Site icon Vistara News

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

assault case koratagere

ತುಮಕೂರು: ಗೃಹ ಸಚಿವ ಜಿ. ಪರಮೇಶ್ವರ್‌ (Home Minister G Parameshwara) ಅವರ ಸ್ವಕ್ಷೇತ್ರ ಕೊರಟಗೆರೆಯಲ್ಲಿ (Koratagere) ಪುಂಡರ ಹಾವಳಿ (hooliganism) ಮಿತಿಮೀರಿದ್ದು, ದಾರಿ ಬಿಡಿ ಎಂದು ಕೇಳಿದ್ದಕ್ಕೆ ಸೈನಿಕನ (Soldier) ಮೇಲೆಯೇ ಮಾರಣಾಂತಿಕ ಹಲ್ಲೆ (Assault case) ನಡೆಸಲಾಗಿದೆ. ಸದ್ಯ ಹಲ್ಲೆಗೀಡಾಗಿರುವ ಯೋಧ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.

ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೈರೇನಹಳ್ಳಿ ಕ್ರಾಸ್ ಬಳಿ ದಾರಿಗೆ ಅಡ್ಡಲಾಗಿ ನಿಂತವರನ್ನು ದಾರಿ ಬಿಡಿ ಎಂದು ಯೋಧ ಗೋವಿಂದರಾಜು (30) ಕೇಳಿದ್ದರು. ಇದಕ್ಕೆ ಕೆರಳಿದ 5 ಜನ ಪುಂಡರ ಗುಂಪು ಗೋವಿಂದರಾಜು ಬಳಿ ಜಗಳ ತೆಗೆದು ಹಲ್ಲೆ ನಡೆಸಿದೆ. ಕುಡಿದ ಮತ್ತಿನಲ್ಲಿದ್ದ ಪುಂಡರು ಮದ್ಯದ ಬಾಟಲಿಗಳಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಕೋರರನ್ನು ಕೊರಟಗೆರೆ ತಾಲ್ಲೂಕಿನ ಅರಸಾಪುರದ ಭರತ್ (29), ಮಧುಗಿರಿ ತಾಲ್ಲೂಕಿನ ಕೊಡಗದಾಲದ ಪುನೀತ (32), ಹುಣಸವಾಡಿಯ ಗೌರಿಶಂಕರ (32), ಶಿವಾ (32), ಕೊಡಿಗೇನಹಳ್ಳಿ ಸಮೀಪದ ಭಟ್ಟಗೆರೆಯ ದಿಲೀಪ್ (35) ಎಂದು ಗುರುತಿಸಲಾಗಿದೆ. ಸದ್ಯ ಐವರ ವಿರುದ್ಧ ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ಹಾಗೂ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಗೋವಿಂದರಾಜು ಭಾರತೀಯ ಭೂಸೇನೆ ಸಿಪಾಯಿಯಾಗಿ ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಜೆಯ ಮೇಲೆ ತಮ್ಮ ಊರು ರಾಯವಾರಕ್ಕೆ ಬಂದಿದ್ದ ಗೋವಿಂದರಾಜು, ಕೆಲಸದ ನಿಮಿತ್ತ ಬೇರೇನಹಳ್ಳಿ ಕ್ರಾಸ್‌ಗೆ ಹೋಗಿದ್ದಾಗ ಘಟನೆ ನಡೆದಿದೆ. ಇತ್ತೀಚೆಗೆ ಭೈರೇನಹಳ್ಳಿ ಕ್ರಾಸ್ ಹಲವು ಕ್ರೈಂಗಳಿಗೆ ಸಾಕ್ಷಿಯಾಗಿದೆ. ಈ ಮುಂಚೆ ಕಾರ್‌ ಹಾರ್ನ್ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ‌ ಇರಿಯಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಗೃಹ ಸಚಿವ ಪರಮೇಶ್ವರ್ ಕಾರಿನ ಮೇಲೆ ಕಲ್ಲು ತೂರಲಾಗಿತ್ತು. ಈ ಸ್ಥಳದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ರೂ ಪೊಲೀಸರು ತಲೆ‌ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಪಾದಿಸಿದ್ದಾರೆ.

ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

ಹಾವೇರಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು ಸಂಭವಿಸಿದ್ದು, ತಿರುಪತಿಗೆ ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Exit mobile version