Site icon Vistara News

Illegal Bangla Immigrants: ಸಿಸಿಬಿ ದಾಳಿ, ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Illegal Bangla Immigrants

ಬೆಂಗಳೂರು: ಸೆಂಟ್ರಲ್‌ ಕ್ರೈಂ ಬ್ರಾಂಚ್‌ ಪೊಲೀಸರು (CCB police) ನಿನ್ನೆ ಮಧ್ಯರಾತ್ರಿ ಬೆಂಗಳೂರು (bangalore) ನಗರದ ಹಲವು ಕಡೆಗಳಲ್ಲಿ ದಾಳಿ (raid) ನಡೆಸಿದ್ದು, ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ನೂರಕ್ಕೂ ಅಧಿಕ ಬಾಂಗ್ಲಾದೇಶಿ (Illegal Bangla Immigrants) ವಲಸಿಗರನ್ನು ಬಂಧಿಸಿದ್ದಾರೆ.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರ ಮಿಡ್ ನೈಟ್ ಅಪರೇಷನ್ ನಡೆದಿದೆ. ಬೆಂಗಳೂರಿನ ನಾಲ್ಕು ಡಿವಿಷನ್‌ಗಳಲ್ಲಿರುವ ಅಕ್ರಮ ನಿವಾಸಿಗಳ ಮನೆ ಮೇಲೆ ದಾಳಿ ನಡೆದಿದೆ. ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.

ಗುಪ್ತಚರ ಮಾಹಿತಿ ಆಧರಿಸಿ ದಾಳಿ ಮಾಡಿರುವ ಸಿಸಿಬಿ ತಂಡ ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ಆಪರೇಷನ್ ನಡೆಸಿದೆ. ನೂರಕ್ಕೂ ಹೆಚ್ಚ ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚಲಾಗಿದೆ. ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಇವರಲ್ಲಿ ಹಲವರು ವೋಟರ್‌ ಐಡಿ ಕೂಡ ಮಾಡಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಇವರೊಂದಿಗೆ, ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೆ ಇವರಿಗೆ ಬಾಡಿಗೆ ಮನೆಗಳನ್ನು ಹಾಗೂ ಕೊಠಡಿಗಳನ್ನು ನೀಡಿದವರನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಇವರಲ್ಲಿ ಹೆಚ್ಚಿನವರು ಫ್ಯಾಕ್ಟರಿ, ಕೂಲಿ, ಹೋಟೆಲ್‌ಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ. ಹಲವರು ಕೆಲವು ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ.

ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ಸಿಎಎ (CAA) ಅಡಿಯಲ್ಲಿ ಪೌರತ್ವ ಕಲ್ಪಿಸಿರುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಸಿಎಎ ನಿಯಮಗಳ ಜಾರಿಗೆ ಕೇಂದ್ರ ಸರ್ಕಾರವು ಕಳೆದ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಆ ಮೂಲಕ ದೇಶದಲ್ಲಿ ಸಿಎಎ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, 14 ಜನರಿಗೆ ಪ್ರಮಾಣಪತ್ರಗಳನ್ನು ನೀಡಿದೆ.

ಇದನ್ನೂ ಓದಿ: ಹನಿ ಟ್ರ್ಯಾಪ್‌ ಮಾಡಿ ಕೋಲ್ಕತಾಗೆ ಕರೆಸಿಕೊಂಡು ಬಾಂಗ್ಲಾದೇಶ ಸಂಸದನ ಕೊಲೆ; ಚರ್ಮ ಸುಲಿದು, ದೇಹ ಪೀಸ್‌ ಪೀಸ್‌

Exit mobile version