Site icon Vistara News

Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

actor darshan fan arrest

ಬೆಂಗಳೂರು: ನಟ ಪ್ರಥಮ್ (Pratham), ನಿರ್ಮಾಪಕ ಉಮಾಪತಿಗೆ (Umapathy) ಬೆದರಿಕೆ ಹಾಕಿದ್ದ ನಟ ದರ್ಶನ್ (Actor Darshan) ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದ.

ಚೇತನ್‌ ಎಂಬಾತನೇ ಬಂದಿತ ಆರೋಪಿ. ಕೊಯಮತ್ತೂರಿನಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಸವೇಶ್ವರ ನಗರ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ಈತ ನಿರ್ಮಾಪಕ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ. ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಟ ಪ್ರಥಮ್‌ಗೆ ಕೂಡ ಈತ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾ‌ನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್‌ಗೆ ಚೇತನ್ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ.

ಜೊತೆಗೆ ಮತ್ತೊಬ್ಬ ಅಭಿಮಾನಿ ನಾಗೇಶ್ ಎಂಬಾತನಿಗಾಗಿಯೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೆದರಿಕೆ ಹಾಕಿದ ಅಭಿಮಾನಿಗಳ ಮೇಲೆ ಪಿಸಿಆರ್ ದಾಖಲು ಮಾಡಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಕೋರ್ಟ್ ಸೂಚನೆಯಂತೆ ಎಫ್‍ಐಆರ್ ದಾಖಲಾಗಿದೆ.

ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್‌ ಆಪ್ತ ವಿನೋದ್‌ ಪ್ರಭಾಕರ್‌ ಕೂಡ ಸ್ನೇಹಿತರ ಜತೆ ಆಗಮಿಸಿ ಭೇಟಿ ಮಾಡಿದರು.

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದರು.

ಇನ್ನು ಜೈಲಿನಲ್ಲಿದ್ದರೂ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾಗಿದೆ. ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಬಂದರೆ ನೂರೊಂದು ಕಂಡಿಷನ್ಸ್‌ ವಿಧಿಸುವ ಪೊಲೀಸರು, ಸೆಲೆಬ್ರಿಟಿ, ರಾಜಕಾರಣಿಗಳು, ಬಲಾಢ್ಯರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ದರ್ಶನ್ ಮೌನವಾಗಿದ್ರು, ಏನೂ ಮಾತನಾಡಲಿಲ್ಲ: ವಿನೋದ್ ಪ್ರಭಾಕರ್

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ದರ್ಶನ್ ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬದಂದು ಭೇಟಿ ಮಾಡಿದ್ದೆ. ಮಾಧ್ಯಮಗಳಲ್ಲಿ ಬರುವುದನ್ನು ನೋಡಿ ವಿಚಾರ ತಿಳಿದುಕೊಂಡೆ, ಪೊಲೀಸ್ ಸ್ಟೇಷನ್ ಹತ್ತಿರ ಹೋಗಿ ಭೇಟಿಯಾಗಲು ಪ್ರಯತ್ನಪಟ್ಟೆ, ಆದರೆ ಸಾಧ್ಯವಾಗಿರಲಿಲ್ಲ. ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಭೇಟಿ ಮಾಡಿದ್ದೇನೆ. ದರ್ಶನ್ ಅವರು ಮೌನವಾಗಿದ್ದರು, ಏನ್ ಟೈಗರ್ ಅಂತ ಹೇಳಿದರು ಅಷ್ಟೇ… ಅವರಿಗೆ ಶೆಕ್ ಹ್ಯಾಂಡ್ ಮಾಡಿ ಬಂದೆ ಎಂದು ತಿಳಿಸಿದರು.

ಇದನ್ನೂ ಓದಿ: Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

Exit mobile version