ಶ್ರೀನಗರ: ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಅಪಹರಿಸಿ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ (Kashmir Horror) ಬಿಸಾಡಿದ್ದಾನೆ. ವ್ಯಕ್ತಿಯ ವಿರುದ್ಧ ಜನ ಪ್ರತಿಭಟನೆ ನಡೆಸಿದ್ದು, ಕೂಡಲೇ ಆತನನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬುದ್ಗಾಮ್ ಜಿಲ್ಲೆಯ ಓಂಪೊರಾ ಗ್ರಾಮದ ನಿವಾಸಿಯಾದ, 45 ವರ್ಷದ ಶಬ್ಬೀರ್ ಅಹ್ಮದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಈಗಾಗಲೇ ಮದುವೆಯಾಗಿದ್ದು, ಮತ್ತೊಂದು ಮದುವೆಯಾಗಲು ತೀರ್ಮಾನಿಸಿದ್ದಾನೆ. ಅದಕ್ಕಾಗಿ, 30 ವರ್ಷದ ಮಹಿಳೆಯ ಮನೆಗೆ ಹೋಗಿ, ಆಕೆಯನ್ನು ಮದುವೆಯಾಗುತ್ತೇನೆ ಎಂದಿದ್ದಾನೆ. ಇದಕ್ಕೆ ಮಹಿಳೆ ನಕಾರ ವ್ಯಕ್ತಪಡಿಸಿದ್ದಾರೆ.
ಇದರಿಂದ ಕುಪಿತಗೊಂಡ ಶಬ್ಬೀರ್ ಅಹ್ಮದ್, ಮಾರ್ಚ್ 7ರಂದು ಮಹಿಳೆಯನ್ನು ಅಪಹರಣ ಮಾಡಿದ್ದಾನೆ. ಇದಾದ ಬಳಿಕ ಆಕೆಯ ದೇಹವನ್ನು ತುಂಡರಿಸಿ ಎಲ್ಲೆಂದರಲ್ಲಿ ಬಿಸಾಡಿದ್ದಾನೆ. ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನ ಮೆರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.