Site icon Vistara News

Accident case: ಭೀಕರ ರಸ್ತೆ ಅಪಘಾತ: ಮಹಿಳೆ ಸಾವು, ಐವರು ಗಂಭೀರ

Accident case

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ (Accident case) ಓರ್ವ ಮಹಿಳೆ ಸಾವನ್ನಪ್ಪಿದ್ದು (death), ಐವರು ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆ (Dharwad District) ಕಲಘಟಗಿಯ ತಡಸ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಟಾಟಾ ಏಸ್ ಮಹಿಳೆಯರು ಗಾರ್ಮೆಟ್ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ವೇಗವಾಗಿ ಬಂದು ಲಾರಿ ಟಾಟಾ ಏಸ್‌ಗೆ ಡಿಕ್ಕಿಯಾಗಿದೆ.

Accident case


ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಶಾಲೆ ವಾಹನಕ್ಕೆ ಲಾರಿ ಡಿಕ್ಕಿ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ವಾಹನಕ್ಕೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ರ ಪೂಲವಾರಪಲ್ಲಿ ಕ್ರಾಸ್ ಬಳಿ ಬುಧವಾರ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಕ್ರಾಸ್ ಬಳಿ ತಿರುವು ಪಡೆದುಕೊಳ್ಳುತ್ತಿರುವಾಗ ಈ ಅಪಘಾತ ಸಂಭವಿಸಿದೆ.

ಸತ್ಯಸಾಯಿ ಶಾಲೆಯ ಬಸ್ ನಲ್ಲಿ ಮಕ್ಕಳನ್ನು ಬೆಳಗ್ಗೆ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ ಮಕ್ಕಳನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಪಲ್ಟಿ

ಇನ್ನೊಂದು ಪ್ರಕರಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಹೂಕೋಸು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಹೊರ ವಲಯದಲ್ಲಿ ನಡೆದಿದೆ.

ಲಾರಿ ಚಾಲಕ ಮತ್ತು ಕ್ಲೀನರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಪಲ್ಟಿಯಾದ ಹಿನ್ನಲೆಯಲ್ಲಿ 5 ಲಕ್ಷ ಮೌಲ್ಯದ 25 ಟನ್ ಹೂಕೋಸು ಬೆಳೆ ನಷ್ಟವಾಗಿದೆ. ಹಾವೇರಿಯಿಂದ ಕೊಲ್ಕತ್ತಾ ಕಡೆಗೆ ಹೂಕೋಸ್ ಅನ್ನು ಸಾಗಿಸಲಾಗುತ್ತಿತ್ತು.

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನಾ ಸ್ಥಳಕ್ಕೆ ಚಳ್ಳಕೆರೆ ಪಿಎಸ್ ಐ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಳುತ್ತಿದ್ದ ರೈತ ಟ್ರ್ಯಾಕ್ಟರ್‌ ಅಡಿಗೆ ಸಿಲುಕಿ ಸಾವು

ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಂಕರ್ ರೆಡ್ಡಿ (40) ಮೃತ ದುರ್ದೈವಿ.

ಶಂಕರ್‌ ರೆಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಾ ಕೆಸರು ಗದ್ದೆ ಉಳುಮೆ ಮಾಡುತ್ತಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ ಮೇಲೆತ್ತಲು ಪ್ರಯತ್ನ ಪಟ್ಟಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಅಡಿ ಸಿಲುಕಿ ಮೃತಪಟ್ಟರು. ಅಲ್ಲಿದ್ದವರು ಸ್ಥಳೀಯರು ಜೆಸಿಬಿ ಮೂಲಕ ಟ್ರ್ಯಾಕ್ಟರ್‌ನಡಿಯಲ್ಲಿದ್ದ ಮೃತ ದೇಹವನನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: Physical Abuse: ಸ್ನೇಹದ ನೆಪದಲ್ಲಿ ನೆರೆಮನೆಗೆ ತೆರಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಕಾಮುಕನ ಬಂಧನ

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕು ದಿಗವ ಪ್ಯಯಲವಾರಪಲ್ಲಿ ದುರ್ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Exit mobile version