Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ? - Vistara News

ಕ್ರೈಂ

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Assault Case: ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು (30) ಕೇಳಿದ್ದರು. ಇದಕ್ಕೆ ಕೆರಳಿದ 5 ಜನ ಪುಂಡರ ಗುಂಪು ಗೋವಿಂದರಾಜು ಬಳಿ ಜಗಳ ತೆಗೆದು ಹಲ್ಲೆ ನಡೆಸಿದೆ. ಕುಡಿದ ಮತ್ತಿನಲ್ಲಿದ್ದ ಪುಂಡರು ಮದ್ಯದ ಬಾಟಲಿಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

VISTARANEWS.COM


on

assault case koratagere
ಆರೋಪಿಗಳಾದ ಪುನೀತ್‌, ಭರತ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಗೃಹ ಸಚಿವ ಜಿ. ಪರಮೇಶ್ವರ್‌ (Home Minister G Parameshwara) ಅವರ ಸ್ವಕ್ಷೇತ್ರ ಕೊರಟಗೆರೆಯಲ್ಲಿ (Koratagere) ಪುಂಡರ ಹಾವಳಿ (hooliganism) ಮಿತಿಮೀರಿದ್ದು, ದಾರಿ ಬಿಡಿ ಎಂದು ಕೇಳಿದ್ದಕ್ಕೆ ಸೈನಿಕನ (Soldier) ಮೇಲೆಯೇ ಮಾರಣಾಂತಿಕ ಹಲ್ಲೆ (Assault case) ನಡೆಸಲಾಗಿದೆ. ಸದ್ಯ ಹಲ್ಲೆಗೀಡಾಗಿರುವ ಯೋಧ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.

ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು (30) ಕೇಳಿದ್ದರು. ಇದಕ್ಕೆ ಕೆರಳಿದ 5 ಜನ ಪುಂಡರ ಗುಂಪು ಗೋವಿಂದರಾಜು ಬಳಿ ಜಗಳ ತೆಗೆದು ಹಲ್ಲೆ ನಡೆಸಿದೆ. ಕುಡಿದ ಮತ್ತಿನಲ್ಲಿದ್ದ ಪುಂಡರು ಮದ್ಯದ ಬಾಟಲಿಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಕೋರರನ್ನು ಕೊರಟಗೆರೆ ತಾಲ್ಲೂಕಿನ ಅರಸಾಪುರದ ಭರತ್ (29), ಮಧುಗಿರಿ ತಾಲ್ಲೂಕಿನ ಕೊಡಗದಾಲದ ಪುನೀತ (32), ಹುಣಸವಾಡಿಯ ಗೌರಿಶಂಕರ (32), ಶಿವಾ (32), ಕೊಡಿಗೇನಹಳ್ಳಿ ಸಮೀಪದ ಭಟ್ಟಗೆರೆಯ ದಿಲೀಪ್ (35) ಎಂದು ಗುರುತಿಸಲಾಗಿದೆ. ಸದ್ಯ ಐವರ ವಿರುದ್ಧ ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ಹಾಗೂ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಗೋವಿಂದರಾಜು ಭಾರತೀಯ ಭೂಸೇನೆ ಸಿಪಾಯಿಯಾಗಿ ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಜೆಯ ಮೇಲೆ ತಮ್ಮ ಊರು ರಾಯವಾರಕ್ಕೆ ಬಂದಿದ್ದ ಗೋವಿಂದರಾಜು, ಕೆಲಸದ ನಿಮಿತ್ತ ಬೇರೇನಹಳ್ಳಿ ಕ್ರಾಸ್‌ಗೆ ಹೋಗಿದ್ದಾಗ ಘಟನೆ ನಡೆದಿದೆ. ಇತ್ತೀಚೆಗೆ ಭೈರೇನಹಳ್ಳಿ ಕ್ರಾಸ್ ಹಲವು ಕ್ರೈಂಗಳಿಗೆ ಸಾಕ್ಷಿಯಾಗಿದೆ. ಈ ಮುಂಚೆ ಕಾರ್‌ ಹಾರ್ನ್ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ‌ ಇರಿಯಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಗೃಹ ಸಚಿವ ಪರಮೇಶ್ವರ್ ಕಾರಿನ ಮೇಲೆ ಕಲ್ಲು ತೂರಲಾಗಿತ್ತು. ಈ ಸ್ಥಳದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ರೂ ಪೊಲೀಸರು ತಲೆ‌ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಪಾದಿಸಿದ್ದಾರೆ.

ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

ಹಾವೇರಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು ಸಂಭವಿಸಿದ್ದು, ತಿರುಪತಿಗೆ ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Actor Darshan: , ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

VISTARANEWS.COM


on

Actor Darshan case sanjana galrani Reaction about ramya statement
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.  ಈ ಕೊಲೆ ಕೇಸ್‌ನಲ್ಲಿ ದರ್ಶನ್‌ ಅವರು ಕೇಸ್‌ನಿಂದ ತಪ್ಪಿಸಿಕೊಳ್ಳಲು ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದರು. ಇದೀಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾರೆ ದರ್ಶನ್‌. ಈ ನಡುವೆ, ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟ ದರ್ಶನ್ ತೂಗುದೀಪ ಆರೋಪಿಯೇ ಹೊರತು ಅಪರಾಧಿ ಅಲ್ಲ ಎಂದಿದ್ದಾರೆ. ಜತೆಗೆ ರಮ್ಯಾ ಅವರ ಟ್ವಿಟರ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತಿನ ನಡುವೆ ತಾವು ಮೂರು ತಿಂಗಳು ಜೈಲಿನಲ್ಲಿದ್ದ ಅವಧಿಯನ್ನು ನೆನಪಿಸಿಕೊಂಡಿದ್ದಾರೆ.

ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

ಇನ್ನು ರಮ್ಯಾ ಅವರು ಗಲ್ಲು ಶಿಕ್ಷೆ ದರ್ಶನ್‌ ಅವರಿಗೆ ಆಗಬೇಕು ಎಂದು ಟ್ವೀಟ್‌ ಮಾಡಿದ್ದರು. ಈ ಬಗ್ಗೆ ಸಂಜನಾ ಅವರು ಪ್ರತಿಕ್ರಿಯೆ ನೀಡಿದ್ದು ಹೀಗೆ. ʻʻನೋಡಿ ಗಲ್ಲು ಶಿಕ್ಷೆ ಆಗಬೇಕು ಎಂದು ಹೇಳುವ ಅಧಿಕಾರ ಕೋರ್ಟ್‌ಗೆ ಇದೆ. ನನ್ನ ಉದಾಹರಣೆ ಕೊಡುತ್ತೇನೆ. ನಾನು ಡ್ರಗ್ಸ್‌ ಕೇಸ್‌ ವಿಚಾರವಾಗಿ ನನ್ನ ಕರೆದಾಗ ಏಕಾ ಏಕಿ ಅರೆಸ್ಟ್‌ ಮಾಡಿದ್ದರು. ಆಮೇಲೆ ಮೊಬೈಲ್‌ ತೆಗೆದುಕೊಂಡರು. ಆಮೇಲೆ ತುಂಬ ಕಷ್ಟ ಪಟ್ಟೆ. ಇನ್ನು ನ್ಯೂಸ್‌ನಲ್ಲಿ ನೋಡಿದಾಗ ಸಂಜನಾ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಬಂತು. ಇನ್ನು ಇಲ್ಲಿ ವಿಚಾರಣೆನೇ ಆಗಿಲ್ಲ. ಯಾವುದೇ ಹೇಳಿಕೆಯೇ ನೀಡಿಲ್ಲ. ಆಗಲೇ ತಪ್ಪು ಒಪ್ಪಿಕೊಂಡರು ಎಂದು ಮಾಧ್ಯಗಳಲ್ಲಿ ಬಂತು. ಡ್ರಗ್ಸ್‌ ದಂಧೆ ನಡೆಸುತ್ತಾರೆ ಎಂದೆಲ್ಲ ಹಬ್ಬಿತ್ತು. ಈ ತರ ರೂಮರ್ಸ್‌ವನ್ನು ಯಾರು ತಡಿಲಿಕ್ಕೆ ಆಗುತ್ತೆ. ನಮ್ಮ ವಕೀಲರು ಇನೋಸೆಂಟ್‌ ಅಂದರು ಯಾರು ಕ್ಯಾರ್‌ ಮಾಡಿಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

ʻʻಚಾರ್ಜ್‌ಶೀಟ್‌ವನ್ನು ಮೊದಲು ಗೌರವಿಸಬೇಕು. ಊಹಾಪೋಹಗಳು ನಿಜ ಅಲ್ಲ. ಇನ್ನು ದರ್ಶನ್‌ ಕೇಸ್‌ಗೆ ಸಂಬಂಧಪಟ್ಟಂತೆ ವಿಚಾರಣೆ ಇನ್ನೂ ನಡಯುತ್ತಿದೆ ಅಂದಿದ್ದಾರೆ. ಆದರೂ ಈ ಗಾಸಿಪ್‌ಗಳು ಯಾಕೆ ಅನ್ನೋದು ಗೊತ್ತಿಲ್ಲ. ಕೆಲವೊಂದು ಮಾಧ್ಯಮಗಳು ಟಿಆರ್‌ಪಿಗೋಸ್ಕರ ಏನೂ ಬೇಕಾದರು ಹಾಕುತ್ತಾರೆ. ದರ್ಶನ್‌ ಅವರು ಕೆಟ್ಟವರಲ್ಲʼʼಎಂದಿದ್ದಾರೆ.

ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Actor Darshan: ರೇಣುಕಾ ಸ್ವಾಮಿ ಸತ್ತ ಬಳಿಕ ಯಾರಿಗೂ ಕಾಣದಂತೆ ಶವ ಬಿಸಾಡುವ ಪ್ರಯತ್ನ ನಡೆಸಿದ್ದರು ಟೀಂ. ಆದರೆ ಆರೋಪಿಗಳಿಗೆ ಶವ ಬಿಸಾಡಲು ಸಾಕಷ್ಟು ಕನ್ಫ್ಯೂಷನ್ ಆಗಿತ್ತು. ಇದಕ್ಕೂ ಮುಂಚೆ ಸೋಮನಹಳ್ಳಿ ಬ್ರಿಡ್ಜ್ ಬಳಿ ಮೂರು ರೌಂಡ್ ಗಾಡಿಯಲ್ಲಿ ಸುತ್ತಿದ್ರು. ಬೇರೆ ಎಲ್ಲಾದ್ರೂ ಬಿಸಾಡಬಹುದಾ ನೋಡಿದ್ರು. ಕೊನೆಗೆ ದಾರಿ ಕಾಣದೆ ಮೋರಿಗೆ ಶವ ಹಾಕಿ ಎಸ್ಕೇಪ್ ಆದರು. ಅಲ್ಲಿ ಆದ ಎಡವಟ್ಟಿನಿಂದ ಶವ ಪತ್ತೆಯಾಗಿ ಆರೋಪಿಗಳು ಸಿಕ್ಕಿಬಿದ್ದರು.

VISTARANEWS.COM


on

Actor Darshan was careful at every step to escape from Renuka case
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.  ಈ ಕೊಲೆ ಕೇಸ್‌ನಲ್ಲಿ ದರ್ಶನ್‌ ಅವರು ಕೇಸ್‌ನಿಂದ ತಪ್ಪಿಸಿಕೊಳ್ಳಲು ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದರು. ಕೊಲೆಯಾದ ಬೆನ್ನಲ್ಲೇ ಕೇಸ್‌ನಲ್ಲಿ ತನ್ನ ಹೆಸರೇ ಬರಬರಾದು ಎಂದು ಎಚ್ಚರ ವಹಿಸಿದ್ದರು. ಅದಕ್ಕೆ ಎಂದು 70 ಲಕ್ಷ ರೂ. ಹೆಚ್ಚು ಹಣವನ್ನು ದರ್ಶನ್‌ ರೆಡಿ ಮಾಡಿಕೊಂಡಿದ್ದರು. ಶವ ಬಿಸಾಡುವುದು, ಯಾರೂ ದರ್ಶನ್ ವಿರುದ್ಧ ಸಾಕ್ಷಿಗಳು ಹೇಳದಂತೆ ಇರುವುದು ಹೀಗೆ ಅನೇಕ ಸಾಕ್ಷ್ಯಗಳನ್ನು ನಾಶ ಮಾಡಲು ದರ್ಶನ್‌ ಪ್ಲ್ಯಾನ್‌ ನಡೆಸಿದ್ದರು. ವಿನಯ್, ಪ್ರದೂಷ್‌ ಮೂಲಕ ಕೇಸ್ ತನ್ನವರೆಗೂ ಬರದಂತೆ ಹಣ ನೀಡಿ ಮುಚ್ಚಿ ಹಾಕಿಸಲು ಸಂಚು ಹೂಡಿದ್ದರು. ಹಾಗಾದ್ರೆ ದರ್ಶನ್ ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಏನೆಲ್ಲಾ ಪ್ಲಾನ್ ಮಾಡಿದ್ದರು ಎಂಬುದು ತಿಳಿಯಲು ಮುಂದೆ ಓದಿ.

ಮೊದಲ ಹಂತದಲ್ಲಿ ರೇಣುಕಾಸ್ವಾಮಿ ಶವ ಬಿಸಾಡೋದ್ರಲ್ಲಿ ನಡೆದಿತ್ತು ಪ್ಲ್ಯಾನ್‌!

ರೇಣುಕಾ ಸ್ವಾಮಿ ಸತ್ತ ಬಳಿಕ ಯಾರಿಗೂ ಕಾಣದಂತೆ ಶವ ಬಿಸಾಡುವ ಪ್ರಯತ್ನ ನಡೆಸಿದ್ದರು ಟೀಂ. ಆದರೆ ಆರೋಪಿಗಳಿಗೆ ಶವ ಬಿಸಾಡಲು ಸಾಕಷ್ಟು ಕನ್ಫ್ಯೂಷನ್ ಆಗಿತ್ತು. ಇದಕ್ಕೂ ಮುಂಚೆ ಸೋಮನಹಳ್ಳಿ ಬ್ರಿಡ್ಜ್ ಬಳಿ ಮೂರು ರೌಂಡ್ ಗಾಡಿಯಲ್ಲಿ ಸುತ್ತಿದ್ರು. ಬೇರೆ ಎಲ್ಲಾದ್ರೂ ಬಿಸಾಡಬಹುದಾ ನೋಡಿದ್ರು. ಕೊನೆಗೆ ದಾರಿ ಕಾಣದೆ ಮೋರಿಗೆ ಶವ ಹಾಕಿ ಎಸ್ಕೇಪ್ ಆದರು. ಅಲ್ಲಿ ಆದ ಎಡವಟ್ಟಿನಿಂದ ಶವ ಪತ್ತೆಯಾಗಿ ಆರೋಪಿಗಳು ಸಿಕ್ಕಿಬಿದ್ದರು.

ಗಿರಿನಗರದ ಮೂವರು ಬಳಿಕ ತಾವೇ ಕೊಲೆ ಮಾಡಿದ್ದೇವೆ ಎಂದು ಒಪ್ಪಿ ಶರಣಾದರು. ಹಣದ ವಿಚಾರವಾಗಿ ಕೊಲೆ ಮಾಡಿರುವುದಾಗಿ ಒಪ್ಪಿಗೆ ಕೂಡ ಸೂಚಿಸಿದರು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರಿಸಿದಾಗ ಅಸಲಿ ವಿಚಾರ ಬಯಲಿಗೆ ಬಂತು.

ಇದನ್ನೂ ಓದಿ: ‌Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸರು ವಶಪಡಿಸಿಕೊಂಡದ್ದೇನು?

ಸಾಕ್ಷ್ಯ ನಾಶ, ಹಣ ಹಂಚಿ ಎಲ್ಲವನ್ನೂ ಡಿಸ್ಪೋಸ್..!

ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮರ್ಡರ್‌ ಮಾಡಲಾಗಿತ್ತು. ಇಲ್ಲಿನ‌ ಸಾಕ್ಷ್ಯಗಳೇ ದರ್ಶನ್ ಅರೆಸ್ಟ್‌ ಮಾಡಲು ಸಹಾಯವಾಗಿದ್ದು. ಘಟನಾ ಸ್ಥಳದಲ್ಲಿ ದರ್ಶನ್ ಇದ್ದರು ಎನ್ನುವುದೇ ಮುಖ್ಯ ಅಂಶ. ಆದರೆ ಹತ್ಯೆಯಾದ ಸಂದರ್ಭದಲ್ಲಿ ತಾನಿದ್ದ ಬಗ್ಗೆ ಹೇಳ್ಬಾರ್ದು ಎಂದು ಶೆಡ್ ಸಿಬ್ಬಂದಿಗೆ ಹಣದ ಆಮೀಷ ಒಡ್ಡಿದ್ದರು ದರ್ಶನ್‌. ಈ ಬಗ್ಗೆ ಪೊಲೀಸರ ಮುಂದೆ ಶೆಡ್ ಮಾಲೀಕ ಜಯಣ್ಣ ಹೇಳಿಕೆ ನೀಡಿದ್ದಾರೆ.

ಗಣ್ಯ ವ್ಯಕ್ತಿಗಳ ಸಂಪರ್ಕ, ಸರ್ಕಾರಕ್ಕೆ ಒತ್ತಡ ಹಾಕಿಸುವ ಯತ್ನ..

ರಾಜಕೀಯ ಹಂತದಲ್ಲೂ ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ದರ್ಶನ್ ಪ್ಲಾನ್ ಮಾಡಿದ್ದರು.ಗಣ್ಯ ವ್ಯಕ್ತಿಗಳ ಸಂಪರ್ಕ ಮಾಡಿ ಮನವಿ ಕೂಡ ಮಾಡಿದ್ದರು. ಕೇಸ್‌ನಲ್ಲಿ ಅರೆಸ್ಟ್ ಮಾಡದಂತೆ ಹೇಳಲು ಒತ್ತಡ ಹಾಕಿದ್ದರು. ಆದರೆ ಮರ್ಡರ್ ಕೇಸ್ ಹಿನ್ನೆಲೆಯಲ್ಲಿ ಗಣ್ಯ ವ್ಯಕ್ತಿಗಳು ಸೈಲೆಂಟ್‌ ಆಗಿದ್ದಾರೆ. ಹೀಗೆ ಹಂತ ಹಂತದಲ್ಲಿಯೂ ತಾನು ತಪ್ಪಿಸಿಕೊಳ್ಳೋಕೆ ದರ್ಶನ್‌ ಪ್ಲಾನ್ ಮಾಡಿದ್ದು ತನಿಖೆ ವೇಳೆ ಗೊತ್ತಾಗಿದೆ.

ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Darshan Arrested: ಇದು ʻಸಪ್ತ ಶೆಡ್ಡಿನಾಚೆ SSE side ‘D’! ಟ್ರೋಲ್‌ ಆದ್ರು ದರ್ಶನ್‌-ಪವಿತ್ರಾ!

Darshan Arrested: ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿತ್ತು. ಅದರ ಮುಂದುವರಿದ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾದಲ್ಲಿ ಹೇಳಲಾಗಿತ್ತು. ರಕ್ಷಿತ್​ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್​ ಅವರ ಜೊತೆ ಈ ಬಾರಿ ಚೈತ್ರಾ ಆಚಾರ್​ ಕೂಡ ಸೇರಿಕೊಂಡಿದ್ದರು. ಈ ಸಿನಿಮಾದಲ್ಲಿ ಒಂದು ಸನ್ನಿವೇಶವಿದೆ. ಜೈಲಿನಲ್ಲಿ ನಾಯಕ ನಾಯಕಿ ದೂರವಾಗುವ ಒಂದು ಸನ್ನಿವೇಶ. ಇದೇ ಸನ್ನಿವೇಶ ಇಟ್ಟುಕೊಂಡು ಇದೀಗ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಟ್ರೋಲ್‌ ಮಾಡಲಾಗುತ್ತಿದೆ.

VISTARANEWS.COM


on

Darshan Arrested troll of pavithra darshan in SSE A
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನು ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿ ಒಟ್ಟು 11 ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ನ್ಯಾಯಾಲಯಕ್ಕೆ ಪೊಲೀಸರು ಎರಡು ರಿಮ್ಯಾಂಡ್‌ ಅರ್ಜಿಗಳನ್ನು ಸಲ್ಲಿಸಿದ ಕಾರಣ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಹಾಗೂ ನ್ಯಾಯಾಂಗ ಬಂಧನಕ್ಕೆ ವಹಿಸಿದೆ. ಇದರ ಬೆನ್ನಲ್ಲೇ, ಪವಿತ್ರಾ ಗೌಡ ಹಾಗೂ ದರ್ಶನ್‌ ಅವರನ್ನು ನೆಟ್ಟಿಗರು ಟ್ರೋಲ್‌ ಮಾಡಲು ಶುರು ಮಾಡಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿತ್ತು. ಅದರ ಮುಂದುವರಿದ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾದಲ್ಲಿ ಹೇಳಲಾಗಿತ್ತು. ರಕ್ಷಿತ್​ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್​ ಅವರ ಜೊತೆ ಈ ಬಾರಿ ಚೈತ್ರಾ ಆಚಾರ್​ ಕೂಡ ಸೇರಿಕೊಂಡಿದ್ದರು. ಈ ಸಿನಿಮಾದಲ್ಲಿ ಒಂದು ಸನ್ನಿವೇಶವಿದೆ. ಜೈಲಿನಲ್ಲಿ ನಾಯಕ ನಾಯಕಿ ದೂರವಾಗುವ ಒಂದು ಸನ್ನಿವೇಶ. ಇದೇ ಸನ್ನಿವೇಶ ಇಟ್ಟುಕೊಂಡು ಇದೀಗ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಟ್ರೋಲ್‌ ಮಾಡಲಾಗುತ್ತಿದೆ.

ʻಮನು ನನ್ನ ಸಮುದ್ರ ನೀನುʼ ಎಂಬ ಡೈಲಾಗ್‌ ಸಿನಿಮಾದಲ್ಲಿದೆ. ಇದೀಗ ʻಸಪ್ತ ಶೆಡ್ಡಿನಾಚೆʼ ಎಂದು ದರ್ಶನ್‌ ಹಾಗೂ ಪವಿತ್ರಾ ಕುರಿತು ಟ್ರೋಲ್‌ ಮಾಡುತ್ತಿದ್ದಾರೆ ನೆಟ್ಟಿಗರು. ಮಾತ್ರವಲ್ಲ AI ಬಳಸಿ ದರ್ಶನ್‌ ಹಾಗೂ ಪವಿತ್ರಾ ಫೋಟೊ ಕೂಡ ಎಡಿಟ್‌ ಮಾಡಲಾಗಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

ಈಗಾಗಲೇ ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗಿದೆ. ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ , ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ.

ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ನಿನ್ನೆ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ಹತ್ತು ಗಂಟೆಯ ಬಳಿಕ ನೀಡಲಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ದೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲೂ ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್‌ನಲ್ಲಿ ವಾಕಿಂಗ್ ಕೂಡ ಮಾಡಿದ್ದಾರೆ. ಜೈಲಿನ ಸಿಬ್ಬಂದಿ ನೀಡಿದ ಕಾಪಿಯನ್ನು ಪವಿತ್ರಾ ಕುಡಿದಿದ್ದಾರೆ. ಕಾಫಿ ಕುಡಿದು ಬಳಿಕ ನ್ಯೂಸ್ ಪೇಪರ್ ಓದಿದ್ದರು ಪವಿತ್ರಾ.

ಇನ್ನು ನಿನ್ನೆ ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು.

Continue Reading

ಕ್ರೈಂ

Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

Pavithra Gowda: ನಿನ್ನೆ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ಹತ್ತು ಗಂಟೆಯ ಬಳಿಕ ನೀಡಲಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ದೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲೂ ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ.

VISTARANEWS.COM


on

Pavithra Gowda is restless without proper food and sleep in Parappa Agrahara
Koo

ಬೆಂಗಳೂರು: ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ಪವಿತ್ರಾಗೌಡಗೆ ಜೈಲಿನಲ್ಲೂ ಡಿ ಬ್ಯಾರಕ್ ಕೊಠಡಿ ನೀಡಲಾಗಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್‌ಗೆ ಶಿಫ್ಟ್ ಆಗಿದ್ದಾರೆ. ನಿನ್ನೇ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ಹತ್ತು ಗಂಟೆಯ ಬಳಿಕ ನೀಡಲಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ದೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲೂ ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್‌ನಲ್ಲಿ ವಾಕಿಂಗ್ ಕೂಡ ಮಾಡಿದ್ದಾರೆ. ಜೈಲಿನ ಸಿಬ್ಬಂದಿ ನೀಡಿದ ಕಾಪಿಯನ್ನು ಪವಿತ್ರಾ ಕುಡಿದಿದ್ದಾರೆ. ಕಾಫಿ ಕುಡಿದು ಬಳಿಕ ನ್ಯೂಸ್ ಪೇಪರ್ ಓದಿದ್ದರು ಪವಿತ್ರಾ.

ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಳ ಸಮಪಾಲು- ಸಮಬಾಳು ಪಾಲಿಸಿ! ದರ್ಶನ್ ಪತ್ನಿ ಬಳಿ ಇರುವುದೆಲ್ಲ ಇವಳಿಗೂ ಬೇಕಿತ್ತು!

ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ ಜೈಲು ಸಿಬ್ಬಂದಿ. ಇಂದು ಡಿ-ಗ್ಯಾಂಗ್ ಪಟಾಲಂ. ಜೈಲೂಟ ಸವಿಯಲಿದೆ. ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ಕುಟುಂಬಸ್ಥರು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪವಿತ್ರಾ ಗೌಡ ಮಗಳು ಮತ್ತು ತಾಯಿ ಭೇಟಿಯಾಗುವ ಸಾಧ್ಯತೆ ಇದೆ.

ಇನ್ನು ನಿನ್ನೆ ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು.

Continue Reading
Advertisement
IRCTC Ticket Booking
Latest9 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest12 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ17 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್45 mins ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ52 mins ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ1 hour ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

pm narendra modi international yoga day 2024
ಪ್ರಮುಖ ಸುದ್ದಿ2 hours ago

International Yoga Day 2024: ಯೋಗ ದಿನಚರಿಯ ಭಾಗವಾಗಲಿ: ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

Darshan Arrested troll of pavithra darshan in SSE A
ಸ್ಯಾಂಡಲ್ ವುಡ್2 hours ago

Darshan Arrested: ಇದು ʻಸಪ್ತ ಶೆಡ್ಡಿನಾಚೆ SSE side ‘D’! ಟ್ರೋಲ್‌ ಆದ್ರು ದರ್ಶನ್‌-ಪವಿತ್ರಾ!

Pavithra Gowda is restless without proper food and sleep in Parappa Agrahara
ಕ್ರೈಂ2 hours ago

Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌