Site icon Vistara News

Bihar : ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಬಸ್ಸಿನಿಂದ ಹಾರಿದ ಮಹಿಳೆ

Man arrested for attempting to rape 5-year-old girl

Man arrested for attempting to rape 5-year-old girl

ಪಾಟ್ನಾ: ಬಸ್ಸಿನಲ್ಲಿ ಪುರುಷರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯು ಚಲಿಸುತ್ತಿದ್ದ ಬಸ್ಸಿನಿಂದ ಹಾರಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಯತ್ನಿಸಿದ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

ಇದನ್ನೂ ಓದಿ: Supreme Court | ಬಿಹಾರ ಜಾತಿ ಗಣತಿ ಪ್ರಶ್ನಿಸಿದ್ದ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪುರ್ನಿಯಾ ನಗರದಲ್ಲಿ ಮಂಗಳವಾರ ಮಧ್ಯ ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದೆ. ಮಹಿಳೆಯು ವೈಶಾಲಿಯಿಂದ ಸಿಲಿಗುರಿ ಕಡೆಗೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಆಗ ಬಸ್ಸಿನಲ್ಲಿದ್ದ ಕೆಲವರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕ ಯತ್ನಿಸಿದ್ದಾರೆ. ಮಹಿಳೆಯು ತನ್ನನ್ನು ರಕ್ಷಿಸಿಕೊಳ್ಳುವ ಸಲುವಾಗಿ ಚಲಿಸುತ್ತಿದ್ದ ಬಸ್ಸಿನಿಂದಲೇ ಹಾರಿದ್ದಾಳೆ. ಕೆಳಗೆ ಬಿದ್ದ ಆಕೆಗೆ ಗಂಭೀರ ಗಾಯಗಳಾಗಿವೆ.

ಕೆಳಗೆ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಚಾರವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Child Marriage: ಅತ್ಯಾಚಾರ ಎಸಗಿದವನ ಜತೆಗೇ 16 ವರ್ಷದ ಬಾಲಕಿಯ ಮದುವೆ, ಮೂವರ ಬಂಧನ

ಈ ಹಿಂದೆ 2012ರಲ್ಲಿ ದೆಹಲಿಯಲ್ಲಿ ರಾತ್ರಿ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ಆಕೆಯ ಪ್ರಿಯತಮನ ಎದುರಲ್ಲೇ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಆ ನಿರ್ಭಯ ಪ್ರಕರಣ ಇಡೀ ದೇಶದಲ್ಲೇ ಭಾರೀ ಸುದ್ದಿಯಾಗಿತ್ತು.

Exit mobile version