ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli news) ನೇಹಾ ಹಿರೇಮಠ (Neha Hiremath murder) ಕೊಲೆ ಮಾದರಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಎಂಬಾಕೆಯನ್ನು ಚುಚ್ಚಿ ಸಾಯಿಸಿದ (Anjali Murder Case) ಆರೋಪಿ ಗಿರೀಶ್‌ನನ್ನು ಬಂಧಿಸಲಾಗಿದೆ. ಈತ ಮೂರು ದಿನಗಳಿಂದ ತಲೆ ತಪ್ಪಿಸಿಕೊಂಡು (Abscond) ಪರಾರಿಯಾಗಿದ್ದ.
ಆರೋಪಿಯನ್ನು ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೊಲೆಗಾರ ಗಿರೀಶ್‌ನನ್ನು ಸಾರ್ವಜನಿಕರು ಥಳಿಸಿದ್ದಾರೆ. ದಾವಣಗೆರೆಯಲ್ಲಿದ್ದ ಈತನನ್ನು ಬಂಧಿಸಲು ಪೊಲೀಸರು ತೆರಳಿದ್ದ ಸಂದರ್ಭ, ಸಾರ್ವಜನಿಕರು ರೊಚ್ಚಿಗೆದ್ದು ಹಂತಕ ಗಿರೀಶ್‌ನನ್ನು ಥಳಿಸಿದರು. ಗಾಯಗೊಂಡ ಗಿರೀಶ್‌ನನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಏನಿದು ಘಟನೆ?
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.
ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.
ಸ್ನೇಹಿತನೂ ಕೊಲೆ ಆರೋಪಿ
ಹಂತಕ ಗಿರೀಶ್‌ನ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು. ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.
ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.
ಸಾಫ್ಟ್‌ವೇರ್ ಎಂಜಿನಿಯರ್ ಪತ್ನಿಯ ಅನುಮಾನಾಸ್ಪದ ಸಾವು
ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್ ಎಂಜಿನಿಯರ್ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.
ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ
ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿದೆ. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.
ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.
ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.
ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ