ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳ ತಂಡ ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ಶೋಧ ಮುಂದುವರಿಸಿದೆ. ಇದನ್ನು ವಿರೋಧಿಸಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಈ ನಡುವೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಸಿಬಿ ಅಧಿಕಾರಿಗಳು ತಮ್ಮಲ್ಲಿರುವ ದಾಖಲೆಗಳು, ಕೋರ್ಟ್ ಸೂಚನೆ ಮೊದಲಾದ ಕಾನುನುಬದ್ಧ ರೀತಿಯಲ್ಲಿ ಇಂಥ ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಾರೆ. ಇದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಇಂಥ ಕಾರ್ಯಾಚರಣೆಗಳಿಗೆ ರಾಜಕೀಯ ಬೆರೆಸುತ್ತಿದೆ. ಅದು ಹಿಂದಿನಿಂದಲೂ ಇಂಥ ಚಾಳಿಯನ್ನು ಮುಂದುವರಿಸಿಕೊಂಡು ಬಂದಿದೆ. ಆದರೆ ಎಸಿಬಿ ಅಧಿಕಾರಿಗಳು ದಾಖಲೆಗಳಿಲ್ಲದೆ ದಾಳಿ ನಡೆಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.
ಈ ನಡುವೆ ಶಾಸಕ ಜಮೀರ್ ನಿವಾಸದಲ್ಲಿ ಎಸಿಬಿ ಅಧಿಕಾರಿಗಳ ತಂಡ ತನ್ನ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದೆ.
ಇದನ್ನೂ ಓದಿ:ACB raid| ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ