Site icon Vistara News

Actor Darshan: `ನಾನೇ 30 ಲಕ್ಷ ರೂ. ಕೊಟ್ಟೆ….’ ಕೊಲೆ ಬಗ್ಗೆ ಸ್ವ ಇಚ್ಛೆ ಹೇಳಿಕೆ ನೀಡಿದ ದರ್ಶನ್‌

Actor Darshan

Renukaswamy Murder Case: Actor Darshan Had Chicken Sambar, Ragi Ball In Parappana Agrahara Jail

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka Swamy murder case) ಕೇಸ್‌ನ ಆರೋಪಿ, ನಟ ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ. ಪ್ರಕರಣ ಮುಚ್ಚಿಹಾಕಲು 30 ಲಕ್ಷ ರೂ. ನೀಡಿರುವುದಾಗಿ ತಿಳಿಸಿದ್ದಾನೆ.

ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ.

ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್‌ ಒಪ್ಪಿಕೊಂಡಿಲ್ಲ. ಶೆಡ್‌ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್‌ 8ರಂದು ರಾತ್ರಿ ದರ್ಶನ್‌ ತನ್ನ ಜೀಪಿನಲ್ಲಿ ಶೆಡ್‌ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್‌ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.

ರಾಜಕಾಲುವೆ ಪಾಲಾದ ಮೊಬೈಲ್‌ ಹುಡುಕಾಟಕ್ಕೆ ಅಗ್ನಿಶಾಮಕ ದಳ

ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಕೇಸ್‌ನಲ್ಲಿ, (Renuka Swamy Murder Case) ರಾಜಕಾಲುವೆ ಪಾಲಾಗಿರುವ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘವೇಂದ್ರ ಮೊಬೈಲ್‌ಗಳಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣದ ಬಗ್ಗೆ ಮಹತ್ವದ ಸಾಕ್ಷಿಗಳನ್ನು ಇದು ಹೊಂದಿದ್ದು, ಇದೀಗ ಶೋಧಕ್ಕಾಗಿ ಅಗ್ನಿಶಾಮಕ ದಳದ ಮೊರೆ ಹೋಗಲಾಗಿದೆ.

ಸತತ 11 ದಿನಗಳಿಂದ ಮೃತ ರೇಣುಕಾಸ್ವಾಮಿ ಮೊಬೈಲ್‌ಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಜೂನ್‌ 8ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ಜೂನ್ 9ರ ಮುಂಜಾನೆ ಮೃತ ರೇಣುಕಾಸ್ವಾಮಿ ಹಾಗೂ A5 ಆರೋಪಿ ರಾಘವೇಂದ್ರ ಇಬ್ಬರ ಮೊಬೈಲ್ ಅನ್ನು ಪಡೆದು ಸುಮನಹಳ್ಳಿಯ ರಾಜಕಾಲುವೆ ಬಳಿ ಪ್ರದೂಶ್ ಬಿಸಾಡಿದ್ದ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ನಡೆಸಲಾದ ಹಲ್ಲೆಯನ್ನು ಈ ಮೊಬೈಲ್‌ಗಳಲ್ಲಿ ಆರೋಪಿಗಳು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘವೇಂದ್ರರ ಮೊಬೈಲ್‌ಗಳು ಪ್ರಮುಖ ಸಾಕ್ಷಿಯಾಗಿವೆ. ಇಬ್ಬರ ಮೊಬೈಲ್‌ಗಳನ್ನೂ ರಾಜಕಾಲುವೆಗೆ ಬಿಸಾಡಿದ್ದಾಗಿ ಪ್ರದೂಶ್ ಹೇಳಿಕೆ ನೀಡಿದ್ದಾನೆ.

ಆತ ತೋರಿಸಿದ ಸುಮನಹಳ್ಳಿ ರಾಜಕಾಲುವೆಯ ಬಳಿ ಪೋಲಿಸ್ ಅಧಿಕಾರಿಗಳು ಮಹಜರು ನಡೆಸಿದ್ದಾರೆ. ಬಿಬಿಎಂಪಿ ಪೌರ ಕಾರ್ಮಿಕರ ಸಹಾಯದಿಂದ ರಾಜಕಾಲುವೆಯಲ್ಲಿ ಮೊಬೈಲ್ ಹುಡುಕಾಡಿಸಿದ್ದಾರೆ. ಆದರೆ ಪತ್ತೆಯಾಗಿಲ್ಲ. ಹೀಗಾಗಿ ಮೋಬೈಲ್ ಪತ್ತೆ ಮಾಡಿಕೊಡುವಂತೆ ಪೊಲೀಸರು ರಾಜಾಜಿನಗರ ಅಗ್ನಿಶಾಮಕ ಠಾಣೆ ಅಧಿಕಾರಿಗಳಿಗೆ ಮೊರೆ ಹೋಗಿದ್ದಾರೆ.

ಈ ನಡುವೆ, ಮೊಬೈಲ್‌ ಅನ್ನು ಬೇರೆ ಕಡೆ ಅವಿತಿರಿಸಿ ಅಥವಾ ನಾಶ ಮಾಡಿ, ಸುಮನಹಳ್ಳಿ ರಾಜಕಾಲುವೆಗೆ ಎಸೆದಿದ್ದೇನೆ ಎಂದು ಪ್ರದೂಶ್‌ ಹೇಳಿಕೆ ನೀಡಿ ಪೊಲೀಸರ ದಾರಿ ತಪ್ಪಿಸಿರುವ ಸಾಧ್ಯತೆಯೂ ಇದೆ. ಅಥವಾ ಆತ ಬಿಸಾಡಿರುವ ಮೊಬೈಲ್‌ಗಳನ್ನು ಗುಜರಿ ವಸ್ತು ಆಯುವವರು ಎತ್ತಿಕೊಂಡುಹೋಗಿರುವ ಸಾಧ್ಯತೆಯೂ ಇದೆ. ಇವೆಲ್ಲ ಸಾಧ್ಯತೆಗಳಿಂದಾಗಿ ಈ ಮೊಬೈಲ್‌ ಹುಡುಕಾಟ ಹುಲ್ಲಿನ ಬಣವೆಯಲ್ಲಿ ಸೂಜಿ ಹುಡುಕಿದಂತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Exit mobile version