Site icon Vistara News

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

assault Case

ಬೆಂಗಳೂರು/ಚಿಕ್ಕಬಳ್ಳಾಪುರ: ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಮಲತಂದೆ ದೌರ್ಜನ್ಯ (Assault Case) ನಡೆಸಿದ್ದಾನೆ. ಮಹಿಳೆಯ ಮೂರನೇ ಗಂಡನ ವಿಕೃತಿ ಅದ್ಯಾವ ಪರಿ ಇದೆ ಎಂದರೆ ಮಗುವಿನ ಗುಪ್ತಾಂಗ ಕಚ್ಚಿ, ಸಿಗರೇಟ್‌ನಿಂದ ಸುಟ್ಟು ಮೃಗೀಯ ರೀತಿ ವರ್ತಿಸಿದ್ದಾನೆ.

ಗೌರಿಬಿದನೂರಿನಲ್ಲಿ ಮಲತಂದೆಯೊಬ್ಬ ಅಟ್ಟಹಾಸ ತೋರಿದ್ದಾನೆ. ಜರೀನಾ ತಾಜ್‌ ಎಂಬಾಕೆ ಒಟ್ಟು ಮೂರು ಮದುವೆ ಆಗಿದ್ದು, ಅದರಲ್ಲಿ ಎರಡನೇ ಗಂಡನ ಮಗುವಿಗೆ ಮೂರನೇ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಅಜ್ಮಂತ್‌ ಎಂಬಾತ ಮಗುವಿಗಷ್ಟೇ ಅಲ್ಲದೇ ಪತ್ನಿ ಮೇಲೂ ಹಲ್ಲೆ ನಡೆಸಿದ್ದಾನೆ.

ಮೂರು ವರ್ಷದ ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು, ಮಗುವಿನ ಗುಪ್ತಾಂಗ ಕಚ್ಚಿ, ಮನಬಂದಂತೆ ಥಳಿಸಿದ್ದಾನೆ. 15 ವರ್ಷದ ಮತ್ತೊಬ್ಬ ಮಗಳ ಕೈ ಮುರಿದು ವಿಕೃತಿ ಮೆರೆದಿದ್ದಾನೆ.

ಜರೀನಾ ತಾಜ್‌ಗೆ ಮೂರು ಮದುವೆಯಾಗಿದ್ದು, ಮೊದಲ ಪತಿಯಿಂದ 2 ಹೆಣ್ಮಕ್ಕಳು ಆಗಿದ್ದವು. 2ನೇ ಪತಿಯಿಂದ ಮತ್ತೊಂದು ಹೆಣ್ಣು ಮಗು ಜನಿಸಿತ್ತು. ಇಬ್ಬರು ಗಂಡಂದಿರನ್ನು ತೊರೆದಿದ್ದ ಜರೀನಾ ಅಜ್ಮಂತ್‌ ಜತೆಗೆ ಮೂರನೇ ಮದುವೆಯಾಗಿದ್ದಳು. ಎರಡನೇ ಪತಿಯಿಂದ ಜನಿಸಿದ್ದ ಹೆಣ್ಣು ಮಗುವಿನ ಮೇಲೆ ಅಜ್ಮಂತ್‌ ಕಿರುಕುಳ ನೀಡಿದ್ದಾನೆ.

ತೀವ್ರ ಗಾಯಗೊಂಡಿರುವ ಮೂರು ವರ್ಷದ ಮಗುವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ತಂದೆಯ ವಿಕೃತಿಯಿಂದ ಪುತ್ರಿ ಶಾಕ್‌ಗೆಗೊಳಗಾಗಿದ್ದಾಳೆ. ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

ಪುಣೆ : ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳು ಈಗ ಹೆಚ್ಚು ಟ್ರೆಂಡ್ ಆಗುತ್ತಿದೆ. ಹಾಗಾಗಿ ಯುವಕ-ಯುವತಿಯರು ತಮ್ಮ ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ಹಾಗೂ ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಅನೇಕರು ಸಾವನಪ್ಪಿರುವುದು, ಗಾಯಗೊಂಡಿರುವುದು ನಾವು ಆಗಾಗ ನೋಡಿದ್ದೇವೆ. ಆದರೂ ಜನರಿಗೆ ರೀಲ್ಸ್ ಹುಚ್ಚು ಬಿಡುವುದಿಲ್ಲ. ಇದೀಗ ಪುಣೆಯಲ್ಲಿ ಹುಡುಗಿಯೊಬ್ಬಳು, ಹುಡುಗನೊಬ್ಬನ ಕೈಯನ್ನು ಹಿಡಿದುಕೊಂಡು ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಿರುವ ವಿಡಿಯೊ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಹುಡುಗನೊಬ್ಬ ಕಟ್ಟಡದ ತುದಿಯಲ್ಲಿ ಮಲಗಿದ್ದಾನೆ. ಹುಡುಗಿ ಆತನ ಕೈಯನ್ನು ಹಿಡಿದುಕೊಂಡು ಕಟ್ಟದಿಂದ ಇಳಿಯುತ್ತಿರುವುದನ್ನು ಕಾಣಬಹುದು. ಇನ್ನೊಂದು ಬದಿಯಲ್ಲಿ ಆಕೆಯ ಸ್ನೇಹಿತರು ವಿವಿಧ ಆ್ಯಂಗಲ್ ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೊವನ್ನು ಪುಣೆಯ ಜಂಬುಲ್ವಾಡಿ ಸ್ವಾಮಿನಾರಾಯಣ ಮಂದಿರದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ತೆಗೆಯಲಾಗಿದೆ. ಜೂನ್ 19ರಂದು ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಇದಕ್ಕೆ 55,000ಕ್ಕೂ ಹೆಚ್ಚು ವೀವ್ಸ್ ಸಿಕ್ಕಿದೆ ಮತ್ತು ಅನೇಕರು ಅವರ ಮೂರ್ಖತನಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯೊಬ್ಬರು ಈ ವಿಡಿಯೊವನ್ನು ಪುಣೆ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಹಲವಾರು ಘಟನೆಗಳು ವರದಿಯಾದ ಮೇಲೂ ಇಂತಹ ಬೇಜವಾಬ್ದಾರಿ ಕೆಲಸ ನಿಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯ. ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ತನ್ನ ಕುಟುಂಬವನ್ನು ಜೀವನಪರ್ಯಂತ ನರಳುವಂತೆ ಮಾಡುವ ಮನೋಭಾವ ಇದು ಎಂದು ಮತ್ತೊಬ್ಬ ಬಳಕೆದಾರರು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version