Self Harming: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೇಬಲ್ - Vistara News

ಕ್ರೈಂ

Self Harming: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೇಬಲ್

Self Harming: ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಮ್ ಬಳಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

VISTARANEWS.COM


on

Constable attempts suicide by shooting himself
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ (Self Harming) ಯತ್ನಿಸಿದ ಘಟನೆ ನಗರದ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಮ್ ಬಳಿ ನಡೆದಿದೆ. ಗುಂಡು ಹಾರಿಸಿಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಪೇದೆ. ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿ ಗುರುಮೂರ್ತಿ ಇದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Physical Abuse: ಕೊಡಗಿನಲ್ಲೊಂದು ಪೈಶಾಚಿಕ ಕೃತ್ಯ; 2 ವರ್ಷದ ಮಗುವಿನ ಮೇಲೆ ಕಾಮುಕನ ದೌರ್ಜನ್ಯ

Idli guru Case: ಫ್ರಾಂಚೈಸಿ ಹೆಸರಲ್ಲಿ ಮೋಸ; ಇಡ್ಲಿಗುರು ಹೋಟೆಲ್‌ ಮಾಲೀಕ ಅರೆಸ್ಟ್‌

Idli guru Case kartiki Shetty

ಬೆಂಗಳೂರು: ಬೆಂಗಳೂರಿನ ಜನಪ್ರಿಯ ಫುಡ್‌ ಜಾಯಿಂಟ್‌ (Popular Food Joint) ಆಗಿರುವ ಇಡ್ಲಿ ಗುರು (Idli guru Case) ಮಾಲೀಕ ಕಾರ್ತಿಕ್‌ ಶೆಟ್ಟಿ (Idli guru Karthik Shetty) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಡ್ಲಿ ಗುರು ಫ್ರಾಂಚೈಸಿ (Idli guru Franchise) ನೀಡುವ ನೆಪದಲ್ಲಿ ಅವರು ಮೂರು ಲಕ್ಷ ರೂ. ಪಡೆದು ಮೋಸ (Fraud Case) ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಂಧನ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ತಿಕ್‌ ಶೆಟ್ಟಿ (Karthik Shetty Arrested) ಅವರನ್ನು ಮುಂಬಯಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದಾರೆ.

ಕಾರ್ತಿಕ್‌ ಶೆಟ್ಟಿ ಮತ್ತು ಅವರ ಪತ್ನಿ ಮಂಜುಳಾ ಅವರು ಇಡ್ಲಿ ಗುರು ಎಂಬ ಜನಪ್ರಿಯ ಬ್ರಾಂಡನ್ನು ಸೃಷ್ಟಿ ಮಾಡಿದ್ದು ಸಾಕಷ್ಟು ಜನಪ್ರಿಯತೆಯನ್ನು ಪಡೆದಿದೆ. ಈ ಜನಪ್ರಿಯ ಬ್ರಾಂಡ್‌ನ ಹೋಟೆಲ್‌ನ ಫ್ರಾಂಚೈಸಿ ನೀಡುವ ವಿಚಾರದಲ್ಲಿ ಮೋಸ ಆಗಿದೆ ಎಂದು ಚೇತನ್‌ ಎಂಬವರು ದೂರು ನೀಡಿದ್ದರು.

ವಂಚನೆ ಸಂಬಂಧ ಇಡ್ಲಿಗುರು ಹೋಟೆಲ್ ಮಾಲೀಕ ಕಾರ್ತಿಕ್ ಶೆಟ್ಟಿ, ಅವರ ಪತ್ನಿ ಮಂಜುಳಾ, ತಂದೆ ಬಾಬು ಶೆಟ್ಟಿ ಹಾಗೂ ಹೋಟೆಲ್ ಸಿಬ್ಬಂದಿ ದಿವಾಕರ್ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳು ಫ್ರಾಂಚೈಸಿ ಕೊಡುವ ಭರವಸೆ ನೀಡಿ ವಂಚಿಸಿದ್ದಾರೆ ಎಂದು ದೂರಲಾಗಿದೆ. ಒಟ್ಟು ಮೂರು ಲಕ್ಷ ರೂ. ವಂಚನೆಯ ದೂರು ಇದಾಗಿದೆ.

Idli guru Case kartiki Shetty1

ಬೆಂಗಳೂರಿನ ಮಾಗಡಿ ಮೇನ್‌ ರೋಡ್‌ನ ಕೊಟ್ಟಿಗೆ ಪಾಳ್ಯದಲ್ಲಿರುವ ಇಡ್ಲಿ ಗುರು ಕಚೇರಿಯಲ್ಲಿ ಚೇತನ್‌ ಅವರು ಕಾರ್ತಿಕ್‌ ಶೆಟ್ಟಿ ಮತ್ತು ಮಂಜುಳಾ ಅವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ. ಇಡ್ಲಿ ಗುರು ಫ್ರಾಂಚೈಸಿಗೆ ಮೂರು ಲಕ್ಷ ಬೇಕಾಗುತ್ತದೆ. ತಿಂಗಳಿಗೆ 50 ಸಾವಿರ ರೂ. ವರಮಾನ ಬರಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: Fraud Case: ಒಂದು ಸ್ಕ್ರೀನ್‌ಶಾಟ್‌ ತೋರಿಸಿ ಹತ್ತಾರು ಜನರಿಗೆ ವಂಚಿಸಿದ ಖದೀಮ ಕ್ಯಾಬ್ ಡ್ರೈವರ್!‌

ಚೇತನ್‌ ಅವರು ತಮ್ಮ ಮನೆಯ ನೆಲಮಹಡಿಯಲ್ಲಿದ್ದ ಸುಮಾರು 9000 ರೂ. ಬಾಡಿಗೆ ಬರುತ್ತಿದ್ದ ಅಂಗಡಿಯನ್ನು ಖಾಲಿ ಮಾಡಿ‌ ಅದನ್ನು ಫ್ರಾಂಚೈಸಿ ಶಾಪ್‌ ಮಾಡಲು ಹೆಚ್ಚುವರಿ ಖರ್ಚು ಮಾಡಿ ಸಿದ್ಧಪಡಿಸಿದ್ದರು. ಬಳಿಕ ಮೂರು ಲಕ್ಷ ರೂ ನೀಡಿದ ಬಳಿಕ ಒಂದು ಫುಡ್‌ ಕಾರ್ಟನ್ನು ಅಲ್ಲಿ ತಂದು ನಿಲ್ಲಿಸಲಾಯಿತು. ಅಲ್ಲಿ ಚೆನ್ನಾಗಿ ವ್ಯಾಪಾರ ಆಗುತ್ತಿದ್ದರೂ ಕೆಲವೇ ದಿನಗಳಿಗೆ ಸೀಮಿತವಾಯಿತು. ಇಲ್ಲಿ ವ್ಯಾಪಾರ ಆಗುತ್ತಿಲ್ಲ. ಹೀಗಾಗಿ ಬೇರೆ ಕಡೆ ಶಿಫ್ಟ್‌ ಮಾಡುತ್ತೇವೆ ಎಂದು ಹೇಳಿದರು ಎನ್ನುತ್ತಾರೆ ಚೇತನ್‌. ಆದರೆ, ಹಾಗೆ ಕೊಂಡು ಹೋದ ಬಳಿಕ ಮೂರು ಲಕ್ಷ ರೂ. ವಾಪಸ್‌ ಕೊಡಬೇಕಾಗಿತ್ತು. ಅದನ್ನು ಕೊಟ್ಟಿರಲಿಲ್ಲ. ಈ ವಿಚಾರದಲ್ಲಿ ವಾಗ್ವಾದ ನಡೆದು ಈಗ ಪೊಲೀಸರಿಗೆ ದೂರು ನೀಡಲಾಗಿದೆ.

ಇದನ್ನೂ ಓದಿ | Bellary News: ಬಳ್ಳಾರಿಯ ಚರಂಡಿಯಲ್ಲಿ 2 ದಿನದ ನವಜಾತ ಶಿಶು ಮೃತ ದೇಹ ಪತ್ತೆ

ಕಾರ್ತಿಕ್‌ ಶೆಟ್ಟಿ ಅವರು ಕಮಿಷನ್‌ ಅಥವಾ ಯಾವುದೇ ಮೊತ್ತವನ್ನು ಕೊಡದೆ ಮೋಸ ಮಾಡಿದ್ದಾರೆ ಎಂದು ಚೇತನ್‌ ನೀಡಿದ ದೂರಿನಂತೆ ಪೊಲೀಸರು ವಂಚನೆ ಆರೋಪದಲ್ಲಿ ಕಾರ್ತಿಕ್‌ ಶೆಟ್ಟಿ ಅವರನ್ನು ಬಂಧಿಸಿದ್ದಾರೆ. ಇದೀಗ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

Prajwal Revanna Case: ಮಂಗಳವಾರ ಸತತ ಹತ್ತು ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ (FSL) ತಂಡಗಳು ಹಾಸನ ಸಂಸದನ ಮನೆಯಲ್ಲಿ ಸಂಪೂರ್ಣ ತಪಾಸಣೆ ನಡೆಸಿದವು. ಪ್ರಜ್ವಲ್‌ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ಎಸ್‌ಐಟಿ ಕೊಂಡೊಯ್ದಿದೆ.

VISTARANEWS.COM


on

prajwal revanna case mattress
Koo

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ಭಾಗಿಯಾಗಿರುವ ಅಶ್ಲೀಲ ವಿಡಿಯೋ (Obscene video) ಹಾಗೂ ಲೈಂಗಿಕ ದೌರ್ಜನ್ಯ (Physical abuse) ಪ್ರಕರಣಕ್ಕೆ ಸಂಬಂಧಿಸಿ, ಒಂದೆಡೆ ತಾನು ಮೇ 31ರಂದು ಭಾರತಕ್ಕೆ ಬರುವುದನ್ನು ಪ್ರಜ್ವಲ್‌ ಖಚಿತಪಡಿಸಿದ್ದರೆ, ಇನ್ನೊಂದೆಡೆ ಸಂಸದನ ಮನೆಯಲ್ಲಿ ವಿಶೇಷ ತನಿಖಾ ತಂಡ (SIT) ಸಮಗ್ರ ತಪಾಸಣೆ ನಡೆಸಿದೆ.

ಮಂಗಳವಾರ ಸತತ ಹತ್ತು ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ (FSL) ತಂಡಗಳು ಹಾಸನ ಸಂಸದನ ಮನೆಯಲ್ಲಿ ಸಂಪೂರ್ಣ ತಪಾಸಣೆ ನಡೆಸಿದವು. ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಪರಿಶೀಲನೆ ಮುಗಿಸಿ ಬೆಳಗ್ಗೆ 4 ಗಂಟೆಗೆ ಹೊರಬಿದ್ದವು. ಪ್ರಜ್ವಲ್‌ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ಎಸ್‌ಐಟಿ ಕೊಂಡೊಯ್ದಿದೆ.

ಹಾಸನ ಸಂಸದರು ತಮ್ಮ ಅಧಿಕೃತ ನಿವಾಸಕ್ಕೇ ಸಂರಸ್ತ ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡು ಅದನ್ನು ಸ್ವತಃ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು ಎಂಬ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸಾಕ್ಷಿಗಳ ಸಂಗ್ರಹ ಮಹತ್ವ ಪಡೆದಿದೆ. ಈ ಹಾಸಿಗೆ ಹೊದಿಕೆಗಳ ಮೇಲಿರಬಹುದಾದ ಡಿಎನ್‌ಎ ಸಾಕ್ಷಿಗಳ ಸಂಗ್ರಹ ಹಾಗೂ ಪರಿಶೀಲನೆಗೆ ಎಫ್‌ಎಸ್‌ಎಲ್‌ ಮುಂದಾಗಲಿದೆ.

ಮೇ 31ಕ್ಕೆ ಪ್ರಜ್ವಲ್‌ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೆ ಮಹತ್ವದ ದಾಖಲೆ ಸಂಗ್ರಹಿಸಲು ಮುಂದಾದ ಎಸ್‌ಐಟಿ, ಪೂರಕ ಸಾಕ್ಷಿ ಕಲೆಹಾಕಲು ಮುಂದಾಗಿದೆ. ಹಾಸನದಲ್ಲಿರುವ ಸಂಸದರ ಮನೆಯಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಕೊಂಡೊಯ್ದಿದೆ. ಇದಕ್ಕಾಗಿ ನಿನ್ನೆ ಇಡೀ ತಪಶೀಲು ನಡೆಸಿದ ತಂಡ, ಹಾಸನ ನಗರ ಠಾಣೆ ಪೊಲೀಸರ ಸಹಾಯ ಪಡೆಯಿತು.‌

ಹೊಳೆನರಸೀಪುರದಲ್ಲೂ ಶೋಧ

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಬೆನ್ನಲ್ಲೆ ಹೊಳೆನರಸೀಪುರಕ್ಕೂ ಎಸ್ಐಟಿ ತಂಡ ಬಂದಿದೆ. ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಮನೆಗೆ ಮತ್ತೆ ಬಂದ ಎಸ್ಐಟಿ ತಂಡ, ರೇವಣ್ಣ ಮನೆಯಲ್ಲಿ ಶೋಧ ನಡೆಸಿದೆ. ಗನ್ನಿಕಡ ತೋಟದ ಮನೆಯಲ್ಲೂ ಸ್ಥಳ ಮಹಜರ್ ನಡೆಸುತ್ತಿದೆ. ಒಟ್ಟು ಮೂರು ಕಡೆಗಳಲ್ಲಿ ಎಸ್ಐಟಿ ತಂಡಗಳಿಂದ ಏಕಕಾಲಕ್ಕೆ ಮಹಜರ್ ನಡೆದಿದೆ.‌

ಟಿಕೆಟ್‌ ಬುಕ್‌ ಮಾಡಿದ ಪ್ರಜ್ವಲ್‌ ರೇವಣ್ಣ

ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ವಾಪಸ್​ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್​ ಟಿಕೆಟ್​ ಬುಕ್ ಮಾಡಿದ ವಿವರ ‘ವಿಸ್ತಾರನ್ಯೂಸ್​’ಗೆ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಸುವ ಎಸ್​ಐಟಿ ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಟಿಕೆಟ್​ ಬುಕ್​ ಮಾಡಿಕೊಂಡಿದ್ದು ಅಲ್ಲಿಂದಲೇ ಅವರನ್ನು ಎಸ್​ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಿದ್ದಾರೆ.

ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ. ಎಸ್​ಐಟಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸುವುದಕ್ಕಿಂತ ಮೊದಲೇ ಅವರು ಭಾರತದಿಂದ ಹೊರಟ್ಟಿದ್ದರು. ಪ್ರಕರಣ ಕಾವು ಪಡೆದು ಪ್ರತಿಭಟನೆ ಹಾಗೂ ಧರಣಿಗಳು ನಡೆಯುವ ಸಂದರ್ಭದಲ್ಲಿ ದೇಶದಿಂದ ದೂರವಿದ್ದರು. ಎಸ್​ಐಟಿ ಪೊಲೀಸರು ಪ್ರಜ್ವಲ್​ ವಶಕ್ಕೆ ಪಡೆಯಲು ನಾನಾ ರಾಜತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕಾಯಬೇಕಾಯಿತು. ಅಂತಿಮವಾಗಿ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲರ ಒತ್ತಾಯ ಹಾಗೂ ತಮಗೆ ಹಾಜರಾಗಲು ನೀಡಿದ ನೋಟಿಸ್​ನ ಗಡುವು ಮುಗಿದ ಕಾರಣ ಜರ್ಮನಿಯಿಂದ ಬರಲಿದ್ದಾರೆ.

ಇದನ್ನೂ ಓದಿ: Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

Continue Reading

ಪ್ರಮುಖ ಸುದ್ದಿ

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Cyber Crime: ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Cyber Crime
Koo

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಫೋಟೊಗಳನ್ನು ಮಾರ್ಫ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್​ ಮಾಡಿದ್ದ (Cyber Crime) ಆರೋಪಿಯನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂದಿಸಿದ್ದಾರೆ. ಈತ ಅಪ್ರಾಪ್ತ ಬಾಲಕಿಯರ ಫೋಟೋಗಳನ್ನು ಬಿಟ್ಟ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಪ್ರಕಾರ ಜೈಲು ಸೇರಿದ್ದಾನೆ.

ಆರೋಪಿ ಫೋಟೋಗಳನ್ನು ಮಾರ್ಫ್ ಮಾಡಿ ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

ಬೆಳ್ಳೂರು ಹಿಂದು ಯುವಕನ ಮೇಲೆ ಹಲ್ಲೆ; 11ಕ್ಕೂ ಹೆಚ್ಚು ಮಂದಿ ಮೇಲೆ ಕೇಸ್‌

ಮಂಡ್ಯ: ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ (Mandya News) ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಬೆಳ್ಳೂರಿನ ಅಭಿಲಾಷ್ ಎಂಬಾತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ (Assault case) ಮಾಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ: Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11 ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Acid attack: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ. ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ್ದಾನೆ.

VISTARANEWS.COM


on

Acid attack
Koo

ಬಾಗಲಕೋಟೆ: ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ ಘಟನೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ನಡೆದಿದೆ. ಆ್ಯಸಿಡ್ ದಾಳಿಯಿಂದ (Acid attack) ಮಹಿಳೆಗೆ ಎಡಗಣ್ಣು, ಮುಖದ ಭಾಗ ಹಾಗೂ ದೇಹದ ವಿವಿಧ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.

ಲಕ್ಷ್ಮಿ ಬಡಿಗೇರ (33) ಆ್ಯಸಿಡ್ ದಾಳಿಗೊಳಗಾದ ಮಹಿಳೆ. ಮೌನೇಶ್ ಪತ್ತಾರ ಆ್ಯಸಿಡ್ ಎರಚಿದ ಆರೋಪಿ. ಮೂರ್ತಿ ತಯಾರಿಕೆ ಕೆಲಸ‌ ಮಾಡುವ ಮೌನೇಶ್ ಹಾಗೂ ಲಕ್ಷ್ಮಿ ವಿಜಯಪುರ ನಗರದ ಮೂರನಕೇರಿ ಮೂಲದವರು. ಇಬ್ಬರೂ ಬೇರೆ ಬೇರೆಯವರನ್ನು ಮದುವೆಯಾಗಿದ್ದರು. ಆದರೆ, ಯಾವುದೇ ಡಿವೋರ್ಸ್ ಪಡೆಯದೇ ಸಹಜೀವನ ನಡೆಸುತ್ತಿದ್ದರು. ಹೀಗಿದ್ದರೂ ಲಕ್ಷ್ಮಿ ಬಡಿಗೇರ‌‌ ಮೇಲೆ ಪದೇಪದೆ ಮೌನೇಶ್ ಸಂಶಯಪಡುತ್ತಿದ್ದ. ಇದರಿಂದ‌‌ ಮೇಲಿಂದ ಮೇಲೆ‌ ಜಗಳವಾಗುತ್ತಿತ್ತು.

ಒಂದು ವಾರದ ಹಿಂದೆ ಮನೆ ಬಿಟ್ಟು ಹೋಗಿದ್ದ ಮೌನೇಶ್ ಸೋಮವಾರ ರಾತ್ರಿ‌ ಮನೆಗೆ ವಾಪಸ್ ಬಂದಿದ್ದ. ಈ ವೇಳೆ ಲಕ್ಷ್ಮಿ ಬಾಗಿಲು ತೆರೆದಿರಲಿಲ್ಲ. ಇದರಿಂದ‌ ಸಿಟ್ಟಿಗೆದ್ದ ಮೌನೇಶ್ ಕಿಟಕಿ ತೆಗೆದು ಆ್ಯಸಿಡ್ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಬಡಿಗೇರ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಎಂಟು ವರ್ಷದ ಮಗಳ ಮುಖಕ್ಕೂ ಅಲ್ಪ ಪ್ರಮಾಣದಲ್ಲಿ ಆ್ಯಸಿಡ್ ಸಿಡಿದಿದೆ. ಈ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅಪಾಯದಿಂದ ಮಹಿಳೆ ಪಾರಾಗಿದ್ದಾರೆ.

ಯುವತಿಯರ ಫೋಟೊ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನ ಬಂಧನ

ಬೆಂಗಳೂರು: ಯುವತಿಯರ ಫೋಟೋ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನನ್ನು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯರ ಫೋಟೊಗಳನ್ನು ಆರೋಪಿ ಮಾರ್ಫ್‌ ಮಾಡುತ್ತಿದ್ದ. ಎಡಿಟ್‌ ಮಾಡಿದ ಫೋಟೊಗಳನ್ನು ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡುತ್ತಿದ್ದ.

ಇದನ್ನೂ ಓದಿ | Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೊವನ್ನು ಆರೋಪಿ ಮಾರ್ಫ್ ಮಾಡಿದ್ದ. ಈ ಬಗ್ಗೆ ಪೋಷಕರಿಂದ ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿರುವ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಯಿಂದ ಮೂರು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

Continue Reading

ಕರ್ನಾಟಕ

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Robbery Case: ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Robbery Case Two accused arrested by yallapur police
Koo

ಯಲ್ಲಾಪುರ: ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಮೇ 23ರಂದು ರಾಜಸ್ಥಾನದ ಪಾಲಿ ಜಿಲ್ಲೆಯ ಸುರೇಶ ರಾವ್ ಹಿಮ್ಮತ್‌ ರಾಮಜೀರಾವ್ ಎಂಬುವವರು ತಮ್ಮ ಸ್ನೇಹಿತ ಸ್ನೇಹಿತ ಸಂಪತ್ ಸೊಲಂಕಿರವರೊಂದಿಗೆ ಮುಂಬೈದಿಂದ ಮಂಗಳೂರಿಗೆ ತೆರಳುತ್ತಿರುವಾಗ ಅಂಕೋಲಾ ಮಾರ್ಗದ ಅರಬೈಲ್ ಘಟ್ಟದಲ್ಲಿ ಬೇರೊಂದು ಕಾರಿನಲ್ಲಿ ಬಂದ 4 ಜನ ಅಪರಿಚಿತರು ಕಾರನ್ನು ಅಡ್ಡಗಟ್ಟಿ, ಕಾರಿನ ಎರಡು ಗ್ಲಾಸ್ ಒಡೆದು, 3 ಮೊಬೈಲ್‌ ಫೋನ್‌, ಕಾರಿನ ಕೀ ಕಸಿದುಕೊಂಡು, ನೀವು ಶಿಂಧೆ ಸಾಹೇಬರ ಕಾರಿಗೆ ಓವರಟೇಕ್ ಮಾಡಿಕೊಂಡು ಬಂದಿದ್ದೀರಿ ಎಂದು ಹೇಳಿ ಅವರಿಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಹೋಗಿ, ಮರಳಿ ಹುಬ್ಬಳ್ಳಿ ರಸ್ತೆಗೆ ಕರೆತಂದು ರಸ್ತೆ ಬದಿಯಲ್ಲಿ ಇಳಿಸಿ, ಶಿಂಧೆ ಸಾಹೇಬರು ಹಿಂದೆ ಇದ್ದಾರೆ ನೀವು ಬಸ್ಸಿನಲ್ಲಿ ಹೋಗಿ ಎಂದು ಹೇಳಿ ಸುಲಿಗೆ ಮಾಡಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು, ದೊರೆತ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಸುರಜ ಸುಧಾಕರ ಚೌಹಾಣ (30) ಹಾಗೂ ರವೀಂದ್ರ ಭಜರಂಗ ಮದನಿ (31) ಎಂಬುವ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಜಯಕುಮಾರ, ಡಿವೈಎಸ್ಪಿ ಎಂ.ಎಸ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಮೇಶ ಎಚ್. ಹನಾಪುರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸಿದ್ದಪ್ಪ ಗುಡಿ, ವಿಜಯರಾಜ, ಎಎಸ್‌ಐ ಆನಂದ ಡಿ ಪಾವಸ್ಕರ ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ರಾಮಾ ಪಾವಸ್ಕರ, ರಾಘವೇಂದ್ರ ಮೂಳೆ, ಸಂತೋಷ ಬಾಳೇರ, ಶೋಭಾ ನಾಯ್ಕ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Continue Reading
Advertisement
Mani Shankar Aiyar
ದೇಶ1 min ago

Mani Shankar Aiyar: ಮಣಿಶಂಕರ್‌ ಅಯ್ಯರ್ ಮತ್ತೊಂದು ವಿವಾದ;‌ ಪಾಕ್‌ ಬಳಿಕ ಚೀನಾ ಪರ ಬ್ಯಾಟಿಂಗ್‌!

Uttarakaanda Movie Shivarajkumar Visits Savadatti Yallamma Temple After Uttarakaanda Movie
ಸ್ಯಾಂಡಲ್ ವುಡ್13 mins ago

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

school reopen
ಪ್ರಮುಖ ಸುದ್ದಿ24 mins ago

School Reopen: ಬನ್ನಿ ಮಕ್ಕಳೇ ಶಾಲೆಗೆ! ರಜೆ ಮುಗೀತು, ಇಂದಿನಿಂದ ಕ್ಲಾಸ್‌ ಶುರು

Nawaz Sharif
ವಿದೇಶ42 mins ago

Nawaz Sharif: “ಕಾರ್ಗಿಲ್‌ ಯುದ್ಧ ನಮ್ಮಿಂದಲೇ ಆಗಿರುವ ಅತಿದೊಡ್ಡ ಪ್ರಮಾದ”- 23 ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಪಾಕ್‌

prajwal revanna case mattress
ಪ್ರಮುಖ ಸುದ್ದಿ55 mins ago

Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

AC Side Effects
ಆರೋಗ್ಯ2 hours ago

AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

karnataka weather forecast
ಮಳೆ2 hours ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Rishab Pant
ಪ್ರಮುಖ ಸುದ್ದಿ3 hours ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ3 hours ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ3 hours ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು22 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌