ ಬೆಳೆಸಿದ್ದಾಳೆ. ಘಟನೆಯ ದಿನ, ಆರೋಪಿ ಅವಳನ್ನು ಭೇಟಿಯಾಗಲು ಕರೆದನು, ಅಲ್ಲಿ ಅವನು ಇತರ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ಕಾಯುತ್ತಿದ್ದನು. ಅಪ್ರಾಪ್ತ ಬಾಲಕಿ ತಲುಪಿದ ಕೂಡಲೇ, ಸುತ್ತಾಡುವ ನೆಪದಲ್ಲಿ ಅವರು ಅವಳನ್ನು ಕಾರಿನೊಳಗೆ ಕರೆದೊಯ್ದರು. ಅವಳು ಒಳಗೆ ಬಂದ ನಂತರ, ಅವರು ಅವಳನ್ನು ಹೆದ್ದಾರಿಗೆ ಕರೆದೊಯ್ದು ಒಬ್ಬೊಬ್ಬರಾಗಿ ಸಾಮೂಹಿಕ ಅತ್ಯಾಚಾರ ಎಸಗಿದರು. ಈ ವೇಳೆ ಆರೋಪಿಗಳು ಬಾಲಕಿಯ ವಿಡಿಯೊವನ್ನು ಸಹ ಮಾಡಿದರು. ನಂತರ ಅವರು ಅದನ್ನು ತೋರಿಸಿ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಮತ್ತೆ ಭೇಟಿಯಾಗುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಅವಳು ನಿರಾಕರಿಸಿದಾಗ, ಅವರು ವಿಡಿಯೊವನ್ನು ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ.

ಈ ಘಟನೆ ಮೋಹನಾ ಪೊಲೀಸ್ ಠಾಣೆ ವ್ಯಾಪ್ತಿಗೆ ಸಂಬಂಧಿಸಿದ್ದು, ಆಕೆಯನ್ನು ಕುಟುಂಬದವರು ಮೋಹನಾ ಪೊಲೀಸ್ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳು ತಮ್ಮ ಮನೆಗಳಿಂದ ಪರಾರಿಯಾಗಿದ್ದು, ಪೊಲೀಸರು ಆರೋಪಿಗಳನ್ನು ಹುಡುಕಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಶಾಲಾ ಬಾಲಕಿಯನ್ನು ಕ್ರೂರವಾಗಿ ಥಳಿಸಿ ಗುಪ್ತಾಂಗಕ್ಕೆ ಕೋಲು ತುರುಕಿದ ಮಹಿಳೆ!

ಮೋಹನಾ ಪೊಲೀಸ್ ಠಾಣೆಯ ಉಸ್ತುವಾರಿ ರಶೀದ್ ಖಾನ್ ಅವರ ಪ್ರಕಾರ “ವಿದ್ಯಾರ್ಥಿನಿಯೊಬ್ಬಳು ತನ್ನ ಕುಟುಂಬದೊಂದಿಗೆ ಪೊಲೀಸ್ ಠಾಣೆಗೆ ಬಂದು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದಾಳೆ. ಯುವಕನನ್ನು ಆಕೆ ಇನ್ಸ್ಟಾಗ್ರಾಂನಲ್ಲಿ ಭೇಟಿಯಾಗಿದ್ದಳು. ಪರಿಚಯವಾದ ನಂತರ, ಯುವಕ ತನ್ನ ಇನ್ನೊಬ್ಬ ಸ್ನೇಹಿತನೊಂದಿಗೆ ಭೇಟಿಯಾಗಲು ಹೇಳಿದ್ದಾನೆ. ಹಾಗಾಗಿ ಇನ್ನೊಬ್ಬ ಯುವಕ ಅವಳನ್ನು 2 ಬಾರಿ ಭೇಟಿಯಾಗಿದ್ದಾನೆ. ಘಟನೆ ನಡೆದ ದಿನವೂ ಆರೋಪಿ ಸ್ನೇಹಿತರೊಂದಿಗೆ ಬಂದು ಆಕೆಯನ್ನು ಕಾರಿನಲ್ಲಿ ಕರೆದೊಯ್ದಿದ್ದ, ಅಲ್ಲಿ ಮೂವರು ಯುವಕರು ಅವಳ ಮೇಲೆ ಅತ್ಯಾಚಾರ ಎಸಗಿ ಅಶ್ಲೀಲ ವಿಡಿಯೊ ಮಾಡಿದ್ದರು. ವಿದ್ಯಾರ್ಥಿಯ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು“ ಎಂಬುದಾಗಿ ತಿಳಿಸಿದ್ದಾರೆ.

Continue Reading

ದೇಶ

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

Pooja Khedkar: UPSC ತನ್ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, 2022ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರು ನಕಲಿ ದಾಖಲೆ ಸೃಷ್ಟಿಸಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಿದೆ. ಅವರನ್ನು ಮುಂಬರುವ ಪರೀಕ್ಷೆಗಳಿಂದ ಡಿಬಾರ್‌ ಮಾಡಲಾಗಿದೆ ಎನ್ನಲಾಗಿದೆ.

VISTARANEWS.COM


on

Pooja Khedkar
Koo

ಹೊಸದಿಲ್ಲಿ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ವಿರುದ್ಧ ಕೇಂದ್ರ ಲೋಕ ಸೇವಾ ಆಯೋಗ(UPSC) ಎಫ್‌ಐಆರ್‌ ದಾಖಲಿಸಿದೆ. ಅಲ್ಲದೇ ನಾಗರಿಕ ಸೇವಾ ಪರೀಕ್ಷೆ-2022 ರ ಉಮೇದುವಾರಿಕೆಯನ್ನು ರದ್ದುಗೊಳಿಸುವಂತೆ ಶೋಕಾಸ್‌ ನೊಟೀಸ್‌ ಜಾರಿಗೊಳಿಸಲಾಗಿದೆ.

UPSC ತನ್ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, 2022ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರು ನಕಲಿ ದಾಖಲೆ ಸೃಷ್ಟಿಸಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಿದೆ. ಅವರನ್ನು ಮುಂಬರುವ ಪರೀಕ್ಷೆಗಳಿಂದ ಡಿಬಾರ್‌ ಮಾಡಲಾಗಿದೆ ಎನ್ನಲಾಗಿದೆ.

ಪೂಜಾ ಅವರು ಅಂಗವೈಕಲ್ಯ ಪ್ರಮಾಣಪತ್ರವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

ಪುಣೆಯ ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆ 2022ರ ಆಗಸ್ಟ್ 24ರಂದು ಪೂಜಾಗೆ ಅಂಗವೈಕಲ್ಯ ಪ್ರಮಾಣಪತ್ರವನ್ನು ನೀಡಿದೆ. ಅದರಲ್ಲಿ ಪೂಜಾ ಖೇಡ್ಕರ್ ಅವರ ವಿಳಾಸವನ್ನು ʼʼಪುಣೆ ಜಿಲ್ಲೆಯ ಪ್ಲಾಟ್ ಸಂಖ್ಯೆ 53, ದೇಹು ಅಲಂಡಿ ರಸ್ತೆ, ತಲವಾಡೆ, ಪಿಂಪ್ರಿ ಚಿಂಚ್ವಾಡ್” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸ್ಥಳದಲ್ಲಿ ಯಾವುದೇ ಮನೆ ಇಲ್ಲ. ಬದಲಾಗಿ ಥರ್ಮೋವರ್ಟಾ ಎಂಜಿನಿಯರಿಂಗ್ ಕಂಪನಿ ಎಂಬ ಕಾರ್ಖಾನೆ ಇದೆ. ಕುತೂಹಲಕಾರಿ ಸಂಗತಿಯೆಂದರೆ, ಕೆಂಪು-ನೀಲಿ ದೀಪವನ್ನು ಅಕ್ರಮವಾಗಿ ಬಳಸಿದ ನಂತರ ವಶಪಡಿಸಿಕೊಳ್ಳಲಾದ ಖೇಡ್ಕರ್ ಅವರ ಆಡಿ ಕಾರು ಈ ಕಂಪನಿಯ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ.

ಅಲ್ಲದೆ ಅಂಗವೈಕಲ್ಯ ಪ್ರಮಾಣಪತ್ರಗಳನ್ನು ಪಡೆಯಲು ಸರ್ಕಾರವು ಆಧಾರ್ ಕಾರ್ಡ್‌ ಅನ್ನು ಕಡ್ಡಾಯಗೊಳಿಸಿದ್ದರೂ ಪೂಜಾ ಅದರ ಬದಲು ಪಡಿತರ ಚೀಟಿ ಹಾಜರುಪಡಿಸಿದ್ದರು ಎಂದು ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ನಕಲಿ ಪಡಿತರ ಚೀಟಿಯನ್ನು ತಯಾರಿಸಲು ಪೂಜಾ ನಕಲಿ ವಿಳಾಸವನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪೂಜಾ ಖೇಡ್ಕರ್ ಮೊಣಕಾಲಿನಲ್ಲಿ ಶೇ. 7ರಷ್ಟು ಅಂಗವೈಕಲ್ಯವನ್ನು ಹೊಂದಿದ್ದಾರೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಸಿವಿಲ್‌ ಸರ್ವಿಸ್‌ ಆಯ್ಕೆಯ ಸಮಯದಲ್ಲಿ ಈ ಅಂಗವೈಕಲ್ಯ ಪ್ರಮಾಣಪತ್ರದಿಂದ ಪೂಜಾ ಅವರಿಗೆ ಅದು ಹೇಗೆ ರಿಯಾಯಿತಿ ಸಿಕ್ಕಿತು ಎನ್ನುವ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ಪೂಜಾ ʼಬೆಂಚ್‌ಮಾರ್ಕ್‌ ಅಂಗವೈಕಲ್ಯ ಹೊಂದಿರುವ ವ್ಯಕ್ತಿʼ ವಿಭಾಗದಲ್ಲಿ ವಿನಾಯಿತಿ ಕೋರಿದ್ದರು. ಆದರೆ ಯುಪಿಎಸ್‌ಸಿ ನಿಯಮದ ಪ್ರಕಾರ ಈ ರಿಯಾಯಿತಿ ಶೇ. 40ಕ್ಕಿಂತ ಕಡಿಮೆ ಇಲ್ಲದ ವ್ಯಕ್ತಿಗೆ ದೊರೆಯಬೇಕು. ಆದರೆ ಪೂಜಾ ಅವರ ಪ್ರಮಾಣಪತ್ರದಲ್ಲಿ ಅವರ ಅಂಗವೈಕಲ್ಯದ ಪ್ರಮಾಣವನ್ನು ಶೇ. 7 ಎಂದು ಉಲ್ಲೇಖಿಸಲಾಗಿದ್ದು, ಇದು ಯುಪಿಎಸ್‌ಸಿ ಮಿತಿಗಿಂತ ತುಂಬಾ ಕಡಿಮೆ ಇದೆ.

ಈ ಹಿಂದೆ ಅವರು ತಮ್ಮ ಅಂಗವೈಕಲ್ಯ ಪ್ರಮಾಣಪತ್ರವನ್ನು ಪರಿಶೀಲಿಸುವ ವೈದ್ಯಕೀಯ ತಪಾಸಣೆಯನ್ನು ತಪ್ಪಿಸಿಕೊಂಡಿದ್ದರು. ನಂತರ ಖಾಸಗಿ ವರದಿಯನ್ನು ಸಲ್ಲಿಸಿದ್ದರು. ಸದ್ಯ ಪೂಜಾ ಸಲ್ಲಿಸಿದ ಪ್ರಮಾಣಪತ್ರಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಪುಣೆಯ ಅಂಗವಿಕಲರ ಆಯುಕ್ತರ ಕಚೇರಿ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ:Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Continue Reading

Latest

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Accident Video: ಅತೀ ವೇಗ ಒಳ್ಳೆಯದಲ್ಲ ಎಂದು ಎಷ್ಟು ಹೇಳಿದರೂ ಜನ ಮುನ್ನುಗ್ಗಿ ಬಿಡುತ್ತಾರೆ. ಇದರಿಂದಲೇ ಸಾಕಷ್ಟು ಅಪಘಾತಗಳಿಗೆ ತುತ್ತಾಗುತ್ತಾರೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಟರ್ನ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎದುರಿನಿಂದ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟರ್‌ಗೆ ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಪೇದೆ ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

VISTARANEWS.COM


on

Accident Video
Koo


ಚೆನ್ನೈ: ಅತಿ ವೇಗ ಅಪಘಾತಕ್ಕೆ ಕಾರಣವೆಂದು (Accident Video) ತಿಳಿದರೂ ಕೂಡ ಕೆಲವರು ವೇಗವಾಗಿ ವಾಹನಗಳನ್ನು ಚಲಾಯಿಸಿ ತಮ್ಮ ಜೀವದ ಜೊತೆಗೆ ಜನರ ಜೀವಕ್ಕೂ ಅಪಾಯವನ್ನು ತಂದೊಡ್ಡುತ್ತಾರೆ. ಇದೀಗ ಅಂತಹದೊಂದು ಅಪಘಾತದ (Hit and Run Case) ಘಟನೆ ಚೆನ್ನೈನಲ್ಲಿ ನಡೆದಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಆ ಗಿದೆ. ಚೆನ್ನೈನಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಮಹಿಳಾ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ಬುಧವಾರ ನಡೆದಿದೆ.

ಚೆನ್ನೈ ಪೊಲೀಸರ ಪ್ರಕಾರ, ಚೆನ್ನೈನ ತಿರುಮುಲ್ಲೈವಾಯಲ್ ಪ್ರದೇಶದ ನಿವಾಸಿ ಪವಿತ್ರಾ ಅವರು ಪೋರೂರಿನ ಮಹಿಳಾ ಪೊಲೀಸ್ ಠಾಣೆಯಿಂದ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರನ್ನು ಚಾಲಕ ಟರ್ನ್ ಮಾಡಲು ಹೋದಾಗ ನಿಯಂತ್ರಣ ಕಳೆದುಕೊಂಡು ರಸ್ತೆಯ ಎದುರಿನಿಂದ ಬರುತ್ತಿದ್ದ ಪವಿತ್ರಾ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪವಿತ್ರಾ ಅವರ ಸ್ಕೂಟರ್ ಹಿಂದೆ ಕಪ್ಪು ಕಾರೊಂದು ಬರುತ್ತಿತ್ತು. ಹಾಗೇ ಅದರ ಹಿಂದೆ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತಿರುವ ಟೆಂಪೊ ಬರುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊದಲ್ಲಿ ಪವಿತ್ರಾ ಅವರ ಸ್ಕೂಟರ್ ಅನ್ನು ಮುಂಭಾಗದಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರ ಸ್ಕೂಟರ್ ಹಿಂದೆ ಇದ್ದ ಕಪ್ಪು ಕಾರಿಗೆ ಡಿಕ್ಕಿ ಹೊಡೆದು ಅವರು ಹಾರಿ ಹೋಗಿ 30 ಅಡಿ ದೂರಕ್ಕೆ ಬಿದ್ದಿರುವುದು ಕಂಡುಬಂದಿದೆ.

ಅದೃಷ್ಟವಶಾತ್, ಗ್ಯಾಸ್ ಸಿಲಿಂಡರ್‌ಗಳನ್ನು ಹೊಂದಿರುವ ಟೆಂಪೊ ಕಪ್ಪು ಕಾರಿನ ಹಿಂದೆ ಇದ್ದ ಕಾರಣ ದೊಡ್ಡ ಅಪಘಾತ ಸಂಭವಿಸಲಿಲ್ಲ ಎನ್ನಲಾಗಿದೆ. ಪವಿತ್ರಾ ಅವರ ಸ್ಥಿತಿ ಬಹಳ ಗಂಭೀರವಾಗಿದ್ದು, ತಕ್ಷಣ ಅವರನ್ನು ರಾಮಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

ಪ್ರತಿದಿನ ಒಂದಲ್ಲ ಒಂದು ಅಪಘಾತದ ಪ್ರಕರಣಗಳು ವರದಿಯಾಗುತ್ತಿರುತ್ತದೆ. ಜುಲೈ 8ರಂದು ರಸ್ತೆ ದಾಟಲು ಕಾಯುತ್ತಿದ್ದ 61 ವರ್ಷದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಕಾಣಿಯೂರು ನಿವಾಸಿ ಗೋಮತಿ ಎಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಈ ಘಟನೆಯನ್ನು ಸೆರೆಹಿಡಿಯಲಾಗಿದ್ದು, ಗೋಮತಿ ಜೀಬ್ರಾ ಕ್ರಾಸಿಂಗ್ ಬಳಿ ನಿಂತಿದ್ದಾಗ ಅತಿ ವೇಗದಲ್ಲಿ ಬಂದ ಕಾರು ನಿಂತಿದ್ದ ಆಕೆಗೆ ಡಿಕ್ಕಿ ಹೊಡೆದಿದೆ.

Continue Reading

Latest

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

Sexual Abuse: ಚಿಕ್ಕಮಕ್ಕಳು, ಚಾಕೋಲೆಟ್ ಐಸ್‌ಕ್ರೀಂ, ಬಿಸ್ಕತ್ ಕೊಟ್ಟರೆ ಯಾರೇ ಕರೆದರೂ ಬಂದು ಬಿಡುತ್ತಾರೆ. ಮಕ್ಕಳಿಗೆ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬ ಪರಿವೆ ಇರುವುದಿಲ್ಲ. ತಿಂಡಿಯ ಮೇಲಿನ ಆಸೆಗೆ ಅವರು ಯಾರೇ ಕರೆದರೂ ಹೋಗಿ ಬಿಡುತ್ತಾರೆ. ಇಲ್ಲೊಬ್ಬಳು ಬಾಲಕಿ ಬಿಸ್ಕೆತ್‌ನ ಆಮಿಷಕ್ಕೆ ಒಳಗಾಗಿ ಕಾಮುಕನ ಕೈಗೆ ಸಿಲುಕಿ ಜೀವವನ್ನೇ ಕಳೆದುಕೊಂಡಿದ್ದಾಳೆ. ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಈ ಹೀನ ಕೃತ್ಯ ಎಸಗಿದ್ದಾನೆ.

VISTARANEWS.COM


on

Sexual Abuse
Koo


ದಿನೇದಿನೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾಮುಕರ ಕೆಟ್ಟ ಚಟಕ್ಕೆ ಬಾಲಕಿಯರು ಬಲಿಯಾಗುತ್ತಿದ್ದಾರೆ. ಇದೀಗ ಆಂಧ್ರಪ್ರದೇಶದ ತಿರುಪತಿಯಲ್ಲಿ ಭಯಾನಕ ಅತ್ಯಾಚಾರ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Sexual Abuse)ಆಗಿದೆ. ಜನರು ಘಟನೆ ನೋಡಿ ಬೆಚ್ಚಿಬಿದ್ದಿದ್ದಾರೆ.

ದೋರಾವರಿಸತ್ರಮ್ ಮಂಡಲದ ನೆಲಬಳ್ಳಿ ಗ್ರಾಮದಲ್ಲಿ ಜುಲೈ 17ರಂದು ಈ ಘಟನೆ ನಡೆದಿದ್ದು, ಗಾಂಜಾ ಪ್ರಭಾವದಲ್ಲಿ ಕಾರ್ಮಿಕನೊಬ್ಬ ಎಂಟು ವರ್ಷದ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ. ವರದಿ ಪ್ರಕಾರ, ಬಿಹಾರ ಮೂಲದ ಆರೋಪಿ, ಸ್ಥಳೀಯ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು, ಬಿಸ್ಕತ್ತು ನೀಡುವ ನೆಪದಲ್ಲಿ ಬಾಲಕಿಯನ್ನು ಹತ್ತಿರದ ಕಾಡಿಗೆ ಕರೆದೊಯ್ದಿದ್ದಾನೆ. ಯಾರೂ ಇಲ್ಲದ ಆ ಪ್ರದೇಶದಲ್ಲಿ, ಅವನು ಅವಳ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಬೆಳಗ್ಗೆ ಬಾಲಕಿ ಕಾಣೆಯಾದ ನಂತರ, ಅವಳ ಪೋಷಕರು ದಿನವಿಡೀ ಅವಳನ್ನು ಹುಡುಕಿದರು. ಗ್ರಾಮದ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ದನಕಾಯುವವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಬಿಹಾರದ ದರ್ಭಾಂಗ ಜಿಲ್ಲೆಯ ವಲಸೆ ಕಾರ್ಮಿಕನ ಮಗಳಾಗಿದ್ದು, ಶಂಕಿತ ಕೂಡ ಅದೇ ರಾಜ್ಯದವನಾಗಿದ್ದ. ತಿರುಪತಿ ಜಿಲ್ಲಾ ಎಸ್ಪಿ ಎಲ್ ಸುಬ್ಬರಾಯುಡು ಅವರ ಪ್ರಕಾರ, ಬಿಹಾರದಿಂದ ಸುಮಾರು 40 ಜನರು ಎರಡು ತಿಂಗಳ ಹಿಂದೆ ನೆಲಬಳ್ಳಿ ಗ್ರಾಮದ ಬಳಿಯ ಧನ್ಯಲಕ್ಷ್ಮಿ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡಲು ಬಂದಿದ್ದರು. ಅವರಲ್ಲಿ ಒಬ್ಬ ಅಡುಗೆಯವನು ತನ್ನ ಎಂಟು ವರ್ಷದ ಮಗಳನ್ನು ಕರೆತಂದಿದ್ದನು. ಆಕೆಯೇ ಈಗ ಕೊಲೆಯಾದ ಬಾಲಕಿ ಎನ್ನಲಾಗಿದೆ.

ಇದನ್ನೂ ಓದಿ: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರದ ಮತ್ತೊಂದು ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಅವಳ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
Sexual Abuse
Latest14 mins ago

Sexual Abuse: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

Actor Darshan
ಕರ್ನಾಟಕ59 mins ago

Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

Keshav Prasad Maurya
ದೇಶ1 hour ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest1 hour ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು1 hour ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ1 hour ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್2 hours ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Kubusa Kannada film release on 26th July
ಕರ್ನಾಟಕ2 hours ago

Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ7 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌