ಬಾಗಲಕೋಟೆ: ಬಾಗಲಕೋಟೆ (Bagalakote news) ನಗರದಲ್ಲಿ ಹಿಂದೂ ಯುವಕ- ಮುಸ್ಲಿಂ ಯುವತಿ ಮದುವೆಯಾದ ಪ್ರಕರಣದಲ್ಲಿ ಪೊಲೀಸರ ರಕ್ಷಣೆ ಬಯಸಿ ಠಾಣೆಗೆ ಬಂದವರ ಮೇಲೆ ಅವಾಚ್ಯ ಪದ ಬಳಸಿದ ಸಿಪಿಐ ನಡತೆಯಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು (hindu activists) ಪ್ರತಿಭಟನೆ (Bagalakote Unrest) ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ (Lathi charge) ಮಾಡಿದ್ದು, ಕಿಡಿಗೇಡಿಗಳು ಕಲ್ಲು ತೂರಾಟ (Stone pelting) ನಡೆಸಿದ್ದಾರೆ.
ಬಾದಾಮಿ ಮೂಲದ ರುಬಿನಾ ಹಾಗೂ ಮಹಾಂತೇಶ್ ಎಂಬಿಬ್ಬರು ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದು, ರಕ್ಷಣೆ ಕೋರಿ ನವದಂಪತಿ ಬಾಗಲಕೋಟೆ ಎಸ್‌ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಹಿಂದೂ ಕಾರ್ಯಕರ್ತರು, ಯುವತಿ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಎಸ್‌ಪಿ ಕಚೇರಿಗೆ ಬಂದಾಗ ಪೊಲೀಸರಿಗೆ ರಕ್ಷಣೆಗೆ ಸ್ಪಂದನ ಸಿಕ್ಕಿರಲಿಲ್ಲ. ಇದೇ ವೇಳೆ ಸಿಪಿಐ ಆರ್.ಎಸ್.ಬಿರಾದಾರ ಎಂಬವರು ಅವಾಚ್ಯ ಪದ ಬಳಸಿ ಹಿಂದೂ ಕಾರ್ಯಕರ್ತರಿಗೆ ಬೈದಿದ್ದರು ಎಂದು ಆರೋಪಿಸಲಾಗಿದೆ.
ಆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಹಿಂಜಾವೇ ಮುಖಂಡರು ಹಾಗೂ ಕಾರ್ಯಕರ್ತರು ಸಿಪಿಐ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ, ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಯುವಾಗ ಪೊಲೀಸರ ಜೊತೆ ವಾಗ್ವಾದ ನಡೆಯಿತು. ಇದೇ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ ಎನ್ನಲಾಗಿದೆ. ಕಲ್ಲು ತೂರುತ್ತಿದ್ದಂತೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಹಿಂದು ಜಾಗರಣ ವೇದಿಕೆ ಮುಖಂಡರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ.
ಈ ಹಿನ್ನೆಲೆ ಹಿಂದೂ ಸಂಘಟನೆಗಳ ಮನೋಜ್, ಕುಮಾರಸ್ವಾಮಿ ಮತ್ತು ವಿಕ್ರಮ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಭೇಟಿ ನೀಡಿದ್ದಾರೆ. ಎಸ್‌ಪಿ ಜೊತೆ ಚರಂತಿಮಠ ಮಾತುಕತೆ ನಡೆಸಿದ್ದು, ಸಿಪಿಐ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ. ಅದಕ್ಕೆ ಎಸ್‌ಪಿ ಅಮರನಾಥ್ ರೆಡ್ಡಿ ಒಪ್ಪಿದ್ದಾರೆ. ಈ ಕುರಿತು ವೀರಣ್ಣ ಚರಂತಿಮಠ ಇಂದು ಹಿಂದೂ ಪರ ಸಂಘಟನೆಗಳ ಸಭೆ ಕರೆದಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾದ ಹಿನ್ನಲೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: Prajwal Revanna Case: ಎಚ್.ಡಿ ರೇವಣ್ಣ ಈಗ ಕೈದಿ ನಂಬರ್ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ