ಬೆಂಗಳೂರು: ಸಂಗೀತ ನಿರ್ದೇಶಕ ಗುರು ಕಿರಣ್ (Music Director Guru kiran) ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿದೆ ಎಂದು ವರದಿಯಾಗಿದೆ. ಡಿಸೆಂಬರ್ 31ರಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಮ್ಮ ರೂಂನ ಬೀರುವಿನಲ್ಲಿ 2.50 ಲಕ್ಷ ರೂ. ಗಳನ್ನು ಗುರು ಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಜನವರಿ 5ರಂದು ಹಣ ಕಳ್ಳತನವಾಗಿದೆ ಎನ್ನಲಾಗಿದೆ.
ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ. ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ.
ಇದನ್ನೂ ಓದಿ: Vistara Kannada Sambhrama: ಗುರುಕಿರಣ್ ಗಾಯನ ಮೋಡಿಗೆ ಹುಚ್ಚೆದ್ದು ಕುಣಿದ ಪ್ರೇಕ್ಷಕರು
ಇದೀಗ ಮನೆ ಕೆಲಸದವರ ಮೇಲೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಮನೆ ಕೆಲಸದಾಕೆ ರತ್ನಮ್ಮ ಅವರನ್ನು ಚಂದ್ರಲೇಔಟ್ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.