Site icon Vistara News

Ajmer Pocso Case: 32 ವರ್ಷ ಹಿಂದಿನ ಅಜ್ಮೀರ್‌ ಪೋಕ್ಸೋ ಕೇಸ್‌ನಲ್ಲಿ 6 ಮಂದಿಗೆ ಜೀವಾವಧಿ ಶಿಕ್ಷೆ

ajmer pocso case

ನವದೆಹಲಿ: ಅಜ್ಮೀರ್ ಪೋಕ್ಸೋ ಪ್ರಕರಣ, ಭಾರಿ ಸುದ್ದಿ ಮಾಡಿದ್ದ ಲೈಂಗಿಕ ಹಗರಣದಲ್ಲಿ (Ajmer Pocso Case) 100ಕ್ಕೂ ಹೆಚ್ಚು ಹುಡುಗಿಯರ ಮೇಲೆ ಅತ್ಯಾಚಾರವೆಸಗಿ (Physical Abuse) ಬ್ಲ್ಯಾಕ್‌ಮೇಲ್ (Blackmale) ಮಾಡಿದ ಪ್ರಕರಣದಲ್ಲಿ ಪೋಕ್ಸೊ ನ್ಯಾಯಾಲಯವು (POCSO court) 6 ಮಂದಿಗೆ ಜೀವಾವಧಿ ಶಿಕ್ಷೆ (Life Sentence) ವಿಧಿಸಿದೆ.

ನ್ಯಾಯಾಲಯವು ಆರೋಪಿಗಳಿಗೆ ತಲಾ ₹ 5 ಲಕ್ಷ ದಂಡ ವಿಧಿಸಿದೆ. 1992ರಲ್ಲಿ ಬೆಳಕಿಗೆ ಬಂದ ಅಜ್ಮೀರ್ ಲೈಂಗಿಕ ಹಗರಣದ ಆರೋಪಿಗಳಾದ ನಫೀಸ್ ಚಿಶ್ತಿ, ನಸೀಮ್ ಅಲಿಯಾಸ್ ಟಾರ್ಜನ್, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ ಮತ್ತು ಸೈಯದ್ ಜಮೀರ್ ಹುಸೇನ್ ಎಂಬವರನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ವೀರೇಂದ್ರ ಸಿಂಗ್ ಹೇಳಿದ್ದಾರೆ.

11ರಿಂದ 20 ವರ್ಷದೊಳಗಿನ ಕಾಲೇಜು ಮತ್ತು ಶಾಲೆಗೆ ಹೋಗುವ ಹುಡುಗಿಯರಲ್ಲಿ ಗ್ಯಾಂಗ್‌ನ ಸದಸ್ಯರು ಸ್ನೇಹ ಬೆಳೆಸಿ, ದೈಹಿಕವಾಗಿ ಸಂಪರ್ಕವೇರ್ಪಟ್ಟ ಸಂದರ್ಭಗಳಲ್ಲಿ ಅವರ ಫೋಟೊ ತೆಗೆದಿದ್ದು, ನಂತರ ಅವರ ಮೇಲೆ ಅತ್ಯಾಚಾರವೆಸಗಿದ್ದರು. ಪ್ರಕರಣದಲ್ಲಿ ಒಟ್ಟು 18 ಆರೋಪಿಗಳಿದ್ದರು. 12 ಮಂದಿ ವಿರುದ್ಧ ಪ್ರಕರಣದ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು.

ಆರೋಪಿಗಳ ಪೈಕಿ, ನಸೀಮ್ ಅಲಿಯಾಸ್ ಟಾರ್ಜನ್ 1994 ರಲ್ಲಿ ತಲೆಮರೆಸಿಕೊಂಡಿದ್ದ. ಜಹೂರ್ ಚಿಶ್ತಿ ಸೆಕ್ಷನ್ 377 (ಅಸ್ವಾಭಾವಿಕ ಸೆಕ್ಸ್) ಅಡಿಯಲ್ಲಿ ತಪ್ಪಿತಸ್ಥ ಎಂದು ಸಾಬೀತಾಯಿತು.ಆತನ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ಸ್ಕಿಜೋಫ್ರೇನಿಯಾ ರೋಗನಿರ್ಣಯ ಮಾಡಿದ ನಂತರ ಫಾರೂಕ್ ಚಿಶ್ತಿ ವಿಚಾರಣೆ ಪ್ರತ್ಯೇಕವಾಗಿ ಮುಂದುವರೆದಿದ್ದು 2007 ರಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆರೋಪಿಗಳ ಪೈಕಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇತರ ಎಂಟು ಆರೋಪಿಗಳಿಗೆ 1998 ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ನಫೀಸ್ ಚಿಶ್ತಿ, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ, ಸೈಯದ್ ಜಮೀರ್ ಹುಸೇನ್ ಮತ್ತು ಅಲ್ಮಾಸ್ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಸಲಾಯಿತು. ಮೊದಲ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾದ ಮತ್ತು ತಲೆಮರೆಸಿಕೊಂಡಿದ್ದ ನಫೀಸ್ ಚಿಶ್ತಿ, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ, ಸೈಯದ್ ಜಮೀರ್ ಹುಸೇನ್ ಮತ್ತು ನಸೀಮ್ ಅಲಿಯಾಸ್ ಟಾರ್ಜನ್ ಸೇರಿದಂತೆ ಉಳಿದ ಐದು ಆರೋಪಿಗಳಿಗೆ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಇತರ ಆರೋಪಿಗಳು ತಮ್ಮ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಅಥವಾ ನ್ಯಾಯಾಲಯಗಳಿಂದ ಖುಲಾಸೆಗೊಳಿಸಿದ್ದಾರೆ. ಮೊದಲ ಚಾರ್ಜ್ ಶೀಟ್ ಸಮಯದಲ್ಲಿ ಅವರ ತನಿಖೆ ಬಾಕಿ ಇದ್ದ ಕಾರಣ ಉಳಿದ ಆರು ಆರೋಪಿಗಳಿಗೆ ಪ್ರತ್ಯೇಕ ವಿಚಾರಣೆ ನಡೆಸಲಾಯಿತು ಎಂದು ವಕೀಲರು ಹೇಳಿದ್ದಾರೆ. ಅಜ್ಮೀರ್‌ನ ಪ್ರಮುಖ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳನ್ನು ಫಾರ್ಮ್‌ಹೌಸ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Exit mobile version