Brutal Murder: ಮುಂಬಯಿ ಯುವತಿಯನ್ನು ಬರ್ಬರವಾಗಿ ಕೊಂದ ಪಾತಕಿ ದಾವೂದ್ ಯಾದಗಿರಿಯಲ್ಲಿ ಆರೆಸ್ಟ್‌ - Vistara News

ಕ್ರೈಂ

Brutal Murder: ಮುಂಬಯಿ ಯುವತಿಯನ್ನು ಬರ್ಬರವಾಗಿ ಕೊಂದ ಪಾತಕಿ ದಾವೂದ್ ಯಾದಗಿರಿಯಲ್ಲಿ ಆರೆಸ್ಟ್‌

Brutal Murder: 2019ರಲ್ಲಿಯೇ ಅಪ್ರಾಪ್ತ ವಯಸ್ಸಿನವನಾಗಿದ್ದಾಗಲೇ ಯಶಶ್ರೀಗೆ ಕಿರುಕುಳ ನೀಡಿದ ಆರೋಪ ಈತನ ಮೇಲಿದೆ. ಆತನನ್ನು ಆಗಲೇ ಬಂಧಿಸಲಾಗಿತ್ತು. ಕೊಲೆ ಕೃತ್ಯದ ಸಂದರ್ಭದಲ್ಲಿ ದಾವೂದ್‌ ಆ ಸ್ಥಳದಲ್ಲಿ ಇದ್ದ ಎಂಬುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ.

VISTARANEWS.COM


on

brutal murder dawood
ಕೊಲೆಯಾದ ಯಶಶ್ರೀ, ಆರೋಪಿ ದಾವೂದ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ನವಿ ಮುಂಬಯಿಯಲ್ಲಿ (Mumbai murder) ಯುವತಿಯೊಬ್ಬಳನ್ನು ಬರ್ಬರವಾಗಿ ಕೊಂದುಹಾಕಿ (Brutal Murder) ಪರಾರಿಯಾಗಿದ್ದ ಕರ್ನಾಟಕದ ಆರೋಪಿ ದಾವೂದ್‌, ಯಾದಗಿರಿಯಲ್ಲಿ (Yadgir news) ಸಿಕ್ಕಿಬಿದ್ದಿದ್ದಾನೆ. ಮುಂಬಯಿ ಪೊಲೀಸರು (Mumbai Police) ಬಂಧಿಸಿ ಈತನನ್ನು ತನಿಖೆಗಾಗಿ ಕರೆದೊಯ್ದಿದ್ದಾರೆ.

ಕೊಲೆ ಮಾಡಿ ಬಂದು ಯಾದಗಿರಿಯ ಶಹಾಪುರ ತಾಲೂಕಿನ ಆಲ್ದಾಳ ಗ್ರಾಮದಲ್ಲಿ ತನ್ನ ಅಜ್ಜಿ ಮನೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ದಾವೂದ್‌ನನ್ನು ಸೆರೆಹಿಡಿಯಲಾಗಿದೆ. ಈತ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಂಗರಗಾ ಗ್ರಾಮದ ನಿವಾಸಿ. ಜುಲೈ 27ರಂದು ಈತ ಮುಂಬಯಿಯಲ್ಲಿ 25 ವರ್ಷದ ಯಶಶ್ರೀ ಎಂಬ ಯುವತಿಯನ್ನು ಕೊಂದಿದ್ದ.

ಯಶಶ್ರೀಯನ್ನು ಪ್ರೀತಿಸುತ್ತಿದ್ದ ಆರೋಪಿ ದಾವೂದ್, ಬೆಂಗಳೂರಿನಲ್ಲಿ ಕೂಲಿ‌ ಕೆಲಸ ಮಾಡಿಕೊಂಡಿದ್ದ. ಫೇಸ್‌ಬುಕ್ ಮೂಲಕ ಪರಿಚಯವಾಗಿ ಬಳಿಕ ಇಬ್ಬರೂ ಪ್ರೀತಿಸುತ್ತಿದ್ದರು. ನಂತರ ಈತ ಮುಂಬಯಿಯಲ್ಲಿ ಕೆಲ ಕಾಲ ವಾಸವಿದ್ದ. 2019ರಲ್ಲಿಯೇ ಅಪ್ರಾಪ್ತ ವಯಸ್ಸಿನವನಾಗಿದ್ದಾಗಲೇ ಯಶಶ್ರೀಗೆ ಕಿರುಕುಳ ನೀಡಿದ ಆರೋಪ ಈತನ ಮೇಲಿದೆ. ಆತನನ್ನು ಆಗಲೇ ಬಂಧಿಸಲಾಗಿತ್ತು. ಜೈಲಿನಿಂದ ಹೊರಬಂದ ನಂತರ ಅವನು ಕರ್ನಾಟಕದ ತನ್ನ ಊರಿಗೆ ಬಂದಿದ್ದ.

ಆದರೆ ಯಶಶ್ರೀಗೆ ಫೋನ್‌ ಮಾಡಿ ಕಿರುಕುಳ ನೀಡುತ್ತಿದ್ದುದನ್ನು ಪತ್ತೆ ಹಚ್ಚಲಾಗಿದೆ. ಇದೀಗ ಮತ್ತೆ ಮುಂಬಯಿಗೆ ಹೋಗಿ ಕೊಲೆ ಮಾಡಿರುವ ಆರೋಪಿಯ ಪತ್ತೆ ಕಾರ್ಯಕ್ಕೆ ಮುಂಬೈ ಅರ್ಬನ್‌ ಠಾಣೆ ಪೊಲೀಸರು ನಾಲ್ಕು ತಂಡ ರಚಿಸಿದ್ದರು. ಒಂದು ತಂಡ ಯಾದಗಿರಿಗೆ ಆಗಮಿಸಿ ನಿನ್ನೆ ರಾತ್ರೋರಾತ್ರಿ ಆರೋಪಿಯ ಪತ್ತೆ ಹಚ್ಚಿ ಬಂಧಿಸಿದೆ.

ಹತ್ಯೆ ಪ್ರಕರಣದ ವಿವರ

ಕಳೆದ ಎರಡು ದಿನಗಳಿಂದ ನಿಗೂಢವಾಗಿ ಕಾಣೆಯಾಗಿದ್ದ ಯುವತಿಯ ಮೃತದೇಹ ರಕ್ತದ ಮಡುವಿನಲ್ಲಿ ನಿನ್ನೆ ನವೀ ಮುಂಬೈನಲ್ಲಿ ಪತ್ತೆಯಾಗಿತ್ತು. ಅದನ್ನು ಬೀದಿನಾಯಿಗಳು ತಿಂದುಹಾಕಿದ್ದವು. ಮೃತ ಯುವತಿಯನ್ನು 22 ವರ್ಷದ ಯಶಶ್ರೀ (Yashashree) ಎಂದು ಗುರುತಿಸಲಾಗಿತ್ತು. ಆಕೆಯ ಜನನಾಂಗ ಮತ್ತು ಎದೆಯ ಭಾಗ ಸೇರಿದಂತೆ ಖಾಸಗಿ ಭಾಗಗಳನ್ನು ಬರ್ಬರವಾಗಿ ಇರಿಯಲಾಗಿತ್ತು

ಶುಕ್ರವಾರ (ಜುಲೈ 26) ರಾತ್ರಿ ಮಹಿಳೆಯ ಮೃತದೇಹ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ಅದನ್ನು ತಿನ್ನುತ್ತಿವೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹವು ಆಕೆಯ ಎದೆ, ಸೊಂಟ, ಬೆನ್ನು ಮತ್ತು ಆಕೆಯ ಖಾಸಗಿ ಭಾಗಗಳಲ್ಲಿ ಹಲವಾರು ಇರಿತದ ಗಾಯಗಳನ್ನು ಹೊಂದಿದೆ ಎಂದು ವರದಿಯಾಗಿದೆ. ಆಕೆಯ ಮೂಳೆಗಳು ಮುರಿದಿವೆ ಎಂದು ಪೊಲೀಸರು ಹೇಳಿದ್ದಾರೆ.

ದಾವೂದ್ ಶೇಖ್ ಎಂಬಾತ ಆಕೆಯನ್ನು ಕೊಂದಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ದಾವೂದ್ 2019ರಲ್ಲಿ ಅಪ್ರಾಪ್ತ ವಯಸ್ಸಿನವನಾಗಿದ್ದಾಗ ಯಶಶ್ರೀಗೆ ಕಿರುಕುಳ ನೀಡಿದ ಆರೋಪದ ಮೇಲೆ ಈ ಹಿಂದೆ ಬಂಧಿಸಲಾಗಿತ್ತು. ಜೈಲಿನಿಂದ ಹೊರಬಂದ ನಂತರ ಅವನು ಊರಿಗೆ ಹೋಗಿದ್ದ. ಆದಾಗ್ಯೂ, ಕರೆ ದಾಖಲೆಗಳು ಆರೋಪಿಯೊಂದಿಗೆ ಹಲವಾರು ಗಂಟೆಗಳ ಕಾಲ ಮಾತನಾಡುತ್ತಿದ್ದಳು ಎಂದು ಸೂಚಿಸಿದೆ. ಕೊಲೆ ಕೃತ್ಯದ ಸಂದರ್ಭದಲ್ಲಿ ದಾವೂದ್‌ ಆ ಸ್ಥಳದಲ್ಲಿ ಇದ್ದ ಎಂಬುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ.

ಜುಲೈ 25 ರಂದು (ಗುರುವಾರ) ಯಶಶ್ರಿ ಶಿಂಧೆ ನಾಪತ್ತೆಯ ಬಗ್ಗೆ ಮೂಲತಃ ಆಕೆಯ ಪೋಷಕರು ಪ್ರಕರಣವನ್ನು ದಾಖಲಿಸಿದ್ದರು. ಆದರೆ, ಎರಡು ದಿನಗಳ ಬಳಿಕ ಶನಿವಾರ ಆಕೆಯ ಶವ ಅತ್ಯಂತ ಭೀಕರ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ದೇಹದ ಮೇಲೆ ಹಲವಾರು ಗಾಯದ ಗುರುತುಗಳು ವರದಿಯಾಗಿವೆ. ಆಕೆಯ ಭುಜದ ಮಾಂಸವನ್ನೂ ತಿಂದು ಹಾಕಿದ್ದ ಬೀದಿನಾಯಿಗಳು ಆಕೆಯ ಮುಖವನ್ನೂ ವಿರೂಪಗೊಳಿಸಿವೆ. ಅವಳ ಬಟ್ಟೆ ಮತ್ತು ಆಕೆಯ ಮೈಮೇಲಿದ್ದ ಟ್ಯಾಟೂ ಸಹಾಯದಿಂದ ಆಕೆಯ ಗುರುತು ಪತ್ತೆ ಹಚ್ಚಲಾಯಿತು.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

Nawab Malik: ನವಾಬ್‌ ಮಲಿಕ್‌ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಜಾಮೀನು ಸಿಕ್ಕರೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಮಲಿಕ್ ಪರ ವಕೀಲರು ವಾದ ಮಂಡಿಸಿದರು. ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಮಲ್ಲಿಕ್‌ಗೆ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

VISTARANEWS.COM


on

Nawab Malik
Koo

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್(Nawab Malik) ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್(Supreme Court) ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಇದ್ದ ನ್ಯಾಯಪೀಠ ಮಲಿಕ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ.

ನವಾಬ್‌ ಮಲಿಕ್‌ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಜಾಮೀನು ಸಿಕ್ಕರೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಮಲಿಕ್ ಪರ ವಕೀಲರು ವಾದ ಮಂಡಿಸಿದರು. ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಮಲ್ಲಿಕ್‌ಗೆ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನು ಮಂಜೂರಾತಿಗೆ ವಿರೋಧ ವ್ಯಕ್ತಪಡಿಸಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನನ್ನು ಕಾಯಂಗೊಳಿಸಬಹುದು ಎಂದರು.

ದಾವೂದ್‌ ಇಬ್ರಾಹಿಂ ಜೊತೆ ಲಿಂಕ್

ಪರಾರಿಯಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಫೆಬ್ರವರಿ 2022 ರಲ್ಲಿ ಇಡಿ ಮಲಿಕ್ ಅವರನ್ನು ಬಂಧಿಸಿತ್ತು.‌ ಮಲಿಕ್ ಅವರು ವಿವಿಧ ಕಾಯಿಲೆಗಳಲ್ಲದೆ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪರಿಹಾರ ಕೋರಿದ್ದರು. ಅರ್ಹತೆಯ ಮೇರೆಗೆ ಜಾಮೀನು ಸಹ ಕೋರಿದ್ದರು.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಮತ್ತು ಭೂಗತ ದೊರೆ ಭಯೋತ್ಪಾದಕ ಇಬ್ರಾಹಿಂ ಮತ್ತು ಅವನ ಸಹಚರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿದ ಎಫ್‌ಐಆರ್ ಆಧರಿಸಿ ಮಲಿಕ್ ವಿರುದ್ಧ ಇಡಿ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

Continue Reading

ತುಮಕೂರು

Road Accident : ತುಮಕೂರಿನಲ್ಲಿ ಕಾರು-ಬೈಕ್‌ ಅಪಘಾತ; ಮಗಳು, ಮೊಮ್ಮಗಳ ಕಣ್ಣೇದುರೇ ಪ್ರಾಣಬಿಟ್ಟ ತಂದೆ

Road Accident : ತುಮಕೂರಿನಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ದಾರುಣವಾಗಿ ಮೃತಪಟ್ಟರೆ, ಇತ್ತ ಚಲಿಸುತ್ತಿದ್ದ ಬಸ್‌ನಿಂದ ಬಿದ್ದಿದ್ದ ವಿದ್ಯಾರ್ಥಿ ಅಸುನೀಗಿದ್ದಾನೆ. ಬಳ್ಳಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಗುಂಡಿಗಿಳಿದರೆ, ಚಾಮರಾಜನಗರದಲ್ಲಿ ಗೂಡ್ಸ್‌ ಆಟೋ ಪಲ್ಟಿಯಾಗಿದೆ.

VISTARANEWS.COM


on

By

Road Accident
ಚಾಮರಾಜನಗರದಲ್ಲಿ ಗೂಡ್ಸ್‌ ಆಟೋ ಪಲ್ಟಿ, ತುಮಕೂರಿನಲ್ಲಿ ಮೃತಪಟ್ಟ ಬೈಕ್‌ ಸವಾರ ನಾಗೇಶ್‌
Koo

ತುಮಕೂರು: ಇಂಡಿಕಾ ಕಾರು ಹಾಗೂ ಬೈಕ್ ನಡುವೆ ಅಪಘಾತ (Road Accident) ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟರೆ, ಒಂದು ವರ್ಷದ ಮಗು ಹಾಗೂ ತಾಯಿಗೆ ಗಂಭೀರ ಗಾಯಗೊಂಡಿದ್ದಾರೆ. ನಾಗೇಶ್ (60) ಮೃತ ದುರ್ದೈವಿ. ತುಮಕೂರು ಹೊರವಲಯದ ಮಲ್ಲಸಂದ್ರ ಬಳಿಯ ಕೆಎಂಎಫ್ ಡೈರಿ ಸಮೀಪ ಅಪಘಾತ ನಡೆದಿದೆ.

ಚನ್ನರಾಯನಪಟ್ಟಣ ತಾಲೂಕಿನ ಅಣತಿಕೋಡಿಹಳ್ಳಿ ನಿವಾಸಿಯಾಗಿದ್ದ ನಾಗೇಶ್, ಮಂಗಳವಾರ ಬೆಳಗ್ಗೆ ಮಲ್ಲಸಂದ್ರದಲ್ಲಿದ್ದ ಮಗಳ ಮನೆಗೆ ಬಂದಿದ್ದರು. ಕಾಗ್ಗೇರೆ ಬಳಿಯಿರುವ ದೇವಸ್ಥಾನದ ಕಾರ್ಯಕ್ರಮಕ್ಕೆ ಹೋಗಿ ಮನೆಗೆ ಹಿಂತಿರುವಾಗ ಅಪಘಾತ ನಡೆದಿದೆ.

ಇಂಡಿಕಾ ಕಾರು ಡಿಕ್ಕಿ ಹೊಡೆದು ಬೈಕ್‌ನಿಂದ ಕೆಳಗೆ ಬಿದ್ದ ನಾಗೇಶ್ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ನಾಗೇಶ್‌ ಅವರ ಮಗಳು ಸ್ವಾತಿ ಹಾಗೂ ಒಂದು ವರ್ಷದ ಮಗುವಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವಿಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇತ್ತ ಅಪಘಾತದ ಬಳಿಕ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Road Accident
Road Accident

ಬಳ್ಳಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗಿಳಿದ ಬಸ್‌

ಚಾಲಕನ ನಿಯಂತ್ರಣ ತಪ್ಪಿದ ಬಸ್‌ವೊಂದು ರಸ್ತೆ ಬದಿಯ ಗುಂಡಿಗಿಳಿದಿದೆ. ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮ ಬಳಿ ಅಪಘಾತ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಕರು ಸಂಡೂರಿನಿಂದ ಅಂಕಮನಾಳ ಗ್ರಾಮಕ್ಕೆ ತೆರಳುತ್ತಿದ್ದರು. ಬಸ್ಸಿಗೆ ಅದಿರು ತುಂಬಿದ ಲಾರಿ ಎದುರಿಗೆ ಬಂದಿದ್ದು, ಲಾರಿ ತಪ್ಪಿಸಲು ಹೋಗಿ‌ ಬಸ್‌ ಗುಂಡಿಗಳಿದಿದೆ. ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗುಂಡಿಯಿಂದ ಹೊರ ಬಾರದೆ ಬಸ್‌ ಲಾಕ್‌ ಆಗಿತ್ತು.

Road Accident
Road Accident

ಚಾಮರಾಜನಗರದಲ್ಲಿ ಗೂಡ್ಸ್‌ ಆಟೋ ಪಲ್ಟಿ

ಚಾಮರಾಜನಗರದ ಹೊನ್ನಳ್ಳಿ ಗ್ರಾಮದ ಸಮೀಪ ಗೂಡ್ಸ್ ಆಟೋ ಪಲ್ಟಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಹಿಳೆಯರು ಕೂಲಿ ಕೆಲಸಕ್ಕೆಂದು ಅಮಚವಾಡಿ ಗ್ರಾಮದಿಂದ ನಿಜಲಿಂಗನಪುರಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಗಾಯಾಳುಗಳಿಗೆ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Road Accident
Road Accident

ದಾವಣಗೆರೆಯಲ್ಲಿ ಬೈಕ್ ಹಾಗೂ ಕೆಎಸ್ಆರ್‌ಟಿಸ್‌ ನಡುವೆ ಅಪಘಾತ

ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಬಸ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಬೈಕ್ ಸವಾರ ರಸ್ತೆ ದಾಟುವಾಗ ಏಕಾಏಕಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಬಸ್‌ನಿಂದ ಬಿದ್ದಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನಿನ್ನೆ ಸೋಮವಾರ ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ. ಇದೀಗ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾನೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ ಎ ಗ್ರಾಮದಲ್ಲಿ ಘಟನೆ ನಡೆದಿದೆ. ಸರ್ಕಾರಿ ಬಸ್ ಮೂಲಕ ಶಾಲೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿತ್ತು.

ಸಿಂದಗಿ ಪಟ್ಟಣದ ಎಚ್‌ಜಿ ಹೈಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಸಂದೀಪ ಶಿವಪ್ಪ ಗಿಡ್ಡನಗೋಳ ಮೃತ ದುರ್ದೈವಿ. ಗಂಭೀರ ಗಾಯಗೊಂಡಿದ್ದ ಸಂದೀಪ್‌ನನ್ನು ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಮೃತಪಟ್ಟಿದ್ದಾನೆ. ಇತ್ತ ಈ ಘಟನೆ ಖಂಡಿಸಿ ಬನ್ನಿಹಟ್ಟಿ ಪಿ ಎ ಹಾಗೂ ಸಿಂದಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ವಿದ್ಯಾರ್ಥಿ ಸಾವಿನಿಂದ ಬನ್ನಿಹಟ್ಟಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Physical Abuse: ಪತಿ ಮತ್ತು ಮಗ ಮೃತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ. ಮಹಿಳೆಯ ಸಹೋದರ ಮತ್ತು ಅತ್ತಿಗೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಸೊಸೆ ಅವರೊಂದಿಗೆ ವಾಸಿಸುತ್ತಿದ್ದಾರೆ. ಸೊಸೆಯ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂತ್ರಸ್ತೆಯ ಮನೆಗೆ ಹೋದಾಗ, ರಾಕೇಶ್ ತನ್ನ ಅತ್ತೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು

VISTARANEWS.COM


on

physical abuse
Koo

ಲಖನೌ: 85 ವರ್ಷದ ವೃದ್ಧೆಯ ಮೇಲೆ 35 ವರ್ಷದ ಕಿಡಿಗೇಡಿಯೊಬ್ಬ ಬರ್ಬರವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಮೃತಪಟ್ಟಿರುವ ಹೀನಕೃತ್ಯ ಉತ್ತರಪ್ರದೇಶ(Uttarpradesh)ದಲ್ಲಿ ನಡೆದಿದೆ. ಬರೇಲಿಯ ಹಫೀಜ್‌ಗಂಜ್‌ನಲ್ಲಿ ಸೋಮವಾರ 85 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ(Physical Abuse)ಕ್ಕೊಳಗಾದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧೆಯ ನೆರೆಮನೆಯಲ್ಲಿ ವಾಸಿಸುವ ರಾಕೇಶ್ ಎಂದು ಗುರುತಿಸಲಾದ 35 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿ ಮತ್ತು ಮಗ ಮೃತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ. ಮಹಿಳೆಯ ಸಹೋದರ ಮತ್ತು ಅತ್ತಿಗೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಸೊಸೆ ಅವರೊಂದಿಗೆ ವಾಸಿಸುತ್ತಿದ್ದಾರೆ. ಸೊಸೆಯ ಪ್ರಕಾರ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂತ್ರಸ್ತೆಯ ಮನೆಗೆ ಹೋದಾಗ, ರಾಕೇಶ್ ತನ್ನ ಅತ್ತೆಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು ಎಂದು ಆರ್ಯ ಹೇಳಿದರು.

ಬಳಿಕ ಆಕೆ ಆತನಿಗೆ ಎಚ್ಚರಿಕೆ ನೀಡಿದಾಗ ಆರೋಪಿ ಪರಾರಿಯಾಗಿದ್ದು, ಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಈ ಭೀಕರ ಕೃತ್ಯದ ಬಳಿಕ ವೃದ್ಧೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮದ್ಯವ್ಯಸನಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಆರ್ಯ ತಿಳಿಸಿದ್ದಾರೆ. ಮಹಿಳೆಯ ಮರಣೋತ್ತರ ಪರೀಕ್ಷೆ ನಡೆಸುವಂತೆ ಸಮಿತಿಗೆ ಸೂಚಿಸಲಾಗಿದೆ.

ಕಳೆದ ವರ್ಷ ಇಂತಹದ್ದೇ ಘಟನೆ ಹಾಸನದಲ್ಲಿ ನಡೆದಿತ್ತು. 85 ವರ್ಷದ ವೃದ್ಧೆ ಮೇಲೆ 30 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿರುವ ದಾರುಣ ಘಟನೆ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವರದಿಯಾಗಿತ್ತು. ಆರೋಪಿ ಮಿಥುನ್ ಕುಮಾರ್ ಮತ್ತು ಆತನ ತಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮಾಡಾಳು ಗ್ರಾಮದ ಸಂತ್ರಸ್ತೆ, ದಾರಿ ತಪ್ಪಿ ನಡೆಯುತ್ತಿರುವುದನ್ನು ಗಮನಿಸಿದ್ದಾರೆ. ಆಗ ಆಕೆಯನ್ನು ತನ್ನ ಮೊಬೈಕ್ ನಲ್ಲಿ ಮನೆಗೆ ಡ್ರಾಪ್ ಮಾಡುವಂತೆ ಆರೋಪಿ ತಾಯಿ ಆತನಿಗೆ ಹೇಳಿದ್ದಾರೆ.

ಸಂತ್ರಸ್ತೆಯನ್ನು ತನ್ನ ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡ ಮಿಥುನ್, ಸಮೀಪದ ಹೊಲಕ್ಕೆ ಕರೆದೊಯ್ದು ಆಕೆಗೆ ಕಿರುಕುಳ ನೀಡಲು ಯತ್ನಿಸಿದ್ದಾನೆ. ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಆಕೆಯ ಹಣೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ನಂತರ ಸಂತ್ರಸ್ತೆಯ ಮೇಲೆ ಅತ್ಯಾಚಾರವೆಸಗಿದ್ದ. ಮಿಥುನ್ ಕೆಲವು ವರ್ಷಗಳ ಹಿಂದೆ ವಯಸ್ಸಾದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಸಿಕ್ಕಿಬಿದ್ದಿದ್ದ ಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ. ಆದರೆ ಗ್ರಾಮಸ್ಥರು ಎಚ್ಚರಿಕೆ ನೀಡಿ ಸಮಸ್ಯೆ ಬಗೆಹರಿಸಿದ್ದರು. ಆತ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಶಂಕಿಸಿದ್ದಾರೆ. ಮಿಥುನ್ ಯಾವುದೇ ಹಿಂಜರಿಕೆಯಿಲ್ಲದೆ ಘಟನೆಯನ್ನು ವಿವರಿಸಿದ್ದಾನೆ ಮತ್ತು ಅವನು “ಮಗುವಿನಂತೆ ವರ್ತಿಸುತ್ತಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Continue Reading

ತುಮಕೂರು

Murder Case : ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

Murder Case : ತುಮಕೂರಿನಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ವಾಪಸ್‌ ಸಿಕ್ಕ ಮಾಜಿ ಪ್ರಿಯತಮನ ಮೋಹಕ್ಕೆ ಸಿಲುಕಿದ ಮಹಿಳೆಯೊಬ್ಬಳು, ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ಚಿತ್ರದುರ್ಗದಲ್ಲಿ ಹಳೆ ದ್ವೇಷಕ್ಕೆ ವ್ಯಕ್ತಿಯೊಬ್ಬ ಬಲಿಯಾದರೆ, ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

murder case
ಕೊಲೆಯಾದ ಪ್ರಕಾಶ್‌ ಹಾಗೂ ಆರೋಪಿ ಹರ್ಷಿತಾ
Koo

ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್‌ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.

ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.

ಮದುವೆಯಾದ್ಮೇಲೆ ಪ್ರಕಾಶ್‌ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.

ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.

ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್‌ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.

ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್‌ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ಚಿತ್ರದುರ್ಗದಲ್ಲಿ ಹಳೇ ದ್ವೇಷಕ್ಕೆ ಬಿತ್ತು ಹೆಣ

ಹಳೆ ದ್ವೇಷ, ವೈಷಮ್ಯಕ್ಕೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದಿಂಡಾವರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಜಯ್ಯಣ್ಣ (60) ಕೊಲೆಯಾದವರು. ಗಂಗಾಧರ್ (27) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಗ್ರಾಮದಲ್ಲಿ ಹಬ್ಬ ನಡೆಯುವ ವೇಳೆ ಹಳೆ ದ್ವೇಷಕ್ಕೆ ಜಗಳ ನಡೆದಿದೆ. ಇಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸದ್ಯ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ಆತ್ಮಹತ್ಯೆಯೋ ಇಲ್ಲ‌ ಕೊಲೆಯೊ ಎಂಬುದರ ಬಗ್ಗೆ ಅನುಮಾನ ಮಾಡಿದ್ದು, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
Latest3 mins ago

Viral Video: ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ! ಗಾಬರಿಗೊಳಿಸುವ ವಿಡಿಯೊ

Jaya Bachchan
ದೇಶ12 mins ago

Parliament Session: ಪತಿ ಅಮಿತಾಬ್‌ ಹೆಸರು ಜಯಾ ಬಚ್ಚನ್‌ಗೆ ಅಲರ್ಜಿ! ಸಂಸತ್‌ನಲ್ಲಿ ಆ ಹೆಸರು ಹೇಳಬೇಡಿ ಎಂದ ನಟಿ!

3 private hospitals in Yallapur have been locked for not following the necessary rules under the KPME Act
ಉತ್ತರ ಕನ್ನಡ19 mins ago

Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

Viral Video
Latest23 mins ago

Viral Video: ಸಾಕ್ಸ್‌ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ; ಸಿಕ್ಕಿಬಿದ್ದ ಪಾಕ್‌ ಗಗನಸಖಿ!

MUDA scam
ಕರ್ನಾಟಕ43 mins ago

MUDA scam: ಸಮಾಜವಾದಿ ಮುಖವಾಡ, ಅಹಿಂದ ಅಲಂಕಾರ, ಸತ್ಯವಂತನ ಸಿಂಗಾರ ಕಳಚಿಬಿದ್ದಿದೆ: ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

Shiradi Landslide
ಬೆಂಗಳೂರು55 mins ago

Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Manu Bhaker
ಕ್ರೀಡೆ55 mins ago

Manu Bhaker: ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

WhatsApp Shut down
ದೇಶ1 hour ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆ್ಯಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಮಳೆ1 hour ago

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ21 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ22 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌